Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಪ್ರೀಂ ಕೋರ್ಟ್ : ತನ್ನದೇ ಕೊಲೆ...

ಸುಪ್ರೀಂ ಕೋರ್ಟ್ : ತನ್ನದೇ ಕೊಲೆ ಪ್ರಕರಣದ ವಿಚಾರಣೆಯಲ್ಲಿ ಹಾಜರಾಗಿ, "ನಾನು ಬದುಕಿದ್ದೇನೆ" ಎಂದ ಬಾಲಕ!

ಅಲಹಾಬಾದ್ ಹೈಕೋರ್ಟ್ ಪೀಠದಲ್ಲಿ ವಜಾಗೊಂಡಿದ್ದ ಅರ್ಜಿಗೆ ʼಸುಪ್ರೀಂʼ ಮಾನ್ಯತೆ

ವಾರ್ತಾಭಾರತಿವಾರ್ತಾಭಾರತಿ11 Nov 2023 7:01 PM IST
share
ಸುಪ್ರೀಂ ಕೋರ್ಟ್ : ತನ್ನದೇ ಕೊಲೆ ಪ್ರಕರಣದ ವಿಚಾರಣೆಯಲ್ಲಿ ಹಾಜರಾಗಿ, ನಾನು ಬದುಕಿದ್ದೇನೆ ಎಂದ ಬಾಲಕ!
ಮುಂದಿನ ಆದೇಶದವರೆಗೆ ಬಾಲಕ ಮತ್ತು ಅವನ ಅಜ್ಜನ ವಿರುದ್ಧ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದಂತೆ ನ್ಯಾಯಾಲಯವು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ಪಿಲಿಭಿತ್: ತನ್ನದೇ ಕೊಲೆ ಪ್ರಕರಣದ ವಿಚಾರಣೆ ಸಂದರ್ಭ 11 ವರ್ಷದ ಬಾಲಕನೊಬ್ಬ ತಾನು ಜೀವಂತವಾಗಿದ್ದಾನೆ ಸುಪ್ರೀಂ ಕೋರ್ಟ್‌ ಮುಂದೆ ಹಾಜರಾದ ಅಚ್ಚರಿಯ ಘಟನೆ ವರದಿಯಾಗಿದೆ ಎಂದು ndtv ವರದಿ ಮಾಡಿದೆ.

ಕೊಲೆ ಪ್ರಕರಣ ನಕಲಿ ಎಂದು ನ್ಯಾಯಾಲಯಕ್ಕೆ ತಿಳಿಸಲು ಬಾಲಕ ಸುಪ್ರೀಂ ಕೋರ್ಟ್ ಪೀಠದ ಮುಂದೆ ಹಾಜರಾಗಿದ್ದಾನೆ. ಬಾಲಕನ ತಂದೆ, ಅಜ್ಜ ಮತ್ತು ಚಿಕ್ಕಪ್ಪ ಬಾಲಕನನ್ನು ಕೊಂದಿದ್ದಾರೆ ಎಂದು ಸುಳ್ಳು ಆರೋಪ ಮಾಡಿದಾಗ ಪ್ರಕರಣ ಪ್ರಾರಂಭವಾಗಿತ್ತು. ಈ ಬಗ್ಗೆ ಉತ್ತರ ಪ್ರದೇಶದ ಪಿಲಿಭಿತ್‌ನಲ್ಲಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದರು.

ಹುಡುಗ ಅಭಯ್ ಸಿಂಗ್, ಪ್ರಕರಣವನ್ನು ನಕಲಿ ಎಂದು ತಿಳಿಸಲು ಮತ್ತು ತಾನು ಜೀವಂತವಾಗಿದ್ದೇನೆ ಎಂದು ಸಾಬೀತುಪಡಿಸಲು ನ್ಯಾಯಪೀಠದ ಕದ ತಟ್ಟಿದ್ದಾನೆ. ಈ ಮೊದಲು, ಅಲಹಾಬಾದ್ ಹೈಕೋರ್ಟ್ ಪೀಠದ ಮುಂದೆ ಹಾಜರಾಗಿದ್ದನು. ಆದರೆ ಅಲ್ಲಿ ಅರ್ಜಿ ವಜಾಗೊಳಿಸಲಾಗಿತ್ತು. ಇದರಿಂದಾಗಿ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

ಶುಕ್ರವಾರ ಬಾಲಕ ಸುಪ್ರೀಂ ಕೋರ್ಟ್‌ನ ವಿಭಾಗೀಯ ಪೀಠದ ಮುಂದೆ ನಿಂತು "ನಾನು ಬದುಕಿದ್ದೇನೆ" ಎಂದು ಹೇಳಿದನು. ಪ್ರಕರಣದ ಗಂಭೀರತೆ ಅರಿತ ನ್ಯಾಯಾಲಯವು ಉತ್ತರ ಪ್ರದೇಶ ಸರ್ಕಾರ, ಪಿಲಿಭಿತ್ ಪೊಲೀಸ್ ವರಿಷ್ಠಾಧಿಕಾರಿ ಮತ್ತು ನ್ಯೂರಿಯಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿಯಿಂದ ವರದಿಯನ್ನು ಕೇಳಿದೆ.

ಮುಂದಿನ ಆದೇಶದವರೆಗೆ ಬಾಲಕ ಮತ್ತು ಅತನ ಅಜ್ಜನ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳದಂತೆ ನ್ಯಾಯಾಲಯವು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ಅಭಯ್, " ನಾನು ನನ್ನ ಅಜ್ಜಿಯೊಂದಿಗಿದ್ದೇನೆ. ಅವರೊಂದಿಗೆ ನಾನು ಸುರಕ್ಷಿತವಾಗಿರುತ್ತೇನೆ. ಪೊಲೀಸರು ನಮ್ಮ ಮನೆಗೆ ಬಂದು, ನನ್ನ ಅಜ್ಜ-ಅಜ್ಜಿಗೆ ಬೆದರಿಕೆ ಹಾಕುತ್ತಿರುತ್ತಾರೆ" ಎಂದು ತನ್ನ ಇಂಗಿತ ವ್ಯಕ್ತಪಡಿಸಿದ್ದಾನೆ.

ಬಾಲಕನ ವಕೀಲ ಕುಲದೀಪ್ ಜೌಹಾರಿ ಮಾತನಾಡಿ, "ಬಾಲಕನ ತಂದೆ, ಆತನ ತಾಯಿಯನ್ನು ಹೊಡೆಯುತ್ತಿದ್ದರು. ಹೆಚ್ಚಿನ ವರದಕ್ಷಿಣೆಗೆ ಪೀಡಿಸುತ್ತಿದ್ದರು. ಹೀಗಾಗಿ ಬಾಲಕ 2013 ರಿಂದ ತನ್ನ ತಾಯಿಯ ತವರು ಮನೆಯಲ್ಲಿ ವಾಸಿಸುತ್ತಿದ್ದ", ಎಂದರು.

"ಬಾಲಕನ ತಾಯಿ ತೀರಿಕೊಂಡ ನಂತರ ಅವನ ತಂದೆ, ಅಜ್ಜನ ವಿರುದ್ಧ ಪ್ರಕರಣ ದಾಖಲಿಸಿ ಬಾಲಕನನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದರು", ಎಂದು ಪ್ರಕರಣದ ಕುರಿತು ಮಾಹಿತಿ ನೀಡಿದ್ದಾರೆ.

ಜನವರಿಯಲ್ಲಿ ಸುಪ್ರೀಂ ಕೋರ್ಟ್ ಮುಂದಿನ ವಿಚಾರಣೆ ನಡೆಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X