Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ರೈತರ ಬದುಕಿಗೆ ಸೂರ್ಯಕಾಂತಿ ಬೆಳೆ ಆಸರೆ

ರೈತರ ಬದುಕಿಗೆ ಸೂರ್ಯಕಾಂತಿ ಬೆಳೆ ಆಸರೆ

ಜಿಲಾನಸಾಬ್ ಬಡಿಗೇರ್ಜಿಲಾನಸಾಬ್ ಬಡಿಗೇರ್24 Jun 2026 1:32 PM IST
share
ರೈತರ ಬದುಕಿಗೆ ಸೂರ್ಯಕಾಂತಿ ಬೆಳೆ ಆಸರೆ
ಉತ್ತಮ ಇಳುವರಿ ಜೊತೆಗೆ ಲಾಭದ ನಿರೀಕ್ಷೆಯಲ್ಲಿ ಅನ್ನದಾತರು

ಕಂಪ್ಲಿ : ರೈತರ ಜೀವನಾಡಿ ತುಂಗಭದ್ರ ಜಲಾಶಯದ ಹೊಸ ಕ್ರಸ್ಟ್ ಗೇಟ್ ಅಳವಡಿಕೆ ಹಿನ್ನಲೆ ಎರಡನೇ ಬೆಳೆಗೆ ನೀರು ಕಡಿತಗೊಳಿಸಲಾಗಿತ್ತು. ಇದರಿಂದ ರೈತರ ಬದುಕು ಅತಂತ್ರ ಎನ್ನುವ ಸಂದರ್ಭದಲ್ಲಿ ರೈತರು ಸೂರ್ಯಕಾಂತಿ ಮೊರೆ ಹೋಗಿದ್ದು, ಅದು ಇಂದಿನ ದಿನಮಾನದಲ್ಲಿ ರೈತರ ಬದುಕಿಗೆ ಆಸರೆಯಾಗಿರುವ ಜೊತೆಗೆ ಉತ್ತಮ ಇಳುವರಿಯೊಂದಿಗೆ ಆರ್ಥಿಕತೆ ವೃದ್ಧಿಗೆ ಕಾರಣವಾಗಿದೆ.

ತಾಲೂಕಿನ ನೆಲ್ಲುಡಿ, ಶಾಂತಿನಗರ, ಎಮ್ಮಿಗನೂರು ಭಾಗದಲ್ಲಿ ಎಣ್ಣೆ ಕಾಳು ಬೆಳೆಯಾದ ಸೂರ್ಯಕಾಂತಿ ಫಸಲು ನಳ ನಳಿಸುತ್ತಿದ್ದು, ಅನ್ನದಾತರ ಮುಖದಲ್ಲಿ ಸಂತಸ ಮೂಡಿದೆ. ಎರಡನೇ ಬೆಳೆಗೆ ನೀರಿಲ್ಲದ್ದರಿಂದ ಕೊಳವೆ ಬಾವಿ ನೀರು, ತುಂಗಭದ್ರಾ ಬಲದಂಡೆ ಕೆಳಮಟ್ಟದ ಬಿಟ್ಟ ನೀರಿನಿಂದ ರೈತರು ಸೂರ್ಯಕಾಂತಿ ಬೆಳೆದಿದ್ದು, ಇನ್ನು ಕೆಲವೇ ದಿನಗಳಲ್ಲಿ ಕಟಾವಿಗೆ ಬರಲಿದೆ.

ಈ ಭಾಗದಲ್ಲಿ ಸುಮಾರು 1,250 ಎಕರೆಗೂ ಅಧಿಕ ಪ್ರದೇಶದಲ್ಲಿ ಸೂರ್ಯಕಾಂತಿ ಬೆಳೆಯಲಾಗಿದೆ. ಮುಂಗಾರು ಹಂಗಾಮಿನಲ್ಲಿ ರೈತರು ಭತ್ತವನ್ನು ಬೆಳೆದಿದ್ದರು. ಜೀವನಾಡಿ ತುಂಗಭದ್ರಾ ಜಲಾಶಯದ ಕ್ರೆಸ್ಟ್ ಗೇಟ್ ಕಟ್ಟಾಗಿ, ಎಲ್ಲಾ ಕ್ರೆಸ್ಟ್ ಗೇಟಗಳನ್ನು ಅಳವಡಿಕೆ ಹಿನ್ನೆಲೆಯಲ್ಲಿ ಎರಡನೇ ಬೆಳೆಗೆ ಕಾಲುವೆಗಳಿಗೆ ನೀರನ್ನು ಹರಿಸದ ಕಾರಣ ಡಿಸೆಂಬರಿನಲ್ಲಿ ಕಡಲೆ ಬಿತ್ತನೆ ಮಾಡಿದ್ದರು. ಇತ್ತೀಚೆಗೆ ಕೆಳಮಟ್ಟದ ಕಾಲುವೆಗೆ ನೀರು ಬಿಟ್ಟಾಗ ರೈತರು ಸೂರ್ಯಕಾಂತಿ ಬೆಳೆದಿದ್ದಾರೆ.

ಸೂರ್ಯಕಾಂತಿ ಕಟಾವಿನ ಬಳಿಕ ರೈತರು ಮಾಗಿ ಉಳುಮೆ ಮಾಡುತ್ತಾರೆ. ಯಾಕೆಂದರೆ ಸೂರ್ಯಕಾಂತಿ ಬೆಳೆಯ ಎಲೆಗಳು ಮಣ್ಣಿನಲ್ಲಿ ಸೇರುವುದರಿಂದ ಮಣ್ಣಿನ ಫಲವತ್ತತೆ ಅಧಿಕವಾಗಿ, ಮುಂಗಾರು ಹಂಗಾಮಿನ ಭತ್ತದ ಬೆಳೆಗೆ ಅನುಕೂಲವಾಗಲಿದೆ.

ಎಕರೆಗೆ 5 ರಿಂದ 10 ಕ್ವಿಂಟಾಲ್ ಇಳುವರಿ ಬರುವ ಸಾಧ್ಯತೆ ಇದೆ. ಕನಿಷ್ಠ 8 ಕ್ವಿಂಟಾಲ್ ಇಳುವರಿ ಬಂದಲ್ಲಿ ಸೂರ್ಯಕಾಂತಿ ಬೆಳೆ ರೈತರಿಗೆ ಲಾಭವನ್ನು ತಂದುಕೊಡಲಿದೆ. ಸೂರ್ಯಕಾಂತಿ ಬೀಜಕ್ಕೆ ನಾಲ್ಕು ಸಾವಿರ ರೂ., ಬಿತ್ತನೆ ಹಾಗೂ ಉಳುಮೆ, ಭೂಮಿಯಲ್ಲಿ ಸ್ವಚ್ಚತೆ ಮಾಡಲು ಮತ್ತು ಸೂರ್ಯಕಾಂತಿ ಬೆಳೆಯ ಕಟಾವು ಸೇರಿದಂತೆ ಒಟ್ಟು 20 ಸಾವಿರ ಖರ್ಚು ಮಾಡಿದ್ದಾರೆ.

ಮಣ್ಣಿನ ಫಲವತ್ತತೆ ಹೆಚ್ಚಾಗಲು ಸೂರ್ಯಕಾಂತಿ ಬೆಳೆಯಿಂದ ಅನುಕೂಲವಾಗಲಿದೆ. ಜೊತೆಗೆ ಕಡಿಮೆ ಖರ್ಚಿನಲ್ಲಿ ಉತ್ತಮ ಆದಾಯ ಸಿಗಲಿದೆ. ರೈತ ಸಂಪರ್ಕ ಕೇಂದ್ರದಲ್ಲಿ ರಿಯಾಯಿತಿ ದರದಲ್ಲಿ ಸೂರ್ಯಕಾಂತಿ ಬಿತ್ತನೆ ಬೀಜಗಳು ಲಭ್ಯ ಇವೆ.

-ಟಿ.ಜ್ಯೋತಿ

ಪ್ರಭಾರ ಕೃಷಿ ಅಧಿಕಾರಿ, ಕಂಪ್ಲಿ

ಎರಡನೇ ಬೆಳೆ ಇಲ್ಲದ ರೈತರು ಕೈಕಟ್ಟಿ ಕುಳಿತುಕೊಂಡಿದ್ದರು. ಆದರೆ, ಅಲ್ಪಸ್ವಲ್ಪ ಕಾಲುವೆ ನೀರು ಮತ್ತು ಮಳೆರಾಯನ ಕೃಪೆಗೆ ಸೂರ್ಯಕಾಂತಿ ಬೆಳೆ ಬೆಳೆದು, ಈಗ ಕಟಾವಿನ ಹಂತಕ್ಕೆ ಬಂದಿರುವುದು ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಈಗಾಗಲೇ ಸೂರ್ಯಕಾಂತಿ ಉತ್ತಮ ಇಳುವರಿ ಬಿಡುವ ನಿರೀಕ್ಷೆಯೊಂದಿಗೆ ರೈತರ ಅದಾಯ ದ್ವಿಗುಣವಾಗುವ ಸಾಧ್ಯತೆ ಇದೆ. ಇದರಿಂದ ಎರಡನೇ ಬೆಳೆಯಿಂದ ದೂರವಿದ್ದ ಈ ಭಾಗದ ರೈತರ ಬದುಕು ಕೈಹಿಡಿದಂತಾಗಿದೆ.

-ಬಸವರಾಜ, ರೈತ, ನೆಲ್ಲುಡಿ

share
ಜಿಲಾನಸಾಬ್ ಬಡಿಗೇರ್
ಜಿಲಾನಸಾಬ್ ಬಡಿಗೇರ್
Next Story
X