Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. “ಸಮಸ್ತದ ಐಕ್ಯತೆಗೆ ನಾವು ಸದಾ ಸಿದ್ಧ”:...

“ಸಮಸ್ತದ ಐಕ್ಯತೆಗೆ ನಾವು ಸದಾ ಸಿದ್ಧ”: ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್

ವಾರ್ತಾಭಾರತಿವಾರ್ತಾಭಾರತಿ14 Feb 2026 10:05 PM IST
share
“ಸಮಸ್ತದ ಐಕ್ಯತೆಗೆ ನಾವು ಸದಾ ಸಿದ್ಧ”: ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್
ಮಲಪ್ಪುರಂನಲ್ಲಿ 2027 ಜನವರಿ 28ರಿಂದ 31ರವರೆಗೆ ನೂರನೇ ವಾರ್ಷಿಕ ಸಮಾವೇಶ

ಕೋಟಕ್ಕಲ್: “ಸುನ್ನಿಗಳು ಸಮಸ್ತವನ್ನು ಬಿಟ್ಟುಹೋಗಿಲ್ಲ. ವಿಧಾನಸಭೆ ಅಥವಾ ಸಂಸತ್ತಿನಲ್ಲಿ ಚರ್ಚೆಯ ವೇಳೆ ಸಭೆಯಿಂದ ಹೊರನಡೆದರೆ ಸದಸ್ಯತ್ವ ಕಳೆದುಕೊಂಡಂತಾಗುವುದಿಲ್ಲ; ಅದೇ ರೀತಿಯಾಗಿ ಸಮಸ್ತ ಕೇರಳ ಜಂಇಯ್ಯತ್ತುಲ್ ಉಲಮಾದಿಂದ ನಾವು ದೂರವಾಗಿಲ್ಲ. ಸಮಸ್ತದ ಐಕ್ಯತೆಗೆ ನಾವು ಸದಾ ಸಿದ್ಧರಾಗಿದ್ದೇವೆ” ಎಂದು ಸಮಸ್ತ ಪ್ರಧಾನ ಕಾರ್ಯದರ್ಶಿ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಹೇಳಿದ್ದಾರೆ.

ಕೋಟ್ಟಕ್ಕಲ್ ಬಹ್ರುಲ್ ಉಲೂಮ್ ನಗರದಲ್ಲಿ ನಡೆದ ಘೋಷಣಾ ಸಮ್ಮೇಳನದಲ್ಲಿ ಮಾತನಾಡಿದ ಅವರು, “ಆ ದಿನ ಚರ್ಚಿಸಲಾದ ವಿಷಯಗಳು ಹೊಸದಾಗಿ ಸದಸ್ಯತ್ವ ಪಡೆದವರಿಗೆ ತಿಳಿದಿರಲಿಕ್ಕಿಲ್ಲ. ಆದರೂ ಸೌಹಾರ್ದಯುತ ಸಂವಾದದ ಮೂಲಕ ತೀರ್ಮಾನ ಕೈಗೊಳ್ಳಬಹುದು. ಸಯ್ಯಿದರೂ ಉಲಮಾಗಳೂ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು” ಎಂದು ಹೇಳಿದರು.

ಇದೇ ವೇಳೆ ಸಮಾಜದ ಸುಸ್ಥಿರ ಬೆಳವಣಿಗೆ ಹಾಗೂ ಸಮಗ್ರ ಪ್ರಗತಿಗೆ ಒಗ್ಗಟ್ಟಿನಿಂದ ನಿಲ್ಲುವುದು ಅವಶ್ಯಕ ಎಂಬ ಅಭಿಪ್ರಾಯವೂ ವ್ಯಕ್ತವಾಯಿತು. ಸಮಸ್ತ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಸಖಾಫಿ ನಿರ್ಣಯ ಮಂಡಿಸಿ, ಸಮಾಜದ ವಿವಿಧ ಸಮುದಾಯಗಳ ನಡುವೆ ಸೌಹಾರ್ದತೆ ಬೆಳೆಸುವುದು ಕಾಲದ ಅಗತ್ಯವಾಗಿದ್ದು, ಸ್ವಂತ ಅಸ್ತಿತ್ವವನ್ನು ಉಳಿಸಿಕೊಂಡೇ ಪರಸ್ಪರ ಕೈಜೋಡಿಸುವುದರಿಂದ ದೇಶದ ಸರ್ವತೋಮುಖ ಅಭಿವೃದ್ಧಿಗೆ ದಾರಿ ತೆರೆದಿಡುತ್ತದೆ ಎಂದು ಹೇಳಿದರು.

ಎರಡು ಸಮಸ್ತಗಳ ನಡುವಿನ ಐಕ್ಯ ಚರ್ಚೆಗಳಿಗೆ ಈಗಾಗಲೇ ಎರಡು ಮುಶಾವರಗಳು ಮಾನ್ಯತೆ ನೀಡಿರುವುದಾಗಿ ಸಮ್ಮೇಳನದಲ್ಲಿ ತಿಳಿಸಲಾಯಿತು. ಹಿಂದಿನ ಸಂವಾದಗಳಲ್ಲಿ ಧನಾತ್ಮಕ ಫಲಿತಾಂಶಗಳ ಬಗ್ಗೆ ವಿಶ್ವಾಸ ವ್ಯಕ್ತವಾಗಿದ್ದು, ನಂಬಿಕೆ ಹಾಗೂ ಕರ್ಮಾಧಾರಿತ ಆದರ್ಶಗಳ ನೆಲೆಯಲ್ಲಿ ಸಮಸ್ತದ ಸ್ಥಾಪಿತ ಗುರಿಗಳೊಳಗಿನ ಐಕ್ಯತೆಯನ್ನು ಸಾಧಿಸಲು ಇನ್ನಷ್ಟು ಸಿದ್ಧತೆ ಅಗತ್ಯವೆಂದು ಘೋಷಿಸಲಾಯಿತು. ಪದಗಳ ಮೂಲಕವಾಗಲಿ, ಕೆಲಸಗಳ ಮೂಲಕವಾಗಲಿ ಐಕ್ಯತೆಗೆ ಧಕ್ಕೆ ತರುವ ಸಂವಹನಗಳು ಯಾರಿಂದಲೂ ನಡೆಯಬಾರದು ಎಂದು ನಿರ್ಣಯದಲ್ಲಿ ಸ್ಪಷ್ಟಪಡಿಸಲಾಯಿತು. ವಿಕೃತ ಪರಿಕಲ್ಪನೆಗಳ ಪ್ರಚಾರ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ನಂಬಿಕೆ ಮತ್ತು ಆದರ್ಶಗಳ ಬಲದೊಂದಿಗೆ ಸ್ನೇಹಭಾವ ಬೆಳೆಸಿ ಜಗತ್ತಿನಾದ್ಯಂತ ಎಲ್ಲರನ್ನು ಒಗ್ಗೂಡಿಸಬೇಕೆಂದು ಮನವಿ ಮಾಡಲಾಯಿತು.

ಘೋಷಣಾ ಸಮ್ಮೇಳನವು ಸಯ್ಯಿದ್ ಅಲಿ ಬಾಫಖಿ ತಂಙಳ್ ಅವರ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಸಮಸ್ತ ಅಧ್ಯಕ್ಷ ಇ. ಸುಲೈಮಾನ್ ಮುಸ್ಲಿಯಾರ್ ಅಧ್ಯಕ್ಷತೆಯಲ್ಲಿ ಸಯ್ಯಿದ್ ಕೆ.ಎಸ್. ಆಟ್ಟಕೋಯ ತಂಙಳ್ ಕುಂಬೋಲ್ ಉದ್ಘಾಟಿಸಿದರು. ಸಮಸ್ತ ಕಾರ್ಯದರ್ಶಿ ಪೊನ್ಮಳ ಅಬ್ದುಲ್ ಖಾದರ್ ಮುಸ್ಲಿಯಾರ್, ಸಯ್ಯಿದ್ ಇಬ್ರಾಹೀಂ ಖಲೀಲುಲ್ ಬುಖಾರಿ ತಂಙಳ್, ಪೆರೋಡ್ ಅಬ್ದುಲ್ರಹ್ಮಾನ್ ಸಖಾಫಿ, ಸಿ. ಮಹಮ್ಮದ್ ಫೈಝಿ, ವಂಟೂರ್ ಅಬ್ದುಲ್ರಹ್ಮಾನ್ ಫೈಝಿ, ಡಾ. ಮುಹಮ್ಮದ್ ಅಬ್ದುಲ್ ಹಕೀಂ ಅಸ್ ಅಬ್ದುಲ್ಲ ಅಹ್‌ಸನಿ ಚೆಂಗಾನಿ, ಸುಲೈಮಾನ್ ಸಖಾಫಿ ಮಾಳಿಯೇಕಲ್, ಅಬ್ದುಲ್ ಜಲೀಲ್ ಸಖಾಫಿ ಚೆರುಶೋಲ ಹಾಗೂ ಅಲವಿ ಸಖಾಫಿ ಕೊಳತ್ತೂರು ಉಪನ್ಯಾಸ ನೀಡಿದರು. ಕೇರಳದ ವಿವಿಧ ಭಾಗಗಳಿಂದ ಆಯ್ಕೆಯಾದ ಪಂಡಿತರೊಂದಿಗೆ ನೂರಾರು ಸಾರ್ವಜನಿಕರು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಸಮಸ್ತ ಕೇರಳ ಜಂಇಯ್ಯತ್ತುಲ್ ಉಲಮಾದ ನೂರನೇ ವಾರ್ಷಿಕ ಸಮ್ಮೇಳನವು 2027ರ ಜನವರಿ 28, 29, 30 ಮತ್ತು 31ರಂದು ಮಲಪ್ಪುರಂ ವಾದಿ ಹರಮೈನ್‌ನಲ್ಲಿ ನಡೆಯಲಿದೆ ಎಂದು ಘೋಷಿಸಲಾಯಿತು. ‘ಸಮಸ್ತ: 100 ಪ್ರಕಾಶ ವರ್ಷಗಳು’ ಎಂಬ ವಿಷಯದಡಿ ಸಮ್ಮೇಳನ ನಡೆಯಲಿದೆ ಎಂದು ಅವರು ತಿಳಿಸಿದರು.

Tags

unityKanthapuram AP Aboobacker Musliyar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X