ಕರ್ನಲ್ ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆ: ಮತ್ತೆ ಕ್ಷಮೆಯಾಚಿಸಿದ ಬಿಜೆಪಿ ಸಚಿವ ವಿಜಯ್ ಶಾ

ಕುನ್ವರ್ ವಿಜಯ್ ಶಾ (Photo: X/@KrVijayShah)
ಹೊಸದಿಲ್ಲಿ : ಕರ್ನಲ್ ಸೋಫಿಯಾ ಖುರೇಷಿ ಅವರ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿ ವಿವಾದಕ್ಕೆ ಕಾರಣನಾಗಿದ್ದ ಮಧ್ಯಪ್ರದೇಶ ಸಚಿವ ಕುನ್ವರ್ ವಿಜಯ್ ಶಾ ಮತ್ತೆ ಕ್ಷಮೆಯಾಚಿಸಿದ್ದು, ʼಭಾಷಾ ಬಳಕೆಯಲ್ಲಾದ ದೋಷʼ ಎಂದು ಹೇಳಿಕೊಂಡಿದ್ದಾರೆ.
ಆಪರೇಷನ್ ಸಿಂಧೂರ್ ಕುರಿತ ಹೇಳಿಕೆ ವೇಳೆ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಕುನ್ವರ್ ವಿಜಯ್ ಶಾ ʼಭಯೋತ್ಪಾದಕರ ಸಹೋದರಿʼ ಎಂದು ಕರೆದಿದ್ದರು. ಈ ಕುರಿತ ವೀಡಿಯೊ ವೈರಲ್ ಆಗುತ್ತಿದ್ದಂತೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.
ʼಜೈ ಹಿಂದ್, ಕೆಲವು ದಿನಗಳ ಹಿಂದೆ ಪಹಲ್ಗಾಮ್ನಲ್ಲಿ ನಡೆದ ಭೀಕರ ಹತ್ಯಾಕಾಂಡದಿಂದ ನಾನು ಬಹಳ ದುಃಖಿತನಾಗಿದ್ದೇನೆ. ನನ್ನ ರಾಷ್ಟ್ರದ ಬಗ್ಗೆ ನನಗೆ ಯಾವಾಗಲೂ ಅಪಾರ ಪ್ರೀತಿ ಮತ್ತು ಭಾರತೀಯ ಸೇನೆಯ ಬಗ್ಗೆ ಗೌರವವಿದೆ. ನಾನು ಹೇಳಿದ ಮಾತುಗಳು ಸಮುದಾಯ, ಧರ್ಮ ಮತ್ತು ದೇಶವಾಸಿಗಳಿಗೆ ನೋವುಂಟು ಮಾಡಿದೆ. ಅದು ನನ್ನ ಭಾಷಾ ಬಳಕೆಯಲ್ಲಾದ ದೋಷʼʼ ಎಂದು ವಿಜಯ್ ಶಾ ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ.
ಯಾವುದೇ ಧರ್ಮ, ಜಾತಿ ಅಥವಾ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡುವ ಉದ್ದೇಶ ನನಗಿರಲಿಲ್ಲ. ನನ್ನ ತಪ್ಪಾದ ಹೇಳಿಕೆಗೆ ವಿಷಾದಿಸುತ್ತೇನೆ. ಭಾರತೀಯ ಸೇನೆ, ಸಹೋದರಿ ಸೋಫಿಯಾ ಖುರೇಷಿ ಮತ್ತು ನನ್ನ ಎಲ್ಲಾ ದೇಶವಾಸಿಗಳಿಗೆ ಕೈಮುಗಿದು ಕ್ಷಮೆಯಾಚಿಸುತ್ತೇನೆ ಎಂದು ಹೇಳಿದರು.
ಕರ್ನಲ್ ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಪಕ್ಷಗಳು, ಮಧ್ಯಪ್ರದೇಶ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡ ಬಳಿಕ ವಿಜಯ್ ಶಾ ಈ ಹಿಂದೆ ಎರಡು ಬಾರಿ ಕ್ಷಮೆಯಾಚಿಸಿದ್ದರು.
जयहिन्द,
— Dr. Kunwar Vijay Shah (@KrVijayShah) May 23, 2025
पिछले दिनों पहलगाम में हुए जघन्य हत्याकांड से मैं मन से बहुत दुखी एवं विचलित हूँ, मेरा राष्ट्र के प्रति अपार प्रेम और भारतीय सेना के प्रति आदर एवं सम्मान हमेशा रहा है।
मेरे द्वारा कहे गये शब्दो से समुदाय, धर्म, देशवासियो को दुख पहुँचा है, यह मेरी भाषाई भूल थी, pic.twitter.com/3dU0Jt4QF6







