Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸಂಡೂರು: ಕಳಪೆ ಡಾಂಬರೀಕರಣ ಆರೋಪ : ಕೆಲವೇ...

ಸಂಡೂರು: ಕಳಪೆ ಡಾಂಬರೀಕರಣ ಆರೋಪ : ಕೆಲವೇ ದಿನಗಳಲ್ಲಿ ಗುಂಡಿ ಬಿದ್ದ ರಸ್ತೆ

ಕೆ.ಮಹಮ್ಮದ್ ಖಾಸಿಂಕೆ.ಮಹಮ್ಮದ್ ಖಾಸಿಂ11 Jun 2026 1:13 PM IST
share
ಸಂಡೂರು: ಕಳಪೆ ಡಾಂಬರೀಕರಣ ಆರೋಪ : ಕೆಲವೇ ದಿನಗಳಲ್ಲಿ ಗುಂಡಿ ಬಿದ್ದ ರಸ್ತೆ

ಸಂಡೂರು: ಬಳ್ಳಾರಿ ಜಿಲ್ಲೆಯ ಸಂಡೂರು ಪಟ್ಟಣದಲ್ಲಿ ಇತ್ತೀಚೆಗೆ ನಿರ್ಮಿಸಲಾದ ನೂತನ ಡಾಂಬರು ರಸ್ತೆಯ ಗುಣಮಟ್ಟದ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ರಸ್ತೆ ಕೆಲವೇ ದಿನಗಳಲ್ಲಿ ಹಾಳಾಗಿದ್ದು, ಹಲವು ಕಡೆಗಳಲ್ಲಿ ಗುಂಡಿಗಳು ಹಾಗೂ ತಗ್ಗು ಪ್ರದೇಶಗಳು ಉಂಟಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಪಟ್ಟಣದ ಪ್ರಮುಖ ಮಾರ್ಗವಾದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಅರಣ್ಯ ಇಲಾಖೆ ಕಚೇರಿವರೆಗಿನ ರಸ್ತೆಯನ್ನು ಇತ್ತೀಚೆಗೆ ಡಾಂಬರೀಕರಣಗೊಳಿಸಲಾಗಿತ್ತು. ಈ ಹಿಂದೆ ಒಳಚರಂಡಿ ಹಾಗೂ ಕುಡಿಯುವ ನೀರಿನ ಕಾಮಗಾರಿಗಾಗಿ ರಸ್ತೆ ಅಗೆದಿದ್ದು, ಬಳಿಕ ಮರುನಿರ್ಮಾಣ ಮಾಡಲಾಗಿತ್ತು. ಆದರೆ ಕಾಮಗಾರಿ ಪೂರ್ಣಗೊಂಡ ಕೆಲವೇ ದಿನಗಳಲ್ಲಿ ರಸ್ತೆಯ ಹಲವೆಡೆ ಕುಸಿತ ಕಂಡುಬಂದಿದೆ.

ವಾಹನ ಸಂಚಾರ ಹೆಚ್ಚಿರುವ ಪ್ರದೇಶಗಳಲ್ಲಿ ರಸ್ತೆ ತಗ್ಗಿ ಗುಂಡಿಗಳು ಉಂಟಾಗಿದ್ದು, ಅವುಗಳನ್ನು ಶಾಶ್ವತವಾಗಿ ದುರಸ್ತಿ ಮಾಡುವ ಬದಲು ಜಲ್ಲಿ ಮತ್ತು ಮಣ್ಣು ತುಂಬಿ ತಾತ್ಕಾಲಿಕವಾಗಿ ತೇಪೆ ಹಾಕಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಕಾಮಗಾರಿಯ ಗುಣಮಟ್ಟದ ಬಗ್ಗೆ ಅನುಮಾನ ಮೂಡಿದ್ದು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಸಾರ್ವಜನಿಕರ ಪ್ರಕಾರ, ರಸ್ತೆ ನಿರ್ಮಾಣದಲ್ಲಿ ಗುಣಮಟ್ಟದ ಮಾನದಂಡಗಳನ್ನು ಪಾಲಿಸದೆ ಕಳಪೆ ಕಾಮಗಾರಿ ನಡೆಸಲಾಗಿದೆ. ಕಾಮಗಾರಿ ಮೇಲ್ವಿಚಾರಣೆ ನಡೆಸಬೇಕಾದ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳದಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ರಸ್ತೆ ಮತ್ತಷ್ಟು ಹದಗೆಡುವ ಸಾಧ್ಯತೆ ಇದ್ದು, ಗುಂಡಿಗಳಲ್ಲಿ ನೀರು ನಿಂತು ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಅಪಾಯ ಉಂಟಾಗುವ ಭೀತಿ ಎದುರಾಗಿದೆ. ಆದ್ದರಿಂದ ತಕ್ಷಣ ರಸ್ತೆ ಪರಿಶೀಲನೆ ನಡೆಸಿ, ಕಳಪೆ ಕಾಮಗಾರಿಗೆ ಹೊಣೆಗಾರರ ವಿರುದ್ಧ ಕ್ರಮ ಕೈಗೊಂಡು ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಮುಂದಾಗಬೇಕು. ಸ್ಥಳೀಯ ಶಾಸಕಿ ಅನ್ನಪೂರ್ಣ ತುಕಾರಾಂ, ಸಂಸದರು ಹಾಗೂ ಜಿಲ್ಲಾಡಳಿತ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಜವಾಬ್ದಾರಿಯನ್ನು ನಿಗದಿಪಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಸಾರ್ವಜನಿಕರ ತೆರಿಗೆ ಹಣದಲ್ಲಿ ನಿರ್ಮಾಣವಾಗುವ ರಸ್ತೆ ಕೆಲವೇ ದಿನಗಳಲ್ಲಿ ಗುಂಡಿ ಬೀಳುವುದು ಅಭಿವೃದ್ಧಿಯಲ್ಲ, ಅದು ಆಡಳಿತದ ವೈಫಲ್ಯದ ಪ್ರತೀಕವಾಗಿದೆ. ಕಳಪೆ ಕಾಮಗಾರಿಗೆ ಹೊಣೆಗಾರರಾದ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು, ಮಳೆಗಾಲದಲ್ಲಿ ಜನರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಗುಣಮಟ್ಟದ ಮತ್ತು ಶಾಶ್ವತ ರಸ್ತೆ ನಿರ್ಮಾಣ ಮಾಡಬೇಕು.

-ಎ.ಜಗದೀಶ್, ಸಂಡೂರು ತಾಲೂಕು ಅತಿಥಿ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ

share
ಕೆ.ಮಹಮ್ಮದ್ ಖಾಸಿಂ
ಕೆ.ಮಹಮ್ಮದ್ ಖಾಸಿಂ
Next Story
X