Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸಂಗೀತ, ಕರಾಟೆ, ಅಭಿನಯದಲ್ಲಿ ಸೈ...

ಸಂಗೀತ, ಕರಾಟೆ, ಅಭಿನಯದಲ್ಲಿ ಸೈ ಎನಿಸಿಕೊಂಡ ಹೊಸಪೇಟೆಯ ಬಾಲಪ್ರತಿಭೆ

ಹಂಪಿ ಉತ್ಸವ, ಮೈಸೂರು ದಸರಾ ಸೇರಿದಂತೆ ವಿವಿಧ ವೇದಿಕೆಗಳಲ್ಲಿ ಗಾಯನ; ಚಲನಚಿತ್ರಗಳಲ್ಲೂ ಅಭಿನಯ

ಮಹಮ್ಮದ್ ಗೌಸ್, ವಿಜಯನಗರಮಹಮ್ಮದ್ ಗೌಸ್, ವಿಜಯನಗರ15 Nov 2026 8:08 AM IST
share
ಸಂಗೀತ, ಕರಾಟೆ, ಅಭಿನಯದಲ್ಲಿ ಸೈ ಎನಿಸಿಕೊಂಡ ಹೊಸಪೇಟೆಯ ಬಾಲಪ್ರತಿಭೆ

ಹೊಸಪೇಟೆ : ಸಂಗೀತ, ಕ್ರೀಡೆ ಹಾಗೂ ಅಭಿನಯ ಕ್ಷೇತ್ರಗಳಲ್ಲಿ ಆಸಕ್ತಿ ಬೆಳೆಸಿಕೊಂಡಿರುವ ಹೊಸಪೇಟೆಯ ದಿವ್ಯಶ್ರೀ ಕೆಂಭಾವಿಮಠ, ಬಾಲ್ಯದಲ್ಲಿಯೇ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಅಭ್ಯಾಸದ ಜೊತೆಗೆ ಕರಾಟೆ ತರಬೇತಿ ಪಡೆಯುತ್ತಿರುವ ಅವರು, ಕನ್ನಡ ಚಲನಚಿತ್ರಗಳಲ್ಲಿಯೂ ಅಭಿನಯಿಸುತ್ತಿದ್ದಾರೆ.

2014ರ ಮೇ 14ರಂದು ಹೊಸಪೇಟೆಯಲ್ಲಿ ಜನಿಸಿದ ದಿವ್ಯಶ್ರೀ, ನಗರದ ಲಹರಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಓದಿನ ಜೊತೆಗೆ ಸಂಗೀತ, ಕ್ರೀಡೆ ಮತ್ತು ಅಭಿನಯದಲ್ಲಿ ಆಸಕ್ತಿ ಹೊಂದಿರುವ ಅವರು, ಈ ಕ್ಷೇತ್ರಗಳಲ್ಲಿ ತರಬೇತಿ ಹಾಗೂ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಅನುಭವ ಪಡೆಯುತ್ತಿದ್ದಾರೆ.

ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ :

2026ರಲ್ಲಿ ನಡೆದ ಮೊದಲ ರಾಷ್ಟ್ರಮಟ್ಟದ ಓಪನ್ ಕರಾಟೆ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ದಿವ್ಯಶ್ರೀ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜಯನಗರ ಜಿಲ್ಲೆಯ ಉಮರ್ ಫಂಕ್ಷನ್ ಒಳಾಂಗಣದಲ್ಲಿ ನಡೆದ ಸ್ಪರ್ಧೆಯಲ್ಲಿ ತಮ್ಮ ಕರಾಟೆ ಕೌಶಲ ಪ್ರದರ್ಶಿಸಿ ಈ ಸಾಧನೆ ಮಾಡಿದ್ದಾರೆ.

ಕರಾಟೆ ಅಭ್ಯಾಸದಿಂದ ದೈಹಿಕ ಸಾಮರ್ಥ್ಯ, ಏಕಾಗ್ರತೆ ಮತ್ತು ಶಿಸ್ತು ಬೆಳೆಸಿಕೊಳ್ಳುತ್ತಿರುವ ಅವರು, ಕ್ರೀಡಾ ಚಟುವಟಿಕೆಗಳಲ್ಲಿಯೂ ಮುಂದುವರಿಯುತ್ತಿದ್ದಾರೆ.

ವಿವಿಧ ಉತ್ಸವಗಳಲ್ಲಿ ಸಂಗೀತ ಕಾರ್ಯಕ್ರಮ :

ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಅಭ್ಯಾಸ ಮಾಡುತ್ತಿರುವ ದಿವ್ಯಶ್ರೀ, ಹಂಪಿ ಉತ್ಸವ, ಮೈಸೂರು ದಸರಾ, ಕನಕಗಿರಿ ಉತ್ಸವ, ಆನೆಗೊಂದಿ ಉತ್ಸವ ಹಾಗೂ ಕದಂಬ ಉತ್ಸವ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಗಾಯನ ಪ್ರದರ್ಶನ ನೀಡಿದ್ದಾರೆ.

ಸಂಗೀತ ಕ್ಷೇತ್ರದಲ್ಲಿ ನಿರಂತರ ಅಭ್ಯಾಸ ಮಾಡುತ್ತಿರುವ ಅವರು, ವಿವಿಧ ವೇದಿಕೆಗಳಲ್ಲಿ ಕಾರ್ಯಕ್ರಮ ನೀಡುವ ಮೂಲಕ ತಮ್ಮ ಗಾಯನ ಕೌಶಲವನ್ನು ಬೆಳೆಸಿಕೊಳ್ಳುತ್ತಿದ್ದಾರೆ.

ಕನ್ನಡ ಚಲನಚಿತ್ರಗಳಲ್ಲೂ ಅಭಿನಯ :

ಸಂಗೀತ ಮತ್ತು ಕರಾಟೆಯ ಜೊತೆಗೆ ಅಭಿನಯದಲ್ಲಿಯೂ ಆಸಕ್ತಿ ಹೊಂದಿರುವ ದಿವ್ಯಶ್ರೀ, ಪ್ರಸ್ತುತ ನಿರ್ಮಾಣ ಹಂತದಲ್ಲಿರುವ ‘ಬಂಗಾರದ ಬುದ್ಧಿ’ ಹಾಗೂ ‘ಜೋಗಿ ಕಾಮನ್ ಮ್ಯಾನ್’ ಕನ್ನಡ ಚಲನಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ಕುಟುಂಬದ ಪ್ರೋತ್ಸಾಹ :

ದಿವ್ಯಶ್ರೀ ಅವರ ತಂದೆ ಜಗದೀಶ್ ಕೆಂಭಾವಿಮಠ ವ್ಯಾಪಾರಸ್ಥರಾಗಿದ್ದು, ತಾಯಿ ಎಂ. ಶ್ರೀದೇವಿ ಅವರು ಎಸ್‌ಬಿಐ ಲೈಫ್ ಇನ್ಶುರೆನ್ಸ್ ಸಂಸ್ಥೆಯಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದಾರೆ. ಸಹೋದರಿ ಹೇಮಾಶ್ರೀ 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಮಗಳ ಆಸಕ್ತಿಗೆ ಪೋಷಕರು ಪ್ರೋತ್ಸಾಹ ನೀಡುತ್ತಿದ್ದು, ಶಿಕ್ಷಣದ ಜೊತೆಗೆ ಸಂಗೀತ, ಕರಾಟೆ ಮತ್ತು ಅಭಿನಯ ಚಟುವಟಿಕೆಗಳಲ್ಲಿ ಭಾಗವಹಿಸಲು ಸಹಕಾರ ನೀಡುತ್ತಿದ್ದಾರೆ. ಮಕ್ಕಳಲ್ಲಿರುವ ಆಸಕ್ತಿ ಮತ್ತು ಪ್ರತಿಭೆಯನ್ನು ಗುರುತಿಸಿ, ಶಿಕ್ಷಣದ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶ ಕಲ್ಪಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ದಿವ್ಯಶ್ರೀ ಅವರ ಚಟುವಟಿಕೆಗಳು ಗಮನ ಸೆಳೆಯುತ್ತವೆ.

ಶ್ರೀ ಕೆಂಭಾವಿಮಠ ಅವರಂತಹ ಬಹುಮುಖ ಪ್ರತಿಭೆಯುಳ್ಳ ಬಾಲಪ್ರತಿಭೆಗಳನ್ನು ಗುರುತಿಸಿ, ಸೂಕ್ತ ಗೌರವ ಹಾಗೂ ಸನ್ಮಾನದ ಮೂಲಕ ಪ್ರೋತ್ಸಾಹಿಸಬೇಕು. ಬಾಲ್ಯದಲ್ಲಿಯೇ ವಿವಿಧ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡುತ್ತಿರುವ ಇಂತಹ ಮಕ್ಕಳಿಗೆ ಅಗತ್ಯ ಪ್ರೋತ್ಸಾಹ ಮತ್ತು ಬೆಂಬಲ ನೀಡಿದರೆ, ಮುಂದಿನ ದಿನಗಳಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದ ಉನ್ನತ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡು ನಮ್ಮ ವಿಜಯನಗರ ಜಿಲ್ಲೆ, ಹೊಸಪೇಟೆ ಮಾತ್ರವಲ್ಲದೆ ಇಡೀ ನಾಡು ಹೆಮ್ಮೆಪಡುವಂತೆ ಮಾಡಬಲ್ಲರು. ಇಂತಹ ಪ್ರತಿಭೆಗಳು ಕೇವಲ ತಮ್ಮ ಸಾಧನೆಗೆ ಸೀಮಿತವಾಗದೆ, ನಾಡಿನ ಇತರ ಮಕ್ಕಳಿಗೂ ಸ್ಫೂರ್ತಿ ಹಾಗೂ ಮಾದರಿಯಾಗಬೇಕು.

-ಗುಜ್ಜಲ ಗಣೇಶ್, ಉಪಾಧ್ಯಕ್ಷ, ಕರುನಾಡ ಕಲಿಗಳ ಕ್ರಿಯಾಶೀಲ ಸಮಿತಿ, ವಿಜಯನಗರ ಜಿಲ್ಲೆ

ಸಂಗೀತ, ಕರಾಟೆ, ಅಭಿನಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದಿವ್ಯಶ್ರೀ ಕೆಂಭಾವಿಮಠ ತೊಡಗಿಸಿಕೊಂಡಿರುವುದು ಸಂತಸದ ಸಂಗತಿ. ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದರೆ ಅವರು ಉತ್ತಮ ಸಾಧನೆ ಮಾಡಲು ಸಾಧ್ಯ. ದಿವ್ಯಶ್ರೀ ಭವಿಷ್ಯದಲ್ಲಿ ಇನ್ನಷ್ಟು ಸಾಧನೆ ಮಾಡಿ ಹೊಸಪೇಟೆ ಹಾಗೂ ವಿಜಯನಗರ ಜಿಲ್ಲೆಯ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಬೆಳಗಿಸಲಿ ಎಂದು ಹಾರೈಸುತ್ತೇನೆ.

-ಚಂದ್ರಶೇಖರ ಶಾಸ್ತ್ರಿ, ನಿವೃತ್ತ ಪ್ರಾಚಾರ್ಯ, ಇತಿಹಾಸ ಪರಿಣಿತರು, ಹೊಸಪೇಟೆ

Tags

actingKaratemusicHosapetechild
share
ಮಹಮ್ಮದ್ ಗೌಸ್, ವಿಜಯನಗರ
ಮಹಮ್ಮದ್ ಗೌಸ್, ವಿಜಯನಗರ
Next Story
X