Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸಮರ್ಪಕ ಅನುಷ್ಠಾನವಾಗದ ‘ಕನ್ನಡ ಕಡ್ಡಾಯ’...

ಸಮರ್ಪಕ ಅನುಷ್ಠಾನವಾಗದ ‘ಕನ್ನಡ ಕಡ್ಡಾಯ’ ಆದೇಶ

ಇಲಾಖೆಯ ಸಚಿವರ ತವರು ಜಿಲ್ಲೆಯಲ್ಲೇ ನಿಯಮ ಉಲ್ಲಂಘನೆ

ಎಂ.ಡಿ ಅಖೀಲ್ ಉಡೇವುಎಂ.ಡಿ ಅಖೀಲ್ ಉಡೇವು1 Nov 2026 3:09 PM IST
share
ಸಮರ್ಪಕ ಅನುಷ್ಠಾನವಾಗದ ‘ಕನ್ನಡ ಕಡ್ಡಾಯ’ ಆದೇಶ

ಕೊಪ್ಪಳ : ರಾಜ್ಯದ ಸರಕಾರಿ, ಸ್ವಾಯತ್ತ ಹಾಗೂ ಖಾಸಗಿ ಸಂಸ್ಥೆಗಳು ತಮ್ಮ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸಬೇಕೆಂಬ ರಾಜ್ಯ ಸರಕಾರದ ಆದೇಶ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ನಗರದ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿನ ಅನೇಕ ಮಾಲ್‌ಗಳು, ಅಂಗಡಿಗಳು, ವಾಣಿಜ್ಯ ಸಂಕೀರ್ಣಗಳು ಹಾಗೂ ಖಾಸಗಿ ಸಂಸ್ಥೆಗಳು ನಿಯಮ ಉಲ್ಲಂಘನೆಯ ಆರೋಪ ಎದುರಿಸುತ್ತಿವೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ತವರು ಜಿಲ್ಲೆ ಕೊಪ್ಪಳದಲ್ಲೇ ಈ ಪರಿಸ್ಥಿತಿ ಇರುವುದಕ್ಕೆ ಸ್ವಾಭಿಮಾನಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ-2024ರ ಕಲಂ 17ರ ಉಪಕಲಂ (6)ರ ಅನ್ವಯ ರಾಜ್ಯದಲ್ಲಿರುವ ವಿವಿಧ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆಗೆ ಆದ್ಯತೆ ನೀಡುವುದು ಕಡ್ಡಾಯವಾಗಿದೆ. ಆದರೆ ಕೊಪ್ಪಳ ನಗರದ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ಆಂಗ್ಲ ಭಾಷೆಯಲ್ಲಿಯೇ ದೊಡ್ಡ ಅಕ್ಷರಗಳಲ್ಲಿ ನಾಮಫಲಕಗಳನ್ನು ಅಳವಡಿಸಲಾಗಿದ್ದು, ಕನ್ನಡ ಭಾಷೆಯನ್ನು ಎರಡನೇ ಭಾಷೆಯಾಗಿ ಬಳಸಲಾಗಿದೆ.

ಇದು ಜನರು ಮತ್ತು ಕನ್ನಡ ಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಪ್ರಶ್ನೆ

ಕನ್ನಡ ನಾಮಫಲಕ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕಾದ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂಬ ಆರೋಪವೂ ಕೇಳಿಬರುತ್ತಿದೆ. ನಿಯಮ ಉಲ್ಲಂಘಿಸುವ ಸಂಸ್ಥೆಗಳಿಗೆ ಎಚ್ಚರಿಕೆ ನೀಡುವುದು, ಅಗತ್ಯ ಕ್ರಮ ಕೈಗೊಳ್ಳುವುದು ಹಾಗೂ ನಿಯಮ ಪಾಲನೆಯಾಗುವಂತೆ ನೋಡಿಕೊಳ್ಳುತ್ತಿಲ್ಲ ಎಂಬುದು ಸಾರ್ವಜನಿಕರ ಆಕ್ಷೇಪವಾಗಿದೆ.

ಕೇವಲ ಆದೇಶವಲ್ಲ. ಅನುಷ್ಠಾನವೂ ಆಗಲಿ

ಕನ್ನಡ ಭಾಷೆಯ ಬಳಕೆ ಉತ್ತೇಜಿಸಲು ಸರಕಾರ ಕಾಯ್ದೆ ಮತ್ತು ಆದೇಶಗಳನ್ನು ಜಾರಿಗೊಳಿಸುವುದಷ್ಟೇ ಸಾಲದು. ಅವುಗಳ ಅನುಷ್ಠಾನಕ್ಕೆ ಸ್ಥಳೀಯ ಆಡಳಿತ ವ್ಯವಸ್ಥೆಯೂ ಬದ್ಧವಾಗಿರಬೇಕು. ರಾಜ್ಯದ್ಯಂತ ವಿಶೇಷ ಪರಿಶೀಲನಾ ಅಭಿಯಾನ ನಡೆಸಿ, ನಿಯಮ ಉಲ್ಲಂಘಿಸಿರುವ ಸಂಸ್ಥೆಗಳಿಗೆ ಕಾನೂನು ಕ್ರಮ ಕೈಗೊಳ್ಳಬೇಕು ಎಂಬುದು ಕನ್ನಡಪರರ ಆಗ್ರಹವಾಗಿದೆ.

ಕನ್ನಡಿಗರ ನೆಲದಲ್ಲಿ ಕನ್ನಡಕ್ಕೆ ಗೌರವ ದೊರೆಯಲು ಇನ್ನೆಷ್ಟು ದಿನ ಕಾಯಬೇಕು? ಎಂಬ ಪ್ರಶ್ನೆಗಳು ಇದೀಗ ಸಾರ್ವಜನಿಕ ಮತ್ತು ಕನ್ನಡಪರ ಸಂಘಟನೆಗಳ ಚರ್ಚೆಗೆ ಗ್ರಾಸವಾಗಿವೆ.

ಬ್ಯಾಂಕ್‌ಗಳಲ್ಲಿ ಕನ್ನಡ ಸೇವೆ ಮರೀಚಿಕೆ!

ನಾಮಫಲಕಗಳ ಸಮಸ್ಯೆಯಷ್ಟೇ ಅಲ್ಲದೆ, ಜಿಲ್ಲೆಯ ಕೆಲವು ಬ್ಯಾಂಕ್‌ಗಳಲ್ಲಿಯೂ ಕನ್ನಡ ಭಾಷೆಯ ಬಳಕೆಗೆ ನಿರೀಕ್ಷಿತ ಆದ್ಯತೆ ದೊರೆಯುತ್ತಿಲ್ಲ. ರಶೀದಿಗಳು, ಗ್ರಾಹಕರಿಗೆ ಒದಗಿಸುವ ಮಾಹಿತಿ ಹಾಗೂ ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಗಳಲ್ಲಿ ಕನ್ನಡದ ಬಳಕೆ ಸಮರ್ಪಕವಾಗಿಲ್ಲ. ಸಿಬ್ಬಂದಿಗೆ ಕನ್ನಡ ಮಾತನಾಡಲು ಬರದಿರುವುದರಿಂದ ಗ್ರಾಮೀಣ ಗ್ರಾಹಕರು ಬ್ಯಾಂಕಿಂಗ್ ವ್ಯವಹಾರಗಳನ್ನು ನಡೆಸಲು ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಆಂಗ್ಲ ಮಾಧ್ಯಮ ಶಾಲೆಗಳಿಗೂ ಕನ್ನಡ ನಾಮಫಲಕ ಕಡ್ಡಾಯವಾಗಲಿ

ಜಿಲ್ಲೆಯಲ್ಲಿರುವ ಆಂಗ್ಲ ಮಾಧ್ಯಮ ಶಾಲೆಗಳು ಸೇರಿದಂತೆ ಎಲ್ಲ ಶೈಕ್ಷಣಿಕ ಸಂಸ್ಥೆಗಳ ನಾಮಫಲಕಗಳಲ್ಲಿಯೂ ಕನ್ನಡಕ್ಕೆ ಸೂಕ್ತ ಸ್ಥಾನಮಾನ ನೀಡುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಬೇಕು. ಶಿಕ್ಷಣದ ಮಾಧ್ಯಮ ಯಾವುದೇ ಭಾಷೆಯಾಗಿದ್ದರೂ ಕನ್ನಡ ನೆಲದಲ್ಲಿ ಕನ್ನಡಕ್ಕೆ ಆದ್ಯತೆ ದೊರೆಯಬೇಕು ಎಂಬುದು ಸಾರ್ವಜನಿಕರ ಆಶಯವಾಗಿದೆ.

ಈಗಾಗಲೇ ಬೆಂಗಳೂರಿನಲ್ಲಿ ಸಮಿತಿ ರಚಿಸಿ ಶೇ.60 ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಆದೇಶ ಅನುಷ್ಠಾನ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಮಟ್ಟದ ಸಮಿತಿ ರಚಿಸಿ ಅನುಷ್ಠಾನ ಮಾಡಲಾಗುವುದು.

<ಶಿವರಾಜ್ ತಂಗಡಗಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ

share
ಎಂ.ಡಿ ಅಖೀಲ್ ಉಡೇವು
ಎಂ.ಡಿ ಅಖೀಲ್ ಉಡೇವು
Next Story
X