Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಹುಬ್ಬಳ್ಳಿಯಲ್ಲಿ ಹೆಚ್ಚುತ್ತಿರುವ ಕೊಲೆ...

ಹುಬ್ಬಳ್ಳಿಯಲ್ಲಿ ಹೆಚ್ಚುತ್ತಿರುವ ಕೊಲೆ ಪ್ರಕರಣಗಳಿಗೆ ಡ್ರಗ್ಸ್ ನಂಟು?

►ಮಾದಕ ವಸ್ತುಗಳ ಚಟಕ್ಕೆ ಬಿದ್ದಿರುವ ಯುವ ಜನತೆ ►ಕಡಿಮೆ ದರದಲ್ಲಿ ಸಿಗುತ್ತಿರುವ ಮಾದಕ ವಸ್ತುಗಳು

ಹಜರತ್‌ ನದಾಫ್‌ಹಜರತ್‌ ನದಾಫ್‌23 May 2024 10:04 AM IST
share
ಹುಬ್ಬಳ್ಳಿಯಲ್ಲಿ ಹೆಚ್ಚುತ್ತಿರುವ ಕೊಲೆ ಪ್ರಕರಣಗಳಿಗೆ ಡ್ರಗ್ಸ್ ನಂಟು?

ಹುಬ್ಬಳ್ಳಿ: ಇತ್ತೀಚೆಗೆ ನಡೆದ ಸಾಲು-ಸಾಲು ಕೊಲೆ ಘಟನೆಗಳು ಧಾರವಾಡ ಜಿಲ್ಲೆಯ ಜನರ ನಿದ್ದೆಗೆಡಿಸಿದೆ. ಈ ವರ್ಷದ ಪ್ರಾರಂಭದಿಂದ ಇಲ್ಲಿಯವರೆಗೆ 14 ಕೊಲೆ ಪ್ರಕರಣಗಳು ನಡೆದಿರುವುದಾಗಿ ವರದಿಯಾಗಿದ್ದು, ಯುವಕರು ಮಾದಕ ವಸ್ತುಗಳ ಚಟಕ್ಕೆ ಬಿದ್ದಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿವೆ ಎಂಬ ಮಾತುಗಳು ಸಾರ್ವಜನಿಕರಿಂದ ಕೇಳಿ ಬರುತ್ತಿವೆ.

ಹುಬ್ಬಳ್ಳಿ-ಧಾರವಾಡ ಅವಳಿನಗರದ ಅದರಲ್ಲೂ 'ಹೂ ಬಳ್ಳಿ' ಎಂದು ಕರೆಯುತ್ತಿದ್ದ ಹುಬ್ಬಳ್ಳಿ ನಗರದ ಮಾರುಕಟ್ಟೆಯಲ್ಲಿ ವಿವಿಧ ಮಾದರಿಯ ಮಾದಕ ವಸ್ತುಗಳು ಅತೀ ಕಡಿಮೆ ದರದಲ್ಲಿ ಯುವ ಸಮುದಾಯದ ಕೈಗೆ ಸರಾಗವಾಗಿ ದೊರೆಯುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಎಪ್ರಿಲ್ 18ರಂದು ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ ಮತ್ತು ಮೇ 15ರಂದು ನಡೆದ ಅಂಜಲಿ ಅಂಬಿಗೇರ ಅವರ ಭೀಕರ ಹತ್ಯೆ ಪ್ರಕರಣಗಳಿಗೆ ಕಾರಣ ಬೇರೆ ಬೇರೆ ಆಗಿದರೂ ಆರೋಪಿಗಳು ಮಾದಕ ವಸ್ತುಗಳ ಚಟಕ್ಕೆ ಬಿದ್ದಿರುವ ಅನುಮಾನವನ್ನೂ ಸಾರ್ವಜನಿಕರು ವ್ಯಕ್ತಪಡಿಸುತ್ತಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮಾದಕ ವಸ್ತುಗಳ ಸೇವನೆಯಿಂದ ಯುವಕರು ಚಾಕು-ಚೂರಿಗಳನ್ನು ಬಳಸಿ ಕೊಲೆ ಮಾಡುವ ಹಂತಕ್ಕೆ ಬಂದಿದ್ದಾರೆ.

ಈ ಕಾರಣಕ್ಕಾಗಿ ರೌಡಿ ಶೀಟರ್‌ಗಳ ಪಟ್ಟಿ ದೊಡ್ಡದಾಗುತ್ತಾ ಸಾಗುತ್ತಿದೆ ಎಂದು ಸಾರ್ವಜನಿಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ. ನಗರಕ್ಕೆ ಮಾದಕ ವಸ್ತುಗಳನ್ನು ಪೂರೈಸುತ್ತಿರುವವರು ಯಾರು? ಎಲ್ಲಿಂದ ಬರುತ್ತಿದೆ? ಎಷ್ಟು ಡ್ರಗ್ ಪೆಡ್ಡರ್‌ಗಳು ಸಕ್ರಿಯರಾಗಿದ್ದಾರೆ? ಈ ಜಾಲ ಎಷ್ಟು ದೂರ ವ್ಯಾಪಿಸಿದೆ? ಇದರ ಹಿಂದಿರುವ ಕುಳಗಳು ಯಾರು?

ರಾಜಕಾರಣಿಗಳ ಸಹಕಾರವೂ ಉಂಟಾ? ಪೊಲೀಸ್ ಅಧಿಕಾರಿಗಳು ಯಾರಾದರೂ ಶಾಮೀಲಾಗಿದ್ದಾರಾ? ಮಾದಕ ವಸ್ತುಗಳು ಅವ್ಯಾಹತವಾಗಿ ಮಾರಾಟವಾಗುತ್ತಿರುವ ಬಗ್ಗೆ ಪೊಲೀಸರಿಗೆ ಸುಳಿವು ಏಕೆ ಸಿಗಲಿಲ್ಲ? ಎಂಬುದರ ಬಗ್ಗೆಯೂ ಸಂಪೂರ್ಣವಾಗಿ ತನಿಖೆ ನಡೆಯಬೇಕೆಂಬ ಒತ್ತಾಯಗಳು ಸಾರ್ವಜನಿಕರಿಂದ ಕೇಳಿ ಬರುತ್ತಿವೆ.

'ಕಾಲೇಜು ವಿದ್ಯಾರ್ಥಿಗಳು, ಯುವಕರೇ ಪ್ರಮುಖ ಗುರಿ'

ಗಾಂಜಾ ಅತ್ಯಂತ ಕಡಿಮೆ ಹುಬ್ಬಳ್ಳಿಯಲ್ಲಿ ಗಾಂಜಾ ಆತ ಂತ ಕಡಿಮೆ ಲಭಿಸುತ್ತಿದೆ. ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಕರೇ ಗಾಂಜಾ ಮಾರಾಟಗಾರರ ಪ್ರಮುಖ ಗುರಿಯಾಗಿದ್ದಾರೆ. ಬಹುಪಾಲು ಕಾಲೇಜುಗಳು ಇರುವ ರಸ್ತೆಗಳೇ ಡ್ರಗ್ಸ್‌ ದಂಧೆಕೋರರ ಅಡ್ಡೆಯಾಗಿದೆ. ಆದರೆ, ಚರಸ್, ಅಫೀಮು ಹಾಗೂ ಹೆರಾಯಿನ್ ಬೇರೆ ಬೇರೆ ರಾಜ್ಯಗಳಿಂದ ಧಾರವಾಡ ಜಿಲ್ಲೆಗೆ ಸರಬರಾಜಾಗುತ್ತಿದ್ದು, ಇದರ ಮೂಲವನ್ನು ಪತ್ತೆ ಹಚ್ಚಬೇಕಿದೆ ಎಂಬ ಒತ್ತಾಯಗಳು ಸಾರ್ವಜನಿಕರಿಂದ ಕೇಳಿ ಬರುತ್ತಿವೆ.

ಮಾದಕ ವಸ್ತುಗಳ ಚಟಕ್ಕೆ ಬಿದ್ದ ವ್ಯಕ್ತಿಗಳು ಕೊಲೆ

ಮತ್ತು ಸುಲಿಗೆಯಂತಹ ಹೇಯ ಕೃತ್ಯವನ್ನು ಸರಳವಾಗಿ ಮಾಡುತ್ತಾನೆ. ಡ್ರಗ್ಸ್ ಮನುಷ್ಯನ ವಿವೇಚನಾ ಶಕ್ತಿ ಕಳೆಯುವುದರ ಜೊತೆ ಸಾರ್ವಜನಿಕವಾಗಿ ನಾವು ಯಾವುದನ್ನು ಮಾಡಬೇಕು, ಯಾವುದನ್ನು ಮಾಡಬಾರದು ಎನ್ನುವ ವಿಚಾರವನ್ನು ಮೊದಲು ಕೊಲ್ಲುತ್ತದೆ. ಇನ್ನು ಕೆಲವರಲ್ಲಿ ಹುಟ್ಟುತ್ತಲೇ ಸಮಾಜ ವಿಧ್ವಂಸಕ ಗುಣಗಳು ಬೆಳೆದಿರುತ್ತವೆ. ಅಂತಹವರಿಗೆ ಇದು ಮತ್ತಷ್ಟು ಉತ್ತೇಜನ ನೀಡುತ್ತದೆ. ಮಜಾ ಮಾಡುತ್ತಾ ಆರಂಭಿಸುವ ಡ್ರಗ್ಸ್ ಚಟ ಕೊನೆಗೆ ಕೊಲೆ ಮಾಡುವ ಹಂತಕ್ಕೆ ಬರುತ್ತದೆ. ಇಂತಹ ವ್ಯಕ್ತಿಗಳನ್ನು ಮಾದಕ ವ್ಯಸನ ಪರಿಹಾರ ಕೇಂದ್ರಕ್ಕೆ ಕರೆದೊಯ್ದು ನುರಿತ ವೈದ್ಯರ ಸಲಹೆ ಪಡೆದು ಪರಿಹಾರ ಕಂಡುಕೊಂಡರೆ ವಿದ್ವಂಸಕ ಕೃತ್ಯದಲ್ಲಿ ಭಾಗಿಯಾಗುವುದನ್ನು ತಡೆಗಟ್ಟಬಹುದು.

- ಮಹೇಶ್ ದೇಸಾಯಿ, ಖ್ಯಾತ ಮನೋವೈದ್ಯ, ಹುಬ್ಬಳ್ಳಿ

ಹಿಂದೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್‌ಗಳಾಗಿದ್ದ ಆರ್. ದಿಲೀಪ್ ಹಾಗೂ ಲಾಬುರಾಮ್ ಇದ್ದ ಅವಧಿಯಿಂದ ಇಲ್ಲಿಯವರೆಗೂ ಈ ದಂಧೆಗಳು ಸರಾಗವಾಗಿ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಿ ಕಠಿಣ ಶಿಕ್ಷೆ ನೀಡುವ ಕಾನೂನು ಜಾರಿಗೆ ಬರಬೇಕು. ಅವಳಿ ನಗರಕ್ಕೆ ಹುಕ್ಕಾ ಬಾರ್ ತೆರೆಯಲು ಪರವಾನಿಗೆ ನೀಡಲಾಗಿದೆ ಅನ್ನುವ ಮಾತುಗಳು ಕೇಳಿ ಬರುತ್ತಾ ಇದೆ . ಇದರ ಜೊತೆ ಅವಳಿ ನಗರದಲ್ಲಿ ಕ್ಯಾಸಿನೋ ಆರಂಭಿಸಲು ದೊಡ್ಡ ಕುಳಗಳು ಲಾಬಿ ನಡೆಸುತ್ತಿದೆ. ಇವುಗಳು ನಮ್ಮ ಸಂಸ್ಕೃತಿ ಅಲ್ಲ. ಇದರಿಂದ ಗಾಂಜಾ, ಚರಸ್, ಅಫೀಮು, ಹೆರಾಯಿನ್, ಎಂಡಿಎಂಎ, ಎಲ್‌ಎಸ್‌ಡಿ ಫ್ಲವರ್ ಜಿಲ್‌ನಂತಹ ಮಾದಕ ವಸ್ತುಗಳು ಯುವಕರ ಕೈಗೆ ಸಿಗುತ್ತವೆ. ಇದಕ್ಕೆ ಸರಕಾರ ಕಡಿವಾಣ ಹಾಕಬೇಕಿದೆ.

-ಗುರುನಾಥ್ ಉಳ್ಳಿಕಾಶಿ, ದಲಿತ ಮುಖಂಡ

ಅವಳಿ ನಗರದ ಪೊಲೀಸ್ ಅಧಿಕಾರಿಗಳು ಮಾದಕ ವಸ್ತು ಮಾರಾಟ ಮಾಡುವ ಸಣ್ಣ ಸಣ್ಣ ಗಿರಾಕಿಗಳನ್ನು ಹಿಡಿಯುತ್ತಿದ್ದಾರೆ. ಆದರೆ, ಇದರ ಹಿಂದಿರುವ ಜಾಲವನ್ನು ಹಿಡಿಯುವ ಮನೋಧೈರ್ಯ ಮಾಡದಿರುವುದು ದುರ್ದೈವದ ಸಂಗತಿಯಾಗಿದೆ. ದೊಡ್ಡ ತಿಮಿಂಗಿಲಗಳನ್ನು ಹಿಡಿದಾಗ ಮಾತ್ರ ಡ್ರಗ್ಸ್ ವಿಷ ವರ್ತುಲದಿಂದ ಯುವಕರನ್ನು ರಕ್ಷಿಸಲು ಸಾಧ್ಯವಾಗುತ್ತದೆ. ಭವಿಷ್ಯದ ಬಗ್ಗೆ ಕಿಂಚಿತ್ತೂ ಚಿಂತಿಸದೆ ಯುವ ಸಮುದಾಯ ಮಾದಕ ದ್ರವ್ಯಕ್ಕೆ ಸೋಲುತ್ತಿದೆ. ಇದೇ ರೀತಿ ಮುಂದುವರಿದರೆ ಅವಳಿ ನಗರ ಅಪರಾಧದ ಕೇಂದ್ರ ಸ್ಥಾನವಾಗುವುದರ ಜೊತೆಗೆ ‘ಛೋಟಾ ಬಾಂಬೆ’ ಎನ್ನುವ ಕುಖ್ಯಾತಿ ಪಡೆಯಲಿದೆ.

-ಲೊಚನೇಶ್ ಹೂಗಾರ, ಹಿರಿಯ ಪತ್ರಕರ್ತ

share
ಹಜರತ್‌ ನದಾಫ್‌
ಹಜರತ್‌ ನದಾಫ್‌
Next Story
X