Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ರಾಯಚೂರಿನಲ್ಲಿ ಸೇವೆ ಸಲ್ಲಿಸುತ್ತಿರುವ...

ರಾಯಚೂರಿನಲ್ಲಿ ಸೇವೆ ಸಲ್ಲಿಸುತ್ತಿರುವ 618 ನಕಲಿ ವೈದ್ಯರು

ಪಟ್ಟಿ ಸಿದ್ಧವಾದರೂ ಕಠಿಣ ಕ್ರಮಕ್ಕೆ ಆರೋಗ್ಯ ಇಲಾಖೆ ಹಿಂದೇಟು!

ಬಾವಸಲಿ ರಾಯಚೂರು/ವಾರ್ತಾಭಾರತಿಬಾವಸಲಿ ರಾಯಚೂರು/ವಾರ್ತಾಭಾರತಿ27 Nov 2026 2:54 PM IST
share
ರಾಯಚೂರಿನಲ್ಲಿ ಸೇವೆ ಸಲ್ಲಿಸುತ್ತಿರುವ 618 ನಕಲಿ ವೈದ್ಯರು

ರಾಯಚೂರು: ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ನಕಲಿ ವೈದ್ಯರ ಹಾವಳಿ ಮುಂದುವರಿದಿದ್ದು, ಜನರ ಆರೋಗ್ಯದೊಂದಿಗೆ ಚೆಲ್ಲಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಈ ನಡುವೆ ಜಿಲ್ಲಾಡಳಿತವೇ ಜಿಲ್ಲೆಯ ಐದು ತಾಲೂಕುಗಳಲ್ಲಿ 618 ಮಂದಿ ನಕಲಿ ವೈದ್ಯರನ್ನು ಗುರುತಿಸಿ ಪಟ್ಟಿ ಸಿದ್ಧಪಡಿಸಿರುವುದು ಆತಂಕ

ಮೂಡಿಸಿದೆ. ನಕಲಿ ವೈದ್ಯರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರೂ, ಆರೋಗ್ಯ ಇಲಾಖೆಯ ಕ್ರಮಗಳು ದಾಳಿ, ಕ್ಲಿನಿಕ್ ಬಂದ್ ಹಾಗೂ ಎಚ್ಚರಿಕೆಗೆ ಸೀಮಿತವಾಗಿವೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಿದ್ದರೂ, ಹಲವು ಕಡೆ ವೈದ್ಯರು, ಸ್ಟಾಫ್ ನರ್ಸ್ ಹಾಗೂ ಇತರೆ ಸಿಬ್ಬಂದಿ ಕೊರತೆಯಿಂದ ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ ಎಂಬ ದೂರುಗಳಿವೆ. ಹೀಗಾಗಿ ಬಡ ಹಾಗೂ ಮಧ್ಯಮ ವರ್ಗದ ಜನರು ಹೆಚ್ಚಿನ ಹಣ ಖರ್ಚು ಮಾಡಿ ಪಟ್ಟಣ ಅಥವಾ ನಗರಗಳ ಖಾಸಗಿ ಆಸ್ಪತ್ರೆಗಳಿಗೆ ತೆರಳಲು ಸಾಧ್ಯವಾಗದೆ, ಅನಿವಾರ್ಯವಾಗಿ ನಕಲಿ ವೈದ್ಯರ ಮೊರೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎನ್ನಲಾಗುತ್ತಿದೆ.

ಗ್ರಾಮೀಣ ಭಾಗದ ಹಲವು ಹಳ್ಳಿಗಳಲ್ಲಿ ಕೆಲವರು ಬಾಡಿಗೆ ಮಳಿಗೆಗಳಲ್ಲಿ ಕ್ಲಿನಿಕ್ ತೆರೆದು ಚಿಕಿತ್ಸೆ ನೀಡುತ್ತಿದ್ದರೆ, ಇನ್ನು ಕೆಲವರು ತಮ್ಮ ಮನೆಗಳಲ್ಲೇ ಚುಚ್ಚುಮದ್ದು ಹಾಗೂ ಔಷಧಿಗಳನ್ನು ನೀಡುತ್ತಿದ್ದಾರೆ ಎಂಬ ಆರೋಪಗಳಿವೆ. ಮತ್ತೊಂದೆಡೆ, ಕೆಲವರು ನಗರ ಹಾಗೂ ಪಟ್ಟಣಗಳಿಂದ ದ್ವಿಚಕ್ರ ವಾಹನಗಳಲ್ಲಿ ಔಷಧಿಗಳ ಬ್ಯಾಗ್ ಗಳನ್ನು ತೆಗೆದುಕೊಂಡು ಹಳ್ಳಿಗಳಿಗೆ ತೆರಳಿ ಚಿಕಿತ್ಸೆ ನೀಡುತ್ತಿರುವುದಾಗಿ ಸ್ಥಳೀಯರು ಆರೋಪಿಸುತ್ತಿದ್ದಾರೆ.

ಪಟ್ಟಿ ಇದ್ದರೂ ಕಠಿಣ ಕ್ರಮವೇಕಿಲ್ಲ?

ನಕಲಿ ವೈದ್ಯರು ಹಾಗೂ ಅನಧಿಕೃತ ಕ್ಲಿನಿಕ್‌ಗಳ ಕುರಿತು ತಾಲೂಕು ಆರೋಗ್ಯಾಧಿಕಾರಿಗಳಿಗೆ ಮಾಹಿತಿ ಮತ್ತು ದೂರುಗಳು ಲಭ್ಯವಿದ್ದರೂ, ಆಗಾಗ ದಾಳಿ ನಡೆಸಿ ಕ್ಲಿನಿಕ್‌ಗಳನ್ನು ಬಂದ್ ಮಾಡುವುದು ಹಾಗೂ ಎಚ್ಚರಿಕೆ ನೀಡುವುದಕ್ಕಷ್ಟೇ ಕ್ರಮ ಸೀಮಿತವಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ.

ಈ ಹಿಂದೆ ದಾಳಿ ನಡೆಸಿ ಬಂದ್ ಮಾಡಲಾಗಿದ್ದ ಹಲವು ಕ್ಲಿನಿಕ್‌ಗಳು ಬಳಿಕ ಬೇರೆಡೆ ಮತ್ತೆ ಆರಂಭವಾಗಿರುವ ಉದಾಹರಣೆಗಳಿವೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಹೀಗಾಗಿ ನಕಲಿ ವೈದ್ಯರ ವಿರುದ್ಧ ಕೇವಲ ಕ್ಲಿನಿಕ್ ಬಂದ್ ಮಾಡುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ; ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಾಗ ಮಾತ್ರ ಹಾವಳಿಗೆ ಕಡಿವಾಣ ಹಾಕಲು ಸಾಧ್ಯ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಇನ್ನು ಕೆಲವು ನಕಲಿ ಕ್ಲಿನಿಕ್‌ಗಳಲ್ಲಿ ಸರಕಾರಿ ಆರೋಗ್ಯ ಕೇಂದ್ರಗಳಿಗೆ ಪೂರೈಕೆಯಾಗುವ ಔಷಧಿಗಳು ಕಂಡುಬಂದಿರುವ ಆರೋಪಗಳೂ ಕೇಳಿಬರುತ್ತಿವೆ. ಈ ಕುರಿತು ಆರೋಗ್ಯಇಲಾಖೆ ಸಮಗ್ರ ತನಿಖೆ ನಡೆಸಿ, ಸರಕಾರಿ ಔಷಧಿಗಳು ಅನಧಿಕೃತವಾಗಿ ನಕಲಿ ವೈದ್ಯರ ಕೈಗೆ ಹೇಗೆ ತಲುಪುತ್ತಿವೆ ಎಂಬುದನ್ನು ಪತ್ತೆಹಚ್ಚಬೇಕು ಎಂಬ ಆಗ್ರಹವಿದೆ. ಇಲಾಖೆಯ ಸಿಬ್ಬಂದಿಯೇಸಹಕರಿಸುತ್ತಿದ್ದಾರೆ ಎಂಬ ಆರೋಪಗಳಿದ್ದರೆ, ಅವುಗಳ ಸತ್ಯಾಸತ್ಯತೆಯನ್ನೂ ತನಿಖೆ ಮೂಲಕ ಸ್ಪಷ್ಟಪಡಿಸಬೇಕಾಗಿದೆ.

ಜಿಲ್ಲಾಡಳಿತದಿಂದಲೇ 618 ಮಂದಿಯ ಪಟ್ಟಿ

ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ಇದೆ ಎಂಬುದು ಹೊಸ ವಿಷಯವಲ್ಲ. ಆದರೆ, ಜಿಲ್ಲಾಡಳಿತವೇ ಅಧಿಕೃತವಾಗಿ ಐದು ತಾಲೂಕುಗಳ ವ್ಯಾಪ್ತಿಯಲ್ಲಿ 618 ಮಂದಿಯನ್ನು ಗುರುತಿಸಿ, ಅವರ ವಿವರಗಳೊಂದಿಗೆ ಪಟ್ಟಿ ಸಿದ್ಧಪಡಿಸಿ ಕ್ರಮಕ್ಕೆ ಸೂಚಿಸಿರುವುದು ಪ್ರಕರಣದ ಗಂಭೀರತೆಯನ್ನು ತೋರಿಸುತ್ತದೆ.

ಅಕ್ಟೋಬರ್ 30ರಂದು ಹೊರಡಿಸಿರುವ ಪ್ರಕಟಣೆ

ಯಲ್ಲಿ ನಕಲಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾರ್ಯಾಚರಣೆ ನಡೆಸಿ 27 ಪ್ರಕರಣಗಳಿಗೆ ಸಂಬಂಧಿಸಿದಂತೆ ಎಫ್‌ಐಆರ್‌ದಾಖಲಿಸಲು ತಾಲೂಕು ಆರೋಗ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಆದರೆ, ಜಿಲ್ಲಾಡಳಿತದ ಮಟ್ಟದಲ್ಲಿ ಪಟ್ಟಿ ಸಿದ್ಧಪಡಿಸಿ ಕ್ರಮಕ್ಕೆ ಸೂಚನೆ ನೀಡಿದ ಬಳಿಕವೂ ಕಠಿಣ ಕಾನೂನು ಕ್ರಮದ ಬದಲು ಎಚ್ಚರಿಕೆ ಹಾಗೂ ಕ್ಲಿನಿಕ್ ಬಂದ್ ಮಾಡಿಸುವಂತಹ ಸರಳ ಕ್ರಮಗಳಿಗೆ ಸೀಮಿತವಾಗಿದ್ದರೆ, ನಕಲಿ ವೈದ್ಯರ ಹಾವಳಿಗೆ ಕಡಿವಾಣ ಹಾಕುವುದು ಹೇಗೆ ಎಂಬ ಪ್ರಶ್ನೆ ಎದುರಾಗಿದೆ.

ತಾಲೂಕುವಾರು ನಕಲಿ ವೈದ್ಯರ ಸಂಖ್ಯೆ

ದೇವದುರ್ಗ ತಾಲೂಕಿನಲ್ಲಿ 134,ರಾಯಚೂರು ತಾಲೂಕಿನಲ್ಲಿ 129, ಲಿಂಗಸುಗೂರು ತಾಲೂಕಿನಲ್ಲಿ 135, ಸಿಂಧನೂರು ತಾಲೂಕಿನಲ್ಲಿ 115 ಹಾಗೂ ಮಾನ್ವಿ ತಾಲೂಕಿನಲ್ಲಿ 105 ನಕಲಿ ವೈದ್ಯರನ್ನು ಗುರುತಿಸಲಾಗಿದೆ. ರಾಯಚೂರು ಜಿಲ್ಲೆಯಲ್ಲಿ ಒಟ್ಟು 618 ನಕಲಿ ವೈದ್ಯರನ್ನು ಗುರುತಿಸಲಾಗಿದೆ.

ಜಿಲ್ಲೆಯಲ್ಲಿ 618 ನಕಲಿ ವೈದ್ಯರನ್ನು ಗುರುತಿಸಲಾಗಿದೆ. ಮಾನ್ಯತೆ ಪಡೆದ ವೈದ್ಯಕೀಯ ಪದವಿ ಪಡೆಯದವರು, ಪರವಾನಗಿ ಇಲ್ಲದೆ ಕ್ಲಿನಿಕ್ ನಡೆಸುವವರು ಹಾಗೂ ಇಲಾಖೆಯ ನಿಗದಿತ ಮಾನದಂಡಗಳನ್ನು ಪಾಲಿಸದವರನ್ನು ನಕಲಿ ವೈದ್ಯರು ಎಂದು ಗುರುತಿಸಲಾಗಿದೆ. ಮಾನವೀಯತೆಯ ಆಧಾರದ ಮೇಲೆ ಅವರಿಗೆ 15 ದಿನಗಳ ಕಾಲಾವಕಾಶ ನೀಡಲಾಗಿದ್ದು, ಈ ಅವಧಿಯ ಬಳಿಕವೂ ನಿಯಮ ಉಲ್ಲಂಘಿಸಿ ಸಾರ್ವಜನಿಕರಿಗೆ ಚಿಕಿತ್ಸೆ ನೀಡುವುದು ಕಂಡುಬಂದಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು.

<ಡಾ.ನಂದೀತಾ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ರಾಯಚೂರು.

share
ಬಾವಸಲಿ ರಾಯಚೂರು/ವಾರ್ತಾಭಾರತಿ
ಬಾವಸಲಿ ರಾಯಚೂರು/ವಾರ್ತಾಭಾರತಿ

ಬಾವಸಲಿ ಅವರು 2013ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಬಿ.ಎ ಪದವಿ ಹಾಗೂ 2017ರಲ್ಲಿ ಎಂ.ಎ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಒಂಬತ್ತು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು, ಪ್ರಾದೇಶಿಕ ಹಾಗೂ ರಾಜ್ಯಮಟ್ಟದ ಪ್ರತಿಷ್ಠಿತ ಪತ್ರಿಕೆಗಳು, ವೆಬ್‌ಸೈಟ್‌ಗಳು ಮತ್ತು ವೆಬ್ ಪೋರ್ಟಲ್‌ಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X