Uttar Pradesh |ರಸ್ತೆ ಬದಿ ನಿಂತಿದ್ದ ಟ್ರಕ್ಗೆ ಕಾರು ಢಿಕ್ಕಿ: ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಮೃತ್ಯು

ಸಾಂದರ್ಭಿಕ ಚಿತ್ರ| NDTV
ಲಕ್ನೊ: ರಸ್ತೆ ಬದಿ ನಿಲ್ಲಿಸಿದ್ದ ಟ್ರಕ್ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹ ಬಳಿ ದಿಲ್ಲಿ-ಲಕ್ನೊ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬುಧವಾರ ಮಧ್ಯರಾತ್ರಿ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಮೃತ ನಾಲ್ವರು ವೆಂಕಟೇಶ್ವರ್ ವಿಶ್ವವಿದ್ಯಾಲಯದ ಎಂಬಿಬಿಎಸ್ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಅಪಘಾತದ ಕುರಿತು ಮೃತರ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ.
ಈ ಸಂಬಂಧ ರಜಬ್ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





