Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಆಲಮೇಲ: ಉದ್ಘಾಟನೆಗೊಂಡು ತಿಂಗಳಾದರೂ...

ಆಲಮೇಲ: ಉದ್ಘಾಟನೆಗೊಂಡು ತಿಂಗಳಾದರೂ ಬೆಳಗದ ಬೀದಿ ದೀಪಗಳು

ಅಬ್ದುಲಘನಿ ಎಂ.ದೇವರಮನಿಅಬ್ದುಲಘನಿ ಎಂ.ದೇವರಮನಿ23 July 2026 2:59 PM IST
share
ಆಲಮೇಲ: ಉದ್ಘಾಟನೆಗೊಂಡು ತಿಂಗಳಾದರೂ ಬೆಳಗದ ಬೀದಿ ದೀಪಗಳು

ಆಲಮೇಲ: ಅಧಿಕಾರಿಗಳ ನಿರ್ಲಕ್ಷ್ಯದಿಂದ ಪಟ್ಟಣದ ಸೌಂದರ್ಯೀಕರಣದ ಕನಸು ಕನಸಾಗಿಯೇ ಉಳಿದಿದೆ. ಹಿಡಿದಿದೆ. ಸುಮಾರು 20 ಕೋಟಿ ರೂ. ವೆಚ್ಚದ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ ಅಳವಡಿಸಿ ಲೋಕಾರ್ಪಣೆ ಮಾಡಲಾದ ಬೀದಿ ದೀಪಗಳು ತಿಂಗಳು ಕಳೆದರೂ ಬೆಳಗದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕಳೆದ ತಿಂಗಳು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಹಾಗೂ ಶಾಸಕ ಅಶೋಕ ಮನಗೂಳಿ ಅವರು ಪಟ್ಟಣದ ಇಂಡಿ ರಸ್ತೆ ಅಗಲೀಕರಣ ಮತ್ತು ನೂತನ ಬೀದಿದೀಪಗಳ ಲೋಕಾರ್ಪಣೆಯನ್ನು ಜಂಟಿಯಾಗಿ ಮಾಡಿದ್ದರು. ಆದರೆ, ಲೋಕಾರ್ಪಣೆಯಾಗಿ ತಿಂಗಳು ಕಳೆದರೂ ಪ್ರವಾಸಿ ಮಂದಿರದಿಂದ ಡಾ. ಹಬ್ಬು ಕಾಂಪ್ಲೆಕ್ಸ್ ವರೆಗಿನ 50ಕ್ಕೂ ಅಧಿಕ ಬೀದಿ ದೀಪಗಳು ಇನ್ನೂ ಬೆಳಗಿಲ್ಲ.

ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿದರೆ, ಪಂಚಾಯತಿಗೆ ಹಸ್ತಾಂತರವಾಗಿಲ್ಲ, ಹೆಚ್ಚಿನ ಸಾಮರ್ಥ್ಯದ ಹೆಚ್ಚುವರಿ ಟ್ರಾನ್ಸ್ಫಾರ್ಮರ್ ಲಭ್ಯವಿಲ್ಲ ಎಂದು ಆಡಳಿತಾತ್ಮಕ ಹಾಗೂ ತಾಂತ್ರಿಕ ಕಾರಣಗಳನ್ನು ಮುಂದಿಡುತ್ತಿದ್ದಾರೆ. ಹಾಗಿದ್ದಲ್ಲಿ, ಕೇವಲ ಪ್ರದರ್ಶನಕ್ಕಾಗಿ ಉದ್ಘಾಟನೆ ನಡೆದಿತ್ತೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದೆ.

ರಸ್ತೆಯಲ್ಲೇ ಮಳೆನೀರು; ಸವಾರರ ಪರದಾಟ ಬೀದಿ ದೀಪಗಳ ಸಮಸ್ಯೆಯೊಂದಿಗೆ ರಸ್ತೆ ಕಾಮಗಾರಿ ಅವೈಜ್ಞಾನಿಕ ಹಾಗೂ ಕಳಪೆಯಾಗಿದೆ ಎಂಬ ಆರೋಪವೂ ಸಾರ್ವಜನಿಕರಿಂದ ಕೇಳಿಬಂದಿದೆ. ಮಳೆನೀರು ಸರಾಗವಾಗಿ ಚರಂಡಿಗೆ ಹರಿದುಹೋಗಲು ಸೂಕ್ತ ವ್ಯವಸ್ಥೆ ಕಲ್ಪಿಸದ ಕಾರಣ ರಸ್ತೆ ಕೆರೆಯಂತಾಗುತ್ತಿದೆ. ರಸ್ತೆಯಲ್ಲಿ ಮಳೆನೀರು ನಿಲ್ಲುತ್ತಿರುವುದರಿಂದ ವಾಹನ ಸವಾರರು ಮತ್ತು ಪಾದಚಾರಿಗಳು ನಿತ್ಯ ಪರದಾಡುವಂತಾಗಿದೆ.

ಶಾಸಕರ ಶ್ರಮಕ್ಕೆ ಅಧಿಕಾರಿಗಳ ತಣ್ಣೀರು ಆಲಮೇಲ ಪಟ್ಟಣ ತಾಲೂಕು ಕೇಂದ್ರವಾದ ಬಳಿಕ ಶಾಸಕ ಅಶೋಕ ಮನಗೂಳಿ ಅವರು ಅನುದಾನ ತಂದು ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡುತ್ತಿದ್ದಾರೆ. ಆದರೆ, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕಾಮಗಾರಿಗಳ ಸಮರ್ಪಕ ನಿರ್ವಹಣೆಗೆ ಗಮನ ನೀಡುತ್ತಿಲ್ಲ ಎಂದು ಶಾಸಕರ ಅಭಿಮಾನಿಗಳು ದೂರಿದ್ದಾರೆ.

ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಶಾಸಕರು ಕ್ರಮ ಕೈಗೊಳ್ಳಬೇಕು. ಬೀದಿ ದೀಪಗಳನ್ನು ಬೆಳಗಿಸುವುದರೊಂದಿಗೆ ಮಳೆನೀರು ಸರಾಗವಾಗಿ ಹರಿದುಹೋಗುವಂತೆ ಚರಂಡಿ ವ್ಯವಸ್ಥೆಯನ್ನು ಸರಿಪಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಹೆಚ್ಚುವರಿ ಟಿಸಿ ಅಳವಡಿಕೆಗೆ ಕ್ರಮ

ಇಂಡಿ ರಸ್ತೆಯ ಬೀದಿ ದೀಪಗಳಿಗಾಗಿ ಹೊಸದಾಗಿ ಅಳವಡಿಸಿರುವ ಟ್ರಾನ್ಸ್ಫಾರ್ಮರ್ ಮೇಲೆ ಹೆಚ್ಚಿನ ವಿದ್ಯುತ್ ಭಾರ ಬೀಳುತ್ತಿರುವುದರಿಂದ ರಾತ್ರಿ ವೇಳೆ ದೀಪಗಳು ಬೆಳಗುತ್ತಿಲ್ಲ. ಈ ತಾಂತ್ರಿಕ ಸಮಸ್ಯೆ ನಿವಾರಿಸಲು ಶೀಘ್ರದಲ್ಲೇ ಹೆಚ್ಚಿನ ಸಾಮರ್ಥ್ಯದ ಹೆಚ್ಚುವರಿ ಟ್ರಾನ್ಸ್ಫಾರ್ಮರ್ ಅಳವಡಿಸಿ ಸಮಸ್ಯೆ ಬಗೆಹರಿಸಲಾಗುವುದು.

-ಅರುಣಕುಮಾರ ವಡಗೇರಿ

ಎಇಇ, ಲೋಕೋಪಯೋಗಿ ಇಲಾಖೆ, ಸಿಂದಗಿ

ಪಪಂಗೆ ಇನ್ನೂ ಹಸ್ತಾಂತರವಾಗಿಲ್ಲ

ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ ಅಳವಡಿಸಿರುವ ಬೀದಿ ದೀಪಗಳನ್ನು ಪಟ್ಟಣ ಪಂಚಾಯಿತಿಗೆ ಇನ್ನೂ ಅಧಿಕೃತವಾಗಿ ಹಸ್ತಾಂತರಿಸಿಲ್ಲ. ಸದ್ಯ ಅವುಗಳ ಸಂಪೂರ್ಣ ನಿರ್ವಹಣೆಯನ್ನು ಲೋಕೋಪಯೋಗಿ ಇಲಾಖೆಯೇ ನೋಡಿಕೊಳ್ಳುತ್ತಿದೆ.

-ರವಿ ಶಿರಗುಪ್ಪಿ

ಪ್ರಭಾರಿ ಮುಖ್ಯಾಧಿಕಾರಿ, ಆಲಮೇಲ ಪಪಂ

share
ಅಬ್ದುಲಘನಿ ಎಂ.ದೇವರಮನಿ
ಅಬ್ದುಲಘನಿ ಎಂ.ದೇವರಮನಿ
Next Story
X