Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ರಾಜ್ಯದಲ್ಲೂ ಮತದಾರರ ಪಟ್ಟಿಯ ವಿಶೇಷ...

ರಾಜ್ಯದಲ್ಲೂ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ಸಿದ್ಧತೆ ಆರಂಭ

ಅಮ್ಜದ್ ಖಾನ್ ಎಂ.ಅಮ್ಜದ್ ಖಾನ್ ಎಂ.3 Jan 2026 8:20 AM IST
share
ರಾಜ್ಯದಲ್ಲೂ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ಸಿದ್ಧತೆ ಆರಂಭ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗವು ದೇಶದ ವಿವಿಧ ರಾಜ್ಯಗಳಲ್ಲಿ ಆರಂಭಿಸಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ(ಎಸ್‌ಐಆರ್) ಕರ್ನಾಟಕದಲ್ಲಿಯೂ ನಡೆಸಲು ಉದ್ದೇಶಿಸಲಾಗಿದೆ. ಈ ಸಂಬಂಧ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಸಿದ್ಧತೆ ಆರಂಭಿಸಿದೆ.

ಕರ್ನಾಟಕದಲ್ಲಿ 2002ರಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯ ನಡೆದಿತ್ತು. ಇದೀಗ 23 ವರ್ಷಗಳ ಬಳಿಕ ಪುನಃ ಎಸ್‌ಐಆರ್ ನಡೆಸಲು ಉದ್ದೇಶಿಸಲಾಗಿದೆ. 2002ರಲ್ಲಿ ರಾಜ್ಯದಲ್ಲಿ 3.40 ಕೋಟಿ ಮತದಾರರಿದ್ದರು. 2024ರ ಲೋಕಸಭಾ ಚುನಾವಣೆ ಸಂದರ್ಭದ ಮತದಾರರ ಪಟ್ಟಿಯಂತೆ ಈಗ 5.40 ಕೋಟಿ ಮತದಾರರಿದ್ದಾರೆ.

58 ಸಾವಿರ ಮತಗಟ್ಟೆಗಳಿದ್ದು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಯನ್ನು ಬೂತ್ ಮಟ್ಟದ ಅಧಿಕಾರಿ(ಬಿಎಲ್‌ಒ) ಗಳನ್ನಾಗಿ ಬಳಸಿಕೊಂಡು, ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯ ನಡೆಸಲಿದೆ. ಈಗಾಗಲೇ ಮುಖ್ಯ ಚುನಾವಣಾಧಿಕಾರಿ ಕಚೇರಿಯು ಬೂತ್ ಮಟ್ಟದ ಅಧಿಕಾರಿಗಳಿಗೆ ಎಸ್‌ಐಆರ್ ಪ್ರಕ್ರಿಯೆ ಕುರಿತು ತರಬೇತಿ ನೀಡಿದೆ.

ಸಾರ್ವಜನಿಕ ಮಾಹಿತಿಗಾಗಿ ಮುಖ್ಯ ಚುನಾವಣಾಧಿಕಾರಿಯ ವೆಬ್‌ಸೈಟ್ https://ceo.karnataka.gov.in/voter ನಲ್ಲಿ 2002ನೇ ಸಾಲಿನ ಮತದಾರರ ಪಟ್ಟಿಯನ್ನು ಹಾಕಲಾಗಿದೆ. ಬೂತ್ ಮಟ್ಟದ ಅಧಿಕಾರಿಗಳು ರಾಜ್ಯದ ಪ್ರತಿಯೊಬ್ಬ ಮತದಾರರ ಮನೆಗೂ ಹೋಗಿ ಮತದಾರರ ಗುರುತಿನ ಚೀಟಿ ಪರಿಶೀಲಿಸಲಿದ್ದಾರೆ. 2002ರ ಮತದಾರರ ಪಟ್ಟಿಯಲ್ಲಿನ ವಿವರಗಳಿಗೂ, ಈಗಿರುವ ವಿವರಗಳ ನಡುವಿನ ವ್ಯತ್ಯಾಸಗಳನ್ನು ಪರಿಶೀಲಿಸಲಿದ್ದಾರೆ.

ಬಿಎಲ್‌ಒಗಳು ಮನೆಗಳಿಗೆ ಭೇಟಿ ನೀಡಿದಾಗ ವಿಶೇಷ ಕ್ಯೂಆರ್ ಕೋಡ್ ಇರುವಂತಹ ಎರಡು ಅರ್ಜಿ ನಮೂನೆಗಳನ್ನು ಮತದಾರರಿಗೆ ನೀಡಿ ಅಗತ್ಯ ಮಾಹಿತಿ ಯನ್ನು ಕ್ರೋಡೀಕರಿಸಲಿದ್ದಾರೆ.

ಒಂದು ನಮೂನೆಯನ್ನು ಬಿಎಲ್‌ಒಗಳು ಸಹಿ ಮಾಡಿ ಮತದಾರರಿಗೆ ಹಿಂದಿರುಗಿಸಲಿದ್ದಾರೆ. ಮತ್ತೊಂದು ನಮೂನೆಯನ್ನು ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ತಲುಪಿಸಿ, ಅದನ್ನು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಅಳವಡಿಸಲಾಗುವುದು.

ಬಿಎಲ್‌ಒಗಳ ಭೇಟಿ ವೇಳೆ ಮನೆಯಲ್ಲಿ ಯಾರೂ ಲಭ್ಯವಿರದಿದ್ದರೆ ಎರಡನೇ ಬಾರಿ ಭೇಟಿ ನೀಡುತ್ತಾರೆ. ಅಲ್ಲದೆ, ನೆರೆ ಹೊರೆಯವರ ಸಹಾಯದಿಂದ ಸಂಪರ್ಕ ಸಾಧಿಸಲಿದ್ದಾರೆ. ಆದರೂ, ಬಿಎಲ್‌ಒಗಳ ಸಂಪರ್ಕಕ್ಕೆ ಬರದಿದ್ದರೆ, ಆನ್‌ಲೈನ್‌ನಲ್ಲೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು. ಮತದಾರರ ಹೆಸರು ಒಂದಕ್ಕಿಂತ ಹೆಚ್ಚಿನ ಮತಗಟ್ಟೆಯಲ್ಲಿದ್ದರೆ ಫೋಟೋ ಸ್ಕ್ಯಾನಿಂಗ್ ತಂತ್ರಜ್ಞಾನದ ಮೂಲಕ ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲಾಗುವುದು. ಮತದಾರರ ಗುರುತಿನ ಚೀಟಿಯಲ್ಲಿ ಭಾವಚಿತ್ರ ಸ್ಪಷ್ಟವಾಗಿ ಇರದಿದ್ದರೆ ಮತದಾರರು ಹೊಸ ಭಾವಚಿತ್ರ ನೀಡಬೇಕು.

ಪ್ರತಿಯೊಬ್ಬ ಮತದಾರರು ಚುನಾವಣಾ ಆಯೋಗ ನಿಗದಿಪಡಿಸಿರುವ ದಾಖಲೆ ಗಳನ್ನು ಬಿಎಲ್‌ಒಗಳಿಗೆ ನೀಡಬೇಕು. ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ನಂತರ ಮತದಾರರ ಹೆಸರು ಕೈ ಬಿಟ್ಟು ಹೋಗಿದ್ದರೆ, ಅಂತಹವರು ಬಿಎಲ್‌ಒಗಳು ಸಹಿ ಮಾಡಿ ನೀಡಿರುವ ಅರ್ಜಿ ನಮೂನೆ ಮೂಲಕ ಚುನಾವಣಾ ಆಯೋಗಕ್ಕೆ ಪ್ರಶ್ನಿಸಬಹುದು. ಬಿಎಲ್‌ಒಗಳಿಗೆ ತಪ್ಪು ಮಾಹಿತಿ ಒದಗಿಸುವಂತಹ ಮತದಾರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಮಾಡಲು ಅವಕಾಶವಿದೆ.

ರಾಜ್ಯದಲ್ಲಿ ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ ಕುರಿತಂತೆ ಇತ್ತೀಚೆಗೆ ಎಲ್ಲ ರಾಜಕೀಯ ಪಕ್ಷಗಳ ಮುಖಂಡರನ್ನು ಕರೆಸಿ ಅವರಿಗೆ ವಿವರ ನೀಡಲಾಗಿದೆ. ಪ್ರತಿಯೊಂದು ಮತಗಟ್ಟೆಗೂ ಏಜೆಂಟ್‌ಗಳನ್ನು ನೇಮಕ ಮಾಡುವಂತೆ ರಾಜಕೀಯ ಪಕ್ಷಗಳ ನಾಯಕರಿಗೆ ಸೂಚಿಸಲಾಗಿದೆ. ಎಸ್‌ಐಆರ್ ಯಾವಾಗ ಮಾಡಬೇಕು ಎಂದು ಕೇಂದ್ರ ಚುನಾವಣಾ ಆಯೋಗ ಇನ್ನೂ ಯಾವುದೇ ಸೂಚನೆ ನೀಡಿಲ್ಲ. ಅವರಿಂದ ನಮಗೆ ಸೂಚನೆ ಬಂದ ಕೂಡಲೇ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮಗ್ರ ಮಾಹಿತಿಯನ್ನು ರಾಜ್ಯದ ಜನತೆಗೆ ತಿಳಿಸಲಾಗುವುದು. ಅಲ್ಲದೆ, ಮೂರು ತಿಂಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಲು ಉದ್ದೇಶಿಸಿದ್ದೇವೆ.

-ವಿ.ಅನ್ಬುಕುಮಾರ್, ರಾಜ್ಯ ಮುಖ್ಯ ಚುನಾವಣಾಧಿಕಾರಿ

share
ಅಮ್ಜದ್ ಖಾನ್ ಎಂ.
ಅಮ್ಜದ್ ಖಾನ್ ಎಂ.
Next Story
X