Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಖಾಸಗಿ ಕಾಲೇಜು ಕಟ್ಟಡದಲ್ಲೇ ಸರಕಾರಿ ವಸತಿ...

ಖಾಸಗಿ ಕಾಲೇಜು ಕಟ್ಟಡದಲ್ಲೇ ಸರಕಾರಿ ವಸತಿ ಶಾಲೆ!

ದಸ್ತಗೀರ ನದಾಫ್ ಯಳಸಂಗಿದಸ್ತಗೀರ ನದಾಫ್ ಯಳಸಂಗಿ16 July 2026 2:17 PM IST
share
ಖಾಸಗಿ ಕಾಲೇಜು ಕಟ್ಟಡದಲ್ಲೇ ಸರಕಾರಿ ವಸತಿ ಶಾಲೆ!
ಅರೆಬೆಂದ, ಪೋಷಕಾಂಶವಿಲ್ಲದ ಅನ್ನ ಸೇವಿಸುತ್ತಿರುವ ವಿದ್ಯಾರ್ಥಿಗಳು: ಆರೋಪ

ಕಲಬುರಗಿ: ಚಿತ್ತಾಪುರ ತಾಲೂಕಿನ ದಂಡೋತಿಯಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಯಲ್ಲಿ ಕಳಪೆ ಆಹಾರ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದ ಘಟನೆ ಮಾಸುವ ಮುನ್ನವೇ, ಕಲಬುರಗಿ ನಗರದ ಮತ್ತೊಂದು ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಸುತ್ತಿರುವ ಆರೋಪ ತಡವಾಗಿ ಬೆಳಕಿಗೆ ಬಂದಿದೆ.

ನಗರದ ಹಪ್ತ ಗುಂಬಜ್ ಸಮೀಪ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ನಡೆಯುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಅರೆಬೆಂದ ಅನ್ನವನ್ನು ಉಪ್ಪು, ಸಮರ್ಪಕ ಸಾಂಬಾರು ಹಾಗೂ ಪೂರಕ ಆಹಾರ ಪದಾರ್ಥಗಳಿಲ್ಲದೆ ನೀಡಲಾಗಿದೆ ಎನ್ನಲಾಗಿದೆ. ಮಕ್ಕಳಿಗೆ ಕೈದಿಗಳಿಗೂ ನೀಡದಂತಹ ಕಳಪೆ ಊಟ ಪೂರೈಸಲಾಗುತ್ತಿದೆ ಎಂದು ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿತ್ಯವೂ ಅನ್ನ-ಸಾಂಬಾರ್:

ಬಡ ಮತ್ತು ಪ್ರತಿಭಾವಂತ ಮಕ್ಕಳು ಉತ್ತಮ ಶಿಕ್ಷಣ ಪಡೆದು ಉನ್ನತ ಭವಿಷ್ಯ ರೂಪಿಸಿಕೊಳ್ಳುವ ಕನಸಿನೊಂದಿಗೆ ವಸತಿ ಶಾಲೆಗಳಿಗೆ ಪ್ರವೇಶ ಪಡೆಯುತ್ತಾರೆ. ಆದರೆ ಇಂತಹ ಶಾಲೆಗಳಲ್ಲಿ ಕಳಪೆ ಆಹಾರ ನೀಡಿದರೆ ಮಕ್ಕಳನ್ನು ವಸತಿ ಶಾಲೆಗೆ ಸೇರಿಸಲು ಪಾಲಕರು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಬಾಳೆಹಣ್ಣು, ಮೊಟ್ಟೆ, ಮಾಂಸಾಹಾರ ಹಾಗೂ ಇತರ ಪೌಷ್ಟಿಕ ಆಹಾರ ಪದಾರ್ಥಗಳನ್ನು ಒದಗಿಸಲು ಸರಕಾರ ಅನುದಾನ ನೀಡುತ್ತದೆ. ಆದರೆ ಈ ಶಾಲೆಯಲ್ಲಿ ಬಹುತೇಕ ಅನ್ನ-ಸಾಂಬಾರ್ ಮಾತ್ರ ನೀಡಲಾಗುತ್ತಿದ್ದು, ಪೌಷ್ಟಿಕ ಆಹಾರಕ್ಕಾಗಿ ಬಿಡುಗಡೆಯಾಗುವ ಅನುದಾನ ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಖಾಸಗಿ ಶಿಕ್ಷಣ ಸಂಸ್ಥೆಯ ಕಟ್ಟಡದಲ್ಲೇ ವಸತಿ ಶಾಲೆ

ಸರಕಾರಿ ವಸತಿ ಶಾಲೆಗಳು ಸಾಮಾನ್ಯವಾಗಿ ಇಲಾಖೆಯ ಸ್ವಂತ ಕಟ್ಟಡ ಅಥವಾ ಪ್ರತ್ಯೇಕವಾಗಿ ಬಾಡಿಗೆ ಪಡೆದ ಕಟ್ಟಡಗಳಲ್ಲಿ ನಡೆಯುತ್ತವೆ. ಆದರೆ ಹಪ್ತ ಗುಂಬಜ್ ಸಮೀಪದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಖಾಸಗಿ ಶಾಲೆ ಮತ್ತು ಕಾಲೇಜುಗಳು ಕಾರ್ಯನಿರ್ವಹಿಸುತ್ತಿರುವ ಕಟ್ಟಡದಲ್ಲೇ ನಡೆಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಒಂದೇ ಕಟ್ಟಡದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಯ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ, ಬಿ.ಇಡಿ ಕಾಲೇಜು, ಫಾರ್ಮಸಿ ಕಾಲೇಜು ಸೇರಿದಂತೆ ವಿವಿಧ ಕೋರ್ಸ್‌ಗಳು ನಡೆಯುತ್ತಿದ್ದು, ಅದೇ ಆವರಣದಲ್ಲಿ ಸರಕಾರಿ ವಸತಿ ಶಾಲೆಯನ್ನೂ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಪ್ರಾಂಶುಪಾಲರೇ ವಾರ್ಡನ್ ಮತ್ತು ಸಿಬ್ಬಂದಿ!

ವಸತಿ ಶಾಲೆಯನ್ನು ಪ್ರಾಂಶುಪಾಲರೊಬ್ಬರೇ ನಿರ್ವಹಿಸುತ್ತಿದ್ದು, ಅವರೇ ವಾರ್ಡನ್ ಜವಾಬ್ದಾರಿಯನ್ನೂ ವಹಿಸಿಕೊಂಡಿದ್ದಾರೆ. ಶಾಲೆಯಲ್ಲಿ ಡಿ-ಗ್ರೂಪ್ ಸಿಬ್ಬಂದಿ, ವಾಚ್ಮನ್, ಸ್ಟಾಫ್ ನರ್ಸ್ ಹಾಗೂ ಇತರ ಅಗತ್ಯ ಸಿಬ್ಬಂದಿಯ ಕೊರತೆಯಿದ್ದು, ಇವೆಲ್ಲವನ್ನೂ ಪ್ರಾಂಶುಪಾಲರೇ ನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ. ಅದೇ ವೇಳೆ, ಅಗತ್ಯ ಆಹಾರ ಸಾಮಗ್ರಿಗಳ ದಾಸ್ತಾನು ಲಭ್ಯವಿದ್ದರೂ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ಪೂರೈಸುವಲ್ಲಿ ಶಾಲೆಯ ಆಡಳಿತ ವಿಫಲವಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

ಹೆಣ್ಣುಮಕ್ಕಳಿಗೆ ಪ್ರತ್ಯೇಕ ಶೌಚಾಲಯವಿಲ್ಲ:

ವಸತಿ ಶಾಲೆಯಲ್ಲಿರುವ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಶೌಚಾಲಯದ ವ್ಯವಸ್ಥೆಯೂ ಇಲ್ಲದಿರುವುದು ಪಾಲಕರ ಅಸಮಾಧಾನಕ್ಕೆ ಕಾರಣವಾಗಿದೆ. ಶೈಕ್ಷಣಿಕ ವರ್ಷ ಆರಂಭವಾಗಿ ಎರಡು ತಿಂಗಳು ಕಳೆದಿದ್ದರೂ ವಿದ್ಯಾರ್ಥಿನಿಯರಿಗೆ ಸಮರ್ಪಕ ಶೌಚಾಲಯ ಸೌಲಭ್ಯ ಕಲ್ಪಿಸಿಲ್ಲ ಎನ್ನಲಾಗಿದೆ.

ವಸತಿ ಶಾಲೆಗಳ ನಿರ್ವಹಣೆಗಾಗಿ ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆಯಾಗುತ್ತಿದ್ದರೂ, ಅಧಿಕಾರಿಗಳು ಮತ್ತು ಶಾಲೆಯ ಆಡಳಿತ ಕನಿಷ್ಠ ಮೂಲಸೌಕರ್ಯ ಕಲ್ಪಿಸದಿರುವುದು ನಾಚಿಕೆಗೇಡಿನ ಸಂಗತಿ ಎಂದು ಪಾಲಕರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಸತಿ ಶಾಲೆಯಲ್ಲಿ 150ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಹೆಣ್ಣುಮಕ್ಕಳ ಶೌಚಾಲಯ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಅವರಿಗೆ ತೊಂದರೆಯಾಗುತ್ತಿದೆ. ಅಡುಗೆ ಸಿಬ್ಬಂದಿಯ ಕೊರತೆಯಿದ್ದು, ಇರುವ ಸಿಬ್ಬಂದಿ ಪ್ರತಿಭಟನೆಗೆ ತೆರಳಿದ್ದಾರೆ.

-ಯೂಸುಫ್ ಖಾನ್

ಪ್ರಾಂಶುಪಾಲ ಹಾಗೂ ವಾರ್ಡನ್

ಖಾಸಗಿ ಶಿಕ್ಷಣ ಸಂಸ್ಥೆಯ ಕಟ್ಟಡದಲ್ಲಿ ಸರಕಾರಿ ವಸತಿ ಶಾಲೆ ನಡೆಸಬಾರದು ಎಂಬ ಮಾರ್ಗಸೂಚಿ ಇರುವ ಕುರಿತು ಪರಿಶೀಲಿಸಲಾಗುವುದು. ಅಂತಹ ನಿಯಮವಿದ್ದರೆ ಶಾಲೆಯನ್ನು ಕೂಡಲೇ ಸ್ಥಳಾಂತರಿಸಲಾಗುವುದು. ಸಿಬ್ಬಂದಿ ಕೊರತೆ ಇರುವುದು ಗಮನಕ್ಕೆ ಬಂದಿದೆ. ವಿದ್ಯಾರ್ಥಿಗಳಿಗೆ ಕಳಪೆ ಆಹಾರ ಪೂರೈಸಿರುವುದನ್ನು ಸಹಿಸುವುದಿಲ್ಲ. ಪ್ರಾಂಶುಪಾಲರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

-ಸಂಗಮೇಶ

ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ

ಮಕ್ಕಳು ಚೆನ್ನಾಗಿ ವಿದ್ಯಾಭ್ಯಾಸ ಮಾಡಲಿ ಎಂಬ ಉದ್ದೇಶದಿಂದ ವಸತಿ ಶಾಲೆಗೆ ಸೇರಿಸಿದ್ದೇವೆ. ತರಕಾರಿ, ಮೊಟ್ಟೆ ಹಾಗೂ ಇತರ ಪೌಷ್ಟಿಕ ಆಹಾರ ನೀಡುವ ಬದಲು ಕಳಪೆ ಊಟ ಪೂರೈಸಲಾಗುತ್ತಿದೆ. ಮಕ್ಕಳಿಗೆ ಇಂತಹ ಅನ್ನ ನೀಡುತ್ತಿರುವುದು ತುಂಬಾ ನೋವು ತಂದಿದೆ.

-ಹೆಸರು ಬಹಿರಂಗಪಡಿಸಲು ಇಚ್ಛಿಸದ ಪಾಲಕರು

share
ದಸ್ತಗೀರ ನದಾಫ್ ಯಳಸಂಗಿ
ದಸ್ತಗೀರ ನದಾಫ್ ಯಳಸಂಗಿ
Next Story
X