Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ‘ನಮ್ಮೂರ ಸರಕಾರಿ ಶಾಲೆ’ಯ...

‘ನಮ್ಮೂರ ಸರಕಾರಿ ಶಾಲೆ’ಯ ಪುನರುಜ್ಜೀವನಕ್ಕೆ ಹೊಸ ಹೆಜ್ಜೆ

ಕೆ.ಮಹಮ್ಮದ್ ಖಾಸೀಂಕೆ.ಮಹಮ್ಮದ್ ಖಾಸೀಂ25 Jun 2026 3:01 PM IST
share
‘ನಮ್ಮೂರ ಸರಕಾರಿ ಶಾಲೆ’ಯ ಪುನರುಜ್ಜೀವನಕ್ಕೆ ಹೊಸ ಹೆಜ್ಜೆ
ಮುಚ್ಚುವ ಹಂತ ತಲುಪಿದ್ದ ಶಾಲೆಗೆ ಹಳೆಯ ವಿದ್ಯಾರ್ಥಿಗಳಿಂದ ಹೊಸ ಜೀವ; 30ಕ್ಕೂ ಹೆಚ್ಚು ಮಕ್ಕಳ ದಾಖಲಾತಿ: ಉಚಿತ ಶಿಕ್ಷಣ ಸಾಮಗ್ರಿಗಳ ವಿತರಣೆ

ಸಂಡೂರು: ‘ನಾವು ಬೆಳೆದ ಶಾಲೆ ಮುಚ್ಚಬಾರದು.. ಮುಂದಿನ ಪೀಳಿಗೆಗೂ ಅದೇ ಶಿಕ್ಷಣದ ಬೆಳಕು ಹರಡಬೇಕು..’ ಎಂಬ ಕಾಳಜಿಯೊಂದಿಗೆ ಹಳೆಯ ವಿದ್ಯಾರ್ಥಿಗಳು, ಹಳೆಯ ಶಿಕ್ಷಕರು, ಶಿಕ್ಷಣ ಪ್ರೇಮಿಗಳು ಹಾಗೂ ಗ್ರಾಮಸ್ಥರು ಒಂದಾಗಿ ಕೈಜೋಡಿಸಿದ ಪರಿಣಾಮ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಗೊಲ್ಲಲಿಂಗಮ್ಮನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹೊಸ ಜೀವ ಬಂದಿದೆ.

ಒಂದು ಕಾಲದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿ, ಸಮಾಜಕ್ಕೆ ವೈದ್ಯರು, ಶಿಕ್ಷಕರು, ಇಂಜಿನಿಯರ್‌ಗಳು, ಸರಕಾರಿ ಅಧಿಕಾರಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವ್ಯಕ್ತಿಗಳನ್ನು ನೀಡಿದ್ದ ಈ ಶಾಲೆ, ಕಳೆದ ಕೆಲವು ವರ್ಷಗಳಿಂದ ವಿದ್ಯಾರ್ಥಿಗಳ ಕೊರತೆಯಿಂದ ಅಸ್ತಿತ್ವದ ಸಂಕಷ್ಟವನ್ನು ಎದುರಿಸುತ್ತಿತ್ತು. ಗ್ರಾಮೀಣ ಪ್ರದೇಶಗಳಲ್ಲಿ ಖಾಸಗಿ ಶಾಲೆಗಳ ಹೆಚ್ಚುತ್ತಿರುವ ಪ್ರಭಾವ ಹಾಗೂ ಸರಕಾರಿ ಶಾಲೆಗಳ ಬಗ್ಗೆ ಮೂಡಿದ್ದ ತಪ್ಪು ಕಲ್ಪನೆಗಳಿಂದಾಗಿ ಮಕ್ಕಳ ದಾಖಲಾತಿ ಕಡಿಮೆಯಾಗಿತ್ತು. ಪರಿಣಾಮವಾಗಿ ಒಂದು ಕಾಲದಲ್ಲಿ ನೂರಾರು ಮಕ್ಕಳ ಕಲರವದಿಂದ ಕಂಗೊಳಿಸುತ್ತಿದ್ದ ಶಾಲೆ, ಇಂದು ಮುಚ್ಚುವ ಹಂತಕ್ಕೆ ತಲುಪಿತ್ತು.

ಈ ಬೆಳವಣಿಗೆ ಹಳೆಯ ವಿದ್ಯಾರ್ಥಿಗಳ ಮನಸ್ಸಿಗೆ ನೋವು ತಂದಿತ್ತು. ತಮ್ಮ ಜೀವನದ ಭದ್ರ ಅಡಿಪಾಯವನ್ನು ಹಾಕಿಕೊಟ್ಟ ಶಾಲೆಯ ಈ ದುಸ್ಥಿತಿಯನ್ನು ಕಂಡ ಅವರು, ಯಾವುದೇ ಹುದ್ದೆ-ಪ್ರತಿಷ್ಠೆಯನ್ನು ಲೆಕ್ಕಿಸದೆ ಮತ್ತೆ ಒಂದಾಗಿ ಸೇರಿದರು. ಶಾಲೆಯನ್ನು ಉಳಿಸೋಣ, ಬೆಳೆಸೋಣ ಎಂಬ ಸಂಕಲ್ಪದೊಂದಿಗೆ ಪುನರುಜ್ಜೀವನ ಕಾರ್ಯಕ್ಕೆ ಮುಂದಾದರು.

ಶಾಲೆಯ ಪುನಶ್ಚೇತನಕ್ಕೆ ಹಳೆಯ ವಿದ್ಯಾರ್ಥಿಗಳ ಮಹತ್ವದ ಕೊಡುಗೆ:

ಶಾಲೆಯ ಅಭಿವೃದ್ಧಿಗಾಗಿ ಹಳೆಯ ವಿದ್ಯಾರ್ಥಿಗಳು ತಮ್ಮ ಸ್ವಂತ ಹಣವನ್ನು ವಿನಿಯೋಗಿಸಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಶಾಲೆಯ ಕೊಠಡಿಗಳಿಗೆ ಸುಣ್ಣ-ಬಣ್ಣ ಬಳಿದು ಸಂಪೂರ್ಣ ಹೊಸ ರೂಪ ನೀಡಲಾಗಿದೆ. ಮಕ್ಕಳ ಕಲಿಕೆಗೆ ಪೂರಕವಾಗುವಂತೆ ಗೋಡೆಗಳ ಮೇಲೆ ಕನ್ನಡ ಹಾಗೂ ಇಂಗ್ಲಿಷ್ ಅಕ್ಷರಮಾಲೆ, ಸಂಖ್ಯೆಗಳು, ವಿಜ್ಞಾನ ಸಂಬಂಧಿತ ಚಿತ್ರಗಳು, ಸೌರವ್ಯೆಹ, ಪ್ರಾಣಿಗಳು, ಪಕ್ಷಿಗಳು ಹಾಗೂ ವಿವಿಧ ಶೈಕ್ಷಣಿಕ ವಿಷಯಗಳ ಚಿತ್ರಗಳನ್ನು ಬಿಡಿಸಲಾಗಿದೆ.

ಮಕ್ಕಳು ಶಾಲೆಗೆ ಬಂದಾಗಲೇ ಕಲಿಕೆಯ ವಾತಾವರಣ ನಿರ್ಮಾಣವಾಗಬೇಕು ಎಂಬ ಉದ್ದೇಶದಿಂದ ಪ್ರತಿಯೊಂದು ಗೋಡೆಯನ್ನೂ ಶಿಕ್ಷಣದ ಸಾಧನವಾಗಿ ರೂಪಿಸಲಾಗಿದೆ. ಶಾಲೆಯ ಒಂದು ಕೊಠಡಿಯನ್ನು ಸಂಪೂರ್ಣ ನವೀಕರಿಸಿ ಪುಟಾಣಿ ಮಕ್ಕಳಿಗೆ ಆಕರ್ಷಕ ಹಾಗೂ ಸುರಕ್ಷಿತ ಕಲಿಕಾ ಕೇಂದ್ರವಾಗಿ

ಪರಿವರ್ತಿಸಲಾಗಿದೆ.

ಎಲ್‌ಕೆಜಿ-ಯುಕೆಜಿ ಆರಂಭಕ್ಕೆ ಉತ್ತಮ ಸ್ಪಂದನೆ:

ಗ್ರಾಮದ ಪೋಷಕರಿಗೆ ಸರಕಾರಿ ಶಾಲೆಯ ಮೇಲೆ ಮತ್ತೊಮ್ಮೆ ವಿಶ್ವಾಸ ಮೂಡಿಸುವ ಉದ್ದೇಶದಿಂದ ಶಾಲೆಯಲ್ಲಿ ಮೊದಲ ಬಾರಿಗೆ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಆರಂಭಿಸಲಾಗಿದೆ. ಈ ನಿರ್ಧಾರಕ್ಕೆ ಗ್ರಾಮಸ್ಥರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಆರಂಭದಲ್ಲೇ 30ಕ್ಕೂ ಹೆಚ್ಚು ಮಕ್ಕಳು ದಾಖಲಾತಿ ಪಡೆದಿದ್ದಾರೆ.

ಸರಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ, ಕ್ರೀಡೆ, ಸಾಮಾಜಿಕ ಮೌಲ್ಯಗಳು ಹಾಗೂ ಸಮಾನತೆಯ ವಾತಾವರಣ ದೊರೆಯುತ್ತದೆ ಎಂಬ ಅರಿವು ಮೂಡಿಸುವ ಕೆಲಸವನ್ನು ಹಳೆಯ ವಿದ್ಯಾರ್ಥಿಗಳು ಮನೆ-ಮನೆಗೆ ತೆರಳಿ ಮಾಡಿದ್ದಾರೆ. ಇದರ ಫಲವಾಗಿ ಹಲವು ಪೋಷಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ದಾಖಲಿಸಲು ಮುಂದೆ ಬಂದಿದ್ದಾರೆ.

ಪ್ರತಿಯೊಬ್ಬ ವಿದ್ಯಾರ್ಥಿಗೂ ಉಚಿತ ಶಿಕ್ಷಣ ಸಾಮಗ್ರಿ

ಶಾಲೆಗೆ ದಾಖಲಾಗಿರುವ ಮಕ್ಕಳಿಗೆ ಶಿಕ್ಷಣದ ಪ್ರಾರಂಭಿಕ ಹಂತದಲ್ಲೇ ಯಾವುದೇ ಆರ್ಥಿಕ ತೊಂದರೆ ಉಂಟಾಗಬಾರದು ಎಂಬ ಉದ್ದೇಶದಿಂದ ಹಳೆಯ ವಿದ್ಯಾರ್ಥಿಗಳು, ಹಳೆಯ ಶಿಕ್ಷಕರು ಹಾಗೂ ಶಿಕ್ಷಣ ಪ್ರೇಮಿಗಳು ಸೇರಿ ಅಗತ್ಯ ಶಿಕ್ಷಣ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸಿದರು.

ಪ್ರತಿಯೊಬ್ಬ ಮಗುವಿಗೂ ಮೂರು ಜತೆ ಸಮವಸ್ತ್ರ, ಶಾಲಾ ಬ್ಯಾಗ್, ಪುಸ್ತಕಗಳು, ಪೆನ್ನುಗಳು, ಶೂ-ಸಾಕ್ಸ್, ನೀರಿನ ಬಾಟಲ್ ಸೇರಿದಂತೆ ಕಲಿಕೆಗೆ ಅಗತ್ಯವಿರುವ ಎಲ್ಲಾ ಪರಿಕರಗಳನ್ನು ವಿತರಿಸಲಾಯಿತು. ಈ ಮೂಲಕ ಪೋಷಕರ ಮೇಲಿನ ಆರ್ಥಿಕ ಹೊರೆ ಕಡಿಮೆ ಮಾಡುವ ಪ್ರಯತ್ನ ನಡೆಸಲಾಗಿದೆ.

ತಮ್ಮ ಮಕ್ಕಳನ್ನೇ ಸರಕಾರಿ ಶಾಲೆಗೆ ಸೇರಿಸಿದ ಹಳೆಯ ವಿದ್ಯಾರ್ಥಿಗಳು:

ಸರಕಾರಿ ಶಾಲೆಗಳ ಬಗ್ಗೆ ಜನರಲ್ಲಿ ವಿಶ್ವಾಸ ಮೂಡಿಸಲು ಹಳೆಯ ವಿದ್ಯಾರ್ಥಿಗಳು ಕೇವಲ ಮಾತಿನ ಮೂಲಕವಲ್ಲ, ಕಾರ್ಯದ ಮೂಲಕ ಮಾದರಿಯಾಗಿದ್ದಾರೆ. ತಮ್ಮ ಮಕ್ಕಳು ಸಹ ಇದೇ ಶಾಲೆಯಲ್ಲಿ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದಿಂದ ಹಲವರು ತಮ್ಮ ಮಕ್ಕಳನ್ನು ಗೊಲ್ಲಲಿಂಗಮ್ಮನಹಳ್ಳಿ ಸರಕಾರಿ ಶಾಲೆಗೆ ದಾಖಲಿಸಿದ್ದಾರೆ.

ಇದು ಗ್ರಾಮಸ್ಥರಲ್ಲಿ ಮತ್ತಷ್ಟು ವಿಶ್ವಾಸ ಮೂಡಿಸಿದ್ದು, ನಮ್ಮ ಮಕ್ಕಳು ಕಲಿತ ಶಾಲೆಗೆ ನಮ್ಮ ಮಕ್ಕಳನ್ನೂ ಸೇರಿಸುತ್ತಿದ್ದರೆ ಖಂಡಿತವಾಗಿಯೂ ಶಾಲೆಯ ಗುಣಮಟ್ಟ ಉತ್ತಮವಾಗಿರುತ್ತದೆ ಎಂಬ ಭರವಸೆಯನ್ನು ಪೋಷಕರಲ್ಲಿ ಮೂಡಿಸಿದೆ.

ಸರಕಾರಿ ಶಾಲೆಗಳು ಸಾಮಾಜಿಕ ನ್ಯಾಯದ ಕೇಂದ್ರಗಳು

ಸರಕಾರಿ ಶಾಲೆಗಳು ಕೇವಲ ಶಿಕ್ಷಣ ನೀಡುವ ಸಂಸ್ಥೆಗಳಲ್ಲ. ಸಮಾಜದ ಎಲ್ಲ ವರ್ಗದ ಮಕ್ಕಳಿಗೆ ಸಮಾನ ಅವಕಾಶ ಒದಗಿಸುವ ಸಾಮಾಜಿಕ ನ್ಯಾಯದ ಕೇಂದ್ರಗಳಾಗಿವೆ. ರೈತರು, ಕೂಲಿ ಕಾರ್ಮಿಕರು, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳು ಯಾವುದೇ ಭೇದಭಾವವಿಲ್ಲದೆ ಗುಣಮಟ್ಟದ ಶಿಕ್ಷಣ ಪಡೆಯುವ ಅವಕಾಶವನ್ನು ಸರಕಾರಿ ಶಾಲೆಗಳು ಒದಗಿಸುತ್ತವೆ.

ಇಂತಹ ಶಾಲೆಗಳನ್ನು ಉಳಿಸುವುದು ಕೇವಲ ಶಿಕ್ಷಣ ಇಲಾಖೆಯ ಜವಾಬ್ದಾರಿಯಲ್ಲ; ಸಮಾಜದ ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಆಗಿದೆ ಎಂಬ ಸಂದೇಶವನ್ನು ಗೊಲ್ಲಲಿಂಗಮ್ಮನಹಳ್ಳಿ ಗ್ರಾಮದ ಈ ಕಾರ್ಯ ಸಾರಿ ಹೇಳುತ್ತಿದೆ.

ಅಧಿಕಾರಿಗಳು, ಮುಖಂಡರ ಉಪಸ್ಥಿತಿ:

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಐ.ಆರ್. ಅಕ್ಕಿ, ಇಸಿಒ ಗೂಳೆಪ್ಪ, ಶರಣಬಸಪ್ಪ ಕರಿಶೆಟ್ಟಿ, ಶಾಲೆಯ ಹಳೆಯ ಶಿಕ್ಷಕರು, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಗ್ರಾಮ ಮುಖಂಡರು, ಶಿಕ್ಷಣ ಪ್ರೇಮಿಗಳು, ಯುವಕರು ಹಾಗೂ ಹಳೆಯ ವಿದ್ಯಾರ್ಥಿಗಳು ಭಾಗವಹಿಸಿ ಶಾಲೆಯ ಅಭಿವೃದ್ಧಿಗೆ ತಮ್ಮ ಬೆಂಬಲ ಸೂಚಿಸಿದರು.

ಮಾದರಿಯಾದ ಪ್ರಯತ್ನ

ಇಂದು ರಾಜ್ಯದ ಅನೇಕ ಗ್ರಾಮೀಣ ಸರಕಾರಿ ಶಾಲೆಗಳು ವಿದ್ಯಾರ್ಥಿಗಳ ಕೊರತೆಯಿಂದ ಸಂಕಷ್ಟದಲ್ಲಿವೆ. ಅಂತಹ ಸಂದರ್ಭದಲ್ಲಿ ಗೊಲ್ಲಲಿಂಗಮ್ಮನಹಳ್ಳಿ ಗ್ರಾಮಸ್ಥರು ಮತ್ತು ಹಳೆಯ ವಿದ್ಯಾರ್ಥಿಗಳು ಒಗ್ಗೂಡಿ ಶಾಲೆಯ ಪುನರುಜ್ಜೀ ವನಕ್ಕೆ ಮುಂದಾಗಿರುವುದು ಇತರ ಗ್ರಾಮಗಳಿಗೂ ಮಾದರಿಯಾಗಿದೆ.

ಒಂದು ಶಾಲೆಯನ್ನು ಉಳಿಸುವುದು ಎಂದರೆ ಕೇವಲ ಒಂದು ಕಟ್ಟಡವನ್ನು ಉಳಿಸುವುದಲ್ಲ; ಆ ಗ್ರಾಮದ ಭವಿಷ್ಯವನ್ನು ಉಳಿಸುವುದು. ಶಿಕ್ಷಣದ ಮೂಲಕ ಸಮಾಜವನ್ನು ಕಟ್ಟುವ ಮಹತ್ತರ ಕಾರ್ಯದಲ್ಲಿ ಗೊಲ್ಲಲಿಂಗಮ್ಮನಹಳ್ಳಿ ಗ್ರಾಮ ಕೈಗೊಂಡಿರುವ ಈ ಹೆಜ್ಜೆ ಗ್ರಾಮೀಣ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಆಶಾಕಿರಣ ಮೂಡಿಸಿದೆ. ಮಕ್ಕಳ ನಗುವು, ಕಲರವ ಹಾಗೂ ಕಲಿಕೆಯ ಉತ್ಸಾಹದಿಂದ ಮತ್ತೊಮ್ಮೆ ಕಂಗೊಳಿಸುತ್ತಿರುವ ಗೊಲ್ಲಲಿಂಗಮ್ಮನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದು ‘ನಮ್ಮ ಶಾಲೆ - ನಮ್ಮ ಹೆಮ್ಮೆ’ ಎಂಬ ಸಂದೇಶಕ್ಕೆ ಜೀವಂತ ಉದಾಹರಣೆಯಾಗಿ ಹೊರಹೊಮ್ಮಿದೆ.

ಶಾಲೆಯ ಇತಿಹಾಸ

ಗೊಲ್ಲಲಿಂಗಮ್ಮನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೇವಲ ಒಂದು ಶಿಕ್ಷಣ ಸಂಸ್ಥೆಯಲ್ಲ; ಇದು ಗ್ರಾಮದ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಬೆಳವಣಿಗೆಯ ಕೇಂದ್ರವಾಗಿದೆ. ಒಂದು ಕಾಲದಲ್ಲಿ ಕ್ಲಸ್ಟರ್ ಮಟ್ಟದಲ್ಲಿ ಅತ್ಯುತ್ತಮ ಶಾಲೆ ಎಂಬ ಹೆಗ್ಗಳಿಕೆಯನ್ನು ಪಡೆದಿದ್ದ ಈ ಶಾಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಿದ್ದಾರೆ. ಈ ಶಾಲೆಯಲ್ಲಿ ಕಲಿತ ಅನೇಕ ವಿದ್ಯಾರ್ಥಿಗಳು ಇಂದು ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ ಉನ್ನತ ಅಧಿಕಾರಿಗಳಾಗಿ, ಶಿಕ್ಷಕರಾಗಿ, ವೈದ್ಯರಾಗಿ, ಇಂಜಿನಿಯರ್‌ಗಳಾಗಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಯಶಸ್ವಿ ವ್ಯಕ್ತಿಗಳಾಗಿ ಹೊರಹೊಮ್ಮಿದ್ದಾರೆ. ಅವರು ತಮ್ಮ ಯಶಸ್ಸಿನ ಹಿಂದಿನ ಮೂಲ ಶಕ್ತಿ ಈ ಶಾಲೆಯೇ ಎಂಬುದನ್ನು ಹೆಮ್ಮೆಯಿಂದ ಸ್ಮರಿಸುತ್ತಿದ್ದಾರೆ.

share
ಕೆ.ಮಹಮ್ಮದ್ ಖಾಸೀಂ
ಕೆ.ಮಹಮ್ಮದ್ ಖಾಸೀಂ
Next Story
X