Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಅಫಜಲಪುರ: ಬಸ್‌ ತಂಗುದಾಣಕ್ಕಾಗಿ...

ಅಫಜಲಪುರ: ಬಸ್‌ ತಂಗುದಾಣಕ್ಕಾಗಿ ಪ್ರಯಾಣಿಕರ ಆಗ್ರಹ

ಸಿದ್ದರಾಮ ಶಿವಣಗಿ, ಅಫಜಲಪುರಸಿದ್ದರಾಮ ಶಿವಣಗಿ, ಅಫಜಲಪುರ26 March 2026 3:09 PM IST
share
ಅಫಜಲಪುರ: ಬಸ್‌ ತಂಗುದಾಣಕ್ಕಾಗಿ ಪ್ರಯಾಣಿಕರ ಆಗ್ರಹ

ಅಫಜಲಪುರ: ಪಟ್ಟಣದ ಪ್ರಮುಖ ಕೇಂದ್ರವಾಗಿರುವ ಬಸವೇಶ್ವರ ವೃತ್ತದಲ್ಲಿ ಬಸ್ ನಿಲ್ದಾಣ ಅಥವಾ ಶೆಲ್ಟರ್ ಇಲ್ಲದ ಕಾರಣ ಸಾರ್ವಜನಿಕರು ದಿನನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ. ಬಿಸಿಲಿನ ತಾಪಮಾನ ಹೆಚ್ಚುತ್ತಿರುವ ಈ ದಿನಗಳಲ್ಲಿ ನೆರಳಿಲ್ಲದೆ ನಿಂತು ಬಸ್ ಕಾಯಬೇಕಾದ ಪರಿಸ್ಥಿತಿ ಪ್ರಯಾಣಿಕರನ್ನು ಹೈರಾಣಗೊಳಿಸಿದೆ.

ಈ ವೃತ್ತದ ಮೂಲಕ ಪ್ರತಿದಿನ ನೂರಾರು ವಿದ್ಯಾರ್ಥಿಗಳು, ಉದ್ಯೋಗಸ್ಥರು ಹಾಗೂ ಗ್ರಾಮೀಣ ಭಾಗದ ಜನರು ಸಂಚರಿಸುತ್ತಾರೆ. ಆದರೆ ಸಮರ್ಪಕ ಬಸ್ ನಿಲ್ದಾಣದ ಕೊರತೆಯಿಂದಾಗಿ ರಸ್ತೆ ಬದಿಯಲ್ಲೇ ನಿಂತು ಬಸ್ ಕಾಯುವುದು ಅನಿವಾರ್ಯವಾಗಿದೆ.

ಬಿಸಿಲಿನ ತಾಪವಷ್ಟೇ ಅಲ್ಲದೆ ಮಳೆಯ ಸಮಯದಲ್ಲೂ ಸಾರ್ವಜನಿಕರು ಭಾರೀ ತೊಂದರೆ ಅನುಭವಿಸುತ್ತಿದ್ದಾರೆ.

ಇನ್ನೊಂದೆಡೆ, ಬಸ್‌ಗಳು ರಸ್ತೆ ಮಧ್ಯದಲ್ಲೇ ನಿಲ್ಲುವುದರಿಂದ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿ ಟ್ರಾಫಿಕ್ ಸಮಸ್ಯೆ ಹೆಚ್ಚುತ್ತಿದೆ. ಇದರಿಂದ ಅಪಘಾತಗಳ ಸಂಭವವೂ ಹೆಚ್ಚುತ್ತಿದೆ ಎಂಬ ಆತಂಕ ಸ್ಥಳೀಯರಲ್ಲಿ ವ್ಯಕ್ತವಾಗಿದೆ.

ವಿಶೇಷವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ತೊಂದರೆ ಅನುಭವಿಸುತ್ತಿದ್ದಾರೆ. ವಿದ್ಯಾರ್ಥಿಗಳು ಪುಸ್ತಕ ಚೀಲ ಹೊತ್ತು ಬಿಸಿಲಿನಲ್ಲಿ ನಿಲ್ಲಬೇಕಾದರೆ, ಹಿರಿಯರು ನೆರಳಿಲ್ಲದೆ ತಾಸುಗಟ್ಟಲೆ ಕಾಯಬೇಕಾಗಿರುವುದು ಕಷ್ಟಕರವಾಗಿದೆ.

ಸಾರ್ವಜನಿಕರು ಹಲವು ಬಾರಿ ಸಂಬಂಧಿತ ಅಧಿಕಾರಿಗಳ ಗಮನಕ್ಕೆ ಈ ಸಮಸ್ಯೆಯನ್ನು ತಂದಿದ್ದರೂ, ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಇದರಿಂದ ಜನರಲ್ಲಿ ಅಸಮಾಧಾನ ಹೆಚ್ಚಾಗಿದೆ.

ಬಸವೇಶ್ವರ ವೃತ್ತವು ಪ್ರಮುಖ ಜಂಕ್ಷನ್ ಆಗಿರುವುದರಿಂದ ಇಲ್ಲಿ ಶೀಘ್ರದಲ್ಲೇ ಬಸ್ ಶೆಲ್ಟರ್ ನಿರ್ಮಿಸಿ ಕುಳಿತುಕೊಳ್ಳಲು ಆಸನಗಳು, ಮಳೆ-ಬಿಸಿಲಿನಿಂದ ರಕ್ಷಿಸುವ ಮೇಲ್ಛಾವಣಿ ಹಾಗೂ ರಾತ್ರಿ ಬೆಳಕು ವ್ಯವಸ್ಥೆ ಒದಗಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಬಸವೇಶ್ವರ ವೃತ್ತದಿಂದ ನೂರಾರು ವಿದ್ಯಾರ್ಥಿಗಳು ಮತ್ತು ಗ್ರಾಮೀಣ ಜನರು ಸಂಚರಿಸುತ್ತಾರೆ. ಶೆಲ್ಟರ್ ಇಲ್ಲದ ಕಾರಣ ಬಿಸಿಲು-ಮಳೆಯಲ್ಲಿ ತಾಸುಗಟ್ಟಲೆ ನಿಲ್ಲಬೇಕಾಗಿದೆ. ತಕ್ಷಣ ಮಿನಿ ಬಸ್ ಶೆಲ್ಟರ್ ನಿರ್ಮಿಸಬೇಕು.

-ಭರತ ಚಿಕ್ಕಳಗಿ, ಸ್ಥಳೀಯ

ಬಹಳ ಹಿಂದೆಯೇ ಇಲ್ಲಿ ಶೆಲ್ಟರ್ ನಿರ್ಮಾಣವಾಗಬೇಕಾಗಿತ್ತು. ನಿರ್ಲಕ್ಷ್ಯದಿಂದ ವಿಳಂಬವಾಗಿದೆ. ಬಿಸಿಲಿನಲ್ಲಿ ಮಹಿಳೆಯರು ಮತ್ತು ಮಕ್ಕಳು ತೊಂದರೆ ಅನುಭವಿಸುತ್ತಿದ್ದಾರೆ.

-ಶ್ರೀಕಾಂತ ದಿವಾಣಜಿ

ತಾಲೂಕಾಧ್ಯಕ್ಷರು ಕರವೇ ಅಫಜಲಪುರ

ಬಸ್ ಶೆಲ್ಟರ್ ನಿರ್ಮಾಣ ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಆದರೂ ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕುರಿತು ಶಾಸಕ ಎಂ.ವೈ. ಪಾಟೀಲ ಅವರಿಗೆ ಮನವಿ ಸಲ್ಲಿಸಲಾಗಿದೆ.

-ಎ.ವಿ.ಬೋವಿ, ರಸ್ತೆ ಸಾರಿಗೆ

ಘಟಕ ವ್ಯವಸ್ಥಾಪಕರು ಅಫಜಲಪುರ

ಸಾರ್ವಜನಿಕರ ಬೇಡಿಕೆ ನನ್ನ ಗಮನಕ್ಕೆ ಬಂದಿದೆ. ಶೀಘ್ರದಲ್ಲೇ ಬಸ್ ಶೆಲ್ಟರ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು.

-ಅರುಣಕುಮಾರ ಪಾಟೀಲ, ಅಧ್ಯಕ್ಷರು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ

share
ಸಿದ್ದರಾಮ ಶಿವಣಗಿ, ಅಫಜಲಪುರ
ಸಿದ್ದರಾಮ ಶಿವಣಗಿ, ಅಫಜಲಪುರ
Next Story
X