Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹದಿಹರೆಯದ ಬಾಲಕನ ಕೊಲೆಗೆ ಕಾರಣವಾದ ‘1.2...

ಹದಿಹರೆಯದ ಬಾಲಕನ ಕೊಲೆಗೆ ಕಾರಣವಾದ ‘1.2 ಕೋಟಿ ರೂ.ವೃಷಣ’ದ ವದಂತಿ!

ವಾರ್ತಾಭಾರತಿವಾರ್ತಾಭಾರತಿ19 Aug 2026 5:16 PM IST
share
ಹದಿಹರೆಯದ ಬಾಲಕನ ಕೊಲೆಗೆ ಕಾರಣವಾದ ‘1.2 ಕೋಟಿ ರೂ.ವೃಷಣ’ದ ವದಂತಿ!

ಭೋಪಾಲ(ಮ.ಪ್ರ): 16ರ ಹರೆಯದ ಬಾಲಕನೋರ್ವನ ವೃಷಣಗಳನ್ನು ಕೋಟ್ಯಂತರ ರೂ.ಗಳಿಗೆ ಮಾರಾಟ ಮಾಡಬಹುದು ಎಂದು ನಂಬಿದ್ದ ಗುಂಪೊಂದು ಆತನನ್ನು ಹತ್ಯೆ ಮಾಡಿರುವ ಘಟನೆ ಭೋಪಾಲದಲ್ಲಿ ನಡೆದಿದೆ. ಹತ್ಯೆಯ ರೂವಾರಿ ಸಾಮಾಜಿಕ ಜಾಲತಾಣದ ರೀಲ್ ಒಂದರಲ್ಲಿ ಕೊಲ್ಲಿ ದೇಶಗಳಲ್ಲಿ ಮಾನವ ವೃಷಣಗಳಿಗೆ ಕೋಟ್ಯಂತರ ರೂ.ಬೆಲೆಯಿದೆ ಎಂಬ ಸುಳ್ಳು ಮಾಹಿತಿಯಿಂದ ಪ್ರೇರಿತನಾಗಿದ್ದ ಎಂದು Times of India ವರದಿ ಮಾಡಿದೆ.

ಪೊಲೀಸ್ ಮಾಹಿತಿ ಪ್ರಕಾರ, ಬಿಬಿಎ ವಿದ್ಯಾರ್ಥಿ ಜೋಹೆಬ್ ಖಾನ್(20) ತಾನು ವೈದ್ಯಕೀಯ ವಿದ್ಯಾರ್ಥಿ ಎಂದು ಹೇಳಿಕೊಂಡು, ವೃಷಣ ಒಂದರಿಂದ ಒಂದೂವರೆ ಕೋಟಿ ರೂ.ವರೆಗೆ ಮಾರಾಟವಾಗುತ್ತದೆ ಎಂದು ಇತರ ನಾಲ್ವರನ್ನು ನಂಬಿಸಿದ್ದ. ಹದಿಹರೆಯದ ಬಾಲಕನನ್ನು ಕೊಲ್ಲುವಾಗ ಈತ ಸ್ಥಳದಲ್ಲೇ ಇರಲಿಲ್ಲ, ಆದರೆ ವೀಡಿಯೊ ಕರೆ ಮೂಲಕ ಉಳಿದವರಿಗೆ ಮಾರ್ಗದರ್ಶನ ನೀಡಿದ್ದ ಎನ್ನಲಾಗಿದೆ.

ಗುಂಪು ಹೊಡೆದಾಟವೊಂದರಲ್ಲಿ ಸಹಾಯ ಮಾಡಲು 100 ರೂ.ನೀಡುವ ಆಮಿಷವೊಡ್ಡಿ ಮೊದಲು ಒಬ್ಬ ಬಾಲಕನನ್ನು ಸೆಳೆಯಲು ಯತ್ನಿಸಿತ್ತು, ಆದರೆ ಆತ ಬಂದಿರಲಿಲ್ಲ. ಎರಡನೇ ಯತ್ನದಲ್ಲಿ ಮತ್ತೊಬ್ಬ ಬಾಲಕ ಗುಂಪನ್ನು ಎದುರಿಸಿ ತಪ್ಪಿಸಿಕೊಂಡಿದ್ದ. ಈ ಸಂಬಂಧ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು.

ಆಗಸ್ಟ್ 6ರಂದು ಇಬ್ಬರು ಅಪ್ರಾಪ್ತ ವಯಸ್ಕ ಬಾಲಕರು ಖತ್ಲಾಪುರ ಬಳಿ ಜಗಳದಲ್ಲಿ ಸಹಾಯ ಮಾಡುವಂತೆ ಇಕ್ಬಾಲ್ ಮೈದಾನದಲ್ಲಿದ್ದ 16ರ ಹರೆಯದ ಬಾಲಕನಿಗೆ ಆಮಿಷವೊಡ್ಡಿ ಧೋಬಿ ಘಾಟ್‌ಗೆ ಕರೆದೊಯ್ದಿದ್ದರು. ಅಲ್ಲಿ ಗುಂಪು ಬಾಲಕನನ್ನು ಚಾಕುವಿನಿಂದ ಇರಿದು ಕೊಂದಿತ್ತು ಮತ್ತು ಬ್ಲೇಡ್‌ನಿಂದ ಅವನ ವೃಷಣಗಳನ್ನು ಹೊರತೆಗೆದಿತ್ತು.

ಹತ ಬಾಲಕ ಇಕ್ಬಾಲ್ ಮೈದಾನ ಮತ್ತು ಮೋತಿ ಮಸೀದಿ ಸುತ್ತಮುತ್ತ ಪೆನ್ ಹಾಗೂ ಕೀ-ರಿಂಗ್‌ಗಳನ್ನು ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆ.10ರಂದು ಧೋಬಿ ಘಾಟ್ ಬಳಿಯ ಲೋವರ್ ಲೇಕ್‌ನಲ್ಲಿ ಬಾಲಕನ ಕೊಳೆತ ಶವ ಪತ್ತೆಯಾಗಿತ್ತು. ಬಾಲಕನ ತಾಯಿ ನಾಪತ್ತೆ ದೂರು ಸಲ್ಲಿಸಿದ ಐದು ದಿನಗಳ ಬಳಿಕ ಮೈಮೇಲಿದ್ದ ಹಚ್ಚೆಯ ಆಧಾರದಲ್ಲಿ ಆತನ ಗುರುತು ತಿಳಿದುಬಂದಿತ್ತು.

ಖರೀದಿದಾರನನ್ನು ಹುಡುಕುವ ಯತ್ನದಲ್ಲಿದ್ದ ಗುಂಪು ದೇಹದಿಂದ ತೆಗೆದಿದ್ದ ಭಾಗಗಳನ್ನು ಎರಡು ದಿನಗಳ ಕಾಲ ಟೆರೇಸ್ ಮೇಲೆ ಇಟ್ಟಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ ಆರೋಪಿಗಳಿಗೆ ಖರೀದಿದಾರರು ಸಿಕ್ಕಿರಲಿಲ್ಲ ಮತ್ತು ಅಂಗಾಂಶವನ್ನು ಹೇಗೆ ಸಂರಕ್ಷಿಸಬೇಕು ಅಥವಾ ಮಾರಾಟ ಮಾಡಬೇಕು ಎನ್ನುವುದು ಅವರಿಗೆ ತಿಳಿದಿರಲಿಲ್ಲ. ನಂತರ ಜೋಹೆಬ್ ಆ ದೇಹದ ಭಾಗಗಳನ್ನು ಪ್ರತ್ಯೇಕ ಜಲಮೂಲಗಳಲ್ಲಿ ಎಸೆಯುವಂತೆ ಇತರರಿಗೆ ಸೂಚಿಸಿದ್ದ.

ವೃಷಣಗಳನ್ನು ಅಪ್ಪರ್ ಲೇಕ್ ಮತ್ತು ಲೋವರ್ ಲೇಕ್‌ನಲ್ಲಿ ಎಸೆಯಲಾಗಿದೆ ಎಂದು ಶಂಕಿತರು ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ.

ವೃಷಣಗಳನ್ನು ಎಸೆದ ನಿರ್ದಿಷ್ಟ ಸ್ಥಳಗಳನ್ನು ಗುರುತಿಸಲು ಶಂಕಿತರನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಮುಳುಗುತಜ್ಞರು ಎರಡು ಕೆರೆಗಳಲ್ಲಿ ಶೋಧ ನಡೆಸಲಿದ್ದಾರೆ ಎಂದು ಪೋಲಿಸರು ತಿಳಿಸಿದ್ದಾರೆ.

Tags

Murdercrime
share
ವಾರ್ತಾಭಾರತಿ
ವಾರ್ತಾಭಾರತಿ
Next Story
X