Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ನವೀಕರಣ ಕಾಮಗಾರಿ ಹಿನ್ನೆಲೆ; ರಾಯಚೂರು...

ನವೀಕರಣ ಕಾಮಗಾರಿ ಹಿನ್ನೆಲೆ; ರಾಯಚೂರು ನಗರ ಕೇಂದ್ರ ಗ್ರಂಥಾಲಯ ಒಂದು ತಿಂಗಳು ಬಂದ್

ಪರ್ಯಾಯ ವ್ಯವಸ್ಥೆಗೆ ವಿದ್ಯಾರ್ಥಿಗಳ ಒತ್ತಾಯ

ಬಾವಸಲಿ ರಾಯಚೂರುಬಾವಸಲಿ ರಾಯಚೂರು10 July 2025 10:40 AM IST
share
ನವೀಕರಣ ಕಾಮಗಾರಿ ಹಿನ್ನೆಲೆ; ರಾಯಚೂರು ನಗರ ಕೇಂದ್ರ ಗ್ರಂಥಾಲಯ ಒಂದು ತಿಂಗಳು ಬಂದ್

ರಾಯಚೂರು, ಜು.9: ನಗರದ ಸ್ಟೇಷನ್ ರಸ್ತೆಯಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಓದುಗರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದನ್ನು ಅಭಿವೃದ್ಧಿಪಡಿಸಿ ಮತ್ತಷ್ಟು ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ನವೀಕರಣ ಕಾಮಗಾರಿ ನಡೆಯುತ್ತಿರುವುದರಿಂದ ಒಂದು ತಿಂಗಳು ಗ್ರಂಥಾಲಯ ಬಂದ್ ಮಾಡುವ ನಿರ್ಧಾರ ವಿದ್ಯಾರ್ಥಿಗಳಿಗೆ ನುಂಗಲಾರದ ತುತ್ತಾಗಿದೆ.

ನಗರದ ಕೇಂದ್ರ ಗ್ರಂಥಾಲಯವು ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಓದುವುದಕ್ಕೆ ನೆಚ್ಚಿನ ತಾಣವಾಗಿದೆ. ಗ್ರಂಥಾಲಯ ಬೆಳಗ್ಗೆ 8ರಿಂದ ರಾತ್ರಿ 8ರ ವರೆಗೆ ಓದುಗರಿಂದ ತುಂಬಿರುತ್ತದೆ. ಅನೇಕರಿಗೆ ಒಳಗಡೆ ಆಸನಗಳು ಸಿಗದೇ ಗ್ರಂಥಾಲಯದ ಆವರಣದಲ್ಲಿರುವ ಉದ್ಯಾನದಲ್ಲಿ ಕುಳಿತು ಓದುತ್ತಿದ್ದಾರೆ.

ಗ್ರಂಥಾಲಯದಲ್ಲಿ 250ಕ್ಕೂ ಹೆಚ್ಚು ಆಸನಗಳಿಗೆ ಹಾಗೂ ವಿಶಾಲವಾದ ಉದ್ಯಾನವನ ಇರುವ ಕಾರಣ ಆಸನ ಸಿಗದವರು ಹೊರಗೆ ಓದುತ್ತಾರೆ. ದಿನೇ ದಿನೇ ಓದುಗರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪಕ್ಕದಲ್ಲಿ ನಗರ ಕೇಂದ್ರ ಗ್ರಂಥಾಲಯಕ್ಕೆ ಹೊಂದಿಕೊಂಡು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ)ಯಿಂದ 50 ಲಕ್ಷ ರೂ. ಅನುದಾನದಲ್ಲಿ ಹೊಸ ಕಟ್ಟಡ ನಿರ್ಮಿಸಲಾಗಿದೆ.

ಪ್ರೌಢಶಾಲಾ ವಿದ್ಯಾರ್ಥಿಗಳು, ಕಾಲೇಜು ವಿದ್ಯಾರ್ಥಿಗಳು, ಓದುವ ಆಸ ಇರುವವರು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡಿಕೊಳ್ಳುವರು, ಸಾಹಿತಿಗಳು, ಕವಿಗಳು ಹಾಗೂ ಹಿರಿಯ ನಾಗರಿಕರು ಪ್ರತಿನಿತ್ಯ ದಿನಪತ್ರಿಕೆಗಳು, ವೃತ್ತ ಪತ್ರಿಕೆ ಹಾಗೂ ಪುಸ್ತಕಗಳನ್ನು ಓದಲು ಬರುತ್ತಾರೆ.

ನೆಲಮಹಡಿ ಹಾಗೂ ಮೊದಲ ಮಹಡಿಗಳಲ್ಲಿ ಸುಮಾರು ಸುಮಾರು ಎರಡು ಲಕ್ಷ ಪುಸ್ತಕಗಳ ದೊಡ್ಡ ಸಂಗ್ರಹವೇ ಇದೆ. ಮನೆಗೆ ತೆಗೆದುಕೊಂಡು ಓದಲು ನೋಂದಣಿ ಮಾಡಿಕೊಂಡ ಪುಸ್ತಕಗಳ ಬಳಕೆದಾರರ ಸಂಖ್ಯೆ ಒಟ್ಟು 38 ಸಾವಿರಕ್ಕು ಹೆಚ್ಚಿದೆ. ಬೇರೆ ಕಡೆ ಇರುವಂತೆ ಕೆಟಲಾಗ್ ವ್ಯವಸ್ಥೆ ಇದೆ. ಗ್ರಂಥಾಲಯಕ್ಕೆ ಪ್ರತಿನಿತ್ಯ ಸರಾಸರಿ 800ರಿಂದ 1,000 ಜನರು ಬಂದು ಹೋಗುತ್ತಾರೆ.ಓದುಗರಿಗೆ ಪುರುಷ ಹಾಗೂ ಮಹಿಳಾ ಶೌಚಾಲಯವಿದ್ದರೂ ಬಳಸಲು ಯೋಗ್ಯವಾಗಿಲ್ಲ ಎಂದು ಓದುಗರು ಆರೋಪಿಸಿದ್ದಾರೆ.

ನವೀಕರಣ ಕಾಮಗಾರಿ: ವಿದ್ಯಾರ್ಥಿಗಳ ಹಾಗೂ ಓದುಗರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಂಥಾಲಯಕ್ಕೆ ಆಧುನಿಕ ಸೌಲಭ್ಯ ಒದಗಿಸುವುದು ಅವಶ್ಯಕತೆ ಮನಗಂಡು ಗ್ರಂಥಾಲಯದ ನವೀಕರಣಗೊಳಿಸಲಾಗುತ್ತಿದೆ. ಮಹಾನಗರ ಪಾಲಿಕೆಯ ನಿರ್ವಹಣೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ(ಕೆಕೆಆರ್‌ಡಿಬಿ)ಯ 1 ಕೋಟಿ ರೂ.ಅನುದಾನದಲ್ಲಿ ಕಾಮಗಾರಿ ನಡೆಯುತ್ತಿದೆ. 70 ಲಕ್ಷ ರೂ. ಸಿವಿಲ್ ಕಾಮಗಾರಿ ಉಳಿದಿದ್ದು ಫರ್ನೀಚರ್ ಕೆಲಸ ಕಾರ್ಯಗಳಿಗೆ ಖರ್ಚು ಮಾಡಲಾಗುತ್ತಿದೆ ಕೇಂದ್ರ ಗ್ರಂಥಾಲಯ ಕಟ್ಟಡ ನಿರ್ಮಿಸಿ 25 ವರ್ಷವಾಗಿದ್ದರಿಂದ ಕಟ್ಟಡ ಅಲ್ಲಲ್ಲಿ ಶಿಥಿಲಾವಸ್ಥೆಯಲ್ಲಿರುವ ಕಾರಣ ಮೇಲ್ಛಾವಣಿಯ ಮೇಲೆ ವಾಟರ್ ಪ್ರೊಫ್, ಮೇಲ್ಗಡೆ ಪಿಒಪಿ ವ್ಯವಸ್ಥೆ, ಒಳಗೆ ಹಾಗೂ ಹೊರಗೆ ಬಣ್ಣ ಬಳಿಯುವುದು, ಹೊಸ ಫ್ಯಾನ್, ಲೈಟುಗಳ ಜೊತೆಗೆ 2 ಎ.ಸಿ, ಬಲಭಾಗದಲ್ಲಿ ಮಕ್ಕಳಿಗಾಗಿ ಆರ್ಟ್ ಗ್ಯಾಲರಿ, ಶೌಚಾಲಯಗಳ ದುರಸ್ತಿ, ಕಟ್ಟಿಗೆ ಬಾಗಿಲು ಬದಲಾವಣೆ, ಪೀಠೋಪಕರಣ (ಫರ್ನಿಚರ್) ಸೇರಿದಂತೆ ಇತರ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಆಕ್ರೋಶ

ರಾಯಚೂರು ನಗರದಲ್ಲಿರುವ ಗ್ರಂಥಾಲಯ ನಗರ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಬಹಳ ಉಪಯುಕ್ತವಾಗಿದೆ. ನವೀಕರಣ ಹೆಸರಿನಲ್ಲಿ ಒಂದು ತಿಂಗಳು ಬಂದ್ ಮಾಡದೇ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಪರೀಕ್ಷೆ ನಡೆಯುತ್ತಿದೆ ಬೇರೆಡೆ ಅಭ್ಯಾಸ ಮಾಡಲು ಸಾಧ್ಯವಾಗುತ್ತಿಲ್ಲ. ನವೀಕರ ಕಾಮಗಾರಿ ಮುಗಿಯುವವರೆಗೆ ಹೊಸದಾಗಿ ನಿರ್ಮಿಸಿ ಉದ್ಘಾಟನೆಗೊಳ್ಳದ ನೂತನ ಕಟ್ಟಡದಲ್ಲಿ ಓದಲು ವ್ಯವಸ್ಥೆ ಮಾಡಬೇಕು ಎಂದು ಗ್ರಂಥಾಲಯಕ್ಕೆ ಬರುವ ವಿದ್ಯಾರ್ಥಿಗಳು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.

ಈಗ ಯಾವುದೇ ಸ್ಪರ್ಧಾತ್ಮಕ ಪರೀಕ್ಷಗಳು ಇರದ ಕಾರಣ ನವೀಕರಣ ಕಾಮಗಾರಿ ಮಾಡಲಾಗುತ್ತಿದೆ. 1 ಕೋಟಿ ರೂ. ವೆಚ್ಚದಲ್ಲಿ ಗ್ರಂಥಾಲಯ ಆಧುನಿಕರಣಗೊಳಿಸಲು ಮುಂದಾಗಿದ್ದೇವೆ, ಒಂದು ತಿಂಗಳ ಒಳಗೆ ಪೂರ್ಣಗೊಳ್ಳಲಿದೆ. ವಿದ್ಯಾರ್ಥಿಗಳು ಸಹಕಾರ ನೀಡಬೇಕು.

-ಗಜಾನನ ಬಾಳೆ, ಸಹಾಯಕ ಆಯುಕ್ತರು, ರಾಯಚೂರು

1ಕೋಟಿ ರೂ. ವೆಚ್ಚದಲ್ಲಿ ರಾಯಚೂರು ಜಿಲ್ಲಾ ಕೇಂದ್ರ ಗ್ರಂಥಾಲಯದ ದುರಸ್ತಿ ಹಾಗೂ ನವೀಕರಣ ಕಾಮಗಾರಿ ನಡೆಯುತ್ತಿದ್ದು ಆಗಸ್ಟ್ 15 ರೊಳಗೆ ಮುಗಿಯಲಿದೆ. ಉದ್ಯಾನವನದ ಅಭಿವೃದ್ಧಿಗೆ ಯೋಜನೆ ಮಾಡಿದ್ದು, ಈಗ ಬಂದಿರುವ ಅನುದಾನ ಸಾಲುವುದಿಲ್ಲ. ಮುಂದಿನ ದಿನಗಳಲ್ಲಿ ಕೈಗೆತ್ತಿಕೊಳ್ಳಲಾಗುವುದು.

-ಅಲ್ಲಾವುದ್ದೀನ್, ರಾಯಚೂರು ಮಹಾನಗರ ಪಾಲಿಕೆಯ ಅಭಿಯಂತರ( ಜೆಇ)

ನಗರ ಕೇಂದ್ರ ಗ್ರಂಥಾಲಯ ಕಟ್ಟಡ ಹಳೆಯದಾಗಿದ್ದು, ಮಳೆ ಬಂದಾಗ ಕಟ್ಟಡ ಸೋರುತ್ತಿದೆ. ಇದರಿಂದಾಗಿ ದುರಸ್ತಿ ಕಾರ್ಯ ನವೀಕರಣ ಕಾಮಗಾರಿ ನಡೆಯುತ್ತಿದೆ. ವಿದ್ಯಾರ್ಥಿಗಳ ಹಾಗೂ ಓದುಗರ ಅನುಕೂಲಕ್ಕಾಗಿಯೇ ಒಂದು ತಿಂಗಳು ನಗರ ಕೇಂದ್ರ ಗ್ರಂಥಾಲಯ ಬಂದ್ ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ಉದ್ಯಾನವನದಲ್ಲಿ ಓದಬಹುದು. ಎಲ್ಲರೂ ಸಹಕಾರ ನೀಡಬೇಕು.

-ನಿರ್ಮಲಾ ಹೊಸೋರು, ರಾಯಚೂರು ನಗರ ಕೇಂದ್ರ ಗ್ರಂಥಾಲಯದ ಅಧಿಕಾರಿ

share
ಬಾವಸಲಿ ರಾಯಚೂರು
ಬಾವಸಲಿ ರಾಯಚೂರು
Next Story
X