Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ವಾಲ್ಮೀಕಿ ವಿಶ್ವವಿದ್ಯಾನಿಲಯದ ನೇಮಕಾತಿ...

ವಾಲ್ಮೀಕಿ ವಿಶ್ವವಿದ್ಯಾನಿಲಯದ ನೇಮಕಾತಿ ಮತ್ತೆ ವಿಳಂಬ

ಬಾವಸಲಿ, ರಾಯಚೂರುಬಾವಸಲಿ, ರಾಯಚೂರು8 July 2026 3:06 PM IST
share
ವಾಲ್ಮೀಕಿ ವಿಶ್ವವಿದ್ಯಾನಿಲಯದ ನೇಮಕಾತಿ ಮತ್ತೆ ವಿಳಂಬ
ಪಾರದರ್ಶಕತೆಗಾಗಿ ಜಾರಿಗೊಂಡ ಹೊಸ ನಿಯಮಗಳಿಗೆ ತಡೆಯಾಜ್ಞೆ

ರಾಯಚೂರು, ಜು.7: ರಾಯಚೂರಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಮತ್ತೊಮ್ಮೆ ಅನಿಶ್ಚಿತತೆಯಲ್ಲಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ಹೆಚ್ಚಿನ ಪಾರದರ್ಶಕತೆ ತರಲು ಕರ್ನಾಟಕ ಸರಕಾರ ಹೊರಡಿಸಿದ್ದ ಆದೇಶಕ್ಕೆ 5 ಮೇ 2026 ರಂದು ಕರ್ನಾಟಕ ಹೈಕೋರ್ಟ್(ಕಲ್ಬುರ್ಗಿ ಪೀಠ) ಮಧ್ಯಂತರ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುತ್ತಾ ಸಾಗಿದೆ.

ಜುಲೈ 2024ರಲ್ಲಿ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಜಿಗಳ ಸ್ವೀಕಾರ, ಲಿಖಿತ ಪರೀಕ್ಷೆ ಹಾಗೂ ಅಭ್ಯರ್ಥಿಗಳ ಶಾರ್ಟ್ಲಿಸ್ಟ್ ಪ್ರಕಟಣೆ ಸೇರಿದಂತೆ ಹಲವು ಹಂತಗಳು ಪೂರ್ಣಗೊಂಡಿದ್ದರೂ, ಎರಡು ವರ್ಷಗಳಿಂದ ನಡೆಯುತ್ತಿರುವ ಈ ನೇಮಕಾತಿ ಪ್ರಕ್ರಿಯೆ ಇನ್ನೂ ಅಂತಿಮ ಹಂತ ತಲುಪಿಲ್ಲ.

ನೇಮಕಾತಿಯಲ್ಲಿ ಸಂಪೂರ್ಣ ಪಾರದರ್ಶಕತೆ ಹಾಗೂ ಹೊಣೆಗಾರಿಕೆಯನ್ನು ಖಚಿತಪಡಿಸುವ ಉದ್ದೇಶದಿಂದ ಅಂದಿನ ಉನ್ನತ ಶಿಕ್ಷಣ ಸಚಿವರಾಗಿದ್ದ ಡಾ. ಎಂ.ಸಿ. ಸುಧಾಕರ್ ಅವರಿಂದ ಅನುಮೋದನೆಗೊಂಡ ಮಾರ್ಗಸೂಚಿಯನ್ನೊಳಗೊಂಡ ಸುತ್ತೋಲೆಯನ್ನು ಉನ್ನತ ಶಿಕ್ಷಣ ಇಲಾಖೆಯು 2026ರ ಎಪ್ರಿಲ್ 16ರಂದು ಜಾರಿಗೊಳಿಸಿತ್ತು.

ಅದರಂತೆ ರಾಯಚೂರು ವಿಶ್ವವಿದ್ಯಾಲಯದ ಪರಿನಿಯಮಾವಳಿಗಳ ಅನುಸಾರ ಮೆರಿಟ್ ಪಟ್ಟಿ ತಯಾರಿಸಿ ಸಂದರ್ಶನಕ್ಕೆ ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಲು ನಿರ್ದೇಶಿಸಿತ್ತು. ಹಾಗೂ ಸಂದರ್ಶನ ಮಂಡಳಿಯು ಶಾರ್ಟ್ಲಿಸ್ಟ್ ಆದ ಅಭ್ಯರ್ಥಿಗಳಿಗೆ 12 ಅಂಕಗಳಲ್ಲಿ ಸಾಮಾನ್ಯವಾಗಿ ಕನಿಷ್ಠ 6 ಮತ್ತು ಗರಿಷ್ಠ 9 ಅಂಕಗಳ ಮಿತಿಯೊಳಗೆ ಅಂಕಗಳನ್ನು ನೀಡಬೇಕು ಎಂದು ಸೂಚಿಸಲಾಗಿತ್ತು. ಈ ಮಿತಿಯನ್ನು ಮೀರಿ ಅಂಕಗಳನ್ನು ನೀಡಿದಲ್ಲಿ ಅದಕ್ಕೆ ಲಿಖಿತ ರೂಪದಲ್ಲಿ ಸಮರ್ಪಕ ಕಾರಣಗಳನ್ನು ದಾಖಲಿಸುವುದು ಕಡ್ಡಾಯಗೊಳಿಸಲಾಗಿತ್ತು. ಜೊತೆಗೆ ಸಂಪೂರ್ಣ ಸಂದರ್ಶನ ಪ್ರಕ್ರಿಯೆಯನ್ನು ವಿಡಿಯೋ ಚಿತ್ರೀಕರಣ ಮಾಡುವ ವ್ಯವಸ್ಥೆಯನ್ನೂ ಕಡಾಯಗೊಳಿಸಲಾಗಿತ್ತು. ರಾಜ್ಯ ಉನ್ನತ ಶಿಕ್ಷಣ ಇಲಾಖೆಯ ವಿಶ್ವವಿದ್ಯಾಲಯಗಳಲ್ಲಿನ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗಳಲ್ಲಿ ಈ ರೀತಿಯ ಪಾರದರ್ಶಕತಾ ಕ್ರಮಗಳು ಇದೇ ಮೊದಲ ಬಾರಿಗೆ ಜಾರಿಯಾಗಿದ್ದವು ಎಂದು ಹೇಳಲಾಗುತ್ತಿದೆ.

ಆದರೆ, ಒಬ್ಬ ಅಭ್ಯರ್ಥಿ ಈ ಸರಕಾರಿ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯದ ದಾಖಲೆಗಳ ಪ್ರಕಾರ, ಅರ್ಜಿದಾರರು 2026ರ ಎಪ್ರಿಲ್ 16ರಂದು ಹೊರಡಿಸಲಾದ ಸರಕಾರದ ಆದೇಶವನ್ನು ಪ್ರಶ್ನಿಸಿ ಮಧ್ಯಂತರ ಪರಿಹಾರ ಕೋರಿದ್ದರು. ಅರ್ಜಿಯ ಪ್ರಾಥಮಿಕ ವಿಚಾರಣೆ ನಡೆಸಿದ ಹೈಕೋರ್ಟ್, ಸರಕಾರದ ಆದೇಶದ ಜಾರಿಗೆ ಮುಂದಿನ ವಿಚಾರಣೆಯವರೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ನೇಮಕಾತಿಯಲ್ಲಿ ಪಾರದರ್ಶಕತೆಯನ್ನು ಜಾರಿಗೊಳಿಸಲು ಪ್ರಯತ್ನಿಸಿದ್ದ ಉನ್ನತ ಶಿಕ್ಷಣ ಇಲಾಖೆಯ ಮಾರ್ಗಸೂಚಿಗಳನ್ನು ಒಳಗೊಂಡ ಆದೇಶವನ್ನು ಉದ್ಯೋಗಕ್ಕೆ ಅರ್ಜಿ ಹಾಕಿದ್ದ ಒಬ್ಬ ಅಭ್ಯರ್ಥಿಯೇ ಕೋರ್ಟಿನಲ್ಲಿ ಪ್ರಶ್ನಿಸಿದ್ದು ಇತರೆ ಅಭ್ಯರ್ಥಿಗಳಲ್ಲಿ ಗೊಂದಲಕ್ಕೆ ಕಾರಣವಾಗಿದೆ.

ಈ ಬೆಳವಣಿಗೆಯಿಂದಾಗಿ ಈಗಾಗಲೇ ದೀರ್ಘಕಾಲದಿಂದ ನೇಮಕಾತಿಗಾಗಿ ಕಾಯುತ್ತಿರುವ ನೂರಾರು ಅಭ್ಯರ್ಥಿಗಳಲ್ಲಿ ಮತ್ತೆ ಅನಿಶ್ಚಿತತೆ ಮೂಡಿದೆ. ಮತ್ತೊಂದೆಡೆ, ವಿಶ್ವವಿದ್ಯಾಲಯದಲ್ಲಿನ ಅನೇಕ ಬೋಧಕ ಹುದ್ದೆಗಳು ಇನ್ನೂ ಖಾಲಿಯೇ ಉಳಿದಿರುವುದರಿಂದ ಶೈಕ್ಷಣಿಕ ಚಟುವಟಿಕೆಗಳ ಮೇಲೂ ಪರಿಣಾಮ ಬೀಳುತ್ತಿದೆ.

ಇದರ ನಡುವೆ ಕರ್ನಾಟಕ ಸಚಿವ ಸಂಪುಟದ ಇತ್ತೀಚಿನ ವಿಸ್ತರಣೆಯ ನಂತರ ಉನ್ನತ ಶಿಕ್ಷಣ ಇಲಾಖೆಗೆ ಇನ್ನೂ ಪೂರ್ಣಾವಧಿ ಸಚಿವರ ನೇಮಕವಾಗಿಲ್ಲ ಎಂಬುದು ಈ ಪ್ರಕರಣಕ್ಕೆ ಮತ್ತಷ್ಟು ಮಹತ್ವ ನೀಡಿದೆ. ಪರಿಣಾಮವಾಗಿ, ಸರಕಾರದ ಪರವಾಗಿ ತಡೆಯಾಜ್ಞೆ ತೆರವುಗೊಳಿಸಲು ಅಥವಾ ಪ್ರಕರಣದ ತ್ವರಿತ ವಿಚಾರಣೆಗೆ ಅಗತ್ಯ ಕ್ರಮ ಕೈಗೊಳ್ಳುವಲ್ಲಿ ವಿಳಂಬವಾಗುವ ಸಾಧ್ಯತೆ ಇದೆ ಎಂಬ ಆತಂಕವನ್ನು ಅಭ್ಯರ್ಥಿಗಳು ವ್ಯಕ್ತಪಡಿಸುತ್ತಿದ್ದಾರೆ.

ಶಿಕ್ಷಣ ತಜ್ಞರ ಅಭಿಪ್ರಾಯದಲ್ಲಿ, ನೇಮಕಾತಿ ಪ್ರಕ್ರಿಯೆಯಲ್ಲಿ ನ್ಯಾಯಾಂಗದ ಪರಿಶೀಲನೆ ಮತ್ತು ಕಾನೂನು ಬದ್ಧತೆ ಅತ್ಯಂತ ಮಹತ್ವದ್ದಾಗಿದ್ದರೂ, ದೀರ್ಘಕಾಲದ ಮಧ್ಯಂತರ ತಡೆಯಾಜ್ಞೆಗಳು ವಿಶ್ವವಿದ್ಯಾಲಯಗಳ ಕಾರ್ಯನಿರ್ವಹಣೆಯ ಮೇಲೆ ಗಂಭೀರ ಪರಿಣಾಮ ಬೀರುತ್ತವೆ. ಖಾಯಂ ಬೋಧಕರ ಕೊರತೆಯಿಂದ ಅತಿಥಿ ಹಾಗೂ ತಾತ್ಕಾಲಿಕ ಉಪನ್ಯಾಸಕರ ಮೇಲಿನ ಅವಲಂಬನೆ ಹೆಚ್ಚುವುದರ ಜೊತೆಗೆ ಬೋಧನೆ, ಸಂಶೋಧನೆ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟಕ್ಕೂ ಧಕ್ಕೆಯಾಗುತ್ತದೆ.

ಈ ಹಿನ್ನೆಲೆಯಲ್ಲಿ, ಹೈಕೋರ್ಟ್‌ನಲ್ಲಿ ಪ್ರಕರಣದ ಶೀಘ್ರ ವಿಚಾರಣೆ ನಡೆದು, ಕಾನೂನುಬದ್ಧವಾಗಿ ಉಂಟಾಗಿರುವ ಅಡೆತಡೆಗಳು ನಿವಾರಿಸಲು ಉನ್ನತ ಶಿಕ್ಷಣ ಇಲಾಖೆ ತಕ್ಷಣ ಕಾರ್ಯಪ್ರವೃತ್ತರಾಗಲಿ,ದೀರ್ಘಕಾಲದಿಂದ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಶೀಘ್ರವಾಗಿ ಭರ್ತಿಯಾಗಲೆಂದು ಉದ್ಯೋಗಾಕಾಂಕ್ಷಿಗಳ ಬೇಡಿಕೆ.

‘ಸಹಾಯಕ ಪ್ರಾಧ್ಯಾಪಕರ ನೇಮಕಾತಿ ವಿಷಯ ನ್ಯಾಯಾಲಯದ ಅಂಗಳದಲ್ಲಿ ಇರುವ ಕಾರಣ ಏನು ಹೇಳಲು ಆಗುವುದಿಲ್ಲ, ರಾಜ್ಯ ಸರ್ಕಾರ ಕಾನೂನು ರೀತಿಯಲ್ಲಿ ಸಮಸ್ಯೆ ಬಗೆಹರಿಸಲಿದೆ ಎಂಬ ಭರವಸೆ ಇದೆ’.

-ಪ್ರೊ.ಶಿವಾನಂದ ಕೆಳಮನಿ,

ಕುಲಪತಿಗಳು, ಆದಿ ಕವಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ

share
ಬಾವಸಲಿ, ರಾಯಚೂರು
ಬಾವಸಲಿ, ರಾಯಚೂರು
Next Story
X