Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಭಾವೈಕ್ಯದ ಮುಹರಂಗೆ ಇಂಡಿಯಲ್ಲಿ ಸಕಲ...

ಭಾವೈಕ್ಯದ ಮುಹರಂಗೆ ಇಂಡಿಯಲ್ಲಿ ಸಕಲ ಸಿದ್ಧತೆ

ಅನಿಲ್‌ ಶಿಂಧೆಅನಿಲ್‌ ಶಿಂಧೆ25 Jun 2026 3:08 PM IST
share
ಭಾವೈಕ್ಯದ ಮುಹರಂಗೆ ಇಂಡಿಯಲ್ಲಿ ಸಕಲ ಸಿದ್ಧತೆ
ಪೊಲೀಸ್, ಪೌರಸಭೆಯಿಂದ ಸಮಗ್ರ ತಯಾರಿ; ಸಿಸಿ ಕ್ಯಾಮರಾ ನಿಗಾ, ಸಂಚಾರ ನಿಯಂತ್ರಣಕ್ಕೆ ವಿಶೇಷ ವ್ಯವಸ್ಥೆ

ಇಂಡಿ: ನಗರದಲ್ಲಿ ಐತಿಹಾಸಿಕ ಹಿಂದೂ, ಮುಸ್ಲಿಮ್ ಭಾವೈಕ್ಯತೆಯ ಸಂಕೇತವಾಗಿ ಆಚರಿಸಲ್ಪಡುವ ಮುಹರಂ ಹಬ್ಬಕ್ಕೆ ಪೊಲೀಸ್ ಇಲಾಖೆ ಹಾಗೂ ಪುರಸಭೆ ವತಿಯಿಂದ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಲಕ್ಷಾಂತರ ಭಕ್ತರು ಮತ್ತು ಸಾರ್ವಜನಿಕರು ಹಬ್ಬದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಅಗತ್ಯ ಮೂಲಸೌಕರ್ಯ ಮತ್ತು ಭದ್ರತಾ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.

ಮುಹರಂ ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಅವರ ನೇತೃತ್ವದಲ್ಲಿ 4 ಪೊಲೀಸ್ ಸಬ್‌ಇನ್ಸ್‌ಪೆಕ್ಟರ್, 1 ಪೊಲೀಸ್ ಇನ್ಸ್‌ಪೆಕ್ಟರ್,45 ಪೊಲೀಸ್ ಕಾನ್‌ಸ್ಟೇಬಲ್, ಹಾಗೂ 28 ಗೃಹರಕ್ಷಕ, ಸೇರಿದಂತೆ ಪೊಲೀಸ್ ಇಲಾಖೆಯಿಂದ ಸುಮಾರು 100ಕ್ಕೂ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.

ಕಳ್ಳತನ ಪ್ರಕರಣ ತಡೆಗಟ್ಟುವ ನಿಟ್ಟಿನಲ್ಲಿ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಸುಮಾರು 24 ಕಡೆ ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು, ಸಾರ್ವಜನಿಕರಿಗೆ ಟ್ರಾಫಿಕ್ ಸಮಸ್ಯೆಯಾಗದಂತೆ ನಿಗದಿತವಾದ ರಸ್ತೆಗಳಲ್ಲಿ 45 ಕಡೆ ಬ್ಯಾರಿಕೇಡ್ ಹಾಕಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಜಾರಿಗೊಳಿಸಿದೆ.

ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ಬಂದೋಬಸ್ತ್, ಸಿಸಿ ಟಿವಿ ನಿಗಾವ್ಯವಸ್ಥೆ, ವಾಹನ ಸಂಚಾರ ನಿಯಂತ್ರಣ ಸೇರಿದಂತೆ ವಿಶೇಷ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಹಬ್ಬದ ಯಶಸ್ವಿ ನಿರ್ವಹಣೆಗೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮನ್ವಯ ಸಭೆಗಳನ್ನು ನಡೆಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಈ ವೇಳೆ ಪೌರಸಭೆ ವತಿಯಿಂದ ಸ್ವಚ್ಛತೆ, ಕುಡಿಯುವ ನೀರು, ಬೀದಿ ದೀಪಗಳ ನಿರ್ವಹಣೆ, ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಹಬ್ಬದ ಅವಧಿಯಲ್ಲಿ ಸ್ವಚ್ಛತಾ ಸಿಬ್ಬಂದಿಯನ್ನು ಹೆಚ್ಚುವರಿಯಾಗಿ ನಿಯೋಜಿಸಿ, ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುತ್ತಿದೆ. ನಗರದ ಪೌರ ಸಭೆ ಹಾಗೂ ಪೊಲೀಸ್ ಇಲಾಖೆಯಿಂದ ಮುಹರಂ ಹಬ್ಬ ಅಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮುಹರಂ ಹಬ್ಬದ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಮತ್ತು ಸಾರ್ವಜನಿಕರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ನಗರಸಭೆಯಿಂದ ಸ್ವಚ್ಛತೆ, ಶುದ್ಧ ಕುಡಿಯುವ ನೀರು, ಬೀದಿ ದೀಪಗಳ ನಿರ್ವಹಣೆ, ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆ ಸೇರಿದಂತೆ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ. ನಗರವನ್ನು ಸ್ವಚ್ಛವಾಗಿಡಲು ಹೆಚ್ಚುವರಿ ಸ್ವಚ್ಛತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ನಿರಂತರ ನಿಗಾ ವಹಿಸಲಾಗಿದೆ.

-ಶಿವಾನಂದ ಪೂಜಾರಿ,

ಪೌರ ಆಯುಕ್ತ ನಗರಸಭೆ, ಇಂಡಿ

ನಗರದಲ್ಲಿ ನಡೆಯುವ ಮುಹರಂ ಹಬ್ಬವು ಹಿಂದೂ, ಮುಸ್ಲಿಮ್ ಭಾವೈಕ್ಯದ ಪ್ರತೀಕವಾಗಿದ್ದು, ಹಬ್ಬವನ್ನು ಶಾಂತಿಯುತ ಹಾಗೂ ಸುಗಮವಾಗಿ ಆಚರಿಸಲು ಪೊಲೀಸ್ ಇಲಾಖೆಯಿಂದ ಅಗತ್ಯ ಎಲ್ಲ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಗೃಹರಕ್ಷಕರನ್ನು ನಿಯೋಜಿಸಲಾಗಿದ್ದು, ಸಿಸಿ ಕ್ಯಾಮೆರಾಗಳ ಮೂಲಕ ನಿರಂತರ ನಿಗಾವಹಿಸಲಾಗುತ್ತಿದೆ.

-ಪ್ರದೀಪ್ ಭಿಸೆ, ಪಿಐ ಇಂಡಿ ಪೊಲೀಸ್ ಠಾಣೆ

share
ಅನಿಲ್‌ ಶಿಂಧೆ
ಅನಿಲ್‌ ಶಿಂಧೆ
Next Story
X