Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. Uttar Pradesh| ಬಹಿರ್ದೆಸೆಗೆ ತೆರಳಿದ್ದ...

Uttar Pradesh| ಬಹಿರ್ದೆಸೆಗೆ ತೆರಳಿದ್ದ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ: ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ9 Feb 2026 10:36 AM IST
share
Uttar Pradesh| ಬಹಿರ್ದೆಸೆಗೆ ತೆರಳಿದ್ದ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ:  ಪ್ರಕರಣ ದಾಖಲು

ಭದೋಹಿ: ನಾಲೆಯ ಬಳಿ ಬಹಿರ್ದೆಸೆ (ಮಲ ವಿಸರ್ಜನೆ) ಮಾಡಿದ ಕಾರಣಕ್ಕೆ ದಲಿತ ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕಣ್ಣಿಗೆ ಮೋಟರ್ ಬೈಕ್ ಕೀಯನ್ನು ಚುಚ್ಚಿದ ಪರಿಣಾಮ, ಆತನ ಒಂದು ಕಣ್ಣಿನ ದೃಷ್ಟಿ ನಷ್ಟವಾಗಿರುವ ಘಟನೆ ಉತ್ತರ ಪ್ರದೇಶದ ಭದೋಹಿ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ಮಧ್ಯಾಹ್ನ ಔರಾಯಿ ಪ್ರದೇಶದಲ್ಲಿನ ನಾಲೆಗೆ ಮಲ ವಿಸರ್ಜನೆ ಮಾಡಲು ಸಂತ್ರಸ್ತ ಯುವಕ ರಾಹುಲ್ ತೆರಳಿದ್ದಾಗ ಆರೋಪಿ ಶಂಕರ್ ಬಿಂದ್ ನಡುವೆ ವಾಗ್ವಾದ ನಡೆದಿದೆ. ನಾಲೆಯ ಬಳಿ ಮಲ ವಿಸರ್ಜನೆ ಮಾಡುವುದಕ್ಕೆ ಆರೋಪಿ ಶಂಕರ್ ಬಿಂದ್ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಬಳಿಕ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾನೆ ಎಂದು ಹೇಳಲಾಗಿದೆ.

ಹಲ್ಲೆಯಿಂದ ತಪ್ಪಿಸಿಕೊಳ್ಳಲು ಸಂತ್ರಸ್ತ ಯುವಕ ಪ್ರಯತ್ನಿಸಿದಾಗ, ಆತನ ಒಂದು ಕಣ್ಣಿಗೆ ಮೋಟರ್ ಬೈಕ್ ನ ಕೀಯಿಂದ ಆರೋಪಿ ಶಂಕರ್ ಬಿಂದ್ ಚುಚ್ಚಿದ್ದಾನೆ. ಸಂತ್ರಸ್ತ ಯುವಕ ಘಟನಾ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ ಎಂದು ಭದೋಹಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿಮನ್ಯು ಮಂಗ್ಲೀಕ್ ತಿಳಿಸಿದ್ದಾರೆ.

ಸ್ಥಳೀಯರು ಘಟನಾ ಸ್ಥಳದಲ್ಲಿ ಜಮಾಯಿಸಿದಾಗ ಆರೋಪಿಯು ಅಲ್ಲಿಂದ ಪರಾರಿಯಾಗಿದ್ದಾನೆ. ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು, ಗಾಯಾಳು ಯುವಕನನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ಥಳಾಂತರಿಸಿದ್ದಾರೆ.

ಸಂತ್ರಸ್ತ ಯುವಕನ ತಂದೆ ರಾಮ್ ಧಾನಿ ನೀಡಿದ ದೂರನ್ನು ಆಧರಿಸಿ, ಆರೋಪಿ ಶಂಕರ್ ಬಿಂದ್ ವಿರುದ್ಧ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags

Uttar PradeshDalit youth
share
ವಾರ್ತಾಭಾರತಿ
ವಾರ್ತಾಭಾರತಿ
Next Story
X