Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಪ್ರದೇಶ | ಮಂದಿರದ ಮೇಲೆ ನಿರ್ಮಾಣದ...

ಉತ್ತರ ಪ್ರದೇಶ | ಮಂದಿರದ ಮೇಲೆ ನಿರ್ಮಾಣದ ಆರೋಪ, ಗುಂಪಿನಿಂದ ಗೋರಿ ಧ್ವಂಸ

ವಾರ್ತಾಭಾರತಿವಾರ್ತಾಭಾರತಿ11 Aug 2025 8:52 PM IST
share

ಫತೇಪುರ,ಆ.11: ಮಂದಿರದ ಮೇಲೆ ನಿರ್ಮಿಸಲಾಗಿದೆ ಎಂದು ಆರೋಪಿಸಿ ಗೋರಿಯೊಂದನ್ನು ಹಿಂದು ಸಂಘಟನೆಯ ಕಾರ್ಯಕರ್ತರು ಧ್ವಂಸಗೊಳಿಸಿದ ಘಟನೆ ಸೋಮವಾರ ಇಲ್ಲಿ ನಡೆದಿದೆ. ಇನ್ನಷ್ಟು ಅಶಾಂತಿಯುಂಟಾಗುವುದನ್ನು ತಡೆಯಲು ಜಿಲ್ಲಾಡಳಿತವು ಪ್ರದೇಶದಲ್ಲಿ ಭಾರೀ ಸಂಖ್ಯೆಯಲ್ಲಿ ಪೋಲಿಸರನ್ನು ನಿಯೋಜಿಸಿದ್ದು, ವಿವಾದಿತ ಸ್ಥಳದ ಸುತ್ತ ಬ್ಯಾರಿಕೇಡ್‌ ಗಳನ್ನು ಅಳವಡಿಸಲಾಗಿದೆ.

ಸದರ್ ತಹಸಿಲ್‌ ನ ರೆಡಿಯಾ ಪ್ರದೇಶದ ಅಬುನಗರದಲ್ಲಿಯ ಸಮಾಧಿ ಸ್ಥಳವು ವಿವಾದದ ಕೇಂದ್ರಬಿಂದುವಾಗಿದೆ. ಸರಕಾರಿ ದಾಖಲೆಗಳಲ್ಲಿ ಖಸ್ರಾ ನಂ.753ರಡಿ ಮಕ್ಬರಾ ಮಂಗಿ(ರಾಷ್ಟ್ರೀಯ ಆಸ್ತಿ) ಎಂದು ಅಧಿಕೃತವಾಗಿ ನೋಂದಾಯಿಸಲಾಗಿರುವ ಗೋರಿಯು ಬಿಜೆಪಿ ಸೇರಿದಂತೆ ಮಠ ಮಂದಿರ ಸಂರಕ್ಷಣ ಸಂಘರ್ಷ ಸಮಿತಿ ಮತ್ತು ಇತರ ಹಿಂದು ಗುಂಪುಗಳ ಸದಸ್ಯರು ಅದು ಸಾವಿರ ವರ್ಷಗಳಿಗೂ ಹಳೆಯದಾದ ಠಾಕೂರ್ಜಿ ಮತ್ತು ಶಿವ ದೇವಸ್ಥಾನವಾಗಿದೆ ಎಂದು ಘೋಷಿಸಿದ ಬಳಿಕ ವಿವಾದವು ಭುಗಿಲೆದ್ದಿದೆ.

ಹಲವಾರು ಜನರು ಕೇಸರಿ ಧ್ವಜಗಳನ್ನು ಹಿಡಿದುಕೊಂಡು ಗೋರಿಯ ಸುತ್ತ ಸೇರಿ ‘ಜೈ ಶ್ರೀರಾಮ್’ ಘೋಷಣೆಗಳನ್ನು ಕೂಗುತ್ತಿರುವುದನ್ನು ಘಟನಾ ಸ್ಥಳದ ವೀಡಿಯೊ ತೋರಿಸಿದೆ.

ಈ ಗೋರಿಯು ವಾಸ್ತವದಲ್ಲಿ ನವಾಬ್ ಅಬ್ದುಸ್ ಸಮದ್ ಅವರ ಸಮಾಧಿ ಸ್ಥಳವಲ್ಲ,ಅದು ಕಾಲಾಂತರದಲ್ಲಿ ಗೋರಿಯಾಗಿ ಪರಿವರ್ತನೆಗೊಂಡ ದೇವಸ್ಥಾನವಾಗಿದೆ ಎಂದು ಪ್ರತಿಭಟನೆಯ ಮುಂಚೂಣಿಯಲ್ಲಿರುವ ಬಿಜೆಪಿ ಜಿಲ್ಲಾಧ್ಯಕ್ಷ ಮುಖಲಾಲ್ ಪಾಲ್ ಆರೋಪಿಸಿದ ಬಳಿಕ ವಿವಾದ ಸೃಷ್ಟಿಯಾಗಿದೆ. ಕಟ್ಟಡದಲ್ಲಿ ಕಮಲದ ಹೂವು ಮತ್ತು ತ್ರಿಶೂಲ ಇರುವುದನ್ನು ಪುರಾವೆಯಾಗಿ ಉಲ್ಲೇಖಿಸಿ ಇದು ಸಾವಿರ ವರ್ಷಗಳಷ್ಟು ಹಳೆಯದಾದ ಠಾಕೂರ್ಜಿ ಮತ್ತು ಶಿವ ಮಂದಿರವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಇದರ ಬೆನ್ನಲ್ಲೇ ಸೋಮವಾರ ಹಿಂದು ಸಂಘಟನೆಗಳ ಸದಸ್ಯರು ಸಮಾಧಿ ಸ್ಥಳವನ್ನು ಪ್ರವೇಶಿಸಿ ಹೊರಗಿನ ಆವರಣವನ್ನು ಧ್ವಂಸಗೊಳಿಸಿದ್ದಾರೆ.

ಬಜರಂಗ ದಳದ ಜಿಲ್ಲಾ ಸಹ ಸಂಚಾಲಕ ಧರ್ಮೇಂದ್ರ ಸಿಂಗ್ ಅವರೂ ಗೋರಿಯನ್ನು ಮಂದಿರದ ಮೇಲೆ ನಿರ್ಮಿಸಲಾಗಿದೆ ಎಂದು ಪ್ರತಿಪಾದಿಸಿದ್ದರೆ, ವಿಹಿಂಪ ರಾಜ್ಯ ಉಪಾಧ್ಯಕ್ಷ ವೀರೇಂದ್ರ ಪಾಂಡೆಯವರು ಈ ಸ್ಥಳವು ಹಿಂದುಗಳ ನಂಬಿಕೆಯ ಕೇಂದ್ರ ತಾಣವಾಗಿದ್ದು, ಅದನ್ನು ಮರಳಿ ಪಡೆಯುವುದಾಗಿ ಪಣ ತೊಟ್ಟಿದ್ದಾರೆ.

ಈ ಬೆಳವಣಿಗೆಗೆ ಪ್ರತಿಕ್ರಿಯಿಸಿರುವ ನ್ಯಾಷನಲ್ ಉಲಮಾ ಕೌನ್ಸಿಲ್‌ನ ರಾಷ್ಟ್ರೀಯ ಕಾರ್ಯದರ್ಶಿ ಮೊ ನಸೀಮ್ ಅವರು,ಇದು ಇತಿಹಾಸವನ್ನು ತಿರುಚುವ ಮತ್ತು ಕೋಮು ಸಾಮರಸ್ಯವನ್ನು ಕದಡುವ ಪ್ರಯತ್ನ ಎಂದು ಬಣ್ಣಿಸಿದ್ದಾರೆ. ‘ಅದು ಸಾವಿರಾರು ವರ್ಷಗಳ ಹಿಂದಿನ ಸಮಾಧಿ ಸ್ಥಳವಾಗಿದ್ದು, ಒಳಗಡೆ ಗೋರಿಗಳಿವೆ. ಈ ಸ್ಥಳವು ಸರಕಾರಿ ದಾಖಲೆಗಳಲ್ಲಿ ಸ್ಪಷ್ಟವಾಗಿ ನಮೂದಾಗಿದೆ. ಈಗ ನಾವು ಪ್ರತಿಯೊಂದು ಮಸೀದಿ ಮತ್ತು ಗೋರಿಯ ಕೆಳಗೆ ದೇವಸ್ಥಾನಗಳನ್ನು ಹುಡುಕಲಿದ್ದೇವೆಯೇ?’ ಎಂದು ಅವರು ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X