Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ದೀಪಾವಳಿಯನ್ನೂ ಕತ್ತಲೆಯಲ್ಲಿ ಕಳೆದ...

ದೀಪಾವಳಿಯನ್ನೂ ಕತ್ತಲೆಯಲ್ಲಿ ಕಳೆದ ಸುರಪುರ ನಗರಸಭೆ ಹೊರಗುತ್ತಿಗೆ ನೌಕರರು

ಹತ್ತು ತಿಂಗಳ ವೇತನ ಬಾಕಿ: ಕಸ ಸಂಗ್ರಹಣೆ ಸ್ಥಗಿತ; ಹಲವೆಡೆ ಕಸದ ರಾಶಿ

ಎನ್.ಆರ್.ಕುಂಬಾರಎನ್.ಆರ್.ಕುಂಬಾರ13 Nov 2026 3:14 PM IST
share
ದೀಪಾವಳಿಯನ್ನೂ ಕತ್ತಲೆಯಲ್ಲಿ ಕಳೆದ ಸುರಪುರ ನಗರಸಭೆ ಹೊರಗುತ್ತಿಗೆ ನೌಕರರು

ಸುರಪುರ, ನ.12: ದೇಶವಿಡೀ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಲಾಗಿದೆ. ಆದರೆ, ಸುರಪುರ ನಗರವನ್ನು ಸ್ವಚ್ಛದಿಂದಿಡುವ ನೌಕರರ ಕುಟುಂಬಗಳು ಈ ಬಾರಿಯ ದೀಪಾವಳಿಯನ್ನು ‘ಕತ್ತಲೆ’ಯಲ್ಲೇ ಕಳೆದಿವೆ. ದೀಪಾವಳಿ ಮಾತ್ರವಲ್ಲ, ದಸರಾ, ಗಣೇಶ ಚತುರ್ಥಿ ಸೇರಿದಂತೆ ಹಲವು ಪ್ರಮುಖ ಹಬ್ಬಗಳಲ್ಲೂ ಈ ಕುಟುಂಬಗಳ ಮುಖದಲ್ಲಿ ಸಂಭ್ರಮ ಮನೆ ಮಾಡಿರಲಿಲ್ಲ. ಕಾರಣ, ಕಳೆದ 10 ತಿಂಗಳಿನಿಂದ ದುಡಿಮೆಗೆ ಸರಿಯಾಗಿ ಸಂಬಳ ಪಾವತಿಯಾಗಿರಲಿಲ್ಲ.

ಸಂಬಳಕ್ಕೆ ಕಾದು ಹೈರಾಣಾಗಿರುವ ನಗರಸಭೆಯ ಹೊರಗುತ್ತಿಗೆ ಕಸ ಸಂಗ್ರಹಣೆ ವಾಹನಗಳ ಚಾಲಕರು ಹಾಗೂ ಲೋಡರ್‌ಗಳು ಕೆಲಸ ಸ್ಥಗಿತಗೊಳಿಸಿ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ. ಅದಾಗ್ಯೂ, ಅವರ ಸಮಸ್ಯೆ ಪರಿಹಾರ ಆಗುವ ಲಕ್ಷಣ ಕಾಣಿಸಿಕೊಂಡಿಲ್ಲ.

ಸಂಬಳ ಪಾವತಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ನೌಕರರು, ಸೇವೆಗೆ ಹಾಜರಾಗದ ಹಿನ್ನೆಲೆಯಲ್ಲಿ ಸುರಪುರ ನಗರ ಹಾಗೂ ರಂಗಂಪೇಟೆಯ ಹಲವು ಬಡಾವಣೆಗಳಲ್ಲಿ ಕಸದ ರಾಶಿ ಬಿದ್ದಿದ್ದು, ನಗರವಾಸಿಗಳು ದುರ್ವಾಸನೆಯಲ್ಲೇ ದೀಪಾವಳಿಯನ್ನೂ ಆಚರಿಸಿದ್ದಾರೆ.

ಕಳೆದ ತಿಂಗಳೂ ಸಂಬಳಕ್ಕಾಗಿ ಕೆಲಸ ಸ್ಥಗಿತಗೊಳಿಸಿ ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಗಿತ್ತು. ಆಗ ಬಾಕಿ ಸಂಬಳ ಪಾವತಿಸುವ ಭರವಸೆ ನೀಡಿದ್ದ ಪೌರಾಯುಕ್ತರು ಮತ್ತೆ ಕೆಲಸಕ್ಕೆ ಹಾಜರಾಗುವಂತೆ ಮನವಿ ಮಾಡಿದ್ದರು. ಅದರಂತೆ ಕೆಲಸಕ್ಕೆ ಮರಳಿದ್ದ ಕಾರ್ಮಿಕರಿಗೆ ಎರಡು ತಿಂಗಳ ಸಂಬಳ ಪಾವತಿಸಲಾಗಿತ್ತು. ಆದರೆ ಉಳಿದ 10 ತಿಂಗಳ ಬಾಕಿ ಸಂಬಳವನ್ನು ಈವರೆಗೂ ನೀಡಿಲ್ಲ ಎಂದು ಹೊರಗುತ್ತಿಗೆ ಪೌರಕಾರ್ಮಿಕ ವಾಹನ ಚಾಲಕರ ಸಂಘದ ಅಧ್ಯಕ್ಷ ಸತೀಶ ನಾಯಕ ತಿಳಿಸಿದ್ದಾರೆ.

10 ತಿಂಗಳಿನಿಂದ ಸಂಬಳವಿಲ್ಲದೆ ಕುಟುಂಬ ನಿರ್ವಹಣೆ ಕಷ್ಟವಾಗಿದೆ. ಮಕ್ಕಳ ಶಾಲಾ ಶುಲ್ಕ ಪಾವತಿಸಲು ಸಾಧ್ಯವಾಗುತ್ತಿಲ್ಲ. ಮನೆಗೆ ಅಗತ್ಯ ವಸ್ತುಗಳನ್ನು ಖರೀದಿಸಲೂ ಪರದಾಡುವಂತಾಗಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲೂ ಕುಟುಂಬದ ಸದಸ್ಯರು ಸಂಕಷ್ಟ ಅನುಭವಿಸುವಂತಾಗಿದೆ. ಹಬ್ಬವನ್ನೂ ನೆಮ್ಮದಿಯಿಂದ ಆಚರಿಸುವ ಸ್ಥಿತಿಯಲ್ಲಿರಲಿಲ್ಲ. ಅಧಿಕಾರಿಗಳು ನಮ್ಮ ಸಮಸ್ಯೆಯನ್ನು ಅರ್ಥಮಾಡಿಕೊಳ್ಳುತ್ತಿಲ್ಲ. ಕೆಲವು ದಿನಗಳಿಂದ ಕೆಲಸ ಸ್ಥಗಿತಗೊಳಿಸಿದ್ದರೂ ಬೇಡಿಕೆ ಈಡೇರಿಸಲು ಯಾರೂ ಮುಂದಾಗಿಲ್ಲ. ಕೂಡಲೇ ಬಾಕಿ ಇರುವ 10 ತಿಂಗಳ ಸಂಬಳ ಪಾವತಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಅಧಿಕಾರಿಗಳಿಗೆ ಒಂದೆರಡು ತಿಂಗಳು ಸಂಬಳ ವಿಳಂಬವಾದರೂ ಜೀವನ ನಿರ್ವಹಣೆ ಕಷ್ಟವಾಗುತ್ತದೆ. ಆದರೆ ನಮಗೆ 10 ತಿಂಗಳಿನಿಂದ ಸಂಬಳ ನೀಡದೆ ಇರುವುದರಿಂದ ಕುಟುಂಬವನ್ನು ಹೇಗೆ ನಡೆಸಬೇಕು ಎಂಬುದನ್ನು ಅಧಿಕಾರಿಗಳು ಅರ್ಥಮಾಡಿಕೊಳ್ಳಬೇಕು ಎಂದು ಚಾಲಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಸದ ರಾಶಿಯಿಂದ ಸಾರ್ವಜನಿಕರಿಗೆ ತೊಂದರೆ

ಕಸ ವಿಲೇವಾರಿ ವಾಹನಗಳ ಚಾಲಕರು ಕೆಲಸ ಸ್ಥಗಿತಗೊಳಿಸಿರುವುದರಿಂದ ಸುರಪುರ ಮತ್ತು ರಂಗಂಪೇಟೆಯ ಹಲವು ಕಡೆಗಳಲ್ಲಿ ಕಸದ ರಾಶಿ ಬಿದ್ದಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕಸ ಸಂಗ್ರಹಣೆ ವಾಹನಗಳು ಬಾರದ ಕಾರಣ ತ್ಯಾಜ್ಯದಿಂದ ದುರ್ವಾಸನೆ ಹರಡುತ್ತಿದೆ. ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ನಗರಸಭೆಯ ನಿರ್ಲಕ್ಷ್ಯದಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿರುವ ಎಐಟಿಯುಸಿ ಜಿಲ್ಲಾಧ್ಯಕ್ಷ ದೇವಿಂದ್ರಪ್ಪ ಪತ್ತಾರ, ಕೂಡಲೇ ನಗರದ ಎಲ್ಲೆಡೆ ಸಂಗ್ರಹವಾಗಿರುವ ಕಸವನ್ನು ತೆರವುಗೊಳಿಸಬೇಕು ಹಾಗೂ ಇಂತಹ ಪರಿಸ್ಥಿತಿ ಮರುಕಳಿಸದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತಿಬಾರಿಯೂ ಸಂಬಳಕ್ಕಾಗಿ ಹೋರಾಟ ನಡೆಸಬೇಕಾದ ಅನಿವಾರ್ಯತೆ ಎದುರಾಗುತ್ತಿರುವುದು ನೋವಿನ ಸಂಗತಿ. ಅಧಿಕಾರಿಗಳಿಗೂ ನಮ್ಮಂತೆಯೇ ಕುಟುಂಬ ಮತ್ತು ಜೀವನ ನಿರ್ವಹಣೆಯ ಜವಾಬ್ದಾರಿಗಳಿವೆ ಎಂಬುದನ್ನು ಅರ್ಥಮಾಡಿಕೊಂಡು ಪ್ರತಿ ತಿಂಗಳು ಸರಿಯಾಗಿ ಸಂಬಳ ಪಾವತಿಸಬೇಕು.

-ಸತೀಶ ನಾಯಕ, ಅಧ್ಯಕ್ಷ, ಹೊರಗುತ್ತಿಗೆ ಪೌರಕಾರ್ಮಿಕ ವಾಹನ ಚಾಲಕರ ಸಂಘ

ಕಸ ಸಂಗ್ರಹಣೆ ವಾಹನಗಳ ಚಾಲಕರನ್ನು ಭೇಟಿ ಮಾಡಿ ಸಂಬಳ ಪಾವತಿಸುವ ಭರವಸೆ ನೀಡಲಾಗಿದೆ. ಎರಡು ವಾರಗಳಲ್ಲಿ ಸಂಬಳ ಪಾವತಿಗೆ ವ್ಯವಸ್ಥೆ ಮಾಡಲಾಗುವುದು.

<ಯಲ್ಲಪ್ಪ ನಾಯಕ, ವ್ಯವಸ್ಥಾಪಕ,

ನಗರಸಭೆ, ಸುರಪುರ

share
ಎನ್.ಆರ್.ಕುಂಬಾರ
ಎನ್.ಆರ್.ಕುಂಬಾರ
Next Story
X