ಯೋಗೇಶ್ ಗೌಡ ಕೊಲೆ ಪ್ರಕರಣ | ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದುಪಡಿಸಿದ ಸುಪ್ರಿಂಕೋರ್ಟ್
ಎರಡು ವಾರಗಳಲ್ಲಿ ಶರಣಾಗುವಂತೆ ಸೂಚನೆ

ವಿನಯ್ ಕುಲಕರ್ಣಿ
ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಪಡಿಸಿದ ಸುಪ್ರಿಂಕೋರ್ಟ್, ಎರಡು ವಾರಗಳಲ್ಲಿ ಶರಣಾಗುವಂತೆ ಸೂಚಿಸಿದೆ.
ಸುಪ್ರಿಂ ಕೋರ್ಟ್ ನ್ಯಾ. ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ನ್ಯಾ. ಚಂದ್ರಶೇಖರ್ ಪೀಠ ಹೈಕೋರ್ಟ್ ಆದೇಶವನ್ನು ರದ್ದು ಮಾಡಿದೆ.
ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ 2026ರ ಎಪ್ರಿಲ್ನಲ್ಲಿ ವಿನಯ್ ಕುಲಕರ್ಣಿ ಅಪರಾಧಿ ಎಂದು ಜನಪ್ರತಿನಿಧಿ ನ್ಯಾಯಾಲಯ ತೀರ್ಪು ನೀಡಿ, ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಜೂನ್ ತಿಂಗಳಲ್ಲಿನಲ್ಲಿ ಹೈಕೋರ್ಟ್ ಅವರಿಗೆ ಜಾಮೀನು ನೀಡಿತ್ತು. ಇದರಿಂದಾಗಿ ವಿನಯ್ ಕುಲಕರ್ಣಿ ಜೈಲಿನಿಂದ ಬಿಡುಗಡೆ ಆಗಿದ್ದರು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸಿಬಿಐ ಮತ್ತು ಯೋಗೇಶ್ ಗೌಡ ಸಹೋದರ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು
Next Story




