Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 26 ದಿನಗಳ ಕಾಲ ಏನು ಮಾಡುತ್ತಿದ್ದಿರಿ?:...

26 ದಿನಗಳ ಕಾಲ ಏನು ಮಾಡುತ್ತಿದ್ದಿರಿ?: ಎಸ್‌ಬಿಐಗೆ ಸುಪ್ರೀಂ ಕೋರ್ಟ್‌ ತರಾಟೆ

ಚುನಾವಣಾ ಬಾಂಡ್ ವಿವರ ಬಹಿರಂಗಕ್ಕೆ ಸಮಯ ಕೋರಿದ ಅರ್ಜಿ ವಿಚಾರಣೆ

ವಾರ್ತಾಭಾರತಿವಾರ್ತಾಭಾರತಿ11 March 2024 11:30 AM IST
share
26 ದಿನಗಳ ಕಾಲ ಏನು ಮಾಡುತ್ತಿದ್ದಿರಿ?: ಎಸ್‌ಬಿಐಗೆ ಸುಪ್ರೀಂ ಕೋರ್ಟ್‌ ತರಾಟೆ

ಹೊಸದಿಲ್ಲಿ: ನೀವು 26 ದಿನಗಳ ಕಾಲ ಏನು ಮಾಡುತ್ತಿದ್ದಿರಿ?” ಎಂದು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾವನ್ನು ಸುಪ್ರೀಂ ಕೋರ್ಟ್‌ ಇಂದು ತರಾಟೆಗೆ ತೆಗೆದುಕೊಂಡಿದೆ. ಸೀಲ್‌ ಮಾಡಿದ ಕವರ್‌ ಅನ್ನು ನೀವೇಕೆ ತೆರೆಯಬಾರದು ಎಂದೂ ಎಸ್‌ಬಿಐ ಅನ್ನು ಸುಪ್ರೀಂ ಕೋರ್ಟ್‌ ಕೇಳಿದೆ.

ಚುನಾವಣಾ ಬಾಂಡ್‌ಗಳ ಕುರಿತಾದ ಮಾಹಿತಿ ಸಲ್ಲಿಸಲು ಜೂನ್‌ 30ರ ತನಕ ಸಮಾಯವಕಾಶ ಕೋರಿ ಎಸ್‌ಬಿಐ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಅವರ ನೇತೃತ್ವದ ಹಾಗೂ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ, ಬಿ ಆರ್‌ ಗವಾಯಿ, ಜೆ ಬಿ ಪರ್ದಿವಾಲ ಮತ್ತು ಮನೋಜ್‌ ಮಿಶ್ರಾ ಅವರ ಪೀಠ ಮೇಲಿನಂತೆ ಪ್ರಶ್ನಿಸಿದೆ.

“ಇದು ಇಷ್ಟೊಂದು ಗಂಭೀರ ವಿಚಾರವಾಗಿದೆ ಮತ್ತು ನೀವು ಈ ರೀತಿ ಸಮಯಾವಕಾಶ ಕೇಳುತ್ತಿದ್ದೀರಿ. ಕಳೆದ 26 ದಿನಗಳಲ್ಲಿ ನೀವೇನು ಕ್ರಮ ಕೈಗೊಂಡಿದ್ದೀರಿ? ನಿಮ್ಮ ಅರ್ಜಿ ಆ ವಿಚಾರದಲ್ಲಿ ಮೌನವಾಗಿದೆ,” ಎಂದು ಹೇಳಿದೆ.

ದಾನಿಗಳ ವಿವರಗಳನ್ನು ಸೀಲ್‌ ಮಾಡಿದ ಕವರ್‌ಗಳಲ್ಲಿ ನಿಯೋಜಿತ ಬ್ಯಾಂಕ್‌ಗಳಲ್ಲಿ ಗೌಪ್ಯತೆ ಉದ್ದೇಶದಿಂದ ಇರಿಸಲಾಗಿದೆ, ಎಂದು ಎಸ್‌ಬಿಐ ಪರ ವಕೀಲ ಹರೀಶ್‌ ಸಾಳ್ವೆ ಹೇಳಿದರು.

ಅದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, “ಸೀಲ್‌ ಮಾಡಿದ ಕವರ್‌ಗಳಲ್ಲಿ ಇರಿಸಿದೆ ಎನ್ನುತ್ತೀರಿ ನಮ್ಮ ಸೂಚನೆ ದೇಣಿಗೆ ನೀಡಿದವರು ಹಾಗೂ ಅವುಗಳನ್ನು ಪಡೆದವರನ್ನು ಮ್ಯಾಚ್‌ ಮಾಡುವುದು ಅಲ್ಲ. ದೇಣಿಗೆ ನೀಡಿದವರ ವಿವರಗಳನ್ನು ನೀಡುವಂತೆ ಸೂಚಿಸಿದ್ದೆವು. ನೀವೇಕೆ ತೀರ್ಪನ್ನು ಪಾಲಿಸುತ್ತಿಲ್ಲ?” ಎಂದು ಅವರು ಪ್ರಶ್ನಿಸಿದರು.

ಚುನಾವಣಾ ಬಾಂಡ್‌ಗಳನ್ನು ಖರೀದಿಸಿದವರು ಹಾಗೂ ಅವುಗಳನ್ನು ಯಾವ ಪಕ್ಷಗಳಿಗೆ ದೇಣಿಗೆ ನೀಡಲಾಗಿದೆ ಎಂಬುದನ್ನು ಮ್ಯಾಚ್‌ ಮಾಡಲು ಸಮಯ ಬೇಕಾಗುತ್ತದೆ ಎಂದು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಹೇಳಿದೆ.

ಫೆಬ್ರವರಿ 15ರಂದು ಚುನಾವಣಾ ಬಾಂಡ್ ಯೋಜನೆಯನ್ನು ಅಸಂವಿಧಾನಿಕ ಎಂದು ಘೋಷಿಸಿ ಸುಪ್ರೀಂ ಕೋರ್ಟ್ ಅದನ್ನು ರದ್ದುಗೊಳಿಸಿತ್ತಲ್ಲದೆ ಎಪ್ರಿಲ್ 12, 2019ರಿಂದ ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆ ಪಡೆದ ರಾಜಕೀಯ ಪಕ್ಷಗಳ ವಿವರಗಳನ್ನು ಮಾರ್ಚ್‌ 6ರೊಳಗೆ ಸಲ್ಲಿಸುವಂತೆ ಎಸ್ಬಿಐಗೆ ಸೂಚಿಸಿತ್ತು.

ಆದರೆ ಈ ಮಾಹಿತಿಯನ್ನು ನಿಗದಿತ ಅವಧಿಯೊಳಗೆ ನೀಡಲು ವಿಫಲವಾದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಕಳೆದ ವಾರ ಸುಪ್ರಿಂ ಕೋರ್ಟ್‌ ಕದ ತಟ್ಟಿ ಜೂನ್‌ 30ರವರೆಗೆ ಕಾಲಾವಕಾಶ ಕೋರಿತ್ತು.

ಚುನಾವಣಾ ಬಾಂಡ್‌ಗಳ ಕುರಿತು ಮಾಹಿತಿ ಸಲ್ಲಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಸುಪ್ರೀಂ ಕೋರ್ಟ್ ನೀಡಿದ್ದ ಗಡುವು ಮುಕ್ತಾಯಗೊಂಡ ಮರುದಿನ ಎನ್‌ಜಿಒ ಅಸೋಸಿಯೇಶನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್ ಸುಪ್ರೀಂ ಕೋರ್ಟ್‌ ಕದ ತಟ್ಟಿ ಎಸ್‌ಬಿಐ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಕೋರಿ ಸಲ್ಲಿಸಿದ್ದ ಅರ್ಜಿಯನ್ನೂ ವಿಚಾರಣೆಗೆ ನ್ಯಾಯಾಲಯ ಕೈಗೆತ್ತಿಕೊಳ್ಳಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X