Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಎಐ ಹಾಜರಾತಿಗೆ ತಾಂತ್ರಿಕ ಸವಾಲುಗಳೇ...

ಎಐ ಹಾಜರಾತಿಗೆ ತಾಂತ್ರಿಕ ಸವಾಲುಗಳೇ ಹೆಚ್ಚು

ಕೆ.ಮಹಮ್ಮದ್ ಖಾಸೀಂಕೆ.ಮಹಮ್ಮದ್ ಖಾಸೀಂ17 July 2026 3:07 PM IST
share
ಎಐ ಹಾಜರಾತಿಗೆ ತಾಂತ್ರಿಕ ಸವಾಲುಗಳೇ ಹೆಚ್ಚು
ಶಿಕ್ಷಕರಿಗೆ ಹೆಚ್ಚಿದ ಹೊರೆ: ಬೋಧನೆ ಮೇಲೆ ಪರಿಣಾಮ

ಸಂಡೂರು: ಶಿಕ್ಷಣ ಕ್ಷೇತ್ರದಲ್ಲಿ ಡಿಜಿಟಲ್‌ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸುವ ಉದ್ದೇಶದಿಂದ ಸರಕಾರ ಶಾಲೆಗಳಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಮುಖ ಗುರುತಿಸುವಿಕೆ ಹಾಜರಾತಿ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಅನುಷ್ಠಾನದ ಹಂತದಲ್ಲಿ ಕಂಡುಬರುತ್ತಿರುವ ತಾಂತ್ರಿಕ ದೋಷಗಳು ಹಾಗೂ ಕಾರ್ಯನಿರ್ವಹಣೆಯ ಸಮಸ್ಯೆಗಳು ಹಲವಾರು ಶಿಕ್ಷಕರಲ್ಲಿ ಆತಂಕ ಮೂಡಿಸಿವೆ.

ಪ್ರತಿಯೊಬ್ಬ ವಿದ್ಯಾರ್ಥಿಯ ಮುಖವನ್ನು ತಂತ್ರಾಂಶದಲ್ಲಿ ನೋಂದಾಯಿಸಲಾಗುತ್ತದೆ. ಬಳಿಕ ಪ್ರತಿದಿನ ಬೆಳಗ್ಗೆ ಹಾಗೂ ಮಧ್ಯಾಹ್ನ ಎರಡು ಅವಧಿಗಳಲ್ಲಿ ಎಐ ತಂತ್ರಾಂಶದ ಮೂಲಕ ವಿದ್ಯಾರ್ಥಿಯ ಮುಖವನ್ನು ಗುರುತಿಸಿ ಹಾಜರಾತಿ ದಾಖಲಿಸಲಾಗುತ್ತದೆ. ಇದರಿಂದ ವಿದ್ಯಾರ್ಥಿಗಳ ಹಾಜರಾತಿ, ಬಿಸಿಯೂಟ, ಕ್ಷೀರಭಾಗ್ಯ, ಮೊಟ್ಟೆ, ಪಾದರಕ್ಷೆ ಸೇರಿದಂತೆ ಸರಕಾರಿ ಸೌಲಭ್ಯಗಳನ್ನು ನಿಖರವಾಗಿ ಯೋಜಿಸಲು ನೆರವಾಗುತ್ತದೆ.

ಶಿಕ್ಷಕರ ಅನುಭವದ ಪ್ರಕಾರ, ಒಂದು ತರಗತಿಯಲ್ಲಿ 35 ರಿಂದ 40 ವಿದ್ಯಾರ್ಥಿಗಳಿದ್ದರೂ ಎಐ ವ್ಯವಸ್ಥೆ ಕೆಲವೊಮ್ಮೆ 28 ರಿಂದ 30 ವಿದ್ಯಾರ್ಥಿಗಳನ್ನು ಮಾತ್ರ ಗುರುತಿಸುತ್ತಿದೆ. ಕೆಲವು ಸಂದರ್ಭಗಳಲ್ಲಿ ಇದಕ್ಕಿಂತಲೂ ಕಡಿಮೆ ವಿದ್ಯಾರ್ಥಿಗಳ ಹಾಜರಾತಿ ದಾಖಲಾಗುತ್ತಿದೆ. ವಿದ್ಯಾರ್ಥಿಯ ದಾಖಲೆಯನ್ನು ಪರಿಶೀಲಿಸಿ, ಕೈಯಾರೆ ತಿದ್ದುಪಡಿ ಮಾಡುವ ಕೆಲಸವೂ ಶಿಕ್ಷಕರ ಪಾಲಾಗುತ್ತಿದೆ.

ಎಐ ಹಾಜರಾತಿಯ ಪ್ರಮುಖ ಉದ್ದೇಶ ಶಿಕ್ಷಕರ ಸಮಯ ಉಳಿಸುವುದಾಗಿತ್ತು. ಆದರೆ ಹಲವು ಶಾಲೆಗಳಲ್ಲಿ ಬೆಳಿಗ್ಗೆ ಮತ್ತು ಮಧ್ಯಾಹ್ನದ ಎರಡು ಅವಧಿಗಳ ಹಾಜರಾತಿಯನ್ನು ಪೂರ್ಣಗೊಳಿಸಲು 30 ರಿಂದ 45 ನಿಮಿಷಗಳವರೆಗೆ ಸಮಯ ವ್ಯಯವಾಗುತ್ತಿದೆ ಎಂದು ಶಿಕ್ಷಕರು ತಿಳಿಸಿದ್ದಾರೆ.

ಶಿಕ್ಷಣ ಹಕ್ಕು ಕಾಯ್ದೆಯ ಆಶಯಪ್ರತಿಯೊಂದು ಮಗುವಿಗೂ ಶಿಕ್ಷಣ ದೊರಕಬೇಕು ಎಂಬುದು. ಆದರೆ ವಿದ್ಯಾರ್ಥಿ ಶಾಲೆಗೆ ಬಂದಿದ್ದರೂ ತಾಂತ್ರಿಕ ಕಾರಣಗಳಿಂದ ಹಾಜರಾತಿ ದಾಖಲಾಗದೆ ಹೋದರೆ, ಮುಂದಿನ ದಿನಗಳಲ್ಲಿ ಹಾಜರಾತಿ ಆಧರಿಸಿದ ಶೈಕ್ಷಣಿಕ ದಾಖಲೆಗಳ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನೆಗಳು ಉದ್ಭವಿಸಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

48 ಗಂಟೆಗಳ ತಿದ್ದುಪಡಿ? ಮತ್ತೊಂದು ಸವಾಲು

ವಿದ್ಯಾರ್ಥಿಯ ಛಾಯಾಚಿತ್ರವನ್ನು ತಿದ್ದುಪಡಿ ಮಾಡಬೇಕಾದರೆ ಸುಮಾರು 48 ಗಂಟೆಗಳವರೆಗೆ ಕಾಯಬೇಕಾಗುತ್ತಿದೆ ಎನ್ನಲಾಗಿದೆ. ಒಂದೇ ಹೆಸರಿನ ವಿದ್ಯಾರ್ಥಿಗಳನ್ನು ತಪ್ಪಾಗಿ ಗುರುತಿಸುವುದು ಸೇರಿದಂತೆ ಕೆಲವು ತಾಂತ್ರಿಕ ಸಮಸ್ಯೆಗಳನ್ನೂ ಶಿಕ್ಷಕರು ಉಲ್ಲೇಖಿಸುತ್ತಿದ್ದಾರೆ.

ಸರಕಾರದ ಉದ್ದೇಶ ಶಿಕ್ಷಣ ವ್ಯವಸ್ಥೆಯನ್ನು ಡಿಜಿಟಲ್ ಹಾಗೂ ಪಾರದರ್ಶಕಗೊಳಿಸುವುದಾಗಿದೆ. ತಂತ್ರಜ್ಞಾನವು ಶಿಕ್ಷಣಕ್ಕೆ ಪೂರಕವಾಗಬೇಕು. ಪರ್ಯಾಯವಾಗಬಾರದು. ಮಕ್ಕಳ ಕಲಿಕೆಯ ಸಮಯವನ್ನು ಉಳಿಸುವವ್ಯವಸ್ಥೆಯಾಗಿ ಎಐ ಹಾಜರಾತಿ ರೂಪುಗೊಂಡಾಗ ಮಾತ್ರ ಈ ಮಹತ್ವಾಕಾಂಕ್ಷಿ ಯೋಜನೆಯ ನಿಜವಾದ ಉದ್ದೇಶ ಸಾರ್ಥಕವಾಗಲಿದೆ ಎಂಬುದು ಶಿಕ್ಷಣ ವಲಯದ ಒಟ್ಟಾರೆ ಅಭಿಪ್ರಾಯವಾಗಿದೆ.

ಸಂಡೂರು ತಾಲೂಕಿನಲ್ಲಿ ಈಗಾಗಲೇ ಶಿಕ್ಷಕರ ಕೊರತೆ ಇದೆ. ಅದರ ಜೊತೆಗೆ ಕೆಲ ಖಾಯಂ ಶಿಕ್ಷಕರು ಎಸ್‌ಐಆರ್, ಬಿಎಲ್‌ಒ ಸೇರಿ ವಿವಿಧ ಚುನಾವಣಾ ಸಂಬಂಧಿತ ಕರ್ತವ್ಯಗಳಲ್ಲಿ ನಿರತರಾಗಿರುವುದರಿಂದ ಶಾಲೆಗಳಲ್ಲಿ ಉಳಿದ ಶಿಕ್ಷಕರ ಮೇಲಿನ ಕೆಲಸದ ಒತ್ತಡ ಹೆಚ್ಚಾಗಿದೆ. ಎಐ ಹಾಜರಾತಿಯನ್ನು ಖಾಯಂ ಶಿಕ್ಷಕರೇ ನಿರ್ವಹಿಸಬೇಕಾಗಿರುವುದು ಕೂಡ ಮತ್ತೊಂದು ಸವಾಲಾಗಿದೆ. ತಾಂತ್ರಿಕ ದೋಷಗಳನ್ನು ಶೀಘ್ರವಾಗಿ ಸರಿಪಡಿಸಿ, ವ್ಯವಸ್ಥೆಯನ್ನು ಸುಧಾರಿಸಬೇಕು.

<ಪ್ರೇಮಾ, ಅಧ್ಯಕ್ಷರು

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಸಂಡೂರು

ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪಾಲಕರಿಂದ ಬಂದಿರುವ ಸಲಹೆ ಮತ್ತು ಸಮಸ್ಯೆಗಳನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಅವುಗಳ ನಿವಾರಣೆಗೆ ಪ್ರತ್ಯೇಕ ತಾಂತ್ರಿಕ ಸಹಾಯ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಮುಂದಿನ 15 ದಿನಗಳಲ್ಲಿ ಬಹುತೇಕ ತಾಂತ್ರಿಕ ಸಮಸ್ಯೆಗಳು ಪರಿಹಾರಗೊಂಡು ವ್ಯವಸ್ಥೆ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ವಿಶ್ವಾಸವಿದೆ.

<ಡಾ. ಐ.ಆರ್.ಅಕ್ಕಿ

ಕ್ಷೇತ್ರ ಶಿಕ್ಷಣಾಧಿಕಾರಿ, ಸಂಡೂರು

share
ಕೆ.ಮಹಮ್ಮದ್ ಖಾಸೀಂ
ಕೆ.ಮಹಮ್ಮದ್ ಖಾಸೀಂ
Next Story
X