Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಬರದ ಬವಣೆಯ ನಡುವೆಯೂ ತೆರಿಗೆ ವಸೂಲಿಗೆ...

ಬರದ ಬವಣೆಯ ನಡುವೆಯೂ ತೆರಿಗೆ ವಸೂಲಿಗೆ ಒತ್ತಡ ಆರೋಪ

ಅಧಿಕಾರಿಗಳ ಸೂಚನೆ, ಜನರ ಆಕ್ರೋಶದ ನಡುವೆ ಪಂಚಾಯತ್ ಸಿಬ್ಬಂದಿ ಇಕ್ಕಟ್ಟು

ವೀರಶೆಟ್ಟಿ ಎರಂಡಗೆವೀರಶೆಟ್ಟಿ ಎರಂಡಗೆ26 Sept 2026 11:48 AM IST
share
ಬರದ ಬವಣೆಯ ನಡುವೆಯೂ ತೆರಿಗೆ ವಸೂಲಿಗೆ ಒತ್ತಡ ಆರೋಪ

ಬಸವಕಲ್ಯಾಣ: ತಾಲೂಕಿನಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದು, ಗ್ರಾಮೀಣ ಜನರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ನಡುವೆಯೇ ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ವಸೂಲಾತಿಗೆ ಅಧಿಕಾರಿಗಳು ಒತ್ತಡ ಹೇರುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಪಂಚಾಯಿತಿ ಸಿಬ್ಬಂದಿ ಹಾಗೂ ಸಾರ್ವಜನಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ.

ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಮಟ್ಟದ ಅಧಿಕಾರಿಗಳು ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ತೆರಿಗೆ ವಸೂಲಾತಿ ಹೆಚ್ಚಿಸುವಂತೆ ಸೂಚನೆ ನೀಡುತ್ತಿದ್ದಾರೆ ಎನ್ನಲಾಗಿದ್ದು, ಸಿಬ್ಬಂದಿ ಗ್ರಾಮಗಳಲ್ಲಿ ಮನೆ ತೆರಿಗೆ ಸೇರಿದಂತೆ ವಿವಿಧ ತೆರಿಗೆಗಳನ್ನು ವಸೂಲಿ ಮಾಡಲು ಮನೆ ಮನೆಗೆ ತೆರಳುತ್ತಿದ್ದಾರೆ. ಆದರೆ, ಬರದಿಂದ ಆರ್ಥಿಕ ಸಂಕಷ್ಟದಲ್ಲಿರುವ ಜನರು ತೆರಿಗೆ ವಸೂಲಿಗೆ ಬಂದ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎನ್ನಲಾಗಿದೆ.

ಕುಡಿಯುವ ನೀರು, ಉದ್ಯೋಗ ಹಾಗೂ ಜೀವನ ನಿರ್ವಹಣೆಯೇ ಕಷ್ಟವಾಗಿರುವ ಸಂದರ್ಭದಲ್ಲಿ ತೆರಿಗೆ ಕಟ್ಟುವುದು ಹೇಗೆ ಸಾಧ್ಯ ಎಂದು ಗ್ರಾಮಸ್ಥರು ಪ್ರಶ್ನಿಸುತ್ತಿದ್ದಾರೆ. ಕೆಲವೆಡೆ ತೆರಿಗೆ ವಸೂಲಿಗೆ ತೆರಳುವ ಸಿಬ್ಬಂದಿಗೆ ಸಾರ್ವಜನಿಕರಿಂದ ಅಸಮಾಧಾನ ವ್ಯಕ್ತವಾಗುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿದುಬಂದಿದೆ.

ಮತ್ತೊಂದೆಡೆ, ಗ್ರಾಮ ಪಂಚಾಯಿತಿಗಳಿಗೆ 15ನೇ ಹಣಕಾಸು ಆಯೋಗ ಸೇರಿದಂತೆ ವಿವಿಧ ಅನುದಾನಗಳು ಲಭ್ಯವಾಗಲು ತೆರಿಗೆ ವಸೂಲಾತಿ ಪ್ರಮುಖವಾಗುತ್ತದೆ ಎಂಬ ಕಾರಣಕ್ಕೆ ಅಧಿಕಾರಿಗಳು ಸಿಬ್ಬಂದಿಗೆ ಸೂಚನೆ ನೀಡುತ್ತಿದ್ದಾರೆ ಎನ್ನಲಾಗಿದೆ. ತೆರಿಗೆ ವಸೂಲಾತಿ ಕಡಿಮೆಯಾದರೆ ಪಂಚಾಯಿತಿಗಳ ಅಭಿವೃದ್ಧಿ ಕಾಮಗಾರಿಗಳು ಹಾಗೂ ಮೂಲಸೌಕರ್ಯಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಮೇಲಾಧಿಕಾರಿಗಳ ಸೂಚನೆ ಪಾಲಿಸುವುದು ಪಂಚಾಯಿತಿ ಸಿಬ್ಬಂದಿಗೆ ಅನಿವಾರ್ಯವಾಗುತ್ತಿದೆ ಎನ್ನಲಾಗುತ್ತಿದೆ.

ಇತ್ತ ತೆರಿಗೆ ವಸೂಲಿಗೆ ಗ್ರಾಮಗಳಿಗೆ ತೆರಳಿದಾಗ ಸಾರ್ವಜನಿಕರ ಅಸಮಾಧಾನ ಎದುರಿಸಬೇಕಾಗಿದ್ದು, ಅತ್ತ ಮೇಲಾಧಿಕಾರಿಗಳ ಸೂಚನೆ ಪಾಲಿಸಬೇಕಾದ ಪರಿಸ್ಥಿತಿ ಸಿಬ್ಬಂದಿಗೆ ಎದುರಾಗಿದೆ. ಇದರಿಂದ ಪಂಚಾಯಿತಿ ಸಿಬ್ಬಂದಿ ದ್ವಂದ್ವ ಒತ್ತಡಕ್ಕೆ ಸಿಲುಕಿದ್ದಾರೆ ಎಂದು ಹೇಳಲಾಗುತ್ತಿದೆ.

ಬರಪೀಡಿತ ಪ್ರದೇಶಗಳಲ್ಲಿ ರೈತರು ಹಾಗೂ ಕೂಲಿ ಕಾರ್ಮಿಕರು ಆದಾಯದ ಮೂಲ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಬರದ ಸಂದರ್ಭದಲ್ಲಿ ತೆರಿಗೆ ವಸೂಲಿಗೆ ವಿನಾಯಿತಿ ಅಥವಾ ಕಾಲಾವಕಾಶ ನೀಡಬೇಕು ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ. ತೆರಿಗೆ ವಸೂಲಿಗೆ ನಿರ್ದಿಷ್ಟ ಗುರಿ ನಿಗದಿಪಡಿಸುವ ಬದಲು ಸರಕಾರವೇ ಬರ ಪರಿಸ್ಥಿತಿಯನ್ನು ಪರಿಗಣಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಬರ ಪರಿಹಾರ, ಕುಡಿಯುವ ನೀರು, ಉದ್ಯೋಗ ಹಾಗೂ ಜಾನುವಾರುಗಳಿಗೆ ಮೇವಿನಂತಹ ತುರ್ತು ಸಮಸ್ಯೆಗಳಿಗೆ ಆದ್ಯತೆ ನೀಡಬೇಕಾದ ಸಂದರ್ಭದಲ್ಲಿ ತೆರಿಗೆ ವಸೂಲಿಗೆ ಒತ್ತಡ ಹೇರುವುದು ಸೂಕ್ತವೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. 15ನೇ ಹಣಕಾಸು ಆಯೋಗದ ಅನುದಾನಕ್ಕೂ ತೆರಿಗೆ ವಸೂಲಾತಿಗೂ ಇರುವ ನಿಖರ ಸಂಬಂಧವೇನು? ಬರಪೀಡಿತ ಗ್ರಾಮ ಪಂಚಾಯಿತಿಗಳಿಗೆ ತೆರಿಗೆ ವಸೂಲಿಯಲ್ಲಿ ಸರಕಾರದಿಂದ ಯಾವುದೇ ವಿಶೇಷ ವಿನಾಯಿತಿ ಅಥವಾ ಕಾಲಾವಕಾಶವಿದೆಯೇ ಎಂಬುದರ ಕುರಿತು ಸಂಬಂಧಿಸಿದ ಅಧಿಕಾರಿಗಳು ಸ್ಪಷ್ಟನೆ ನೀಡಬೇಕಿದೆ.

ಒಟ್ಟಿನಲ್ಲಿ ಬರದಿಂದ ಜನರು ಸಂಕಷ್ಟದಲ್ಲಿದ್ದು, ತೆರಿಗೆ ವಸೂಲಿಗೆ ತೆರಳುವ ಸಿಬ್ಬಂದಿಯೂ ಸಾರ್ವಜನಿಕರ ಅಸಮಾಧಾನ ಎದುರಿಸುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಸರಕಾರ ಹಾಗೂ ಹಿರಿಯ ಅಧಿಕಾರಿಗಳು ಸ್ಥಳೀಯ ಪರಿಸ್ಥಿತಿಯನ್ನು ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ತಾಲೂಕಿನ ಜನತೆ ಬರಗಾಲದಿಂದ ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಜೀವನ ನಡೆಸುವುದೇ ಕಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ಜನರು ತೆರಿಗೆ ಎಲ್ಲಿಂದ ಕಟ್ಟುತ್ತಾರೆ? ಕೆಲ ದಿನಗಳ ಕಾಲ ತೆರಿಗೆ ವಸೂಲಿಯನ್ನು ಮುಂದೂಡಬೇಕು.

-ಶ್ರೀಶೈಲ್ ಭಂಗೆ, ಬೊಸಗಾ ಗ್ರಾಮಸ್ಥ

ಗ್ರಾಮ ಪಂಚಾಯಿತಿಗಳಿಗೆ 15ನೇ ಹಣಕಾಸು ಆಯೋಗದ ಅನುದಾನ ಬಾರದ ಕಾರಣ ಹಣಕಾಸಿನ ಸಮಸ್ಯೆ ಎದುರಾಗಿದೆ. ಹೀಗಾಗಿ ಸಾಧ್ಯವಾದಷ್ಟು ತೆರಿಗೆ ವಸೂಲಿ ಮಾಡಬೇಕು. ಸಾರ್ವಜನಿಕರ ಮೇಲೆ ಯಾವುದೇ ಒತ್ತಡ ಹೇರದೆ, ಸಾಧ್ಯವಾದಷ್ಟು ತೆರಿಗೆ ಸಂಗ್ರಹಿಸಿ ಪಂಚಾಯಿತಿ ಆಡಳಿತ ನಡೆಸಬೇಕು.

-ರಮೇಶ್ ಸುಲ್ಫಿ,

ತಾ.ಪಂ. ಸಿಇಒ, ಬಸವಕಲ್ಯಾಣ

share
ವೀರಶೆಟ್ಟಿ ಎರಂಡಗೆ
ವೀರಶೆಟ್ಟಿ ಎರಂಡಗೆ
Next Story
X