ದಿಲ್ಲಿ ವಿವಿ ಶತಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ದಿಲ್ಲಿ ಮೆಟ್ರೊದಲ್ಲಿ ತೆರಳಿದ ಪ್ರಧಾನಿ ಮೋದಿ

ನರೇಂದ್ರ ಮೋದಿ, Photo: Twitter@NDTV
ಹೊಸದಿಲ್ಲಿ: ದಿಲ್ಲಿ ವಿಶ್ವವಿದ್ಯಾನಿಲಯದ ಶತಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದಿಲ್ಲಿ ಮೆಟ್ರೋದಲ್ಲಿ ತೆರಳಿದರು.
ವಿಶ್ವವಿದ್ಯಾನಿಲಯದ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಮೇ 1, 2022 ರಂದು ಆರಂಭಿಸಲಾದ DU ಶತಮಾನೋತ್ಸವದ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಮೋದಿ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದೆ.
ಲೋಕ್ ಕಲ್ಯಾಣ್ ಮಾರ್ಗ್ ಮೆಟ್ರೋ ನಿಲ್ದಾಣದಿಂದ ವಿಶ್ವ ವಿದ್ಯಾಲಯ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ಸವಾರಿ ಮಾಡುವಾಗ ಪ್ರಧಾನಿ ಮೋದಿ ಸಾಮಾನ್ಯ ಪ್ರಯಾಣಿಕರಂತೆ ಮೆಟ್ರೋದಲ್ಲಿ ಕುಳಿತು ಜನರೊಂದಿಗೆ ಸಂವಹನ ನಡೆಸುತ್ತಿರುವುದು ಕಂಡು ಬಂದಿದೆ.
"ಯುವಕರು ನನ್ನ ಸಹ-ಪ್ರಯಾಣಿಕರಾಗಿರುವುದಕ್ಕೆ ಸಂತೋಷವಾಗಿದೆ" ಎಂದು ಟ್ವೀಟ್ ಮಾಡಿರುವ ಪ್ರಧಾನಿ ಅವರು ಮೆಟ್ರೋ ಕೋಚ್ ನೊಳಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ಮಾಡುವ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
On the way to the DU programme by the Delhi Metro. Happy to have youngsters as my co-passengers. pic.twitter.com/G9pwsC0BQK
— Narendra Modi (@narendramodi) June 30, 2023







