Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕೊಡಗಿನ ಸರಕಾರಿ ಶಾಲೆಗಳಲ್ಲಿ 568...

ಕೊಡಗಿನ ಸರಕಾರಿ ಶಾಲೆಗಳಲ್ಲಿ 568 ಶಿಕ್ಷಕರ ಹುದ್ದೆ ಖಾಲಿ

ಕೆ.ಎಂ.ಇಸ್ಮಾಯೀಲ್ ಕಂಡಕರೆಕೆ.ಎಂ.ಇಸ್ಮಾಯೀಲ್ ಕಂಡಕರೆ2 Jun 2025 2:50 PM IST
share
ಕೊಡಗಿನ ಸರಕಾರಿ ಶಾಲೆಗಳಲ್ಲಿ 568 ಶಿಕ್ಷಕರ ಹುದ್ದೆ ಖಾಲಿ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅವಧಿಗೂ ಮುನ್ನವೇ ಮುಂಗಾರು ಅಬ್ಬರಿಸಿದೆ. ಮಳೆಯ ನಡುವೆಯೂ ವಿದ್ಯಾರ್ಥಿಗಳು ಎರಡು ತಿಂಗಳ ಬೇಸಿಗೆ ರಜೆಯ ನಂತರ ಶಾಲೆಯತ್ತ ಮುಖ ಮಾಡುತ್ತಿದ್ದಾರೆ. ಆದರೆ, ಕೊಡಗು ಜಿಲ್ಲೆಯ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಕರ ಕೊರತೆ ಕಾಡುತ್ತಿದೆ.

ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನವೇ ಜಿಲ್ಲೆಯ ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಎದುರಾಗಿದೆ. ಪ್ರಾಥಮಿಕ ಹಾಗೂ ಪ್ರೌಢಶಾಲೆ ಸೇರಿ ಜಿಲ್ಲೆಯಲ್ಲಿ ಒಟ್ಟು 623 ಸರಕಾರಿ ಶಾಲೆಗಳು ಇದ್ದು, ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ 143 ಹಾಗೂ ಪ್ರೌಢಶಾಲೆಗಳಲ್ಲಿ 425 ಶಿಕ್ಷಕರ ಹುದ್ದೆ ಖಾಲಿ ಇವೆ.

ಪ್ರಾಥಮಿಕ ಶಾಲೆಗಳಲ್ಲಿರುವ ಹುದ್ದೆಗಳು: ಮಡಿಕೇರಿ ತಾಲೂಕಿನ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಟ್ಟು 97 ಶಿಕ್ಷಕರ ಹುದ್ದೆ ಮಂಜೂರಾತಿ ಆಗಿದೆ. ಆದರೆ ಕೇವಲ 51 ಶಿಕ್ಷಕರು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದು, 46 ಶಿಕ್ಷಕರ ಹುದ್ದೆ ಖಾಲಿ ಇವೆ. ಸೋಮವಾರಪೇಟೆ ತಾಲೂಕಿನಲ್ಲಿ 195 ಶಿಕ್ಷಕರ ಹುದ್ದೆಯಲ್ಲಿ 132 ಶಿಕ್ಷಕರು ಪ್ರಸಕ್ತ ಕಾರ್ಯ ನಿರ್ವಹಿಸುತ್ತಿದ್ದು, 63 ಶಿಕ್ಷಕರ ಹುದ್ದೆ ಖಾಲಿ ಉಳಿದಿದೆ. ವೀರಾಜಪೇಟೆ ತಾಲೂಕಿನ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಟ್ಟು 120 ಶಿಕ್ಷಕರ ಹುದ್ದೆಗಳಲ್ಲಿ 86 ಮಂದಿ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದು 34 ಶಿಕ್ಷಕರ ಹುದ್ದೆ ಖಾಲಿ ಉಳಿದಿದೆ.

ಪ್ರೌಢಶಾಲೆಗಳಲ್ಲಿರುವ ಹುದ್ದೆಗಳು: ಮಡಿಕೇರಿ ತಾಲೂಕಿನ ಸರಕಾರಿ ಪ್ರೌಢಶಾಲೆಗಳಲ್ಲಿ 417 ಮಂದಿ ಶಿಕ್ಷಕರ ಮಂಜೂರಾತಿ ಆಗಿದೆ. ಆದರೆ, ಪ್ರಸಕ್ತ ಸಾಲಿನಲ್ಲಿ 270 ಶಿಕ್ಷಕರು ಇದ್ದು, 148 ಶಿಕ್ಷಕರ ಹುದ್ದೆ ಖಾಲಿ ಉಳಿದಿದೆ. ಸೋಮವಾರಪೇಟೆ ತಾಲೂಕಿನಲ್ಲಿ 510 ಶಿಕ್ಷಕರ ಹುದ್ದೆಯಲ್ಲಿ 423 ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದು, 87 ಶಿಕ್ಷಕರ ಹುದ್ದೆ ಖಾಲಿ ಇದೆ. ವೀರಾಜಪೇಟೆ ತಾಲೂಕಿನಲ್ಲಿ 484 ಶಿಕ್ಷಕರ ಹುದ್ದೆ ಮಂಜೂರಾತಿಯಾಗಿದ್ದು, 294 ಮಂದಿ ಕಾರ್ಯನಿರ್ವಹಿಸುತ್ತಿದ್ದು 190 ಶಿಕ್ಷಕರು ನೇಮಕಗೊಳ್ಳಬೇಕಿದೆ.

ಒತ್ತಡದಲ್ಲೇ ಕಾರ್ಯನಿರ್ವಹಿಸುವ ಅನಿವಾರ್ಯ: ಜಿಲ್ಲೆಯ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದಾಗಿ ಹಾಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರು ಒತ್ತಡದಲ್ಲೇ ವಿದ್ಯಾರ್ಥಿಗಳಿಗೆ ಪಾಠ ಮಾಡಬೇಕಾದ ಅನಿವಾರ್ಯ ಎದುರಾಗಿದೆ. ಖಾಯಂ ಶಿಕ್ಷಕರು ಇಲ್ಲದೆ, ಮತ್ತೊಂದೆಡೆ ಸರಕಾರ ಬೇಡಿಕೆ ಇರುವಷ್ಟು ಅತಿಥಿ ಶಿಕ್ಷಕರನ್ನೂ ನೇಮಕ ಮಾಡದೆ ವಿದ್ಯಾರ್ಥಿಗಳಿಗೆ ಸೂಕ್ತ ರೀತಿಯಲ್ಲಿ ಶಿಕ್ಷಣ ನೀಡಲು ಸಾಧ್ಯವಾಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಜಿಲ್ಲೆಯಲ್ಲಿ ಸರಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದಾಗಿಯೇ ಪ್ರತೀ ಶೈಕ್ಷಣಿಕ ವರ್ಷದಲ್ಲಿ ಸರಕಾರಿ ಶಾಲೆಗಳಲ್ಲಿ ಎಸೆಸೆಲ್ಸಿ ಫಲಿತಾಂಶ ಕುಸಿತ ಕಾಣುತ್ತಿದೆ. ಮತ್ತೊಂದೆಡೆ ಖಾಯಂ ಶಿಕ್ಷಕರಿಲ್ಲದೆ ಸರಕಾರಿ ಶಾಲೆಗಳ ಶಿಕ್ಷಕರು ಒಂದಕ್ಕಿಂತ ಹೆಚ್ಚು ವಿಷಯವನ್ನು ಪಾಠ ಮಾಡಬೇಕಾದ ಅನಿವಾರ್ಯವೂ ಇದೆ. ಕೆಲವೊಂದು ಶಾಲೆಗಳಲ್ಲಿ ಮುಖ್ಯೋಪಾಧ್ಯಾಯರು, ದೈಹಿಕ ಶಿಕ್ಷಕರೂ ಒಂದೆರಡು ವಿಷಯವನ್ನು ಬೋಧಿಸುತ್ತಿದ್ದಾರೆ. ಬಹುತೇಕ ಕಡೆಗಳಲ್ಲಿ ದೈಹಿಕ ಶಿಕ್ಷಕರು ಇಲ್ಲದೆ ವಿದ್ಯಾರ್ಥಿಗಳ ಶೈಕ್ಷಣಿಕ ಕ್ರೀಡಾಕೂಟದ ಸಾಧನೆಗೂ ಹಿನ್ನಡೆಯಾಗುತ್ತಿದೆ.

ಖಾಯಂ ಶಿಕ್ಷಕರ ನೇಮಕವಾಗದಿರುವುದರಿಂದ ಎಸೆಸೆಲ್ಸಿಯಲ್ಲಿ ಗಣಿತ, ವಿಜ್ಞಾನ ಹಾಗೂ ಇಂಗ್ಲಿಷ್ ವಿಷಯದಲ್ಲಿ ಪ್ರತೀ ಬಾರಿ ಹೆಚ್ಚಿನ ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಿದ್ದಾರೆ.ಅದಲ್ಲದೆ ಕನ್ನಡ ಶಿಕ್ಷಕರೇ ಇಂಗ್ಲಿಷ್ ಪಾಠ ಮಾಡಬೇಕಾದ ಒತ್ತಡಕ್ಕೆ ಸಿಲುಕಿಕೊಂಡಿದ್ದಾರೆ. ಅನುದಾನ ರಹಿತ ಶಾಲೆಗಳಲ್ಲಿ ಖಾಸಗಿಯವರ ಸಹಭಾಗಿತ್ವದಲ್ಲಿ ಶಿಕ್ಷಕರನ್ನು ನೇಮಿಸುತ್ತಾರೆ. ಆದರೆ, ಸರಕಾರಿ ಶಾಲೆಗಳಲ್ಲಿ ಸರಕಾರವೇ ಅತಿಥಿ ಶಿಕ್ಷಕರನ್ನು ನೇಮಿಸಬೇಕು.

ಶಿಕ್ಷಕರು ತಮ್ಮ ವಿಷಯದ ಹೊರತಾಗಿ ಇತರ ವಿಷಯಗಳನ್ನು ಕೂಡ ಪಾಠ ಮಾಡುತ್ತಿದ್ದಾರೆ.ಕೆಲವೊಂದು ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಮುಖ್ಯೋಪಾಧ್ಯಾಯರ ಹುದ್ದೆಯೂ ಖಾಲಿ ಉಳಿದಿದೆ. ಸಹ ಶಿಕ್ಷಕರೇ ಪ್ರಭಾರ ಮುಖ್ಯೋಪಾಧ್ಯಾಯರ ಹುದ್ದೆಯನ್ನು ನಿಭಾಯಿಸುತ್ತಿದ್ದಾರೆ.

ರಾಜ್ಯದಲ್ಲಿ 41,905 ಪ್ರಾಥಮಿಕ ಮತ್ತು 4,871 ಪ್ರೌಢಶಾಲೆ ಸೇರಿ ಒಟ್ಟು 46,776 ಸರಕಾರಿ ಶಾಲೆಗಳು ಕಾರ್ಯ ನಿರ್ವಹಿಸುತ್ತಿದ್ದು, ಒಟ್ಟು 61,525 ಶಿಕ್ಷಕರ ಹುದ್ದೆ ಖಾಲಿ ಇದೆ. ಪ್ರಾಥಮಿಕ ಶಾಲೆಗಳಲ್ಲಿ 49,729 ಹುದ್ದೆಗಳು ಖಾಲಿ ಇದ್ದರೆ, ಪ್ರೌಢಶಾಲೆಗಳಲ್ಲಿ 11,796 ಶಿಕ್ಷಕರ ಹುದ್ದೆ ಖಾಲಿ ಇವೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 51 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಸರಕಾರ ತೀರ್ಮಾನಿಸಿದ್ದರೂ ರಾಜ್ಯದಲ್ಲಿ ಇನ್ನೂ 10 ಸಾವಿರ ಶಿಕ್ಷಕರ ಕೊರತೆ ಇದೆ.

ಕೊಡಗು ಜಿಲ್ಲೆಗೆ ಈಗಾಗಲೇ 384 ಅತಿಥಿ ಶಿಕ್ಷಕರ ಹುದ್ದೆ ಮಂಜೂರಾತಿಯಾಗಿದೆ. ಇನ್ನೂ ಬೇಡಿಕೆ ಇದ್ದರೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗುವುದು. ಈಗಾಗಲೇ ಜಿಲ್ಲೆಗೆ ಶೇ.70 ರಷ್ಟು ಪಠ್ಯ ಪುಸ್ತಕ ಹಾಗೂ ಸಮವಸ್ತ್ರ ಪೂರೈಕೆಯಾಗಿದೆ. ಎಲ್ಲ ಶಾಲೆಗಳಿಗೆ ಪೂರೈಕೆ ಮಾಡುವ ಕೆಲಸ ನಡೆಯುತ್ತಿದೆ.

-ರಂಗಧಾಮಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ

384 ಅತಿಥಿ ಶಿಕ್ಷಕರ ನೇಮಕ

ಕೊಡಗು ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಲ್ಲಿ 568 ಶಿಕ್ಷಕರ ಹುದ್ದೆ ಖಾಲಿ ಇದೆ. ಆದರೆ, ಪ್ರಸಕ್ತ ಸಾಲಿನಲ್ಲಿ ಕೊಡಗು ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಸೇರಿ 384 ಅತಿಥಿ ಶಿಕ್ಷಕರ ಹುದ್ದೆಯನ್ನು ರಾಜ್ಯ ಸರಕಾರ ಮಂಜೂರಾತಿ ಮಾಡಿದೆ.

2025-26ನೇ ಶೈಕ್ಷಣಿಕ ಸಾಲಿಗೆ ಜಿಲ್ಲೆಯಲ್ಲಿ ಸರಕಾರಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ 500ಕ್ಕೂ ಅಧಿಕ ಅತಿಥಿ ಶಿಕ್ಷಕರನ್ನು ನೇಮಿಸುವಂತೆ ಬೇಡಿಕೆ ಇಡಲಾಗಿತ್ತು. ಆದರೆ, ಸರಕಾರ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಗೆ ಕೇವಲ 384 ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ.

ಪ್ರಸಕ್ತ ಸಾಲಿನಲ್ಲಿ ಇಡೀ ಶೈಕ್ಷಣಿಕ ಇತಿಹಾಸದಲ್ಲಿ ಮೊದಲ ಬಾರಿಗೆ ರಾಜ್ಯದಲ್ಲಿ 51 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ರಾಜ್ಯ ಸರಕಾರ ತೀರ್ಮಾನ ಕೈಗೊಂಡಿದೆ.

share
ಕೆ.ಎಂ.ಇಸ್ಮಾಯೀಲ್ ಕಂಡಕರೆ
ಕೆ.ಎಂ.ಇಸ್ಮಾಯೀಲ್ ಕಂಡಕರೆ
Next Story
X