ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ

ರವನೀತ್ ಸಿಂಗ್ | Photo Credit : NDTV
ಹೊಸದಿಲ್ಲಿ, ಜು. 24: ಕೇಂದ್ರ ರೈಲ್ವೇ ಮತ್ತು ಆಹಾರ ಸಂಸ್ಕರಣಾ ಕೈಗಾರಿಕೆಗಳ ರಾಜ್ಯ ಸಚಿವ ರವನೀತ್ ಸಿಂಗ್ ಬಿಟ್ಟು ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮುಂದಿನ ವರ್ಷ ನಡೆಯಲಿರುವ ಪಂಜಾಬ್ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ವದಂತಿಗಳ ನಡುವೆ ಅವರು ಈ ರಾಜೀನಾಮೆ ನೀಡಿದ್ದಾರೆ.
ರವನೀತ್ ಸಿಂಗ್ ಬಿಟ್ಟು ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆಯಲ್ಲಿ ತಿಳಿಸಿದೆ.
Next Story




