Pune | ಬಸ್ ನಿಲ್ದಾಣದಲ್ಲಿದ್ದ ವಿದ್ಯಾರ್ಥಿಗಳ ಮೇಲೆ ಹರಿದ ಟ್ರಕ್: ಮೂವರು ಮೃತ್ಯು, 6 ಜನರಿಗೆ ಗಾಯ

Screengrab : X
ಪುಣೆ: ಬಸ್ ನಿಲ್ದಾಣದಲ್ಲಿ ಬಸ್ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳ ಗುಂಪಿನ ಮೇಲೆ ವೇಗವಾಗಿ ಬಂದ ಟ್ರಕ್ ಹರಿದ ಪರಿಣಾಮ ಮೂವರು ಮೃತಪಟ್ಟಿದ್ದು, ಇತರ 6 ಮಂದಿ ಗಾಯಗೊಂಡಿದ್ದಾರೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸಿಸಿಟಿವಿಯಲ್ಲಿ ಟ್ರಕ್ ವಿದ್ಯಾರ್ಥಿಗಳ ಮೇಲೆ ಹರಿದು ಬಳಿಕ ವೇಗವಾಗಿ ಮುಂದಕ್ಕೆ ಸಾಗುವುದು ಸೆರೆಯಾಗಿದೆ. ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗೆ ನೆರವಾಗಲು ಜನರು ಘಟನಾ ಸ್ಥಳದತ್ತ ಧಾವಿಸುವುದೂ ಕಂಡುಬಂದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ವಿದ್ಯಾರ್ಥಿಗಳಿಗೆ ಢಿಕ್ಕಿ ಹೊಡೆಯುವ ಮೊದಲು ಟ್ರಕ್ ಚಾಲಕ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದಾನೆ. ಅಪಘಾತಕ್ಕೆ ಕಾರಣವಾದ ಸಂದರ್ಭಗಳ ಕುರಿತು ತನಿಖೆ ನಡೆಯುತ್ತಿದೆ.
Next Story






