Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಹನಿ ನೀರಿಗೂ ಪರದಾಡುವ ಗೆದ್ದಲಮರಿ...

ಹನಿ ನೀರಿಗೂ ಪರದಾಡುವ ಗೆದ್ದಲಮರಿ ಗ್ರಾಮಸ್ಥರು

ಶರಬು ಬಿ.ನಾಟೇಕಾರ್ ಯಾದಗಿರಿಶರಬು ಬಿ.ನಾಟೇಕಾರ್ ಯಾದಗಿರಿ22 May 2026 3:26 PM IST
share
ಹನಿ ನೀರಿಗೂ ಪರದಾಡುವ ಗೆದ್ದಲಮರಿ ಗ್ರಾಮಸ್ಥರು
►40 ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ►ಖಾಲಿ ಕೊಡಗಳ ಪ್ರದರ್ಶನದ ಮೂಲಕ ಆಕ್ರೋಶ

ಹುಣಸಗಿ: ಸುಮಾರು 40 ವರ್ಷಗಳಾದರೂ ನಾವು ದಲಿತರು ಎನ್ನುವ ಕಾರಣಕ್ಕೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಯಾರೂ ಮುಂದೆ ಬಂದಿಲ್ಲ. ಒಂದು ಕಿ.ಮೀ. ದೂರದಲ್ಲಿರುವ ಒಂದೇ ಬೋರವೆಲ್‌ನಿಂದ ಅಶುದ್ಧ ನೀರು ತಂದು ಕುಡಿಯುತ್ತಿರುವುದಾಗಿ ತಾಲೂಕಿನ ಗೆದ್ದಲಮರಿ ಗ್ರಾಮದ ದಲಿತ ಮಹಿಳೆಯರು ಹಾಗೂ ಪುರುಷರು ಖಾಲಿ ಕೊಡಗಳ ಪ್ರದರ್ಶನದ ಮೂಲಕ ತಮ್ಮ ಸಂಕಷ್ಟ ತೋಡಿಕೊಂಡಿದ್ದಾರೆ.

ಗ್ರಾಮದಲ್ಲಿ ಸುಮಾರು 200ಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕುಟುಂಬಗಳು ವಾಸಿಸುತ್ತಿದ್ದು, ನೀರಿನ ಮೂಲವಿದ್ದರೂ ಕುಡಿಯುವ ನೀರಿನ ಹಾಹಾಕಾರ ತಪ್ಪುತ್ತಿಲ್ಲ ಎಂದು ಹೇಳಿದರು. ಗ್ರಾಪಂ ಆಡಳಿತದಿಂದ ಹಿಡಿದು ಶಾಸಕರು, ತಾಪಂ ಹಾಗೂ ಗ್ರಾಪಂ ಅಧಿಕಾರಿಗಳಿಗೆ ಹಲವು ಬಾರಿ ಪತ್ರ ಹಾಗೂ ಮೌಖಿಕವಾಗಿ ಮನವಿ ಸಲ್ಲಿಸಿದ್ದರೂ ದಲಿತ ಓಣಿಯತ್ತ ಯಾರೂ ಗಮನ ಹರಿಸಿಲ್ಲ ಎಂದು ತಮ್ಮ ದುರವಸ್ಥೆಯನ್ನು ವಿವರಿಸಿದರು.

ಒಂದೇ ಬೋರವೆಲ್ ಮೇಲೆ ನೂರಾರು ಕುಟುಂಬಗಳು ಅವಲಂಬಿತ: ನೂರಾರು ಕುಟುಂಬಗಳಿಗೆ ಒಂದೇ ಬೋರ್‌ವೆಲ್ ಇರುವುದರಿಂದ ಎಲ್ಲಾ ಕುಟುಂಬದವರು ದೂರ ಹೋಗಿ ನೀರು ತರಬೇಕಾಗಿದೆ.

ಕುಡಿಯುವ ನೀರು ಸಹ ಅಶುದ್ಧವಾಗಿದೆ. ಜನರು ಹಾಗೂ ಜಾನುವಾರುಗಳು ಇದೇ ನೀರಿನ ಮೇಲೆ ಅವಲಂಬಿತರಾಗಿದ್ದಾರೆ. ನಮ್ಮ ಸ್ಥಿತಿ ದೇವರಿಗೇ ಗೊತ್ತು ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.

ಭರವಸೆಯಲ್ಲೇ ಕಾಲಹರಣ: ಸರಕಾರದಿಂದ ಎಸ್ಸಿ ಹಾಗೂ ಎಸ್ಟಿ ಸಮುದಾಯಗಳಿಗೆ ಮೂಲಸೌಕರ್ಯಕಲ್ಪಿಸಲು ಅನುದಾನ ಬರುತ್ತಿದ್ದರೂ ನಮಗೆ ಯಾವುದೇ ಪ್ರಯೋಜನವಾಗಿಲ್ಲ. ಓಣಿಯಲ್ಲಿ ರಸ್ತೆ ಹಾಗೂ ಚರಂಡಿ ಇಲ್ಲದೆ ಕೊಳಚೆ ನೀರು ಎಲ್ಲೆಂದರಲ್ಲಿ ಹರಿಯುತ್ತಿದೆ. ಇಂಥದರಲ್ಲೆ ಜೀವಿಸುತ್ತಿದ್ದೇವೆ ಎಂದು ಆರೋಪಿಸಿದರು.

40 ವರ್ಷಗಳಿಂದ ಸಮಸ್ಯೆಯನ್ನು ಸಹಿಸಿಕೊಂಡಿದ್ದೇವೆ. ಇನ್ನು ಮುಂದೆ ಸಹನೆ ಪರೀಕ್ಷಿಸಿದರೆ ಗ್ರಾಪಂ ವಿರುದ್ಧ ಜಿಲ್ಲಾಧಿಕಾರಿ ಕಚೇರಿ ಎದುರು ಕುಟುಂಬ ಸಮೇತ ಜಾನುವಾರುಗಳೊಂದಿಗೆ ಹಂತ ಹಂತವಾಗಿ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮಾನಪ್ಪ ಕಟ್ಟಿಮನಿ, ಬಸಪ್ಪ, ಕೆಂಚಪ್ಪ, ಹಣಮಪ್ಪ, ಸೋಮಪ್ಪ, ಯಮನಪ್ಪ, ಮರೆಪ್ಪ ಅನುಮೇಶ, ಚಂದಪ್ಪ ಮಲ್ಲಪ್ಪ, ನಾಗಪ್ಪ, ಯಲ್ಲಮ್ಮ, ರುದ್ರಮ್ಮ, ಗದ್ದೆಮ್ಮ, ಹುಲಗಮ್ಮ, ಮಂಜಮ್ಮ, ಶಶಿಕಲಾ, ಶಾಂತಮ್ಮ ಸೇರಿದಂತೆ ಹಲವರು ಆಕ್ರೋಶ ವ್ಯಕ್ತಪಡಿಸಿದರು.

share
ಶರಬು ಬಿ.ನಾಟೇಕಾರ್ ಯಾದಗಿರಿ
ಶರಬು ಬಿ.ನಾಟೇಕಾರ್ ಯಾದಗಿರಿ
Next Story
X