Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕುಡುಕರ ಅಡ್ಡೆಯಾದ ಕುದ್ರಿಮೋತಿ ಬಸ್...

ಕುಡುಕರ ಅಡ್ಡೆಯಾದ ಕುದ್ರಿಮೋತಿ ಬಸ್ ತಂಗುದಾಣ

ಬಿಸಿಲು-ಮಳೆಯಲ್ಲಿ ರಸ್ತೆ ಬದಿಯಲ್ಲೇ ಕಾಯುವ ಜನರು

ಭೀಮಾಶಂಕರ ಪಾಣೇಗಾಂವಭೀಮಾಶಂಕರ ಪಾಣೇಗಾಂವ15 Oct 2026 3:39 PM IST
share
ಕುಡುಕರ ಅಡ್ಡೆಯಾದ ಕುದ್ರಿಮೋತಿ ಬಸ್ ತಂಗುದಾಣ

ಕುಕನೂರು: ತಾಲೂಕಿನ ಕುದ್ರಿಮೋತಿ ಗ್ರಾಮದ ಬಸ್ ನಿಲ್ದಾಣವು ನಿರ್ವಹಣೆಯ ಕೊರತೆ ಹಾಗೂ ಮೂಲಸೌಕರ್ಯಗಳ ಅಭಾವದಿಂದ ಸಮಸ್ಯೆಗಳ ತಾಣವಾಗಿ ಮಾರ್ಪಟ್ಟಿದೆ. ಸುಮಾರು 20 ವರ್ಷಗಳ ಹಿಂದೆ ನಿರ್ಮಿಸಲಾದ ಬಸ್ ನಿಲ್ದಾಣದ ಕಟ್ಟಡ ಶಿಥಿಲಗೊಂಡಿದ್ದು, ಪ್ರಯಾಣಿಕರು ಬಿಸಿಲು, ಮಳೆ ಹಾಗೂ ಧೂಳಿನ ನಡುವೆ ರಸ್ತೆ ಬದಿಯಲ್ಲೇ ಬಸ್‌ಗಾಗಿ ಕಾಯುವ ದುಃಸ್ಥಿತಿ ನಿರ್ಮಾಣವಾಗಿದೆ.

ಕೊಪ್ಪಳ-ಕುಷ್ಟಗಿ ಮುಖ್ಯರಸ್ತೆಗೆ ಹೊಂದಿಕೊಂಡಿರುವ ಈ ಬಸ್ ನಿಲ್ದಾಣದ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಮೇಲ್ಚಾವಣಿಯ ಕೆಲವು ಭಾಗಗಳು ಹಾನಿಗೊಳಗಾಗಿವೆ. ಕಟ್ಟಡದ ದುಸ್ಥಿತಿಯಿಂದಾಗಿ ಯಾವಾಗ ಕುಸಿಯುತ್ತದೆಯೋ ಎಂಬ ಆತಂಕ ಪ್ರಯಾಣಿಕರು ಹಾಗೂ ಗ್ರಾಮಸ್ಥರನ್ನು ಕಾಡುತ್ತಿದೆ. ಗಂಟೆಗಟ್ಟಲೆ ಬಸ್‌ಗಾಗಿ ಕಾಯುವ ಪ್ರಯಾಣಿಕರಿಗೆ ಕುಳಿತುಕೊಳ್ಳಲು ಸಮರ್ಪಕ ಆಸನಗಳಿಲ್ಲ. ಬಿಸಿಲು ಮತ್ತು ಮಳೆಯಿಂದ ರಕ್ಷಣೆ ಪಡೆಯಲು ಸೂಕ್ತ ವ್ಯವಸ್ಥೆಯೂ ಇಲ್ಲದಿರುವುದರಿಂದ ಮಕ್ಕಳು, ಮಹಿಳೆಯರು, ವೃದ್ಧರು ಹಾಗೂ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಹೋಟೆಲ್‌ಗಳೇ ಪ್ರಯಾಣಿಕರಿಗೆ ಆಸರೆ!

ಬಸ್ ನಿಲ್ದಾಣದಲ್ಲಿ ಸಮರ್ಪಕ ತಂಗುದಾಣದ ವ್ಯವಸ್ಥೆ ಇಲ್ಲದಿರುವುದರಿಂದ ಮಳೆ ಬಂದಾಗ ಹಾಗೂ ಬಿಸಿಲು ಹೆಚ್ಚಾದಾಗ ಪ್ರಯಾಣಿಕರು ಸಮೀಪದ ಹೋಟೆಲ್‌ಗಳ ಮುಂದೆ ಆಶ್ರಯ ಪಡೆಯಬೇಕಾಗಿದೆ. ವಾಹನಗಳ ನಿರಂತರ ಸಂಚಾರದಿಂದ ಏಳುವ ಧೂಳಿನ ನಡುವೆ ರಸ್ತೆ ಬದಿಯಲ್ಲಿ ನಿಂತು ಬಸ್‌ಗಾಗಿ ಕಾಯುವುದು ಅನಿವಾರ್ಯವಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಲಾದ ನಿಲ್ದಾಣವೇ ಪ್ರಯಾಣಿಕರಿಗೆ ಸಮರ್ಪಕ ಆಸರೆ ನೀಡದಂತಾಗಿದೆ.

ಅಂಗಡಿಗಳ ನಡುವೆ ಮರೆಯಾದ ಬಸ್ ನಿಲ್ದಾಣ

ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಅಂಗಡಿಗಳಿಂದಾಗಿ ನಿಲ್ದಾಣವೇ ಕಾಣದಂತಾಗಿದೆ ಎಂಬುದು ಗ್ರಾಮಸ್ಥರ ಆರೋಪ. ಇದರಿಂದ ಪ್ರಯಾಣಿಕರು ನಿಲ್ದಾಣದ ಒಳಗೆ ಕಾಯುವ ಬದಲು ಮುಖ್ಯರಸ್ತೆಯ ಬದಿಯಲ್ಲಿ ನಿಲ್ಲುತ್ತಿದ್ದಾರೆ. ವಾಹನ ಸಂಚಾರ ಹೆಚ್ಚಿರುವ ರಸ್ತೆಯಲ್ಲಿ ಬಸ್‌ಗಾಗಿ ಕಾಯುವುದು ಅಪಘಾತದ ಆತಂಕವನ್ನೂ ಹೆಚ್ಚಿಸಿದೆ. ಮುಂಭಾಗದಲ್ಲಿರುವ ಅಡೆತಡೆಗಳನ್ನು ತೆರವುಗೊಳಿಸಿ, ಪ್ರಯಾಣಿಕರು ಸುರಕ್ಷಿತವಾಗಿ ಕಾಯಲು ಅನುಕೂಲ ಕಲ್ಪಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಕುಡುಕರ ಅಡ್ಡೆಯಾದ ತಂಗುದಾಣ!

ಪ್ರಯಾಣಿಕರು ಬಳಸಬೇಕಾದ ಬಸ್ ನಿಲ್ದಾಣದ ಆವರಣ ಮದ್ಯ ಸೇವನೆ ಹಾಗೂ ಅಶುಚಿತ್ವದ ಸಮಸ್ಯೆಯಿಂದಲೂ ಬಳಲುತ್ತಿದೆ. ಕೆಲವರು ನಿಲ್ದಾಣದೊಳಗೆ ಮದ್ಯ ಸೇವಿಸುವುದಲ್ಲದೆ, ಕುಡಿದ ಮತ್ತಿನಲ್ಲಿ ಅಲ್ಲಿಯೇ ಮಲಗುತ್ತಾರೆ ಎಂಬ ಆರೋಪ ಕೇಳಿಬಂದಿದೆ. ನಿಲ್ದಾಣದ ಹಿಂಭಾಗದಲ್ಲಿರುವ ಬಾರ್‌ನಿಂದ ಮದ್ಯ ತಂದು ಆವರಣದಲ್ಲೇ ಸೇವಿಸಲಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

ನಿಲ್ದಾಣದ ಸುತ್ತಮುತ್ತ ಖಾಲಿ ಮದ್ಯದ ಬಾಟಲಿಗಳು, ಸಿಗರೇಟ್ ತುಂಡುಗಳು ಹಾಗೂ ಇತರ ತ್ಯಾಜ್ಯಗಳು ಬಿದ್ದಿರುವುದು ಕಂಡುಬರುತ್ತಿದೆ. ಇದರಿಂದ ಪ್ರಯಾಣಿಕರು ಮುಜುಗರ ಅನುಭವಿಸುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ ಸೇರಿದಂತೆ ಅಹಿತಕರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು. ನಿಲ್ದಾಣದ ಸ್ವಚ್ಛತೆ ಕಾಪಾಡುವುದರ ಜತೆಗೆ ಪ್ರಯಾಣಿಕರಿಗೆ ಸುರಕ್ಷಿತ ವಾತಾವರಣ ಕಲ್ಪಿಸಬೇಕು ಎಂಬುದು ಗ್ರಾಮಸ್ಥರ ಆಗ್ರಹವಾಗಿದೆ.

ಒಂದೆಡೆ ಬಸ್ ನಿಲ್ದಾಣದ ಕಟ್ಟಡ ಕುಸಿಯುವ ಭೀತಿಯಿದೆ. ಮತ್ತೊಂದೆಡೆ ಕುಡುಕರ ಕಾಟವೂ ಇದೆ. ಅಕ್ಕಪಕ್ಕದ ಅಂಗಡಿಗಳ ನಡುವೆ ಬಸ್ ನಿಲ್ದಾಣವೇ ಕಾಣುವುದಿಲ್ಲ. ಬಿಸಿಲು, ಮಳೆ, ಚಳಿ ಹಾಗೂ ಧೂಳಿನಲ್ಲೇ ರಸ್ತೆ ಬದಿಯಲ್ಲಿ ಬಸ್ಗಾಗಿ ಕಾಯಬೇಕಾಗಿದೆ. ನಮ್ಮ ಸಮಸ್ಯೆ ಕೇಳುವವರು ಯಾರು? ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕೂಡಲೇ ಹೊಸ ಬಸ್ ನಿಲ್ದಾಣ ನಿರ್ಮಿಸಿ, ಪ್ರಯಾಣಿಕರ ಸುರಕ್ಷತೆಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಪ್ರಯಾಣಿಕರಾದ ಸಲೀಮ್ ಜಾನ್, ಶಶಿಕಲಾ, ನಾಗರಾಜ ಮತ್ತು ಫಕೀರಪ್ಪ ಆಗ್ರಹಿಸಿದ್ದಾರೆ.

share
ಭೀಮಾಶಂಕರ ಪಾಣೇಗಾಂವ
ಭೀಮಾಶಂಕರ ಪಾಣೇಗಾಂವ
Next Story
X