ತೆಲಂಗಾಣ | 12ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತ್ಯು

Photo | NDTV
ಹೈದರಾಬಾದ್: ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ಗುರುವಾರ ಬೆಳಿಗ್ಗೆ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಾಗ 10ನೇ ತರಗತಿಯ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ರಾಮರೆಡ್ಡಿ ಮಂಡಲದ ಸಿಂಗರಾಯಪಲ್ಲಿ ಗ್ರಾಮದ ಶ್ರೀನಿಧಿ(16) ಮೃತ ವಿದ್ಯಾರ್ಥಿನಿ. ಶಾಲೆಯ ಬಳಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದು ಬಾಲಕಿ ಮೃತಪಟ್ಟಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುರುವಾರ ಬೆಳಿಗ್ಗೆ ಶ್ರೀನಿಧಿ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಾಗ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಶ್ರೀನಿಧಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ ಪ್ರೊಫೆಸರ್ ಎಂ ರಬ್ಬಾನಿ ಮಕ್ಕಳಲ್ಲಿ ಹಠಾತ್ ಹೃದಯ ಸ್ತಂಭನ ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಕಳೆದ ಎರಡು ದಶಕಗಳಲ್ಲಿ ಹೃದಯ ಸ್ತಂಭನದಿಂದ ಉಂಟಾಗುವ ಸಾವುಗಳು 22% ಹೆಚ್ಚಾಗಿದೆ ಎಂದು ಹೇಳಿದ್ದಾರೆ.
Next Story





