Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಪತಂಜಲಿಯ...

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಪತಂಜಲಿಯ ರಾಮದೇವ್‌, ಅಚಾರ್ಯ ಬಾಲಕೃಷ್ಣಗೆ ಖುದ್ದಾಗಿ ಹಾಜರಾಗುವಂತೆ ಸುಪ್ರೀಂ ಕೋರ್ಟ್‌ ಸೂಚನೆ

‌ದಾರಿತಪ್ಪಿಸುವ ಜಾಹೀರಾತು ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ19 March 2024 11:57 AM IST
share
ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಪತಂಜಲಿಯ ರಾಮದೇವ್‌, ಅಚಾರ್ಯ ಬಾಲಕೃಷ್ಣಗೆ ಖುದ್ದಾಗಿ ಹಾಜರಾಗುವಂತೆ ಸುಪ್ರೀಂ ಕೋರ್ಟ್‌ ಸೂಚನೆ

ಹೊಸದಿಲ್ಲಿ: ದಾರಿತಪ್ಪಿಸುವಂತಹ ಜಾಹೀರಾತುಗಳನ್ನು ಪ್ರಕಟಿಸಿದ ಪ್ರಕರಣದಲ್ಲಿ ಪತಂಜಲಿ ಸಹ-ಸ್ಥಾಪಕ ರಾಮದೇವ್‌ ಮತ್ತು ಕಂಪೆನಿಯ ಆಡಳಿತ ನಿರ್ದೇಶಕ ಬಾಲಕೃಷ್ಣ ಇಬ್ಬರಿಗೂ ಖುದ್ದಾಗಿ ಹಾಜರಾಗುವಂತೆ ಸುಪ್ರೀಂ ಕೋರ್ಟ್‌ ಇಂದು ಆದೇಶಿಸಿದೆ.

ವಿವಿಧ ಕಾಯಿಲೆಗಳನ್ನು ಗುಣಪಡಿಸುವುದೆಂದು ಹೇಳಿಕೊಂಡು ದಾರಿತಪ್ಪಿಸುವಂತಹ ಜಾಹೀರಾತುಗಳನ್ನು ಪತಂಜಲಿ ಆಯುರ್ವೇದ ಸಂಸ್ಥೆ ಪ್ರಕಟಿಸುವುದನ್ನು ಮುಂದುವರಿಸಿದಾಗ ನ್ಯಾಯಾಲಯ ಈ ಹಿಂದೆ ನ್ಯಾಯಾಂಗ ನಿಂದನೆ ನೋಟಿಸ್‌ ಅನ್ನು ಸಂಸ್ಥೆಗೆ ಜಾರಿಗೊಳಿಸಿತ್ತು.

ಇಂತಹ ಜಾಹೀರಾತುಗಳನ್ನು ಪ್ರಕಟಿಸುವುದಿಲ್ಲ ಎಂದು ಪತಂಜಲಿಯ ವಕೀಲರು ಕಳೆದ ನವೆಂಬರ್‌ ತಿಂಗಳಿನಲ್ಲಿ ನ್ಯಾಯಾಲಯಕ್ಕೆ ಭರವಸೆ ನೀಡಿರುವ ಹೊರತಾಗಿಯೂ ಜಾಹೀರಾತು ಪ್ರಕಟಣೆ ಮುಂದುವರಿದಾಗ ನ್ಯಾಯಾಲಯ ನ್ಯಾಯಾಂಗ ನಿಂದನೆ ನೋಟಿಸ್‌ ಜಾರಿಗೊಳಿಸಿತ್ತು.

ಆದರೆ ಈ ನೋಟಿಸ್‌ಗೆ ಯಾವುದೇ ಉತ್ತರವನ್ನು ನೀಡಲಾಗಿಲ್ಲ ಎಂಬುದನ್ನು ಗಣನೆಗೆ ತೆಗೆದುಕೊಂಡ ನ್ಯಾಯಾಲಯ ಆಚಾರ್ಯ ಬಾಲಕೃಷ್ಣ ಮತ್ತು ಬಾಬಾ ರಾಮದೇವ್‌ ಅವರಿಗೆ ಖುದ್ದಾಗಿ ಹಾಜರಾಗುವಂತೆ ಸೂಚನೆ ನೀಡಿದೆ.

ಇಂಡಿಯನ್‌ ಮೆಡಿಕಲ್‌ ಅಸೋಸಿಯೇಶನ್‌ (ಐಎಂಎ) ಪತಂಜಲಿ ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಿಸಿ ಸಂಸ್ಥೆಯು ಅಲೋಪತಿ ಮತ್ತು ಆಧುನಿಕ ವೈದ್ಯಕೀಯ ಪದ್ಧತಿ ಕುರಿತು ತಪ್ಪು ಮಾಹಿತಿ ಹರಡುತ್ತಿದೆ ಎಂದು ಆರೋಪಿಸಿತ್ತಲ್ಲದೆ ಅದರ ವಿರುದ್ಧ ಕ್ರಮಕೈಗೊಳ್ಳುವಂತೆ ಕೇಂದ್ರ, ಜಾಹೀರಾತು ಗುಣಮಟ್ಟ ಮಂಡಳಿ ಹಾಗೂ ಕೇಂದ್ರ ಗ್ರಾಹಕ ರಕ್ಷಣೆ ಪ್ರಾಧಿಕಾರಕ್ಕೆ ಸೂಚಿಸಬೇಕೆಂದು ಕೋರಿತ್ತು.

Tags

Yoga Guru RamdevRamdevSupreme CourtPatanjaliMisleading Ads
share
ವಾರ್ತಾಭಾರತಿ
ವಾರ್ತಾಭಾರತಿ
Next Story
X