Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಶಾಲೆಯಿಂದ ದೂರ ಉಳಿದಿದ್ದ ಮಕ್ಕಳು ಈಗ...

ಶಾಲೆಯಿಂದ ದೂರ ಉಳಿದಿದ್ದ ಮಕ್ಕಳು ಈಗ ತಪ್ಪದೇ ಹಾಜರು: ಶಿಕ್ಷಕರ ಕಾಳಜಿಗೆ ಗ್ರಾಮಸ್ಥರ ವ್ಯಾಪಕ ಮೆಚ್ಚುಗೆ

ಕೆ.ಎಂ.ಇಸ್ಮಾಯಿಲ್ ಕಂಡಕರೆಕೆ.ಎಂ.ಇಸ್ಮಾಯಿಲ್ ಕಂಡಕರೆ8 Aug 2025 2:54 PM IST
share
ಶಾಲೆಯಿಂದ ದೂರ ಉಳಿದಿದ್ದ ಮಕ್ಕಳು ಈಗ ತಪ್ಪದೇ ಹಾಜರು: ಶಿಕ್ಷಕರ ಕಾಳಜಿಗೆ ಗ್ರಾಮಸ್ಥರ ವ್ಯಾಪಕ ಮೆಚ್ಚುಗೆ
ಕಾಡಂಚಿನ ಚೆನ್ನಂಗಿ ಸರಕಾರಿ ಶಾಲೆಯಲ್ಲಿ ದಿನಕ್ಕೊಂದು ವಿಶೇಷ ಕಾರ್ಯಕ್ರಮ

ಮಡಿಕೇರಿ: ಕಾಡಂಚಿನ ಚೆನ್ನಂಗಿ ಸರಕಾರಿ ಶಾಲೆಯಲ್ಲಿ ಶಿಕ್ಷಣ ಇಲಾಖೆಯ ನಿರ್ದೇಶನವನ್ನು ಪಾಲಿಸಿ ‘ದಿನಕ್ಕೊಂದು ವಿಶೇಷ ಕಾರ್ಯಕ್ರಮ’ವನ್ನು ಆಯೋಜಿಸುವ ಮೂಲಕ ಮಕ್ಕಳು ಶಾಲೆಗೆ ತಪ್ಪದೇ ಹಾಜರಾಗುವಂತೆ ಮಾಡಿದ ಶಿಕ್ಷಕರ ಕಾಳಜಿಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಈ ಹಿಂದೆ ಶಿಕ್ಷಣದಿಂದ ದೂರ ಉಳಿದಿದ್ದ ಮಕ್ಕಳನ್ನು ಶಾಲೆಗೆ ಕರೆತರಲು ಹಾಡಿಗೆ ಹೋದರೆ ಶಿಕ್ಷಕರನ್ನು ಕಂಡ ಮಕ್ಕಳು ಕಾಡಿಗೆ ಓಡುತ್ತಿದ್ದರು. ಇದರಿಂದ ಮಕ್ಕಳನ್ನು ಕರೆ ತರುವುದು ಶಿಕ್ಷಕರಿಗೆ ಸವಾಲಾಗಿ ಪರಿಣಮಿಸಿತ್ತು. ನಂತರದ ದಿನಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಿ ಪೋಷಕರು ಹಾಗೂ ಮಕ್ಕಳನ್ನು ಮನವೊಲಿಸಿದಾಗ ಇದೀಗ ಶಿಕ್ಷಕರು ಬರುವ ಮುನ್ನವೇ ಮಕ್ಕಳು ಶಾಲೆಗೆ ತಪ್ಪದೇ ಹಾಜರಾಗುತ್ತಿದ್ದಾರೆ.

ಚೆನ್ನಂಗಿ ಸರಕಾರಿ ಶಾಲೆಯ ವಿದ್ಯಾರ್ಥಿಗಳ ಕಲಿಕೆಗೆ ಅನುಗುಣವಾಗಿ ತಿಂಗಳಿಗೊಂದು ವಿನೂತನ ಕಾರ್ಯಕ್ರಮ ವನ್ನು ಆಯೋಜಿಸುವುದರ ಮೂಲಕ ಅಧಿಕಾರಿಗಳು, ಜನಪ್ರತಿ ನಿಧಿಗಳು, ಪೋಷಕರು ಹಾಗೂ ಗ್ರಾಮಸ್ಥರ ಮೆಚ್ಚುಗೆ ಗಳಿಸಿದ್ದ ಶಾಲೆಯಲ್ಲಿ ಇದೀಗ ಶಿಕ್ಷಣ ಇಲಾಖೆಯ ನಿರ್ದೇಶನವನ್ನು ಪಾಲಿಸಿ ‘ದಿನಕ್ಕೊಂದು ವಿಶೇಷ ಕಾರ್ಯಕ್ರಮ’ವನ್ನು ಆಯೋಜಿಸಲಾಗುತ್ತಿದೆ. ಈ ಮೂಲಕ ನಾವು ಯಾರಿಗೂ ಕಮ್ಮಿ ಇಲ್ಲ ಎಂಬಂತೆ ವಿದ್ಯಾರ್ಥಿಗಳು ಎಲ್ಲ ಕಾರ್ಯಕ್ರಮಗಳಲ್ಲೂ ಭಾಗವಹಿಸುವುದರ ಮೂಲಕ ವ್ಯಾಪಕ ಮೆಚ್ಚುಗೆ ಗಳಿಸಿದ್ದಾರೆ.

ಶಿಕ್ಷಣದೊಂದಿಗೆ ನೃತ್ಯ, ಗಾಯನ, ಯೋಗ, ಪರಿಸರ ಕಾಳಜಿ, ಶುಚಿತ್ವ, ಚಿತ್ರಕಲೆ, ಕೌಶಲ್ಯ ತರಬೇತಿ, ಶುದ್ಧ ಆಹಾರ ಬಳಕೆ, ಆಲಂಕಾರಿಕ ವಸ್ತುಗಳ ತಯಾರಿಕೆ, ಮಕ್ಕಳ ಸಂತೆ ಸೇರಿದಂತೆ ವಿವಿಧ ಕ್ರೀಡೆಗಳಲ್ಲೂ ತೊಡಗಿಸಿಕೊಂಡು ತಮ್ಮ ಪ್ರತಿಭೆ ಅನಾವರಣಗೊಳಿಸಿ ಮಾದರಿಯಾದ ವಿದ್ಯಾರ್ಥಿಗಳ ಸಾಧನೆಗೆ ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಹಲವು ವರ್ಷಗಳ ಹಿಂದೆ ಕಾಡಂಚಿನ ಕೆಲವು ಮಕ್ಕಳು ಶಾಲೆಗೆ ತೆರಳಲು ಹಿಂದೇಟು ಹಾಕುತ್ತಿದ್ದರು. ಎರಡು ವರ್ಷಗಳ ಹಿಂದೆ ಪ್ರಭಾರ ಮುಖ್ಯ ಶಿಕ್ಷಕಿಯಾಗಿ ಶಾಲೆಗೆ ನೇಮಕಗೊಂಡ ಕೆ.ಕೆ.ಸುಷಾ ಅವರು ಮೊದಲಿಗೆ ಪ್ರತಿ ಹಾಡಿಗಳಿಗೆ ತೆರಳಿ ಪೋಷಕರೊಂದಿಗೆ ಮಕ್ಕಳನ್ನು ಶಾಲೆಗೆ ಕಳಿಸಲು ಮನವೊಲಿಸಿದರು. ಆದರೆ, ಕೆಲವು ದಿನ ಕಳೆದರೂ ಮಕ್ಕಳು ಮಾತ್ರ ಶಾಲೆ ಕಡೆ ಬರುತ್ತಿರಲಿಲ್ಲ. ಪೋಷಕರು ಮಕ್ಕಳನ್ನು ಮನೆಯಲ್ಲಿ ಬಿಟ್ಟು ದಿನನಿತ್ಯದ ಕೆಲಸಕ್ಕೆ ತೆರಳುತ್ತಿದ್ದರು.ಶಾಲೆಯ ದಾಖಲಾತಿಯು ಕಡಿಮೆಯಾದ ಕಾರಣ ಶಿಕ್ಷಕರೇ ಮಕ್ಕಳನ್ನು ಕರೆತರಲು ಹಾಡಿಗೆ ತೆರಳುತ್ತಿದ್ದರು. ಶಿಕ್ಷಕರು ದೂರದಿಂದಲೇ ಬರುವುದನ್ನು ಕಂಡ ಹಾಡಿ ಮಕ್ಕಳು ಕಾಡಿಗೆ ಓಡುತ್ತಿದ್ದರು. ಇದರಿಂದ ಮಕ್ಕಳನ್ನು ಶಾಲೆಗೆ ಕರೆ ತರುವುದು ಶಿಕ್ಷಕರಿಗೆ ಸವಾಲಾಗಿ ಪರಿಣಮಿಸಿತ್ತು.

ಕಾರ್ಮಿಕರಿಗೆ ರಜಾ ದಿನಗಳಂದು ಶಾಲೆಯಲ್ಲಿ ಪೋಷಕರ ಸಭೆಯನ್ನು ಮಾಡಿದ ಶಿಕ್ಷಕರು, ‘ಪ್ರತಿ ಮಕ್ಕಳಿಗೆ ಶಿಕ್ಷಣ ಅತ್ಯಗತ್ಯವಾಗಿದೆ. ಸರಕಾರ ಹಲವಾರು ಯೋಜನೆಗಳನ್ನು ನೀಡುತ್ತಿದೆ. ಯಾವುದೇ ವೆಚ್ಚಗಳಿಲ್ಲದೆ ಶಿಕ್ಷಣ ಕಲಿತು ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು’ ಎಂದು ಮಾಹಿತಿ ನೀಡಿದರು.

ಮಕ್ಕಳ ಶಿಕ್ಷಣದ ಬಗ್ಗೆ ಕಾಳಜಿ ವಹಿಸಿದ ಪೋಷಕರು, ಮರುದಿನ ಕೆಲಸವನ್ನು ಬಿಟ್ಟು ಮಕ್ಕಳೊಂದಿಗೆ ಶಾಲೆಗೆ ಆಗಮಿಸಿ ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡಿದರು. ಶಿಕ್ಷಕರು ಮಕ್ಕಳ ಕಲಿಕೆಗೆ ಪೂರಕವಾದ ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆ ಕಾರ್ಯಕ್ರಮವನ್ನು ಆಯೋಜಿಸಿದರು. ಕಡ್ಡಾಯ ಹಾಜರಾತಿ, ಹೆಚ್ಚು ಅಂಕಗಳಿಸುವ ವಿದ್ಯಾರ್ಥಿಗಳಿಗೆ ದಾನಿಗಳು ಬಹುಮಾನ ಘೋಷಣೆ ಮಾಡಿದರು. ಕೆಲವೇ ದಿನಗಳಲ್ಲಿ ವಿದ್ಯಾರ್ಥಿಗಳು ಎಲ್ಲ ಕಾರ್ಯಕ್ರಮಗಳಲ್ಲೂ ಪಾಲ್ಗೊಳ್ಳುವುದರ ಮೂಲಕ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು.

ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಜವಾಬ್ದಾರಿಯಿಂದ ಆಲಂಕಾರಿಕ ಗಿಡಮರಗಳು, ಬಗೆಬಗೆಯ ಹೂವಿನ ಗಿಡಗಳಿಂದ ಶಾಲೆಯ ಆವರಣ ಹಚ್ಚ ಹಸಿರಿನೊಂದಿಗೆ ಕಂಗೊಳಿಸಿದರೆ, ಕೊಠಡಿಗಳಲ್ಲಿ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದ ಬರಹ, ಚಿತ್ರಕಲೆ, ಪರಿಸರ, ಆರೋಗ್ಯ ಜಾಗೃತಿ, ಪ್ರಾಣಿ ಪಕ್ಷಿಗಳ ಭಿತ್ತಿ ಚಿತ್ರಗಳು ಸಾಹಿತ್ಯ ಅಭಿಮಾ ನದ ಬರಹಗಳು ರಾರಾಜಿಸುತ್ತಿದ್ದು, ಎಲ್ಲರ ಗಮನ ಸೆಳೆಯುತ್ತಿದೆ.

ಆಹಾರ, ಆರೋಗ್ಯ ಕಾಳಜಿಯ ಮಹತ್ವವನ್ನು ಸಾರಲು ‘ಪೋಷಣ ಪಕ್ವಾಡ’ ಎಂಬ ಅಭಿಯಾನ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳು ತರಕಾರಿಗಳನ್ನು ಅಲಂಕಾರಿಕವಾಗಿ ತೊಟ್ಟು ತರಕಾರಿಗಳ ಬಳಕೆ ಹಾಗೂ ಮಹತ್ವವನ್ನು ಪೋಷಕರಿಗೆ ತಿಳಿಸಿದ್ದಾರೆ.

ಪಠ್ಯೇತರ ಚಟುವಟಿಕೆಗಳೊಂದಿಗೆ ಶಿಕ್ಷಣದ ಮೂಲಕ ಮಕ್ಕಳನ್ನು ಪ್ರತಿಭಾನ್ವಿತರಾಗಿ ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿರುವ ಶಿಕ್ಷಕರ ಶಿಕ್ಷಣ ಕಾಳಜಿಗೆ ಚೆನ್ನಯ್ಯನಕೋಟೆ ಗ್ರಾಪಂ ಅಧ್ಯಕ್ಷ ಮೇಕೆರೀರ ಅರುಣ್ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸರಕಾರದ ಯೋಜನೆಗಳು, ಶಿಕ್ಷಣ ಇಲಾಖೆಯ ನಿರ್ದೇಶನಗಳನ್ನು ಪಾಲಿಸುವುದರ ಮೂಲಕ ಕಾಡಂಚಿನ ಗ್ರಾಮದ ವಿದ್ಯಾರ್ಥಿಗಳನ್ನು ಶಿಕ್ಷಣದ ಮೂಲಕ ಮುಖ್ಯವಾಹಿನಿಗೆ ತರಲು ಕಲಿಕೆಗೆ ಅನುಗುಣವಾಗಿ ಹಲವಾರು ಕಾರ್ಯಕ್ರಮಗಳನ್ನು ನಿರಂತರ ಹಮ್ಮಿಕೊಂಡು ಬರಲಾಗುತ್ತಿದೆ. ಇದಕ್ಕೆ ಅಧಿಕಾರಿಗಳು, ದಾನಿಗಳು, ಪೋಷಕರು ಹೆಚ್ಚಿನ ಸಹಕಾರ ನೀಡುತ್ತಿದ್ದಾರೆ. ಕಳೆದ ವರ್ಷದಂತೆ ಈ ಸಾಲಿನಲ್ಲೂ 51 ವಿದ್ಯಾರ್ಥಿಗಳು ಕಲಿಕಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ತಮ್ಮ ಪ್ರತಿಭೆ ಅನಾವರಣಗೊಳಿಸುತ್ತಿದ್ದಾರೆ.

-ಕೆ.ಕೆ.ಸುಷಾ, ಪ್ರಭಾರ ಶಾಲಾ ಮುಖ್ಯ ಶಿಕ್ಷಕಿ

share
ಕೆ.ಎಂ.ಇಸ್ಮಾಯಿಲ್ ಕಂಡಕರೆ
ಕೆ.ಎಂ.ಇಸ್ಮಾಯಿಲ್ ಕಂಡಕರೆ
Next Story
X