ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಖಾತೆ ರಾಜ್ಯ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

Photo | @ndtv
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಖಾತೆ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಜಾರ್ಜ್ ಕುರಿಯನ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕಾರಿಸಿದ್ದಾರೆ ಎಂದು ವರದಿಯಾಗಿದೆ.
ಮಧ್ಯಪ್ರದೇಶದಿಂದ ರಾಜ್ಯಸಭಾ ಸದಸ್ಯರಾಗಿರುವ ಕುರಿಯನ್ ಅವರ ಅಧಿಕಾರಾವಧಿಯು 2026ರ ಜೂನ್ 21ರಂದು ಕೊನೆಗೊಂಡಿತ್ತು. ಇದರಿಂದ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳು ಮತ್ತು ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ರಾಜ್ಯ ಸಚಿವ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದಾರೆ.
Next Story




