ರೈತರ ಆದಾಯ ದ್ವಿಗುಣಗೊಂಡಿದೆ: ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್

ಶಿವರಾಜ್ ಸಿಂಗ್ ಚೌಹಾಣ್ | Photo Credit : PTI
ಹೊಸದಿಲ್ಲಿ: ಕೇಂದ್ರ ಸರಕಾರ ಕೃಷಿ ವಲಯಕ್ಕಾಗಿ ಹಲವಾರು ಉಪಕ್ರಮಗಳನ್ನು ಕೈಗೊಳ್ಳುತ್ತಿದ್ದು, ರೈತರ ಆದಾಯ ದ್ವಿಗುಣಗೊಂಡಿದೆ ಎಂದು ಮಂಗಳವಾರ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಲೋಕಸಭೆಗೆ ತಿಳಿಸಿದರು.
ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಶಿವರಾಜ್ ಸಿಂಗ್ ಚೌಹಾಣ್, ಕೃಷಿ ಉತ್ಪಾದನೆ ಹೆಚ್ಚಳಗೊಂಡಿದ್ದು, ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹಾಗೂ ರಸಗೊಬ್ಬರವನ್ನು ಒದಗಿಸುವುದೂ ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಳ್ಳಗಲಾಗಿದೆ ಎಂದು ಹೇಳಿದರು.
ಕೆಲವು ಪ್ರಕರಣಗಳಲ್ಲಿ ರೈತರ ಆದಾಯ ದ್ವಿಗುಣಗೊಂಡಿದ್ದು, ಅವರ ಆದಾಯ ಮೂರರಿಂದ ನಾಲ್ಕು ಪಟ್ಟು ಏರಿಕೆಯಾಗಿದೆ ಎಂದು ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಅವರು ತಿಳಿಸಿದರು.
ರೈತರ ಆದಾಯವನ್ನು ದ್ವಿಗುಣಗೊಳಿಸಲಾಗುವುದು ಎಂಬ ತನ್ನ ಭರವಸೆಯನ್ನು ಸರಕಾರ ಉಳಿಸಿಕೊಂಡಿಲ್ಲ ಎಂಬ ಟಿಎಂಸಿ ನಾಯಕ ಸೌಗತ ರಾಯ್ ಅವರ ಮಾತಿಗೆ ಅವರು ಮೇಲಿನಂತೆ ಪ್ರತಿಕ್ರಿಯೆ ನೀಡಿದರು.
Next Story




