ಉತ್ತರ ಪ್ರದೇಶ | ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ : ಇಬ್ಬರು ಮೃತ್ಯು, ಮೂವರಿಗೆ ಗಾಯ

ಸಾಂದರ್ಭಿಕ ಚಿತ್ರ | PC : iStock photo
ಲಕ್ನೋ : ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ.
ಟಿಕೈತ್ನಗರ ಪ್ರದೇಶದ ಸರೈ ಬರೈ ಗ್ರಾಮದಲ್ಲಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಬಳಿಕ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ಇದರಿಂದಾಗಿ ಸ್ಥಳೀಯರಲ್ಲಿ ಆತಂಕ ಮನೆ ಮಾಡಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ಗಂಭೀರವಾಗಿ ಸುಟ್ಟ ಗಾಯಗಳಾಗಿರುವ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಕಾರ್ಖಾನೆಯು ಪಟಾಕಿಗಳನ್ನು ತಯಾರಿಸಲು ಮಾನ್ಯವಾದ ಪರವಾನಗಿಯನ್ನು ಹೊಂದಿದೆ. ಸ್ಪೋಟದ ಕುರಿತು ತನಿಖೆ ನಡೆಯುತ್ತಿದೆ ಎಂದು ಎಸ್ಪಿ ಅರ್ಪಿತ್ ವಿಜಯವರ್ಗಿಯಾ ತಿಳಿಸಿದ್ದಾರೆ.
Next Story





