Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಚಿಕ್ಕಮಗಳೂರು: ಪ್ರವಾಸಿತಾಣಗಳಲ್ಲಿ...

ಚಿಕ್ಕಮಗಳೂರು: ಪ್ರವಾಸಿತಾಣಗಳಲ್ಲಿ ಮೂಲಸೌಲಭ್ಯಗಳ ಕೊರತೆ

ಕೆ.ಎಲ್.ಶಿವುಕೆ.ಎಲ್.ಶಿವು27 May 2026 3:04 PM IST
share
ಚಿಕ್ಕಮಗಳೂರು: ಪ್ರವಾಸಿತಾಣಗಳಲ್ಲಿ ಮೂಲಸೌಲಭ್ಯಗಳ ಕೊರತೆ

ಚಿಕ್ಕಮಗಳೂರು : ರಾಜ್ಯದಲ್ಲಿಯೇ ಅತೀ ಹೆಚ್ಚು ಪ್ರವಾಸಿಗರು ಬರುವ ಜಿಲ್ಲೆ ಎಂಬ ಕೀರ್ತಿಗೆ ಚಿಕ್ಕಮಗಳೂರು ಪಾತ್ರವಾಗಿದೆ. ಇಲ್ಲಿನ ಪ್ರಾಕೃತಿಕ ಸೌಂದರ್ಯದ ತಾಣಗಳನ್ನು ಕಣ್ತುಂಬಿಕೊಳ್ಳಲು ಪ್ರತಿದಿನವೂ ದೇಶ, ವಿದೇಶಗಳಿಂದ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ಚಿಕ್ಕಮಗಳೂರು ತಾಲೂಕಿನ ಕೆಲ ಪ್ರವಾಸಿ ತಾಣಗಳು, ಅಲ್ಲಿನ ವಿಶೇಷತೆ ಹಾಗೂ ಮೂಲಸೌಕರ್ಯಗಳ ಕೊರತೆಯ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡುವ ಪ್ರಯತ್ನ ಇಲ್ಲಿದೆ.

ರಾಜ್ಯದ ಅತಿ ಎತ್ತರದ ಪರ್ವತ ಮುಳ್ಳಯ್ಯನ ಗಿರಿಯಲ್ಲಿಲ್ಲ ಶೌಚಗೃಹ: ರಾಜ್ಯದಲ್ಲೇ ಅತೀ ಎತ್ತರದ ಪರ್ವತ ಎಂಬ ಖ್ಯಾತಿ ಪಡೆದಿರುವ ಮುಳ್ಳಯ್ಯನಗಿರಿ ಇರುವುದು ಚಿಕ್ಕಮಗಳೂರು ತಾಲೂಕಿನಲ್ಲಿ. ಚಂದ್ರದ್ರೋಣ ಪರ್ವತ ಶ್ರೇಣಿ ವ್ಯಾಪ್ತಿಯಲ್ಲಿ ಮುಳ್ಳಯ್ಯನಗಿರಿ, ಇನಾಂ ದತ್ತಾತ್ರೇಯ ಪೀಠ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತವೆ. ಅಲ್ಲದೆ ಈ ವ್ಯಾಪ್ತಿಯಲ್ಲಿಯೇ ಬರುವ ಮಾಣಿಕ್ಯದಾರ ಹಾಗೂ ಝರಿ ಜಲಪಾತ ವೀಕ್ಷಣೆಗೂ ಪ್ರವಾಸಿಗರು ಮುಗಿ ಬೀಳುತ್ತಾರೆ. ಆದರೆ, ಇಲ್ಲಿಗೆ ಬರುವ ಪ್ರವಾಸಿಗರಿಗೆ ಮೂಲಸೌಕರ್ಯ ಒದಗಿಸುವುದೇ ಪ್ರವಾಸೋದ್ಯಮ ಇಲಾಖೆಗೆ ಸವಾಲಾಗಿ ಪರಿಣಮಿಸಿದೆ.

ಪರ್ವತ ಶ್ರೇಣಿಯ ಕೆಲಭಾಗ ಅರಣ್ಯಇಲಾಖೆ ವ್ಯಾಪ್ತಿಗೆ ಒಳಪಟ್ಟಿದ್ದರೆ, ಉಳಿದ ಭಾಗ ಅರಣ್ಯ ಪ್ರದೇಶವಾಗಿದೆ. ಹೀಗಾಗಿಯೇ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಪ್ರವಾಸಿಗರಿಗೆ ಬೇಕಾಗಿರುವ ಕನಿಷ್ಠ ಮೂಲ ಸೌಕರ್ಯ ಒದಗಿಸಲೂ ಹರಸಾಹಸ ಪಡುವಂತಾಗಿದೆ. ಪ್ರತಿದಿನ ಸಾವಿರಾರು ಪ್ರವಾಸಿಗರು ಭೇಟಿ ನೀಡುವ ಮುಳ್ಳಯ್ಯನಗಿರಿಯಲ್ಲಿ ಶೌಚಗೃಹವನ್ನೂ ನಿರ್ಮಿಸಲು ಸಾಧ್ಯವಾಗಿಲ್ಲ. ಇದಕ್ಕೆ ಕಾರಣ ಮುಳ್ಳಯ್ಯನಗಿರಿ ಭಾಗ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿದೆ. ಹೀಗಾಗಿ ಇಲ್ಲಿ ಯಾವುದೇ ಶಾಶ್ವತ ಕಾಮಗಾರಿ ನಡೆಸಲು ಅವಕಾಶ ಇಲ್ಲದಿರುವುದರಿಂದ ಶೌಚಗೃಹ ನಿರ್ಮಾಣ ಮಾಡಲು ಸಾಧ್ಯವಾಗಿಲ್ಲ. ಇಲ್ಲಿಗೆ ಆಗಮಿಸಿದ ಪ್ರವಾಸಿಗರು ಶೌಚಗೃಹಕ್ಕೆ ಬರಬೇಕು ಎಂದರೆ ಮೂರು ಕಿ.ಮೀ. ಕೆಳಭಾಗದಲ್ಲಿರುವ ಸೀತಾಳಯ್ಯನ ಗಿರಿಗೆ ತೆರಳಬೇಕಿದೆ.

ಮುಳ್ಳಯ್ಯನಗಿರಿಗೆ ಆಗಮಿಸಿದ ಪ್ರವಾಸಿಗರು ಕನಿಷ್ಠ ಪಕ್ಷ ವಿಶ್ರಾಂತಿ ತೆಗೆದುಕೊಳ್ಳಬೇಕು ಎಂದರೂ ಸೂಕ್ತ ಸ್ಥಳಾವಕಾಶವಿಲ್ಲ. ಹೀಗಾಗಿಯೇ ಅಲ್ಲಿರುವ ಕೆಲವೇ ಕೆಲವು ಕಲ್ಲು ಬೆಂಚುಗಳು ಅಥವಾ ಬೆಟ್ಟದ ತುದಿ ತಲುಪಲು ನಿರ್ಮಿಸಿರುವ ಮೆಟ್ಟಿಲುಗಳನ್ನೇ ಅವಲಂಬಿಸಬೇಕಾಗಿದೆ.

ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲೇ ಬರುವ ದತ್ತಪೀಠದಲ್ಲಿ ಒಂದಷ್ಟು ಮಟ್ಟಿಗೆ ಮೂಲ ಸೌಕರ್ಯ ಒದಗಿಸಲಾಗಿದೆ. ಈ ಜಾಗ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ಕಾರಣದಿಂದಾಗಿ ಈಗಾಗಲೇ ಅಗತ್ಯ ಶೌಚಗೃಹದ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಇಲ್ಲಿಗೆ ಆಗಮಿಸುವ ಭಕ್ತರಿಗೆ ಅಗತ್ಯ ಮೂಲ ಸೌಕರ್ಯ ಒದಗಿಸಿಕೊಡಲಾಗಿದೆ.

ಬಾಬಾ ಬುಡಾನ್ ದರ್ಗಾದಿಂದ ಕೇವಲ 3 ಕಿ.ಮೀ. ಅಂತರದಲ್ಲಿ ಮಾಣಿಕ್ಯಧಾರ ಜಲಪಾತವಿದೆ. ಇಲ್ಲಿಗೆ ತೆರಳಲು ದತ್ತಪೀಠದವರೆಗೆ ಅತ್ಯುತ್ತಮವಾದ ರಸ್ತೆ ಇದೆ. ಅಲ್ಲಿಂದ ಒಂದು ಕಿ.ಮೀ.ವರೆಗೆ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಗುಂಡಿಗಳು ಬಿದ್ದಿವೆ. ಗುಂಡಿ ರಸ್ತೆಯ ಬಳಿಕ ಎರಡು ಕಿ.ಮೀ. ಕಾಂಕ್ರೀಟ್ ರಸ್ತೆ ಇದೆ. ಹೀಗಾಗಿ ಪ್ರವಾಸಿಗರು ಮಾಣಿಕ್ಯಧಾರಕ್ಕೆ ತಮ್ಮ ವಾಹನಗಳಲ್ಲಿ ತೆರಳಲು ಸಾಧ್ಯವಾಗದ ಪರಿಸ್ಥಿತಿ ಇದೆ. ಇದರಿಂದಾಗಿ ದತ್ತಪೀಠದವರೆಗೆ ತಮ್ಮ ವಾಹನಗಳಲ್ಲಿ ಬರುವ ಪ್ರವಾಸಿಗರು ಅಲ್ಲಿಂದ ಕೇವಲ ಮೂರು ಕಿ.ಮೀ. ದೂರದಲ್ಲಿರುವ ಮಾಣಿಕ್ಯಧಾರಕ್ಕೆ ಹೆಚ್ಚಿನ ಹಣ ನೀಡಿ ಖಾಸಗಿ ವಾಹನಗಳಲ್ಲಿ ತೆರಳಬೇಕಾದ ಅನಿವಾರ್ಯ ಇದೆ.

ಗುಂಡಿ ಬಿದ್ದಿರುವ ರಸ್ತೆ ಜಿಪಂ ವ್ಯಾಪ್ತಿಗೆ ಬರುತ್ತಿದ್ದು, ಅನುದಾನದ ಕೊರತೆಯಿಂದಾಗಿ ಕೇವಲ ಒಂದು ಕಿ.ಮೀ. ರಸ್ತೆ ದುರಸ್ತಿ ಮಾಡಲು ಸಾಧ್ಯವಾಗಿಲ್ಲ ಎನ್ನಲಾಗಿದೆ. ಈ ರಸ್ತೆ ಶೀಘ್ರವೇ ದುರಸ್ತಿಯಾಗಿದ್ದೇ ಆದಲ್ಲಿ ಪ್ರವಾಸಿಗರ ಸಾವಿರಾರು ರೂ. ಉಳಿತಾಯವಾಗಲಿದೆ. ಈ ರಸ್ತೆ ಅಭಿವೃದ್ಧಿಪಡಿಸುವಂತೆ ಪ್ರವಾಸೋದ್ಯಮ ಇಲಾಖೆ ಸರಕಾರಕ್ಕೆ ಪತ್ರ ಬರೆದಿದ್ದು, ಇನ್ನು ಕೆಲವೇ ತಿಂಗಳುಗಳ ಒಳಗಾಗಿ ರಸ್ತೆ ಅಭಿವೃದ್ಧಿಯಾಗಲಿದೆ ಎನ್ನಲಾಗುತ್ತಿದೆ. ಚಿಕ್ಕಮಗಳೂರು ತಾಲೂಕಿನ ಝರಿ ಜಲಪಾತ ಪ್ರಖ್ಯಾತ ಪ್ರವಾಸಿ ತಾಣಗಳಲ್ಲಿ ಒಂದು. ಆದರೆ ಖಾಸಗಿಯವರ ಜಾಗದಲ್ಲಿ ಪ್ರವಾಸಿಗರು ತೆರಳಬೇಕಿರುವ ಕಾರಣದಿಂದಾಗಿ ಅವರಿಗೆ ಹಣವನ್ನು ನೀಡಬೇಕಿದೆ. ಜೊತೆಗೆ ಖಾಸಗಿಯವರು ನಿಗದಿಪಡಿಸಿದಷ್ಟೇ ಹಣ ನೀಡಿ ಅವರದ್ದೇ ವಾಹನಗಳಲ್ಲಿ ಪ್ರವಾಸಿಗರು ತೆರಳಬೇಕಿದೆ. ಈ ಜಾಗದ ಕುರಿತು ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿರುವ ಹಿನ್ನೆಲೆಯಲ್ಲಿ ಝರಿ ಜಲಪಾತದ ಭಾಗದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಯಾವುದೇ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಪ್ರಕರಣ ವಿಲೇವಾರಿಯಾದ ಬಳಿಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಬಹುದು ಎನ್ನುತ್ತಾರೆ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಲೋಹಿತ್.

ಪರಿಸರಕ್ಕೆ ಮಾರಕವಾಗುತ್ತಿರುವ ಪ್ಲಾಸ್ಟಿಕ್

ಪ್ರವಾಸಿ ತಾಣಗಳಿಗೆ ದಿನೇ ದಿನೇ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದರ ಜೊತೆಗೆ ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯವೂ ಗಣನೀಯವಾಗಿ ಹೆಚ್ಚುತ್ತಿದೆ. ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಪ್ಲಾಸ್ಟಿಕ್ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಕೈಮರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ನಡೆಸಿ ಪ್ಲಾಸ್ಟಿಕ್ ವಸ್ತುಗಳನ್ನು ವಶಕ್ಕೆ ಪಡೆಯಲಾಗುತ್ತಿದೆ. ಆದರೂ ಸ್ಥಳೀಯ ಹೋಮ್ ಸ್ಟೇ ಹಾಗೂ ರೆಸಾರ್ಟ್‌ಗಳಲ್ಲಿ ನೀರಿನ ಪ್ಲಾಸ್ಟಿಕ್ ಬಾಟಲಿಗಳು ಹಾಗೂ ಪ್ಲಾಸ್ಟಿಕ್‌ನಲ್ಲಿ ಪ್ಯಾಕ್ ಮಾಡಲಾದ ವಸ್ತುಗಳು ಪ್ರವಾಸಿಗರಿಗೆ ಸಿಗುತ್ತಿರುವುದರಿಂದ ಗಿರಿಶ್ರೇಣಿಯಲ್ಲೂ ಪ್ಲಾಸ್ಟಿಕ್ ತ್ಯಾಜ್ಯ ಹೆಚ್ಚುತ್ತಿದೆ. ಇನ್ನುಳಿದ ಪ್ರವಾಸಿ ತಾಣಗಳ ವ್ಯಾಪ್ತಿಯಲ್ಲಿ ಎಷ್ಟೇ ಜನ ಜಾಗೃತಿ ಮೂಡಿಸುವ ಕೆಲಸವಾದರೂ ಪ್ಲಾಸ್ಟಿಕ್ ತ್ಯಾಜ್ಯ ಕಡಿಮೆಯಾಗುತ್ತಿಲ್ಲ.

ಪ್ರವಾಸಿ ತಾಣಗಳಲ್ಲಿ ಮೂಲ ಸೌಕರ್ಯ ಹೆಚ್ಚಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಸೀತಾಳಯ್ಯನ ಗಿರಿಯಲ್ಲಿ ಇನ್ನೊಂದು ಶೌಚ ಗೃಹ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ಯಾವ ಪ್ರವಾಸಿತಾಣಗಳಲ್ಲಿ ಪ್ರವಾಸೋದ್ಯಮ ಇಲಾಖೆ ಅಥವಾ ಕಂದಾಯ ಇಲಾಖೆಯ ಜಾಗ ಲಭ್ಯವಿದೆಯೋ ಅಲ್ಲೆಲ್ಲಾ ಅಭಿವೃದ್ಧಿ ಕಾಮಗಾರಿ ಆರಂಭಿಸಲಾಗುತ್ತದೆ. ಉಳಿದ ತಾಣಗಳಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಜಾಗಕ್ಕಾಗಿ ಸರಕಾರದೊಂದಿಗೆ ಪತ್ರ ವ್ಯವಹಾರ ನಡೆಸಲಾಗಿದೆ.

ಲೋಹಿತ್, ಪ್ರವಾಸೋದ್ಯಮ

ಇಲಾಖೆಯ ಸಹಾಯಕ ನಿರ್ದೇಶಕ

ಬೋಟಿಂಗ್‌ಗೆ ಸಿದ್ಧತೆ

ಚಿಕ್ಕಮಗಳೂರು ತಾಲೂಕು ಹಾಗೂ ಚಿಕ್ಕಮಗಳೂರು ನಗರಕ್ಕೆ ಸಮೀಪದಲ್ಲಿಯೇ ಹಲವು ಕೆರೆಗಳಿವೆ. ಇಲ್ಲಿ ಬೋಟಿಂಗ್‌ಗೆ ವ್ಯವಸ್ಥೆ ಮಾಡಿದರೆ ಗಿರಿ ಪ್ರದೇಶದ ಮೇಲಿನ ಪ್ರವಾಸಿಗರ ಒತ್ತಡ ಕಡಿಮೆ ಮಾಡಬಹುದು ಎಂಬುದು ಜಿಲ್ಲಾಡಳಿತದ ಲೆಕ್ಕಾಚಾರ. ಹೀಗಾಗಿ ಕೆಲ ಕೆರೆಗಳಲ್ಲಿ ಬೋಟಿಂಗ್ ವ್ಯವಸ್ಥೆ ಮಾಡಲು ಸಿದ್ಧತೆ ನಡೆದಿದ್ದು, ಕೆಲ ದಿನಗಳಲ್ಲೇ ಟೆಂಡರ್ ಪ್ರಕ್ರಿಯೆ ಆರಂಭಗೊಳ್ಳಲಿದೆ. ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲೇ ಇರುವ ಹಿರೇಕೊಳಲೆ ಕೆರೆ ಈಗಾಗಲೇ ಪ್ರವಾಸಿ ತಾಣವಾಗಿದೆ. ಇಲ್ಲಿ ಬೋಟಿಂಗ್ ಆರಂಭಿಸಿದಲ್ಲಿ ಪ್ರವಾಸಿಗರು ಹೆಚ್ಚು ಸಮಯ ಇಲ್ಲಿ ಇದ್ದು ಖಷಿಪಡಲಿದ್ದಾರೆ. ಇದೇ ಕಾರಣದಿಂದಲೇ ಈಗಾಗಲೇ ಹಿರೇಕೊಳಲೆ ಕೆರೆ ವ್ಯಾಪ್ತಿಯಲ್ಲಿ ಶೌಚಗೃಹ ನಿರ್ಮಾಣ, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸುವ ಕಾಮಗಾರಿಗಳು ಆರಂಭಗೊಂಡಿವೆ.

ಇದಲ್ಲದೆ ಸಖರಾಯಪಟ್ಟಣ ಸಮೀಪದ ಅಯ್ಯನಕರೆ, ಬೆಳವಾಡಿ ಕೆರೆಯಲ್ಲಿಯೂ ಬೋಟಿಂಗ್ ನಡೆಸಲು ಸಿದ್ಧತೆ ನಡೆದಿದೆ. ಕೆರೆಗಳಲ್ಲಿ ಬೋಟಿಂಗ್ ನಡೆಸಲು ಖಾಸಗಿಯವರಿಗೆ ಟೆಂಡರ್ ನೀಡಲು ನಿರ್ಧರಿಸಲಾಗಿದೆ. ಆದರೆ, ಒಂದು ವರ್ಷಕ್ಕೆ ಟೆಂಡರ್ ನೀಡಿದರೆ ಯಾರೂ ಮುಂದೆ ಬರಲು ಒಪ್ಪುವುದಿಲ್ಲ ಎಂಬ ಹಿನ್ನೆಲೆಯಲ್ಲಿ ಐದು ವರ್ಷಕ್ಕೆ ಬೋಟಿಂಗ್ ಟೆಂಡರ್ ನೀಡಲು ಜಿಲ್ಲಾಡಳಿತ ತೀರ್ಮಾನಿಸಿದೆ. ಈ ಕುರಿತಂತೆ ಕೆರೆಗಳು ಯಾವ ಇಲಾಖೆ ವ್ಯಾಪ್ತಿಗೆ ಬರುತ್ತವೆಯೋ ಆ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ.




share
ಕೆ.ಎಲ್.ಶಿವು
ಕೆ.ಎಲ್.ಶಿವು
Next Story
X