Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಬತ್ತಿದ ಮಾಂಜ್ರಾ ನದಿ: ಸಂಕಷ್ಟದಲ್ಲಿ...

ಬತ್ತಿದ ಮಾಂಜ್ರಾ ನದಿ: ಸಂಕಷ್ಟದಲ್ಲಿ ರೈತರು, ಜಾನುವಾರು

ಗಣೇಶ ಮೂರ್ತಿ ವಿಸರ್ಜನೆಗೂ ತತ್ವಾರ: ದಡದಲ್ಲೇ ಉಳಿದ ವಿಗ್ರಹಗಳು

ವೀರಶೆಟ್ಟಿ ಕೆ. ಕರಕಲ್ಲೆವೀರಶೆಟ್ಟಿ ಕೆ. ಕರಕಲ್ಲೆ22 Oct 2026 3:03 PM IST
share
ಬತ್ತಿದ ಮಾಂಜ್ರಾ ನದಿ: ಸಂಕಷ್ಟದಲ್ಲಿ ರೈತರು, ಜಾನುವಾರು

ಹೂಲಸೂರು: ಬರದಿಂದ ನೀರಿಲ್ಲದೆ ಜಿಲ್ಲೆಯ ಪ್ರಮುಖ ನದಿ ಮಾಂಜ್ರಾ ಸಂಪೂರ್ಣವಾಗಿ ಬತ್ತಿ ಹೋಗಿದ್ದು, ನದಿ ತೀರದ ರೈತರು, ಜಾನುವಾರುಗಳು ಹಾಗೂ ಗ್ರಾಮೀಣ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನದಿಯ ನೀರನ್ನು ಆಶ್ರಯಿಸಿ ಬೆಳೆದ ಕಬ್ಬು ಸೇರಿದಂತೆ ವಿವಿಧ ಬೆಳೆಗಳು ಒಣಗುತ್ತಿದ್ದು, ರೈತರು ನಷ್ಟದ ಭೀತಿ ಎದುರಿಸುತ್ತಿದ್ದಾರೆ.

ಮಾಂಜ್ರಾ ನದಿ ನೀರನ್ನು ಅವಲಂಬಿಸಿ ಈ ಭಾಗದ ರೈತರು ಪ್ರತಿ ವರ್ಷ ಕಬ್ಬು ಸೇರಿದಂತೆ ವಿವಿಧ ನೀರಾವರಿ ಬೆಳೆಗಳನ್ನು ಬೆಳೆಯುತ್ತಾರೆ. ಆದರೆ, ಮಳೆ ಕೊರತೆ ಹಾಗೂ ನದಿಯಲ್ಲಿ ನೀರಿನ ಹರಿವು ಸ್ಥಗಿತಗೊಂಡಿರುವುದರಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ಹೊಡೆತ ಬಿದ್ದಿದೆ. ಬೆಳೆ ಉಳಿಸಿಕೊಳ್ಳಲು ನೀರಿನ ವ್ಯವಸ್ಥೆಯಿಲ್ಲದೆ ರೈತರು ಕಂಗಾಲಾಗಿದ್ದಾರೆ.

ಈ ವರ್ಷದ ಹಿಂಗಾರು ಹಂಗಾಮಿನಲ್ಲಿ ಜೋಳ, ಕಡಲೆ, ಕುಸುಬೆ ಸೇರಿದಂತೆ ವಿವಿಧ ಬೆಳೆಗಳನ್ನು ಬಿತ್ತನೆ ಮಾಡಲು ರೈತರು ಸಿದ್ಧತೆ ನಡೆಸುತ್ತಿದ್ದಾರೆ. ಆದರೆ, ಮಾಂಜ್ರಾ ನದಿಯಲ್ಲಿ ನೀರಿನ ಲಭ್ಯತೆ ಇಲ್ಲದಿರುವುದು ರೈತರ ಚಿಂತೆಯನ್ನು ಹೆಚ್ಚಿಸಿದೆ. ಈಗಾಗಲೇ ಮಳೆ ಕೊರತೆಯಿಂದ ಕಂಗೆಟ್ಟಿರುವ ರೈತರಿಗೆ ನದಿ ಬತ್ತಿರುವುದು ಮತ್ತಷ್ಟು ಸಂಕಷ್ಟ ತಂದೊಡ್ಡಿದೆ.

ಮಾಂಜ್ರಾ ನದಿಯು ಮಾಹಾರಾಷ್ಟ್ರ ರಾಜ್ಯ ಹಾಗೂ ಕಾರಂಜಾ ಜಲಾಶಯದ ಮೆಲೇಯೇ ಅವಲಂಬಿತವಾಗಿದೆ. ಬರಗಾಲ ಸಂಭವಿಸಿದ್ದರಿಂದ ಮಹಾರಾಷ್ಟ್ರ ರಾಜ್ಯದಿಂದಲೂ ನೀರು ಹರಿಸುತ್ತಿಲ್ಲ, ಹಾಗೆಯೇ ಕಾರಂಜಾದಿಂದಲೂ ನೀರು ಬಿಡುಗಡೆ ಮಾಡುತ್ತಿಲ್ಲ. ಹಾಗೆಯೇ ಕೊಂಗಳಿ ಆಣೆಕಟ್ಟಿನಲ್ಲಿ ನೀರು ನಿಲ್ಲದ ಕಾರಣದಿಂದ ಮಾಂಜ್ರಾ ನದಿ ಸಂಪೂರ್ಣವಾಗಿ ಬತ್ತಿ ಹೋಗಿದೆ. ಮಹಾರಾಷ್ಟ್ರದ ಧನೆಗಾಂವ್ ಜಲಾಶಯ ಅಥವಾ ಕಾರಂಜಾ ಜಲಾಶಯದಿಂದ ನೀರು ಹರಿಸಿದರೆ ಮಾಂಜ್ರಾ ನದಿಯ ದಡದಲ್ಲಿರುವ ರೈತರಿಗೆ ಸಹಾಯವಾಗಬಹುದಾಗಿದೆ.

ನೀರಿಲ್ಲದ ಕಾರಣ ಗಣೇಶನಿಗೂ ಸಮಸ್ಯೆ! : ಪ್ರತಿ ವರ್ಷ ಮಾಂಜ್ರಾ ನದಿ ತೀರದ ಗ್ರಾಮಗಳ ಜನರು ಗಣೇಶ ಚತುರ್ಥಿಯ ಸಂದರ್ಭದಲ್ಲಿ ನದಿಯ ನೀರಿನಲ್ಲೇ ಗಣೇಶ ಮೂರ್ತಿಗಳನ್ನು ವಿಸರ್ಜಿಸಲಾಗುತ್ತಿತ್ತು. ಆದರೆ, ಈ ವರ್ಷ ನದಿಯಲ್ಲಿ ನೀರಿಲ್ಲದ ಕಾರಣ ಗಣೇಶ ಮೂರ್ತಿಗಳನ್ನು ವಿಸರ್ಜಿಸಲು ಸಾಧ್ಯವಾಗದೆ ನದಿ ದಡದಲ್ಲೇ ಇಟ್ಟಿದ್ದಾರೆ. ನದಿ ತೀರದಲ್ಲಿ ವಿಸರ್ಜನೆಗಾಗಿ ತಂದ ಗಣೇಶ ಮೂರ್ತಿಗಳು ನೀರಿಲ್ಲದೆ ದಡದಲ್ಲೇ ಉಳಿದಿವೆ. ಕೆಲವೊಬ್ಬರು ಗಣೇಶ್ ಮೂರ್ತಿಗಳು ತಮ್ಮ ಊರಲ್ಲಿರುವ ಮಂದಿರದ ಸಮೀಪವೇ ಇಟ್ಟು ಹೋಗಿದ್ದಾರೆ. ಇದರಿಂದಾಗಿ ಬರಗಾಲದ ಬಿಸಿ ಗಣೇಶ ಮೂರ್ತಿಗೂ ತಟ್ಟಿದೆ.

ಜಾನುವಾರುಗಳಿಗೂ ಸಂಕಷ್ಟ: ಬತ್ತಿದ ಮಾಂಜ್ರಾದಿಂದಾಗಿ ಜಾನುವಾರುಗಳೂ ಕೂಡ ಸಂಕಷ್ಟಕ್ಕೆ ಸಿಲುಕಿದ್ದು, ಮೇವು ನೀರಿನ ಸಮಸ್ಯೆ ಎದುರಿಸುತ್ತಿವೆ ಎಂದು ರೈತರು ತಮ್ಮ ಗೋಳನ್ನು ತೋಡಿಕೊಂಡಿದ್ದು, ನೀರಿಲ್ಲದೆ ವನ್ಯ ಜೀವಿಗಳಿಗೂ ಸಂಕಷ್ಟ ಎದುರಾಗಿದೆ.

ಒಂದೆಡೆ ಕಬ್ಬು ಬೆಳೆ ಒಣಗುತ್ತಿದ್ದರೆ, ಮತ್ತೊಂದೆಡೆ ಹಿಂಗಾರು ಬಿತ್ತನೆಗೂ ನೀರಿನ ಕೊರತೆ ಎದುರಾಗಿದೆ. ಮಾಂಜ್ರಾ ನದಿ ಸಂಪೂರ್ಣ ಬತ್ತಿರುವುದರಿಂದ ಕೃಷಿ ಹಾಗೂ ಗ್ರಾಮೀಣ ಬದುಕಿನ ಮೇಲೆ ಪರಿಣಾಮ ಬೀರುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಮಾಂಜ್ರಾ ನದಿಯ ಪರಿಸ್ಥಿತಿಯನ್ನು ಪರಿಶೀಲಿಸಿ, ರೈತರ ಬೆಳೆಗಳನ್ನು ಉಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ಮಾಂಜ್ರಾ ನದಿಯಲ್ಲಿ ಹನಿ ನೀರಿಲ್ಲದೆ ಬರಿದಾಗಿದ್ದು, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ರೈತರು ಬೆಳೆದ ಬೆಳೆಗಳಿಗೆ ನೀರು ಹಾಯಿಸಲು ಸಾಧ್ಯವಾಗುತ್ತಿಲ್ಲ. ಕೂಡಲೇ ಎಲ್ಲ ಗ್ರಾಮಗಳಲ್ಲಿ ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ, ರೈತರಿಗೆ ಬರ ಪರಿಹಾರದ ಹಣ ಬಿಡುಗಡೆ ಮಾಡಬೇಕು.

-ಸುನಿಲ್ ಭುಜಂಗೆ, ಹುಲಸೂರಿನ ರೈತ.

ಮಾಂಜ್ರಾ ನದಿ ಸಂಪೂರ್ಣ ಬತ್ತಿಹೋಗಿರುವುದರಿಂದ ಜಾನುವಾರುಗಳಷ್ಟೇ ಅಲ್ಲ, ವನ್ಯಜೀವಿಗಳಿಗೂ ಕುಡಿಯುವ ನೀರು ಸಿಗದಂತಾಗಿದೆ. ಕಾರಂಜಾ ಜಲಾಶಯದಿಂದ ತಕ್ಷಣ ನೀರು ಬಿಡುಗಡೆ ಮಾಡಿದರೆ ಜಾನುವಾರುಗಳ ನೀರಿನ ಬವಣೆ ಸ್ವಲ್ಪಮಟ್ಟಿಗಾದರೂ ನೀಗಲಿದೆ. ಕೊಂಗಳಿ ಏತ ನೀರಾವರಿ ಯೋಜನೆ ಸಮರ್ಪಕವಾಗಿ ಕಾರ್ಯನಿರ್ವಹಿಸದ ಕಾರಣ ನದಿಯಲ್ಲಿ ನೀರು ನಿಲ್ಲದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆಯೂ ಕೈಕೊಟ್ಟಿರುವುದರಿಂದ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುವ ಆತಂಕವಿದೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಂಡು ನದಿಗೆ ನೀರು ಹರಿಸಲು ಕ್ರಮ ಕೈಗೊಳ್ಳಬೇಕು.

-ರಾಜಕುಮಾರ್ ಪವಾರ್, ರೈತ, ಸಾಯಗಾಂವ.

share
ವೀರಶೆಟ್ಟಿ ಕೆ. ಕರಕಲ್ಲೆ
ವೀರಶೆಟ್ಟಿ ಕೆ. ಕರಕಲ್ಲೆ
Next Story
X