Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ರಾಯಚೂರು: ಅವ್ಯವಸ್ಥೆಯ ಆಗರ ಅಂಬೇಡ್ಕರ್...

ರಾಯಚೂರು: ಅವ್ಯವಸ್ಥೆಯ ಆಗರ ಅಂಬೇಡ್ಕರ್ ವಸತಿ ನಿಲಯ

ಬಾವಸಲಿ, ರಾಯಚೂರುಬಾವಸಲಿ, ರಾಯಚೂರು15 Oct 2026 3:30 PM IST
share
ರಾಯಚೂರು: ಅವ್ಯವಸ್ಥೆಯ ಆಗರ ಅಂಬೇಡ್ಕರ್ ವಸತಿ ನಿಲಯ

ರಾಯಚೂರು: ನಗರದ ಮಂತ್ರಾಲಯ ರಸ್ತೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪರಿಶಿಷ್ಟ ಜಾತಿ ಬಾಲಕರ ಮೆಟ್ರಿಕ್ ವಸತಿ ನಿಲಯದಲ್ಲಿ ಊಟ, ಉಪಾಹಾರ ಹಾಗೂ ಮೂಲಸೌಕರ್ಯಗಳ ಕೊರತೆ ಎದುರಾಗಿದೆ ಎಂಬ ಆರೋಪ ಕೇಳಿಬಂದಿದೆ. ವಸತಿ ನಿಲಯದ ಅವ್ಯವಸ್ಥೆಯಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಸತಿ ನಿಲಯದಲ್ಲಿ ನಿಗದಿತ ಮೆನು ಪ್ರಕಾರ ಊಟ ಮತ್ತು ಉಪಾಹಾರ ನೀಡುತ್ತಿಲ್ಲ. ತೆಳ್ಳನೆಯ ಸಾರು, ಸರಿಯಾಗಿ ಬೇಯದ ಅನ್ನ ಹಾಗೂ ಚಪಾತಿ ನೀಡಲಾಗುತ್ತಿದೆ. ಆಹಾರದ ಗುಣಮಟ್ಟ ಕಳಪೆಯಾಗಿರುವುದರಿಂದ ಅನೇಕ ವಿದ್ಯಾರ್ಥಿಗಳು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಮೂರು ತಿಂಗಳಾದರೂ ಶುಚಿ ಕಿಟ್ ವಿತರಿಸಿಲ್ಲ!

ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಸಾಬೂನು, ಕೊಬ್ಬರಿ ಎಣ್ಣೆ, ಟೂತ್ ಪೇಸ್ಟ್ ಸೇರಿದಂತೆ ಅಗತ್ಯ ವಸ್ತುಗಳಿರುವ ಶುಚಿ ಕಿಟ್ ವಿತರಿಸಬೇಕಿದೆ. ಆದರೆ, ಮೂರು ತಿಂಗಳಾದರೂ ಕಿಟ್ ನೀಡಿಲ್ಲ. ಹೀಗಾಗಿ ಸ್ನಾನ ಮಾಡಲು ಹಾಗೂ ಬಟ್ಟೆ ತೊಳೆಯಲು ಬೇಕಾದ ವಸ್ತುಗಳನ್ನು ವಿದ್ಯಾರ್ಥಿಗಳು ಸ್ವಂತ ಹಣದಲ್ಲಿ ಖರೀದಿಸಬೇಕಾಗಿದೆ ಎಂದು ದೂರಿದ್ದಾರೆ.

ವಸತಿ ನಿಲಯದ ಹಲವು ಕೊಠಡಿಗಳಲ್ಲಿ ಕಿಟಕಿಗಳಿಲ್ಲದೆ, ಹೊದಿಕೆಗಳಳನ್ನು ಹಾಕಿ ಮುಚ್ಚಲಾಗಿದೆ. ಆವರಣದ ಸುತ್ತಮುತ್ತ ಕೊಳಚೆ ನೀರು ಸರಾಗವಾಗಿ ಹರಿಯದೆ ನಿಂತಿದ್ದು, ಸೊಳ್ಳೆಗಳ ಹಾವಳಿ ಹೆಚ್ಚಾಗಿದೆ. ಇದರಿಂದ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಸ್ನಾನಗೃಹಗಳ ಬಾಗಿಲುಗಳು ಮುರಿದುಹೋಗಿದ್ದರೂ ಹಲವು ವರ್ಷಗಳಿಂದ ದುರಸ್ತಿ ಮಾಡಿಲ್ಲ. ಶೌಚಾಲಯಗಳ ನಿರ್ವಹಣೆಯೂ ಸಮರ್ಪಕವಾಗಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಗ್ರಂಥಾಲಯದಲ್ಲೂ ಸೌಲಭ್ಯಗಳ ಕೊರತೆ

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಬೇಕಾದ ಗ್ರಂಥಾಲಯದಲ್ಲಿಯೂ ಅಗತ್ಯ ಸೌಲಭ್ಯಗಳ ಕೊರತೆಯಿದೆ. ದಿನಪತ್ರಿಕೆಗಳು, ನಿಯತಕಾಲಿಕೆಗಳು ಹಾಗೂ ಪುಸ್ತಕಗಳು ಸಾಕಷ್ಟು ಸಂಖ್ಯೆಯಲ್ಲಿ ಲಭ್ಯವಿಲ್ಲ. ಬೆರಳೆಣಿಕೆಯಷ್ಟು ದಿನಪತ್ರಿಕೆಗಳನ್ನು ಮಾತ್ರ ತರಿಸಲಾಗುತ್ತಿದೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.

ವಸತಿ ನಿಲಯದ ಅವ್ಯವಸ್ಥೆ ಕುರಿತು ಪ್ರಶ್ನಿಸಿದರೆ ಸಂಬಂಧಪಟ್ಟ ಅಧಿಕಾರಿಗಳು ನಿಂದಿಸುತ್ತಾರೆ ಎಂಬ ಆರೋಪವೂ ಕೇಳಿಬಂದಿದೆ. ರಾಜಕೀಯ ನಾಯಕರ ಬೆಂಬಲ ಹೊಂದಿರುವ ಕೆಲವರು ಅನಧಿಕೃತವಾಗಿ ವಸತಿ ನಿಲಯದಲ್ಲಿ ತಂಗಿದ್ದಾರೆ. ಈ ಬಗ್ಗೆ ಹಾಗೂ ಇತರ ಸಮಸ್ಯೆಗಳ ಕುರಿತು ಪ್ರಶ್ನಿಸಿದಾಗ ಹಲ್ಲೆ ನಡೆಸುವ ಬೆದರಿಕೆ ಹಾಕಲಾಗುತ್ತಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ಈ ಆರೋಪಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಬೇಕಿದೆ.

ವಸತಿ ನಿಲಯಗಳಲ್ಲಿ ಕಳಪೆ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆಗಳ ಬಳಿಕ ಜಿಪಂ ವತಿಯಿಂದ ನೈರ್ಮಲ್ಯಕ್ಕೆ ಒತ್ತು ನೀಡುವ ನಿರ್ಮಲ ನಿಲಯ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಸಮಾಜ ಕಲ್ಯಾಣ ಇಲಾಖೆ ಹಾಗೂ ಶಿಕ್ಷಣ ಇಲಾಖೆಯಡಿ ನಿರ್ವಹಣೆಯಾಗುವ ವಸತಿ ನಿಲಯಗಳು, ವಸತಿ ಶಾಲೆಗಳು ಮತ್ತು ಆಶ್ರಮ ಶಾಲೆಗಳಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡುವುದರ ಜತೆಗೆ ವಿದ್ಯಾರ್ಥಿಗಳಿಗೆ ಶುಚಿ-ರುಚಿಯಾದ ಆಹಾರ ಒದಗಿಸುವ ಉದ್ದೇಶದಿಂದ ಸೆಪ್ಟೆಂಬರ್ 15ರಿಂದ 30ರವರೆಗೆ ‘ನಿರ್ಮಲ ನಿಲಯ ಅಭಿಯಾನ’ ನಡೆಸಲಾಗಿತ್ತು. ಅಭಿಯಾನದ ಭಾಗವಾಗಿ ಅಧಿಕಾರಿಗಳ ತಂಡ ವಸತಿ

ನಿಲಯಕ್ಕೆ ಭೇಟಿ ನೀಡಿದ್ದರೂ, ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದಿಲ್ಲ. ಬದಲಾಗಿ, ಅಡುಗೆ ಕೋಣೆಯ ಪರಿಶೀಲನೆಗೆ ಮಾತ್ರ ಭೇಟಿ ಸೀಮಿತವಾಗಿತ್ತು ಎಂದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಭಿಯಾನದ ಉದ್ದೇಶಕ್ಕೆ ತಕ್ಕಂತೆ ಪರಿಶೀಲನೆ ನಡೆದಿದೆಯೇ ಎಂಬ ಪ್ರಶ್ನೆ ಇದೀಗ ಮೂಡಿದೆ.

ವಸತಿ ನಿಲಯದ ನಿರ್ವಹಣೆ ಹಾಗೂ ಬಿಲ್ ಪಾವತಿ ವಿಚಾರದಲ್ಲೂ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಸುಮಾರು 400 ವಿದ್ಯಾರ್ಥಿಗಳಿರುವ ವಸತಿ ನಿಲಯಕ್ಕೆ ಸಂಬಂಧಿಸಿದಂತೆ ಪ್ರತಿ ತಿಂಗಳು ಬಿಲ್ ಗಳು ಮಂಜೂರಾಗುತ್ತವೆ. ಆದರೆ, ವಸತಿ ನಿಲಯಕ್ಕೆ ಭೇಟಿ ನೀಡಿದಾಗ ಸಾಮಾನ್ಯವಾಗಿ 250ರಿಂದ 300 ವಿದ್ಯಾರ್ಥಿಗಳು ಮಾತ್ರ ಕಂಡುಬರುತ್ತಾರೆ ಎಂದು ಆರೋಪಿಸಲಾಗಿದೆ.

ವಿದ್ಯಾರ್ಥಿಗಳ ಹಾಜರಾತಿ ಹಾಗೂ ನಿರ್ವಹಣಾ ವೆಚ್ಚದ ಲೆಕ್ಕಾಚಾರದಲ್ಲಿ ವ್ಯತ್ಯಾಸವಿದೆ ಎಂಬ ಆರೋಪಗಳ ಕುರಿತು ಸೂಕ್ತ ತನಿಖೆ ನಡೆಸಬೇಕಿದೆ. ಈ ವಿಚಾರ ಹಲವು ಬಾರಿ ಬೆಳಕಿಗೆ ಬಂದಿದ್ದರೂ ಯಾರ ವಿರುದ್ಧವೂ ಕ್ರಮ ಕೈಗೊಂಡಿಲ್ಲ ಎಂದು ದೂರಲಾಗಿದೆ. ಬಿಲ ಗಳ ಪಾವತಿ, ವಿದ್ಯಾರ್ಥಿಗಳ ನೈಜ ಹಾಜರಾತಿ ಹಾಗೂ ವಸತಿ ನಿಲಯದ ನಿರ್ವಹಣಾ ವೆಚ್ಚದ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಸ್ಪಷ್ಟನೆ ನೀಡಬೇಕಿದೆ.

share
ಬಾವಸಲಿ, ರಾಯಚೂರು
ಬಾವಸಲಿ, ರಾಯಚೂರು
Next Story
X