Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. Ballari | ಹೆದ್ದಾರಿಯಲ್ಲಿ ಕೆಟ್ಟು...

Ballari | ಹೆದ್ದಾರಿಯಲ್ಲಿ ಕೆಟ್ಟು ನಿಲ್ಲುತ್ತಿರುವ ಬಸ್; ಪ್ರಯಾಣಿಕರ ಪರದಾಟ

► ಸಮರ್ಪಕ ಸೇವೆಯಿಲ್ಲದೆ ಸಾರ್ವಜನಿಕರಿಗೆ ಸಂಕಷ್ಟ ► ಹೆಚ್ಚುವರಿ ಬಸ್‌ಗಳಿಗೆ ಒತ್ತಾಯ

ಕೆ.ಮಹಮ್ಮದ್ ಖಾಸೀಂಕೆ.ಮಹಮ್ಮದ್ ಖಾಸೀಂ18 Oct 2026 9:37 AM IST
share
Ballari | ಹೆದ್ದಾರಿಯಲ್ಲಿ ಕೆಟ್ಟು ನಿಲ್ಲುತ್ತಿರುವ ಬಸ್; ಪ್ರಯಾಣಿಕರ ಪರದಾಟ

ಸಂಡೂರು/ಬಳ್ಳಾರಿ: ನೂರಾರು ಪ್ರಯಾಣಿಕರ ದೈನಂದಿನ ಸಂಚಾರಕ್ಕೆ ಆಧಾರವಾಗಿರುವ ಸಂಡೂರು-ಬಂಡ್ರಿ-ಹೊಸಪೇಟೆ ಮಾರ್ಗದಲ್ಲಿ ಬಸ್ ಸೇವೆಯ ಸಮಸ್ಯೆ ಮತ್ತೆ ಮುನ್ನೆಲೆಗೆ ಬಂದಿದೆ. ಸಂಡೂರು ಸಾರಿಗೆ ಘಟಕಕ್ಕೆ ಸೇರಿದ ಮಾರ್ಗ ಸಂಖ್ಯೆ 17ರ ಬಸ್ ರಾಷ್ಟ್ರೀಯ ಹೆದ್ದಾರಿ-50ರ ಗೊಲ್ಲರಹಳ್ಳಿ ಕ್ರಾಸ್ ಬಳಿ ಕೆಟ್ಟು ನಿಂತ ಪರಿಣಾಮ, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹಲವು ಪ್ರಯಾಣಿಕರು ಪರದಾಡುವಂತಾಯಿತು.

ಸಂಡೂರು-ಬಂಡ್ರಿ-ಹೊಸಪೇಟೆ ಮಾರ್ಗದ ಈ ಬಸ್ಸನ್ನು ಪ್ರತಿದಿನ 150ಕ್ಕೂ ಹೆಚ್ಚು ಪ್ರಯಾಣಿಕರು ಅವಲಂಬಿಸಿದ್ದಾರೆ ಎನ್ನಲಾಗಿದೆ. ಬಂಡ್ರಿ, ಕಾಟಿನಕಂಬ, ನಿಡುಗುರ್ತಿ, 72-ಮಲ್ಲಾಪುರ, ಕೊಂಡಾಪುರ ಹಾಗೂ ಪೋತಲಕಟ್ಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರು ಉದ್ಯೋಗ, ಶಿಕ್ಷಣ, ವ್ಯಾಪಾರ ಹಾಗೂ ಆರೋಗ್ಯ ಸೇವೆಗಾಗಿ ಹೊಸಪೇಟೆಗೆ ತೆರಳಲು ಈ ಮಾರ್ಗವನ್ನೇ ಹೆಚ್ಚಾಗಿ ಅವಲಂಬಿಸಿದ್ದಾರೆ.

ಇಂತಹ ಪ್ರಮುಖ ಸಾರಿಗೆ ಸಂಪರ್ಕದ ಬಸ್ ಮಾರ್ಗಮಧ್ಯೆ ಕೆಟ್ಟು ನಿಂತಾಗ ಪ್ರಯಾಣಿಕರು ಗಮ್ಯಸ್ಥಾನ ತಲುಪಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿಶೇಷವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ಉದ್ಯೋಗಿಗಳು, ರೋಗಿಗಳು ಹಾಗೂ ವಯೋವೃದ್ಧರು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಮನವಿ ಮಾಡಿದರೂ ಸಮಸ್ಯೆಗೆ ಪರಿಹಾರವಿಲ್ಲವೇ? :

ಈ ಮಾರ್ಗದಲ್ಲಿ ಸುಸ್ಥಿತಿಯಲ್ಲಿರುವ ಬಸ್‌ಗಳನ್ನು ನಿಯೋಜಿಸುವಂತೆ ಹಾಗೂ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಬಸ್‌ಗಳನ್ನು ಓಡಿಸುವಂತೆ ಗ್ರಾಮಸ್ಥರು ಸಂಡೂರು ಸಾರಿಗೆ ಘಟಕದ ವ್ಯವಸ್ಥಾಪಕರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಆದರೆ, ಬೇಡಿಕೆಗಳಿಗೆ ನಿರೀಕ್ಷಿತ ಸ್ಪಂದನೆ ದೊರೆತಿಲ್ಲ

ಎಂಬ ಅಸಮಾಧಾನ ಸಾರ್ವಜನಿಕರಿಂದ ವ್ಯಕ್ತವಾಗಿದೆ. :

ಬಸ್‌ಗಳ ಕೊರತೆ ಅಥವಾ ಅನಿರೀಕ್ಷಿತ ತಾಂತ್ರಿಕ ದೋಷದಿಂದ ಸಂಚಾರ ವ್ಯತ್ಯಯ ಉಂಟಾದಾಗ ಅದರ ನೇರ ಪರಿಣಾಮ ವಿದ್ಯಾರ್ಥಿಗಳು ಮತ್ತು ಗ್ರಾಮೀಣ ಜನರ ಮೇಲಾಗುತ್ತಿದೆ. ಶಾಲಾ-ಕಾಲೇಜುಗಳಿಗೆ ಸಮಯಕ್ಕೆ ಸರಿಯಾಗಿ ತಲುಪಬೇಕಾದ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದರೆ, ಚಿಕಿತ್ಸೆಗಾಗಿ ನಗರಕ್ಕೆ ತೆರಳುವ ರೋಗಿಗಳು ಪರ್ಯಾಯ ಸಾರಿಗೆ ವ್ಯವಸ್ಥೆಗಾಗಿ ಕಾಯಬೇಕಾದ ಅನಿವಾರ್ಯತೆ ಎದುರಾಗುತ್ತಿದೆ.

ಗ್ರಾಮೀಣ ಭಾಗದ ಜನರಿಗೆ ಸಾರ್ವಜನಿಕ ಸಾರಿಗೆ ಕೇವಲ ಪ್ರಯಾಣದ ವ್ಯವಸ್ಥೆಯಲ್ಲ. ಅದು ಶಿಕ್ಷಣ, ಆರೋಗ್ಯ ಹಾಗೂ ಜೀವನೋಪಾಯಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಸಾಧನವಾಗಿದೆ. ಹೀಗಾಗಿ ಈ ಮಾರ್ಗದಲ್ಲಿ ಸುಸ್ಥಿತಿಯಲ್ಲಿರುವ ಬಸ್ಗಳ ನಿಯಮಿತ ಸಂಚಾರಕ್ಕೆ ಆದ್ಯತೆ ನೀಡಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

ಅಧಿಕಾರಿಗಳು ಎಚ್ಚೆತ್ತುಕೊಳ್ಳುವುದು ಯಾವಾಗ? :

ಬಸ್ ಕೆಟ್ಟು ನಿಂತ ಘಟನೆಯನ್ನು ಪ್ರತ್ಯೇಕ ಸಮಸ್ಯೆಯಾಗಿ ಪರಿಗಣಿಸುವ ಬದಲು, ಮಾರ್ಗದ ಒಟ್ಟಾರೆ ಸಾರಿಗೆ ವ್ಯವಸ್ಥೆಯನ್ನು ಪರಿಶೀಲಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಸಂಚಾರಕ್ಕೆ ಯೋಗ್ಯವಾದ ಬಸ್ಗಳನ್ನು ನಿಯೋಜಿಸುವುದು, ತಾಂತ್ರಿಕ ದೋಷಗಳಿಂದ ಪದೇಪದೇ ಸಂಚಾರ ವ್ಯತ್ಯಯ ಉಂಟಾಗದಂತೆ ನಿರ್ವಹಣೆಗೆ ಆದ್ಯತೆ ನೀಡುವುದು ಹಾಗೂ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಬಸ್ಗಳನ್ನು ಓಡಿಸುವುದು ಅಗತ್ಯವಾಗಿದೆ.

ಸಂಡೂರು ಸಾರಿಗೆ ಘಟಕದ ಅಧಿಕಾರಿಗಳು ಸ್ಥಳೀಯರ ಮನವಿಗಳನ್ನು ಗಂಭೀರವಾಗಿ ಪರಿಗಣಿಸಿ, ಮಾರ್ಗದ ಪ್ರಯಾಣಿಕರ ಸಂಖ್ಯೆ ಹಾಗೂ ಸಂಚಾರದ ಅಗತ್ಯವನ್ನು ಪರಿಶೀಲಿಸಬೇಕು. ಬಸ್ಗಳ ಲಭ್ಯತೆ, ಸಂಚಾರದ ಸಮಯ ಹಾಗೂ ನಿರ್ವಹಣೆಯ ಕುರಿತು ಸೂಕ್ತ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂಬುದು ಗ್ರಾಮಸ್ಥರ ಆಗ್ರಹವಾಗಿದೆ.

ಪ್ರತಿದಿನ ನೂರಾರು ಜನರು ಅವಲಂಬಿಸಿರುವ ಈ ಮಾರ್ಗದಲ್ಲಿ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಲು ಸಾರಿಗೆ ಇಲಾಖೆ ಇನ್ನೆಷ್ಟು ದಿನ ಕಾಯಬೇಕು ಎಂಬ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಇಂದು ಬಸ್‌ನ ಫ್ಯಾನ್ ಬೆಲ್ಟ್ ಕಟ್ ಆಗಿದ್ದರಿಂದ ಸ್ವಲ್ಪ ತೊಂದರೆ ಉಂಟಾಗಿರುವುದು ನಿಜ. ಮುಂದಿನ ದಿನಗಳಲ್ಲಿ ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಉತ್ತಮ ಸ್ಥಿತಿಯಲ್ಲಿರುವ ಬಸ್‌ಗಳ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು. ವಿಶೇಷವಾಗಿ ಮಕ್ಕಳ ಶಿಕ್ಷಣದ ಹಿತದೃಷ್ಟಿಯಿಂದ ಶೇ.99ರಷ್ಟು ಕಾಳಜಿ ವಹಿಸಿ, ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳುವ ಸಂದರ್ಭದಲ್ಲಿ ತೊಂದರೆಯಾಗದಂತೆ ನಿಗಾ ವಹಿಸಲಾಗುವುದು. ಸಾರ್ವಜನಿಕರಿಗೆ ಸಮರ್ಪಕ ಸಾರಿಗೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸಾರಿಗೆ ಇಲಾಖೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲಿದೆ.

-ಲಕ್ಷ್ಮಣ, ವ್ಯವಸ್ಥಾಪಕ, ಸಂಡೂರು ಡಿಪೋ

ನಾವು ಪ್ರತಿದಿನದ ಕೆಲಸ, ಶಿಕ್ಷಣ ಹಾಗೂ ಇತರ ಅಗತ್ಯಗಳಿಗಾಗಿ ಈ ಬಸ್ನ್ನು ಅವಲಂಬಿಸಿದ್ದೇವೆ. ಬಸ್ ಮಾರ್ಗಮಧ್ಯೆ ಕೆಟ್ಟು ನಿಂತರೆ ನಮ್ಮ ಗಮ್ಯಸ್ಥಾನ ತಲುಪಲು ಪರದಾಡಬೇಕಾಗುತ್ತದೆ. ವಿಶೇಷವಾಗಿ ವಿದ್ಯಾರ್ಥಿಗಳು ಹಾಗೂ ವಯೋವೃದ್ಧರಿಗೆ ಇಂತಹ ಪರಿಸ್ಥಿತಿ ತುಂಬಾ ತೊಂದರೆದಾಯಕವಾಗಿದೆ. ಅಧಿಕಾರಿಗಳು ನಮ್ಮ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಸುಸ್ಥಿತಿಯಲ್ಲಿರುವ ಬಸ್‌ಗಳನ್ನು ನಿಯೋಜಿಸುವುದರ ಜೊತೆಗೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಬೇಕು. ಪದೇಪದೇ ಮನವಿ ಸಲ್ಲಿಸುವ ಪರಿಸ್ಥಿತಿ ತಪ್ಪಿಸಿ, ಈ ಮಾರ್ಗದ ಸಾರಿಗೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು.

- ಹನುಮಂತಪ್ಪ, ಪ್ರಯಾಣಿಕ

Tags

passengershighwayBusBallari
share
ಕೆ.ಮಹಮ್ಮದ್ ಖಾಸೀಂ
ಕೆ.ಮಹಮ್ಮದ್ ಖಾಸೀಂ
Next Story
X