Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಬಡ ವಿದ್ಯಾರ್ಥಿಗಳ ಪಾಲಿನ ಅನ್ನದಾತ...

ಬಡ ವಿದ್ಯಾರ್ಥಿಗಳ ಪಾಲಿನ ಅನ್ನದಾತ ಬಸವಣ್ಣ

ಕೆ. ಎಲ್ ಶಿವುಕೆ. ಎಲ್ ಶಿವು6 Aug 2025 9:04 AM IST
share
ಬಡ ವಿದ್ಯಾರ್ಥಿಗಳ ಪಾಲಿನ ಅನ್ನದಾತ ಬಸವಣ್ಣ
20 ರೂ.ಗೆ ಹೊಟ್ಟೆ ತುಂಬಾ ಊಟ: ‌ವ್ಯಾಪಕ ಮೆಚ್ಚುಗೆ

ಚಿಕ್ಕಮಗಳೂರು, ಆ.5: ಪೈಪೋಟಿಯ ಈ ಯುಗದಲ್ಲಿ ಹೋಟೆಲ್, ಕ್ಯಾಂಟೀನ್ ವ್ಯಾಪಾರ ನಡೆಸುವುದು ಅತ್ಯಂತ ಸಾಹಸ, ಕಷ್ಟದ ಕೆಲಸವಾಗಿದೆ. ಆದರೆ, ಜಿಲ್ಲೆಯಲ್ಲೊಬ್ಬರು ಸಣ್ಣದೊಂದು ಕ್ಯಾಂಟೀನ್ ನಡೆಸುತ್ತಾ ಆ ಕ್ಯಾಂಟೀನ್‌ಗೆ ಬರುವ ಸರಕಾರಿ ಕಾಲೇಜುಗಳ ನೂರಾರು ಬಡ ವಿದ್ಯಾರ್ಥಿ ಗಳಿಗೆ ಕೇವಲ 20 ರೂಪಾಯಿಗೆ ಹೊಟ್ಟೆ ತುಂಬಾ ಊಟ ನೀಡುವ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಆಚರಣದಲ್ಲಿ ಕಳೆದೊಂದು ದಶಕದಿಂದ ‘ಜೀವಿತಾ’ ಹೆಸರಿನ ಕ್ಯಾಂಟೀನ್ ನಡೆಸುತ್ತಿರುವ ಬಸವಣ್ಣ ಸರಕಾರಿ ಕಾಲೇಜುಗಳ ಬಡ ವಿದ್ಯಾರ್ಥಿಗಳ ಪಾಲಿಗೆ ಅಕ್ಷರಶಃ ಅನ್ನದಾತರಾಗಿದ್ದಾರೆ. ಲಾಭದ ವ್ಯವಹಾರಗಳ ನಡುವೆ ಮಾನವೀಯತೆ ಮಾಯವಾಗುತ್ತಿರುವ ಈ ಹೊತ್ತಿನಲ್ಲಿ ಬಡ ಕಾಲೇಜು ಮಕ್ಕಳಿಗೆ ಕಡಿಮೆ ದರದಲ್ಲಿ ಹೊಟ್ಟೆ ತುಂಬಾ ಊಟ ನೀಡುವ ಮೂಲಕ ಮಾನವೀಯತೆಗೆ ಕೊರತೆ ಇಲ್ಲ ಎಂದು ಬಸವಣ್ಣ ತೋರಿಸಿಕೊಟ್ಟಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಹಿಂಭಾಗದಲ್ಲಿರುವ ಸಣ್ಣ ಜಾಗದಲ್ಲಿ ಬಸವಣ್ಣ ಅವರು ಕಳೆದೊಂದು ದಶಕ ದಿಂದ ಕ್ಯಾಂಟೀನ್ ನಡೆಸುತ್ತಿದ್ದಾರೆ. ಸರಕಾರಿ ರಜಾ ದಿನಗಳನ್ನು ಹೊರತು ಪಡಿಸಿ ಉಳಿದ ದಿನಗಳಲ್ಲಿ ಈ ಕ್ಯಾಂಟೀನ್ ಡಿಸಿ, ಎಸ್ಪಿ ಕಚೇರಿ, ಜಿಲ್ಲಾ ಗ್ರಂಥಾಲಯ, ಕೋರ್ಟ್, ಆಹಾರ ಇಲಾಖೆ ಕಚೇರಿಗೆ ಬರುವ ಸಾರ್ವಜನಿಕರಿಗೆ ಕಾಫಿ, ಟೀ ಯೊಂದಿಗೆ ಊಟ, ತಿಂಡಿಯನ್ನು ಪೂರೈಕೆ ಮಾಡುತ್ತಿದೆ. ಮಧ್ಯಾಹ್ನದ ವೇಳೆ ಸರಕಾರಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೇವಲ 20 ರೂ.ಗೆ ತಟ್ಟೆ ತುಂಬಾ ಅನ್ನ ನೀಡುವ ಮೂಲಕ ವಿದ್ಯಾರ್ಥಿಗಳ ನೆಚ್ಚಿನ ಬಸವಣ್ಣ ಆಗಿದ್ದಾರೆ.

ಸಾಮಾನ್ಯವಾಗಿ ಈ ಕ್ಯಾಂಟೀನ್‌ನಲ್ಲಿ ಮಧ್ಯಾಹ್ನದ ಊಟಕ್ಕೆ 50-60 ರೂ. ನಿಗದಿ ಮಾಡಲಾಗಿದೆ. ಸರಕಾರಿ ಕಚೇರಿಗಳಿಗೆ ಬರುವ ಜನರು ಈ ದರ ನೀಡಿ ಊಟ ಮಾಡುತ್ತಿದ್ದಾರೆ. ಆದರೆ, ಸರಕಾರಿ ಕಾಲೇಜುಗಳ ವಿದ್ಯಾರ್ಥಿಗಳು ಬಂದಲ್ಲಿ ಅವರಿಗೆ ಹೊಟ್ಟೆ ತುಂಬ ಊಟ ನೀಡಿ ಕೇವಲ 20 ರೂ. ಮಾತ್ರ ಪಡೆಯುತ್ತಿದ್ದಾರೆ. ಬಸವಣ್ಣ ಈ ಕಾಯಕವನ್ನು ಕಳೆದ 10 ವರ್ಷಗಳಿಂದಲೂ ಮಾಡುತ್ತಿದ್ದು, ಇಂದಿಗೂ ಜೀವಿತಾ ಕ್ಯಾಂಟೀನ್ ಸಮೀಪದಲ್ಲಿರುವ ಜೂನಿಯರ್ ಕಾಲೇಜಿಗೆ ಬರುವ ವಿದ್ಯಾರ್ಥಿಗಳು ಕ್ಯಾಂಟೀನ್‌ನ ಖಾಯಂ ಗ್ರಾಹಕರಾಗಿದ್ದಾರೆ.

20 ರೂಪಾಯಿಯ ಊಟದಲ್ಲಿ ಅನ್ನ, ಸಾಂಬಾರ್, ಉಪ್ಪಿನಕಾಯಿ, ಹಪ್ಪಳ, ಮೊಸರು ಇರುವುದರಿಂದ ವಿದ್ಯಾರ್ಥಿಗಳು ಖುಷಿಯಿಂದ ಹೊಟ್ಟೆ ತುಂಬಾ ಊಟ ಮಾಡುತ್ತಿದ್ದಾರೆ. ಡಿಸಿ ಕಚೇರಿಗೆ ಬರುವವರು ಕಚೇರಿ ಕೆಲಸ ಆಗುತ್ತೋ? ಇಲ್ಲವೋ? ಗೊತ್ತಿಲ್ಲ. ಆದರೆ, ಬಸವಣ್ಣನ ಕ್ಯಾಂಟೀನ್‌ಗೆ ಒಂದು ವಿಸಿಟ್ ಮಾಡಿಯೇ ಮಾಡುತ್ತಾರೆ.

ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ಊಟ ಇಲ್ಲದೆ ಪಾಠ ಕೇಳಬಾರದು, ವ್ಯಾಸಂಗ ನಿಲ್ಲಿಸಬಾರದು ಎಂಬ ಸದುದ್ದೇಶದಿಂದ ವಿದ್ಯಾರ್ಥಿಗಳಿಗೆ ಕಡಿಮೆ ದರದಲ್ಲಿ ಊಟ ಕೊಡುತ್ತಿರುವುದಾಗಿ ಬಸವಣ್ಣ ಹೇಳುತ್ತಾರೆ.

ಬಸವಣ್ಣ ಅವರ ಈ ಸೇವಾ ಮನೋಭಾವನೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.








share
ಕೆ. ಎಲ್ ಶಿವು
ಕೆ. ಎಲ್ ಶಿವು
Next Story
X