Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಅಪಾಯಮಟ್ಟದಲ್ಲಿ ಹರಿಯುತ್ತಿರುವ ಭೀಮಾ...

ಅಪಾಯಮಟ್ಟದಲ್ಲಿ ಹರಿಯುತ್ತಿರುವ ಭೀಮಾ ನದಿ: 70ಕ್ಕೂ ಹೆಚ್ಚು ಗ್ರಾಮಗಳಿಗೆ ನುಗ್ಗಿದ ನೀರು

ದಸ್ತಗೀರ ನದಾಫ್ ಯಳಸಂಗಿದಸ್ತಗೀರ ನದಾಫ್ ಯಳಸಂಗಿ27 Sept 2025 11:13 PM IST
share
ಅಪಾಯಮಟ್ಟದಲ್ಲಿ ಹರಿಯುತ್ತಿರುವ ಭೀಮಾ ನದಿ: 70ಕ್ಕೂ ಹೆಚ್ಚು ಗ್ರಾಮಗಳಿಗೆ ನುಗ್ಗಿದ ನೀರು
ಬೀದರ್-ಬೆಂಗಳೂರು ರಾಷ್ಟೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್

ಕಲಬುರಗಿ : ಮಹಾರಾಷ್ಟ್ರದ ವೀರ್, ಉಜನಿ, ಸಿನಾ ಜಲಾಶಯ ಹಾಗೂ ಬೋರಿ ನದಿಯಿಂದ 3.45 ಲಕ್ಷ ಕ್ಯೂಸೆಕ್ ನೀರು ಭೀಮಾ ನದಿಗೆ ಹರಿಬಿಟ್ಟಿರುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ ವಿವಿಧ ತಾಲೂಕುಗಳ ಅನೇಕ ಹಳ್ಳಿಗಳು ಜಲಾವೃತಗೊಂಡಿವೆ.

ಕಲಬುರಗಿ ಜಿಲ್ಲಾದ್ಯಂತ ಕೆಲವು ದಿನಗಳಿಂದ ಮಳೆಯ ಆರ್ಭಟ ಮುಂದುವರಿದಿದ್ದು, ಇದರ ನಡುವೆಯೇ ಭೀಮಾ ನದಿ ಉಕ್ಕಿ ಅಪಾಯಮಟ್ಟಕ್ಕೆ ಹರಿಯುತ್ತಿದೆ. ನದಿ ತೀರದ ಹಲವು ಗ್ರಾಮಗಳಲ್ಲಿ ನೀರು ನುಗ್ಗಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಸಾವಿರಾರು ಜನರು ಆಶ್ರಯಕ್ಕಾಗಿ ಸರಕಾರದತ್ತ ಮುಖ ಮಾಡಿ ಕಾದು ಕುಳಿತ್ತಿದ್ದಾರೆ.

ಸೆ.27 ಮತ್ತು 28ರಂದು ಜಿಲ್ಲೆಗೆ ಆರೆಂಜ್ ಅಲರ್ಟ್ ಮತ್ತು ಭೀಮಾ ನದಿ ಮೇಲ್ಮೈ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, ಮುಂಜಾಗ್ರತವಾಗಿ ಜಿಲ್ಲೆಯಲ್ಲಿ ಶಾಲೆಗಳಿಗೆ ಜಿಲ್ಲಾಧಿಕಾರಿಯವರು ಎರಡು ದಿನ ರಜೆ ಘೋಷಿಸಿದ್ದಾರೆ.

ನದಿ ತೀರದ 70ಕ್ಕೂ ಹೆಚ್ಚು ಗ್ರಾಮಗಳು ಜಲಾವೃತ :

► ಅಫಜಲಪುರ ತಾಲೂಕಿನ ಮಣ್ಣೂರ, ದೇವಲ ಗಾಣಗಾಪುರ, ಕಲ್ಲೂರ, ತೆಲ್ಲುಣಗಿ, ದಿಕ್ಸಂಗಾ (ಕೆ), ಸೊನ್ನ, ಬಂಕಲಗಾ, ಉಡಚಣ, ಶಿವಪುರ, ಹೊಳೆ ಭಾಸಗಿ.

► ಕಾಳಗಿ-ಚಿತ್ತಾಪುರ ತಾಲೂಕಿನ ಗುಂಡಗುರ್ತಿ, ಹಳೆ ಹೆಬ್ಬಾಳ, ಮಲಘಾಣ, ಕಣಸೂರ, ಮುತ್ತಾಗ.

► ಜೇವರ್ಗಿ ತಾಲೂಕಿನ ಹರವಾಳ, ಕೂಡಿ, ಕೋಳಕೂರ, ಮಠದರವಾಡ, ಕಟ್ಟಿಸಂಗಾವಿ, ಯನಗುಂಟಿ, ಮದರಿ, ನರಿಬೋಳ, ಕೊನಹಿಪ್ಪರಗಾ, ಮಲ್ಲಾ, ಹೊನ್ನಾಳ, ಹೋತಿನಮಡು, ಸರಡಗಿ, ನದಿ ಸಿನ್ನೂರ್.

► ಕಲಬುರಗಿ ತಾಲೂಕಿನ ಫಿರೋಝಾಬಾದ್, ಹಾಗರಗುಂಡಗಿ.

► ಶಹಾಬಾದ್ ತಾಲ್ಲೂಕಿನ ಹೊನಗುಂಟಾ, ಗೋಳಾ(ಕೆ), ಹಳ್ಳಿ ಸೇರಿದಂತೆ 70 ಕ್ಕೂ ಹೆಚ್ಚು ಗ್ರಾಮಗಳು ಜಲಾವೃತಗೊಂಡಿವೆ.

ಅಪಾರ ಪ್ರಮಾಣದ ಬೆಳೆ ಹಾನಿ :

ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತಿದ ತೊಗರಿ, ಕಬ್ಬು, ಹತ್ತಿ ಬೆಳೆ ಸೇರಿದಂತೆ ವಾಣಿಜ್ಯ ಬೆಳೆಗಳು ನೀರುಪಾಲಾಗಿವೆ. ಇದರಿಂದ ಸಾವಿರಾರು ರೈತರು ತಮ್ಮ ಭೂಮಿ, ಬೆಳೆ ಕಳೆದುಕೊಂಡು ಬೀದಿಪಾಲಾಗಿದ್ದಾರೆ. ಕೆಲವರ ಹೊಲಗಳು ಕೊಚ್ಚಿಕೊಂಡು ಹೋದರೆ ಇನ್ನೂ ಕೆಲವು ರೈತರ ಸಂಪೂರ್ಣ ಬೆಳೆಗಳು ಜಲಾವೃತಗೊಂಡಿವೆ. ಸರಕಾರ ಪ್ರತ್ಯೇಕ ಪ್ಯಾಕೇಜ್ ಘೋಷಿಸಬೇಕೆಂದು ರೈತ ಮುಖಂಡರು ಆಗ್ರಹಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಬಂದ್ :

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಕಟ್ಟಿ ಸಂಗಾವಿಯಯಲ್ಲಿ ಭೀಮಾ ನದಿಗೆ ಅಡ್ಡಲಾಗಿ ಕಟ್ಟಿರುವ ರಸ್ತೆ ಸೇತುವೆಯಲ್ಲಿ ಅಪಾಯ ಮಟ್ಟದ ಭೀಮಾ ನದಿ ನೀರು ಹರಿದು ಬರುತ್ತಿರುವ ಹಿನ್ನೆಲೆ ಬೀದರ್ - ಬೆಂಗಳೂರು - ಶ್ರೀರಂಗಪಟ್ಟಣಕ್ಕೆ ಸಂಪರ್ಕಿಸುವ ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಗಾತ್ರದ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.ಲಾರಿ, ಕ್ಯಾಂಟರ್, ಟ್ರಕ್, ಬಸ್, ಸೇರಿದಂತೆ ಇನ್ನಿತರ ದೊಡ್ಡ ಪ್ರಮಾಣದ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಆದರೆ, ಕಾರು, ಆಟೊ, ಸಣ್ಣ ಪ್ರಮಾಣದ ಗುಡ್ಸ್ ವಾಹನಗಳು ಸೇರಿದಂತೆ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಅನುವು ಮಾಡಲಾಗಿದೆ ಎಂದು ತಿಳಿದುಬಂದಿದೆ. ಇನ್ನೂ ಸ್ವಲ್ಪ ನೀರು ಹರಿದರೆ ಈ ಸೇತುವೆ ಸಂಪೂರ್ಣ ಜಲಾವೃತಗೊಳ್ಳಲಿದೆ.

ಕಲಬುರಗಿ ಜಿಲ್ಲೆಯಾದ್ಯಂತ ಪ್ರವಾಹದ ಪರಿಸ್ಥಿತಿ ಸಮರ್ಥವಾಗಿ ಎದುರಿಸಲು ಪ್ರವಾಹ ಪೀಡಿತ ಪ್ರದೇಶದಲ್ಲಿ ಅಧಿಕಾರಿ-ಸಿಬ್ಬಂದಿಯ ಜೊತೆಗೆ ಎಸ್.ಡಿ.ಆರ್.ಎಫ್., ಎನ್.ಡಿ.ಆರ್.ಎಫ್., ಪೊಲೀಸ್, ಅಗ್ನಿ ಶಾಮಕ ತಂಡಗಳನ್ನು ನಿಯೋಜಿಸಲಾಗಿದೆ.

-ಪ್ರಿಯಾಂಕ್ ಖರ್ಗೆ, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ

ಈಗಾಗಲೇ 68ಕ್ಕೂ ಹೆಚ್ಚು ಗ್ರಾಮಗಳು ಪ್ರವಾಹಕ್ಕೆ ತುತ್ತಾಗಿವೆ. ಈಗಾಗಲೇ 41 ಕಾಳಜಿ ಕೇಂದ್ರ ಸ್ಥಾಪಿಸಿ ಸತ್ರಸ್ತರನ್ನು ಆರೈಕೆ ಮಾಡಲಾಗುತ್ತಿದೆ. ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಜನರು ಆತಂಕ ಪಡಬಾರದು. ಸ್ಥಳೀಯ ಆಡಳಿತಕ್ಕೆ ಸಹಕರಿಸಬೇಕು.

-ಬಿ.ಫೌಝಿಯಾ ತರನ್ನುಮ್, ಜಿಲ್ಲಾಧಿಕಾರಿ, ಕಲಬುರಗಿ

ಕಲಬುರಗಿ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಬೆಳೆ ನಷ್ಟವಾದ ರೈತರಿಗೆ ದಿಕ್ಕು ತೊಚದಂತೆ ಆಗಿದೆ. ಸರಕಾರ ರೈತರ ಬಾಕಿ 315 ಕೋಟಿ ರೂ.ವಿಮೆ ಹಣ ಬಿಡುಗಡೆ ಮಾಡಬೇಕು, ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು. ಈ ಪ್ರದೇಶವನ್ನು ಹಸಿ ಬರಗಾಲ ಎಂದು ಘೋಷಣೆ ಮಾಡಬೇಕು.

-ಶರಣಬಸಪ್ಪ ಮಮಶೆಟ್ಟಿ, ರೈತ ಮುಖಂಡ

41 ಕಾಳಜಿ ಕೇಂದ್ರಗಳ ಸ್ಥಾಪನೆ :

ಭೀಮಾ ನದಿಯ ಪ್ರವಾಹಕ್ಕೆ ತುತ್ತಾದ ಗ್ರಾಮಗಳಲ್ಲಿ ಇದುವರೆಗೆ 41 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. 2,234 ಪುರುಷರು, 1,647 ಮಹಿಳೆಯರು, 894 ಮಕ್ಕಳು ಸೇರಿದಂತೆ 4,715 ಜನ ಕಾಳಜಿ ಕೆಂದ್ರದಲ್ಲಿ ಸಂತ್ರಸ್ತರಿಗೆ ಆಶ್ರಯ ನೀಡಿದ್ದು, ಇವರಿಗೆ ಊಟೋಪಚಾರ, ಅಗತ್ಯ ಮೂಲಸೌಕರ್ಯ ಒದಗಿಸಲಾಗಿದೆ, ಆರೋಗ್ಯ ಇಲಾಖೆಯಿಂದ ಆರೋಗ್ಯ ತಪಾಸಣೆ ಸಹ ಮಾಡಲಾಗುತ್ತಿದೆ ಎಂದು ಜಿಲ್ಲಾಡಳಿತ ಹೇಳಿದೆ.

share
ದಸ್ತಗೀರ ನದಾಫ್ ಯಳಸಂಗಿ
ದಸ್ತಗೀರ ನದಾಫ್ ಯಳಸಂಗಿ
Next Story
X