Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸರಕಾರ, ಟಿ.ಬಿ.ಬೋರ್ಡ್ ಅಧಿಕಾರಿಗಳ...

ಸರಕಾರ, ಟಿ.ಬಿ.ಬೋರ್ಡ್ ಅಧಿಕಾರಿಗಳ ನಿರ್ಲಕ್ಷ್ಯ: ಆರೋಪ

ಈ ವರ್ಷವೂ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಬಹುತೇಕ ಅನುಮಾನ

ಮಹಮ್ಮದ್ ಗೌಸ್, ವಿಜಯನಗರಮಹಮ್ಮದ್ ಗೌಸ್, ವಿಜಯನಗರ24 Jun 2025 12:19 PM IST
share
ಸರಕಾರ, ಟಿ.ಬಿ.ಬೋರ್ಡ್ ಅಧಿಕಾರಿಗಳ ನಿರ್ಲಕ್ಷ್ಯ: ಆರೋಪ
ಬೇಸಿಗೆ ವೇಳೆ ಕ್ರಸ್ಟ್‌ಗೇಟ್‌ಗಳ ಅಳವಡಿಕೆಗೆ ಸೂಕ್ತ ಸಮಯ. ಆಗ ಟಿ.ಬಿ.ಡ್ಯಾಂನಲ್ಲಿ ನೀರಿನ ಸಂಗ್ರಹವು ಕಡಿಮೆ ಇತ್ತು. ಈ ಅವಧಿಯೊಳಗೆ ಗೇಟ್ ಅಳವಡಿಕೆ ಮಾಡುತ್ತಾರೆ ಎಂಬ ಆಶಾಭಾವನೆ ಜಲಾಶಯ ವ್ಯಾಪ್ತಿಯ ರೈತರಲ್ಲಿತ್ತು. ಅದನ್ನು ಟಿ.ಬಿ.ಬೋರ್ಡ್ ಅಧಿಕಾರಿಗಳು ಹಾಗೂ ಆಳುವ ಸರಕಾರಗಳು ಹುಸಿಗೊಳಿಸಿದೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.

ವಿಜಯನಗರ: ಕಲ್ಯಾಣ ಕರ್ನಾಟಕದ ಜೀವನಾಡಿ ರಾಜ್ಯದ ಎರಡನೇ ಅತೀ ದೊಡ್ಡ ಜಲಾಶಯ ತುಂಗಭದ್ರಾ ಜಲಾಶಯದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಟಿ.ಬಿ. ಬೋರ್ಡ್‌ನ ಅಧಿಕಾರಿಗಳು ಹಾಗೂ ಸರಕಾರದ ನಿರ್ಲಕ್ಷ್ಯ ಧೋರಣೆ ರೈತರ ಕೆಂಗಣ್ಣಿಗೆ ಗುರಿಯಾಗುವಂತೆ ಮಾಡಿದೆ.

2024ರ ಅಗಸ್ಟ್ ತಿಂಗಳಲ್ಲಿ ತುಂಗಭದ್ರಾ ಜಲಾಶಯ ಭರ್ತಿಯಾಗಿ ಜಲಾಶಯದ 19ನೇ ಕ್ರಸ್ಟ್ ಗೇಟ್ ಚೈನ್ ಲಿಂಕ್ ಕಟ್ ಆಗಿತ್ತು. ಇದರಿಂದಾಗಿ ಹೊಸಪೇಟೆ ಸೇರಿದಂತೆ ಕಲ್ಯಾಣ ಕರ್ನಾಟಕ,ಆಂಧ್ರ ಹಾಗೂ ತೆಲಂಗಾಣ ಭಾಗದ ರೈತರು ಸಾಕಷ್ಟು ಆತಂಕ ಪಡುವಂತಾಗಿತ್ತು. ಡ್ಯಾಂ ತಜ್ಞ ಕನ್ಹಯ್ಯ ನಾಯ್ಡು ನೇತೃತ್ವದ ತಂಡ ಮುತುವರ್ಜಿ ವಹಿಸಿ ಡ್ಯಾಂಗೆ ತಾತ್ಕಾಲಿಕ ಸ್ಟಾಪ್ ಲಾಗ್ ಅಳವಡಿಸಲು ಮುಂದಾಗಿತ್ತು.

ನಂತರ ಕೇಂದ್ರದ ತಜ್ಞರ ತಂಡ ಡ್ಯಾಂಗೆ ಭೇಟಿ ನೀಡಿ 75 ವರ್ಷ ಹಳೆಯದಾದ ತುಂಗಭದ್ರಾ ಜಲಾಶಯದ ಭದ್ರತೆಗೆ 33ಗೇಟ್‌ಗಳ ಸುರಕ್ಷತಾ ಕ್ರಮದ ಬಗ್ಗೆ ಪರಿಶೀಲನೆ ನಡೆಸಿ ಎಲ್ಲ ಗೇಟ್ ಗಳನ್ನ ಬದಲಾಯಿಸಬೇಕು ಎಂದು ವರದಿ ಸಲ್ಲಿಸಿತ್ತು. ರಾಜ್ಯ ಸರಕಾರ ಬೇಸಿಗೆ ವೇಳೆ 19ನೇ ಗೇಟ್ ಅಳವಡಿಸುವ ಭರವಸೆ ನೀಡಿತ್ತು. 10 ತಿಂಗಳ ಅವಧಿ ಇದ್ದರೂ ಮೂರು ರಾಜ್ಯಗಳ ಸರಗಕಾರಗಳು ಹಾಗೂ ಟಿ.ಬಿ.ಬೋರ್ಡ್ ಅಧಿಕಾರಿಗಳು ಗೇಟ್ ಅಳವಡಿಸಲು ಬೇಕಾದ ಸಿದ್ಧತೆ ಮಾಡಿಕೊಳ್ಳುವುದನ್ನು ಬಿಟ್ಟು ನಿರ್ಲಕ್ಷ್ಯ ವಹಿಸಿದ್ದರಿಂದ 10 ತಿಂಗಳು ಕಳೆದರೂ ಇದುವರೆಗೂ ಗೇಟ್ ಬದಲಾಯಿಸಿಲ್ಲ ಎಂಬುದು ರೈತ ಮುಖಂಡರ ಆರೋಪವಾಗಿದೆ.

ಕಳೆದ ವರ್ಷ ಉತ್ತಮವಾದ ಮಳೆಯಾದ ಹಿನ್ನೆಲೆ ಡ್ಯಾಂ ಗೇಟ್ ಒಡೆದಾಗ ಅಧಿಕ ಪ್ರಮಾಣದ ನೀರು ಪೋಲಾಗಿದ್ದರೂ ಸ್ಟಾಪ್‌ಲಾಗ್ ಅಳವಡಿಕೆ ಬಳಿಕ ಮತ್ತೆ ನೀರು ಡ್ಯಾಂಗೆ ಹರಿದು ಬಂದಿತ್ತು. ಈ ವರ್ಷ ಈಗಾಗಲೇ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಬರುತ್ತಿರುವ ಹಿನ್ನೆಲೆ 105 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ತುಂಗಭದ್ರಾ ಜಲಾಶಯಕ್ಕೆ ಜೂನ್ ತಿಂಗಳ ಮಧ್ಯದಲ್ಲಿಯೇ 47 ಟಿಎಂಸಿ ನೀರು ಸಂಗ್ರಹವಾಗಿದೆ.

ಈಗ 19ನೇ ಕ್ರಸ್ಟ್‌ಗೇಟ್‌ನ ಎಲಿಮೆಂಟ್ಸ್ ಗಳನ್ನ ಗದಗ ಜಿಲ್ಲೆಯ ಅಡವಿ ಸೋಮಾಪುರದಲ್ಲಿ ತಯಾರಿಸಿ ಡ್ಯಾಂ ಬಳಿ ತಂದು ನಿಲ್ಲಿಸಲಾಗಿದೆ. ಎಲಿಮೆಂಟ್ಸ್ ಬಂದರೂ ಸಹ ಡ್ಯಾಂನಲ್ಲಿ ನೀರು ಸಂಗ್ರಹವಾಗಿದ್ದರಿಂದ ಸ್ಟಾಪ್‌ಲಾಗ್ ಅಳವಡಿಸಿರೋ 19ನೇ ಗೇಟ್‌ನ ಜಾಗಕ್ಕೆ ಕ್ರಸ್ಟ್ ಗೇಟ್ ಅಳವಡಿಸೋದು ಬಹುತೇಕ ಅನುಮಾನವಾಗಿದೆ. ಟಿಬಿ ಬೋರ್ಡ್ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯ ಧೋರಣೆ ಪರಿಣಾಮ ಕಾಲಹರಣ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಮೂರು ರಾಜ್ಯಗಳ ಜೀವನಾಡಿ ತುಂಗಭದ್ರಾ ಜಲಾಶಯದ ರಕ್ಷಣೆ ಮಾಡುವುದು ಜಲಾಶಯದ ಅಧಿಕಾರಿಗಳು, ಜನಪ್ರತಿನಿಧಿಗಳು, ಮೂರು ರಾಜ್ಯಗಳು ಹಾಗೂ ಟಿ.ಬಿ.ಬೋರ್ಡ್‌ನ ಅಧಿಕಾರಿಗಳ ಹೊಣೆಯಾಗಿದೆ.

ತುಂಗಾಭದ್ರಾ ಡ್ಯಾಂ ಗೇಟ್ ಕಟ್ ಆಗಿದ್ದು ಯಾಕೆ.?, ಅದರ ವೈಫಲ್ಯಕ್ಕೆ ಕಾರಣ ಯಾರು ಎಂದು ಇದುವರೆಗೂ ಟಿ.ಬಿ.ಬೋರ್ಡ್‌ನ ಅಧಿಕಾರಿಗಳು ಸ್ಪಷ್ಟನೆ ನೀಡಿಲ್ಲ. ಈಗ ಗೇಟ್ ಅಳವಡಿಕೆಗೆ ಮೀನಾಮೇಷ ಎಣಿಸುತ್ತಿದೆ. ಮತ್ತೊಮ್ಮೆ ಡ್ಯಾಂ ಭರ್ತಿಯಾಗಿ ದೊಡ್ಡ ಅನಾಹುತ ಸಂಭವಿಸಿದರೆ ಇದಕ್ಕೆ ಯಾರು ಹೊಣೆ ಎಂದು ರೈತ ಮುಖಂಡರು ಪ್ರಶ್ನಿಸಿದ್ದಾರೆ.

ಅಹಮದಾಬಾದ್ ಕಂಪೆನಿಯೊಂದು ಈಗಾಗಲೇ 33 ಕ್ರಸ್ಟ್‌ಗೇಟ್‌ಗಳ ಅಳವಡಿಕೆಗೆ ಗುತ್ತಿಗೆ ಪಡೆದು ಜವಾಬ್ದಾರಿ ತೆಗೆದುಕೊಂಡಿದೆ. ಸದ್ಯಕ್ಕೆ 19ನೇ ಗೇಟ್ ಎಲಿಮೆಂಟ್ಸ್ ಡ್ಯಾಂಗೆ ಬಂದಿಳಿದಿವೆ. ಈ 19ನೇ ಕ್ರಸ್ಟ್‌ಗೇಟ್ ಯಾವಾಗ ಅಳವಡಿಸಲಾಗುತ್ತದೆ. ಇನ್ನುಳಿದ ಗೇಟ್‌ಗಳನ್ನು ಯಾವಾಗ ಬದಲಾವಣೆ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.


share
ಮಹಮ್ಮದ್ ಗೌಸ್, ವಿಜಯನಗರ
ಮಹಮ್ಮದ್ ಗೌಸ್, ವಿಜಯನಗರ
Next Story
X