Union Budget 2026| ರಾಷ್ಟ್ರಪತಿಯನ್ನು ಭೇಟಿ ಮಾಡಿದ ಸಚಿವೆ ನಿರ್ಮಲಾ ಸೀತಾರಾಮನ್

Photo| ANI
ಹೊಸದಿಲ್ಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದಾಖಲೆಯ 9ನೇ ಬಜೆಟ್ ಮಂಡಿಸುವ ಮೊದಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದರು.
ಇದಕ್ಕೆ ಮೊದಲು ಕರ್ತವ್ಯ ಭವನದ ಹೊರಗೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ತಂಡದೊಂದಿಗೆ ಬಜೆಟ್ ಟ್ಯಾಬ್ಲೆಟ್ನ್ನು ಪ್ರದರ್ಶಿಸಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ಬಜೆಟ್ ಮಂಡನೆ ನಡೆಯಲಿದೆ.
ಈ ಬಾರಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಮಿಳುನಾಡಿನ ನೇಯ್ಗೆ ಪರಂಪರೆಯನ್ನು ಗೌರವಿಸುವ ಸಲುವಾಗಿ ಕೈಮಗ್ಗದಿಂದ ತಯಾರಿಸಿದ ಕಾಂಜೀವರಂ ರೇಷ್ಮೆ ಸೀರೆಯನ್ನು ಧರಿಸಿದ್ದಾರೆ. ಪ್ರತಿ ಬಾರಿಯೂ ಬಜೆಟ್ ದಿನ ನಿರ್ಮಲಾ ಸೀತಾರಾಮನ್ ಅವರು ಧರಿಸುವ ಸೀರೆ ಟ್ರೆಂಡ್ ಆಗುತ್ತದೆ. ವಿಭಿನ್ನ ಸೀರೆಗಳನ್ನು ಉಟ್ಟುಕೊಂಡು ಬರುವ ಮೂಲಕ ನಿರ್ಮಲಾ ಅವರು ದೇಶದ ಜನತೆಯ ಗಮನ ಸೆಳೆಯುತ್ತಾರೆ.
#WATCH | Delhi | Union Finance Minister Nirmala Sitharaman, along with her team, calls on President Droupadi Murmu before presenting her ninth consecutive Union Budget pic.twitter.com/96H5JV5obv
— ANI (@ANI) February 1, 2026







