ಸಂಸತ್ತಿನ ಚಳಿಗಾಲದ ಅಧಿವೇಶನ: ಎಸ್ಐಆರ್ ವಿರುದ್ಧ ನಿಲುವಳಿ ಸೂಚನೆ ಸಲ್ಲಿಸಿದ ಕಾಂಗ್ರೆಸ್

ಹೊಸದಿಲ್ಲಿ: ಸೋಮವಾರ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದೆ. ಎಸ್ಐಆರ್ ಪ್ರಕ್ರಿಯೆಯ ಸಮಯದಲ್ಲಿ ಬೂತ್ ಮಟ್ಟದ ಅಧಿಕಾರಿಗಳ(ಬಿಎಲ್ಒ) ಮೃತ್ಯು ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯ ಕುರಿತು ಕಾಂಗ್ರೆಸ್ ರಾಜ್ಯಸಭಾ ಸದಸ್ಯೆ ರೇಣುಕಾ ಚೌಧರಿ ಅವರು ನಿಲುವಳಿ ಸೂಚನೆ ಸಲ್ಲಿಸಿದ್ದಾರೆ.
ಚುನಾವಣಾ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಸಮಯದಲ್ಲಿ ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್ಒ) ಮೃತ್ಯು ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯ ಕುರಿತು ನಿಯಮ 267ರ ಅಡಿಯಲ್ಲಿ ಚೌಧರಿ ಮುಂದೂಡಿಕೆ ನಿಲುವಳಿಯನ್ನು ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.
ಕಾಂಗ್ರೆಸ್ ಸಂಸದ ವಿಜಯ್ ಕುಮಾರ್ ಅವರು ಕೂಡ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ SIR ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ನಿಲುವಳಿ ಸೂಚನೆ ಸಲ್ಲಿಸಿದ್ದಾರೆ.
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದೆ. ಕಲಾಪ ಆರಂಭಕ್ಕೂ ಸ್ವಲ್ಪ ಮೊದಲು ಪ್ರಧಾನಿ ಮೋದಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ.
Next Story





