Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ರಾತ್ರಿಯಾದರೆ ಬಾರ್, ಬೆಳಗಾದರೆ ಕ್ರಿಕೆಟ್...

ರಾತ್ರಿಯಾದರೆ ಬಾರ್, ಬೆಳಗಾದರೆ ಕ್ರಿಕೆಟ್ ಮೈದಾನ

ಮಹಮ್ಮದ್ ಗೌಸ್, ವಿಜಯನಗರಮಹಮ್ಮದ್ ಗೌಸ್, ವಿಜಯನಗರ24 May 2026 12:17 PM IST
share
ರಾತ್ರಿಯಾದರೆ ಬಾರ್, ಬೆಳಗಾದರೆ ಕ್ರಿಕೆಟ್ ಮೈದಾನ
ಸರಕಾರಿ ಸರ್ದಾರ್ ಪಟೇಲ್ ಶಾಲೆ ಸ್ಥಿತಿ ಅಧೋಗತಿ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಹೊಸಪೇಟೆ: ನಗರದ ಹೃದಯಭಾಗದಲ್ಲಿರುವ ಸರಕಾರಿ ಸರ್ದಾರ್ ಪಟೇಲ್ ಹೈಸ್ಕೂಲ್ ರಾತ್ರಿಯಾದರೆ ಬಾರ್, ಬೆಳಗಾದರೆ ಕ್ರಿಕೆಟ್ ಮೈದಾನದಂತೆ ಬಳಕೆಯಾಗುತ್ತಿರುವ ನಿದರ್ಶನಕ್ಕೆ ಸಾಕ್ಷಿಯಾಗುತ್ತಿದೆ.

ಸರ್ದಾರ್ ಪಟೇಲ್ ಹೈಸ್ಕೂಲ್ ಇದೀಗ ಶಿಕ್ಷಣದ ಮಂದಿರಕ್ಕಿಂತಲೂ ಅವ್ಯವಸ್ಥೆಗಳ ಕೇಂದ್ರವಾಗಿದೆ. ಇಲ್ಲಿ ಒಂದನೇ ತರಗತಿಯಿಂದ ಹತ್ತನೇ ತರಗತಿವರೆಗೆ ತರಗತಿಗಳು ನಡೆಯುತ್ತವೆ. ಈ ಶಾಲಾ ಆವರಣದಲ್ಲೇ ಅಂಗನವಾಡಿ ಕೇಂದ್ರವೂ ಕಾರ್ಯನಿರ್ವಹಿಸುತ್ತಿದ್ದು, ನೂರಾರು ಮಕ್ಕಳು ಪ್ರತಿದಿನ ವ್ಯಾಸಂಗ ಮಾಡುತ್ತಾರೆ. ಆದರೆ ಶಾಲೆಯ ದುಸ್ಥಿತಿ ನೋಡಿ ಪಾಲಕರು, ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.

ಶಾಲೆಗಳು ಪುನಾರಂಭವಾಗಲು ಕೆಲವೇ ದಿನಗಳು ಬಾಕಿಯಿದ್ದು, ಶಾಲಾ ಆವರಣ ಮಳೆ ನೀರಿನಿಂದಾಗಿ ಕೆಸರಿನ ತಾಣವಾಗಿದೆ. ಶಾಲೆಯ ಕಟ್ಟಡ, ಕುಸಿಯುವ ಸ್ಥಿತಿಯಲ್ಲಿರುವ ಮೇಲ್ಛಾವಣಿ, ಹೊರಗೆ ಕಾಣಿಸುತ್ತಿರುವ ಕಬ್ಬಿಣದ ಸರಳುಗಳು ಮತ್ತು ಒಡೆದ ಕಿಟಕಿಗಳು ಮಕ್ಕಳ ಸುರಕ್ಷತೆ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ.

ರಾತ್ರಿಯಾದರೆ ಕುಡುಕರ ಅಡ್ಡೆ: ರಾತ್ರಿ ಶಾಲಾ ಆವರಣ ಕುಡುಕರ ತಾಣವಾಗಿ ಮಾರ್ಪಟ್ಟಿದೆ. ಕೆಲವರು ಕಾಂಪೌಂಡ್ ಒಳನುಗ್ಗಿ ಮದ್ಯಪಾನ ಮಾಡಿ, ಬಾಟಲಿಗಳನ್ನು ಅಲ್ಲೇ ಎಸೆದು ಹೋಗುತ್ತಿದ್ದಾರೆ. ಬೆಳಗ್ಗೆ ಶಾಲಾ ಸಿಬ್ಬಂದಿ ಹಾಗೂ ಸ್ಥಳೀಯರು ಒಡೆದ ಬಾಟಲಿಗಳನ್ನು ತೆರವುಗೊಳಿಸುವ ಸ್ಥಿತಿ ನಿರ್ಮಾಣವಾಗಿದೆ. ಶಾಲೆ ಅನೈತಿಕ ಚಟುವಟಿಕೆಗಳ ಕೇಂದ್ರವಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಬೆಳಗ್ಗೆ ಕ್ರಿಕೆಟ್ ಮೈದಾನ: ರಾತ್ರಿ ಕುಡುಕರ ಅಡ್ಡೆಯಾಗುವ ಶಾಲಾ ಆವರಣ ಬೆಳಗ್ಗೆ ಸ್ಥಳೀಯ ಯುವಕರಿಂದಾಗಿ ಕ್ರಿಕೆಟ್ ಮೈದಾನವಾಗುತ್ತದೆ. ಆಟದ ಪರಿಣಾಮವಾಗಿ ಶಾಲೆಯ ಕಿಟಕಿಗಳ ಗಾಜುಗಳು ಒಡೆದು ಹೋಗಿವೆ ಎಂದು ಆರೋಪವಿದೆ.

ಶಾಲಾ ಮೈದಾನವೇ ಕೆಸರಿನ ಕೊಳ: ಮಕ್ಕಳು ಆಟವಾಡಲು ವಿಶಾಲ ಮೈದಾನ ಇದ್ದರೂ ಮಳೆ ನೀರು ಸರಿಯಾಗಿ ಹರಿದು ಹೋಗುವ ವ್ಯವಸ್ಥೆ ಇಲ್ಲದ ಕಾರಣ ಮೈದಾನ ಕೆಸರು ಗದ್ದೆಯಾಗಿ ಮಾರ್ಪಟ್ಟಿದೆ. ಇದರಿಂದ ಮಕ್ಕಳಿಗೆ ಆಟವಾಡಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.

ಶಿಥಿಲಾವಸ್ಥೆಯಲ್ಲಿರುವ ಕೊಠಡಿಗಳು: ಶಾಲೆಯ ಕೆಲವು ಕೊಠಡಿಗಳ ಮೇಲ್ಛಾವಣಿ ಹಾಳಾಗಿದ್ದು, ಅಲ್ಲಲ್ಲಿ ಕಬ್ಬಿಣದ ಸರಳುಗಳು ಹೊರಗೆ ಚಾಚಿಕೊಂಡಿವೆ. ಪ್ಲಾಸ್ಟರ್ ಉದುರಿ ಬಿದ್ದಿರುವುದು ಕಂಡುಬಂದಿದೆ. ಶಾಲೆ ಆರಂಭವಾದ ಬಳಿಕ ಮಕ್ಕಳು ಇದೇ ಕೊಠಡಿಗಳಲ್ಲಿ ಕುಳಿತು ಪಾಠ ಕೇಳಬೇಕಾದ ಅನಿವಾರ್ಯತೆ ಎದುರಾಗಿದೆ.

ಕ್ರಮಕ್ಕೆ ಸಾರ್ವಜನಿಕರ ಒತ್ತಾಯ: ಶಾಲೆ ಪುನರ್ ಆರಂಭಕ್ಕೂ ಮುನ್ನವೇ ಸರಕಾರ ಶಾಲಾ ಸ್ವಚ್ಛತೆ, ಮಳೆ ನೀರು ತೆರವು, ಕಟ್ಟಡ ದುರಸ್ತಿ, ಕಾಂಪೌಂಡ್ ರಿಪೇರಿ, ರಾತ್ರಿ ಪೊಲೀಸ್ ಗಸ್ತು, ಸಿಸಿಟಿವಿ ಅಳವಡಿಕೆ ಮಾಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಸರಕಾರಿ ಸರ್ದಾರ್ ಪಟೇಲ್ ಶಾಲೆ ದುಸ್ಥಿತಿಗೆ ತಲುಪಿರುವುದು ನೋವಿನ ಸಂಗತಿ. ಈ ಶಾಲೆಯ ವಿದ್ಯಾರ್ಥಿಗಳು ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಶಾಲೆಯ ಮೂಲಸೌಕರ್ಯಗಳ ಕೊರತೆಯನ್ನು ಸರಕಾರ ನೀಗಿಸಿ ಮಕ್ಕಳ ಕಲಿಕೆಗೆ ಅನುಕೂಲ ಮಾಡಿಕೊಡಬೇಕು.

-ಗುಜ್ಜಲ್ ಗಣೇಶ್,

ಕರುನಾಡು ಕಲಿಗಳ ಕ್ರಿಯಾಶೀಲ ಸಮಿತಿ ಉಪಾಧ್ಯಕ್ಷ

ಇತ್ತೀಚೆಗಷ್ಟೇ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದು, ಸರಕಾರಿ ಸರ್ದಾರ್ ಪಟೇಲ್ ಶಾಲೆಯ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದಿದ್ದೇನೆ. ಶಾಲೆಯ ಮುಖ್ಯ ಶಿಕ್ಷಕರೊಂದಿಗೆ ಚರ್ಚೆ ನಡೆಸಿ, ಶಾಲಾ ಆವರಣದ ಸ್ವಚ್ಛತೆ, ಮೂಲಸೌಕರ್ಯಗಳ ದುರಸ್ತಿ ಹಾಗೂ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಪರಿಶೀಲಿಸಲಾಗುವುದು.

-ಉಮಾಪತಿ,

ಕ್ಷೇತ್ರ ಶಿಕ್ಷಣಾಧಿಕಾರಿ ಹೊಸಪೇಟೆ

share
ಮಹಮ್ಮದ್ ಗೌಸ್, ವಿಜಯನಗರ
ಮಹಮ್ಮದ್ ಗೌಸ್, ವಿಜಯನಗರ
Next Story
X