ಪಶ್ಚಿಮ ಬಂಗಾಳ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ನಾಲ್ವರು ಮೃತ್ಯು

Photo: ANI
ಕೋಲ್ಕತ್ತಾ: ಪಶ್ಚಿಮ ಬಂಗಾಳದ ದತ್ತಪುಕೂರ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿರುವ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಹಾಗೂ ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಗ್ಗೆ 10 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಸಮೀಪದ ಹಲವು ಮನೆಗಳಿಗೂ ಹಾನಿಯಾಗಿದೆ. ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ.
ಕೆಲ ತಿಂಗಳಿಂದ ಕಾರ್ಖಾನೆಯು ಅಕ್ರಮವಾಗಿ ನಡೆಯುತ್ತಿತ್ತು. ಪೊಲೀಸರು ಮತ್ತು ಸ್ಥಳೀಯ ರಾಜಕಾರಣಿಗಳು ಶಾಮೀಲಾಗಿದ್ದಾರೆ ಎಂದು ಸ್ಥಳೀಯರು ಆರೋಪಿಸಿದರು.
ಸ್ಥಳಕ್ಕೆ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಜಿಲ್ಲಾಡಳಿತವು ಇನ್ನೂ ಅಧಿಕೃತ ಸಾವಿನ ಸಂಖ್ಯೆಯನ್ನು ಬಿಡುಗಡೆ ಮಾಡಿಲ್ಲ.
Next Story





