West Bengal| ಕತ್ವಾ-ಅಝೀಮ್ಗಂಜ್ ಪ್ರಯಾಣಿಕ ರೈಲಿನಲ್ಲಿ ಅಗ್ನಿ ಅವಘಡ

ಸಾಂದರ್ಭಿಕ ಚಿತ್ರ| (GEMINI.AI)
ಕೊಲ್ಕತ್ತಾ: ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್ ಜಿಲ್ಲೆಯ ಕಟ್ವಾ ರೈಲು ನಿಲ್ದಾಣದಲ್ಲಿ ರವಿವಾರ ಮುಂಜಾನೆ ಖಾಲಿ ಪ್ಯಾಸೆಂಜರ್ ರೈಲಿನ ಬೋಗಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಪೂರ್ವ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಟ್ವಾ ರೈಲು ನಿಲ್ದಾಣದಲ್ಲಿ ಎರಡನೇ ಪ್ಲಾಟ್ಫಾರ್ಮ್ನಲ್ಲಿ ನಿಂತಿದ್ದ ಕತ್ವಾ-ಅಝೀಮ್ಗಂಜ್ ಪ್ಯಾಸೆಂಜರ್ ರೈಲಿನ ಒಂದು ಬೋಗಿಯಲ್ಲಿ ರವಿವಾರ ಬೆಳಗಿನ ಜಾವ 4.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಬೆಂಕಿ ಹರಡುವುದನ್ನು ತಡೆಯಲು ರೈಲ್ವೆ ಸಿಬ್ಬಂದಿ ತಕ್ಷಣವೇ ಬೋಗಿಯನ್ನು ಬೇರ್ಪಡಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರೈಲಿನ ಬೋಗಿಗೆ ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ನಿಲ್ದಾಣದಲ್ಲಿದ್ದ ಪ್ರಯಾಣಿಕರು ತಕ್ಷಣ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.
ಅಗ್ನಿ ಅನಾಹುತಕ್ಕೆ ಕಾರಣಗಳ ಬಗ್ಗೆ ಅಧಿಕಾರಿಗಳು ತನಿಖೆಯನ್ನು ನಡೆಸುತ್ತಿದ್ದಾರೆ.
Next Story





